Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶಿಥಿಲಗೊಂಡ ಹಳೆ ಕಟ್ಟಡ ತೆರವು ಮಾಡಿ, ಹೊಸ ಕಟ್ಟಡ ನಿರ್ಮಾಣ ಹಾಗೂ ಹೆಚ್ಚುವರಿ ಅಗತ್ಯದ 30 ಕೆಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ರಚನೆ ಸಂಬಂಧ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಿ, ಅಂದಾಜು ಪಟ್ಟಿಯ ವರದಿ ಸಲ್ಲಿಸಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ಅವರು ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಮಾಲಿನ್ಯ ಮಂಡಳಿಯ ಕಾರ್ಯಸೂಚಿ ಪ್ರಕಾರ 55 ಕೆಎಲ್ ಡಿ ಸಾಮರ್ಥ್ಯದ ಎಸ್‌ಟಿಪಿ ಇರಬೇಕು. ಸದ್ಯ 25 ಕೆಎಲ್‌ಡಿ ನಿರ್ವಹಣೆಯಲ್ಲಿದೆ. ಅದಕ್ಕಿಂತ ಹಿಂದಿನ 30 ಕೆಎಲ್‌ಡಿಯ ಎಸ್‌ಟಿಪಿ ಕಾರ್ಯ ನಿರ್ವಹಿಸುತ್ತಿಲ್ಲ. ಅದರ ದುರಸ್ತಿ, ಮೋಟಾರು, ಪೈಪ್‌ಲೈನ್‌ಗೆ ಅಂದಾಜು 20 ಲಕ್ಷ ರೂ. ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಚಂದ್ರ ಮರಕಾಲ ಸಭೆಗೆ ತಿಳಿಸಿದರು. ಈ ಬಗ್ಗೆ ಇಂಜಿನಿಯರ್‌ಗಳು ವರದಿ ಸಲ್ಲಿಸಲಿ. ಆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಬಾರಕೂರಿನ ನ್ಯಾಷನಲ್ ಹೈಸ್ಕೂಲಿನ ಮುಖ್ಯ ಶಿಕ್ಷಕಿಯಾದ ಹೇಮಾವತಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಬಾರಕೂರಿನ ನ್ಯಾಷನಲ್ ಹೈಸ್ಕೂಲು, ಸಂಸ್ಕೃತ ಹಾಗೂ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಪಿ. ಪ್ರಭಾಕರ ತುಮರಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ತಮ್ಮ ಉಪನ್ಯಾಸದಲ್ಲಿ ಸಂಸ್ಕೃತ ಭಾಷೆಯ ಇತಿಹಾಸ, ಅದರ ಬೆಳವಣಿಗೆಯ ಪಥ, ಇತರೆ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ, ಭಾರತೀಯ ಜ್ಞಾನ ಪರಂಪರೆಯಲ್ಲಿ ಸಂಸ್ಕೃತದ ಸ್ಥಾನಮಾನ, ನಿಸರ್ಗಸ್ನೇಹಿ ಜೀವನಕ್ಕೆ ಪೂರಕವಾದ ಆಯುರ್ವೇದದ ಅಂಶಗಳು ಹಾಗೂ ನಮ್ಮ ದೈನಂದಿನ ಜೀವನದಲ್ಲಿ ಬಳಕೆಯಾಗುವ ಸಂಸ್ಕೃತ ಪದಗಳ ಮಹತ್ವದ ಕುರಿತು ವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸಂಸ್ಕೃತ ಶ್ಲೋಕವನ್ನು ಪಠಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದ ರೂಪುರೇಷೆಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರು ವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಸಂಘ, ಸಿ.ಎಸ್.ಸಿ ಹಾಗೂ ಗ್ರಾಮ ಒನ್ -ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. ಈ ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ವಿಮಾ ಘಟಕಗಳಾಗಿ ಸರ್ಕಾರದ ಆದೇಶದಲ್ಲಿ ಅಧಿಸೂಚಿಸಲಾಗಿದ್ದು, ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದ್ದು, ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿರುತ್ತದೆ. ಬೆಳೆ ಸಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಅಲಂಕಾರ್ ಬಾರ್ ಎದುರುಗಡೆ ರಾಷ್ಟ್ರೀಯಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಅವದೇಶ ಎಂದು ಗುರುತಿಸಲಾಗಿದೆ. ಕೊಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆ ದಾಟುತ್ತಿದ್ದ ಯಲ್ಲಪ್ಪ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಅವದೇಶ ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದು ಗಾಯಗೊಂಡರು. ಗಂಭೀರ ಸ್ಥಿತಿಯಲ್ಲಿದ್ದ ಅವದೇಶ, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅಪಘಾತ ದಿಂದ ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಂಚಾರು ಗ್ರಾಮದ ತಾರೇಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ನಂಚಾರು ಗ್ರಾಮದ ಮಹೇಶ ನಾಯರಿ (53) ಎಂದು ಗುರುತಿಸಲಾಗಿದೆ. ಅವರು ಮನೆಯ ಹತ್ತಿರದ ತೋಟಕ್ಕೆ ಹೋಗಿ ಕೆರೆಯ ಪಕ್ಕದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಅವರು ಆವರಣ ಗೋಡೆಯಿಲ್ಲದ ತೋಟದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು, ಸಂಸ್ಥೆಗಳು, ವಿವಿಧ ಸಾಂವಿಧಾನಿಕ ಸಂಸ್ಥೆಗಳು, ಶಾಸನಬದ್ದ ಸಂಸ್ಥೆಗಳು, ನ್ಯಾಯಮಂಡಳಿಗಳು ಇತ್ಯಾದಿಗಳಲ್ಲಿನ ವಿವಿಧ ಗ್ರೂಪ್ ‘ಬಿ’ ಗೆಜೆಟೆಡ್ ಅಲ್ಲದ ಮತ್ತು ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಉದ್ಯೋಗಾಕಾಂಕ್ಷಿಗಳಿAದ ವೆಬ್‌ಸೈಟ್ https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿAದ ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ 18 ರಿಂದ 32 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯನ್ನು ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಅರ್ಜಿಗಳನ್ನು ಆನ್‌ಲೈನ್ ವಿಧಾನದ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಜೂನ್ 22 ಆನ್‌ಲೈನ್ ನೊಂದಣಿಗೆ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 25527342 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೇ.2026ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಇವರ ಜೊತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್, ಅಕ್ಷಯ ಬಿಎಸ್, ಸುದೀಪ್ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ. ದೀಪಕ್ ಹೆಗ್ಡೆ ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣದ ಸೌಲಭ್ಯ ಪಡೆದು ಪ್ರೌಢಶಿಕ್ಷಣ, ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಪದವಿ ವ್ಯಾಸಂಗದ ಅವಧಿಯಲ್ಲೇ ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದ ಇವರು, ಇದೀಗ ಸಿಎ ಅಂತಿಮ ಪರೀಕ್ಷೆಯ ಎರಡೂ ಗ್ರೂಪ್‌ಗಳನ್ನು ಮೊದಲ ಪ್ರಯತ್ನದಲ್ಲೇ ಪಾಸಾಗಿ ಅಖಿಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ, ಬ್ರಹ್ಮಾವರ ರೂಡ್‌ಸೆಟ್ ಸಂಸ್ಥೆ, ಗ್ರಾಮ ಪಂಚಾಯತ್ ಕಂದಾವರ ಹಾಗೂ ಶ್ರೀದೇವಿ ಸಂಜೀವಿನಿ ಒಕ್ಕೂಟ ಕಂದಾವರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 12 ದಿನಗಳ ಸ್ವಉದ್ಯೋಗ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭವು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಪಂಚಾಯತ್ ಕುಂದಾಪುರದ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ. ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಶೈಕ್ಷಣಿಕ ಪದವಿಗಳಿಂದ ಮಾತ್ರ ಉದ್ಯೋಗಾವಕಾಶಗಳು ಸೃಷ್ಟಿಯಾಗುವುದಿಲ್ಲ. ಬದಲಾಗಿ, ಕೌಶಲ್ಯಾಧಾರಿತ ಜ್ಞಾನ ಮತ್ತು ಪ್ರಾಯೋಗಿಕ ತರಬೇತಿಗಳು ವ್ಯಕ್ತಿಯ ಬದುಕಿಗೆ ಹೊಸ ದಿಕ್ಕು ನೀಡುತ್ತವೆ ಎಂದು ತಿಳಿಸಿದರು. ಇಂದಿನ ಸಮಾಜವು ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಆದ್ದರಿಂದ ಯುವಜನರು ಹಾಗೂ ಸಂಜೀವಿನಿ ಮಹಿಳೆಯರು ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಉದ್ಯೋಗ ಹಾಗೂ ಸ್ವಉದ್ಯೋಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೊಸೈಟಿ ರಿಜಿಸ್ಟ್ರೆಷನ್ ಆ್ಯಕ್ಟ್/ಟ್ರಸ್ಟ್ ಆ್ಯಕ್ಟ್ ನಡಿ ನೋಂದಣಿಯಾಗಿ ಕನಿಷ್ಠ 02 ವರ್ಷಗಳಾಗಿರುವ, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು ಹೊಂದಿರುವ, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವ ಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹೊಂದಿರುವ, ಸಂಸ್ಥೆಯ ಆಡಳಿತ ಮಂಡಳಿಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ಸ್ಪಷ್ಟ ಹಾಗೂ ಖಚಿತವಾಗಿರುವ ಉಪನಿಯಮಗಳನ್ನು (ಬೈಲಾ) ಹೊಂದಿರುವ, ಸಂಸ್ಥೆಯ ಆರ್ಥಿಕ ಸ್ಥಿತಿಗತಿಯು ಸದೃಢವಾಗಿರುವ, ಯಾವುದೇ ಓರ್ವ ವ್ಯಕ್ತಿ ಹಾಗೂ ಜನಾಂಗದ ಲಾಭಕ್ಕಾಗಿ ಸಂಸ್ಥೆಯನ್ನು ನಡೆಸದೇ ಸಂಸ್ಥೆಯು ಯಾವುದೇ ಜಾತಿ, ಪಂಥ, ಮತ ಮತ್ತು ಭಾಷೆಗಳನ್ನು ಪರಿಗಣಿಸದೇ ಎಲ್ಲರಿಗೂ ಸೌಲಭ್ಯ ಒದಗಿಸುವ ಹಾಗೂ ಇತರೇ ಅರ್ಹತೆ ಹೊಂದಿರುವ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಪತ್ರಿಕಾ ಭವನದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ಪರಿಸರ ವ್ಯವಸ್ಥೆಯ ಪ್ರತಿಯೊಂದು ಕೂಡ ಬಹಳ ಮುಖ್ಯವಾಗಿ ರುತ್ತದೆ. ಒಂದು ಅಳಿದು ಹೋದರೂ ಅದರ ಪ್ರಾಮುಖ್ಯತೆ ನಮಗೆ ಅರ್ಥ ಆಗುತ್ತದೆ. ಹಾಗಾಗಿ ನಾವು ಇಡೀ ಪರಿಸರ ವ್ಯವಸ್ಥೆಯನ್ನು…

Read More