ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಸಮೀಪದ ಚೋರಾಡಿಯಲ್ಲಿ ಮಳೆ ನೀರಿನ ಅಬ್ಬರಕ್ಕೆ .ಹಾಲಾಡಿ ಮುದೂರು ಸಂಪರ್ಕಿಸುವ ಸೇತುವೆಯ ಸಂಪರ್ಕವೇ ಕಡಿದು ಹೋಗಿದೆ. 28 – ಹಾಲಾಡಿ ಗ್ರಾಮದ ಸೊಸೈಟಿಯಿಂದ ಹಾರ್ರಮಕ್ಕಿ ಮಾರ್ಗದ ಭರಣಿಕೊಳ್ಳಿಯ ಸೇತುವೆಯಾಗಿದ್ದು, ಈ ಭಾಗಕ್ಕೆ ಪ್ರಮುಖ ಸಂಪರ್ಕ ಮಾರ್ಗವಾಗಿತ್ತು. ಎರಡು ವರ್ಷದ ಹಿಂದೆ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು.ನೀರಿನ ರಭಸಕ್ಕೆ ಸೇತುವೆಯ ಬಳಿ ಸಂಪರ್ಕ ಸಂಪೂರ್ಣ ಕುಸಿದು ನೀರುಪಾಲಾಗಿದೆ. ಎರಡು ಭಾಗದ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಪಂ ಸಿಇಓ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ತಹಶಿಲ್ದಾರ್ ಶೋಭಾಲಕ್ಷ್ಮೀ ಮೊದಲಾದವರು ಭೇಟಿ ನೀಡಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಉಡುಪಿ ಜಿಲ್ಲಾಸ್ಪತ್ರೆಯ ನೇತೃ ತಜ್ಞ ಡಾ. ನಿತ್ಯಾನಂದ ನಾಯಕ್, ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಕಣ್ಣಿನ ರೋಗಗಳ ಬಗ್ಗೆ ಅರಿವು ಮೂಡಿಸಿಕೊಂಡು, ಕಾಲ ಕಾಲಕ್ಕೆ ನೇತ್ರ ತಜ್ಞರ ಮೂಲಕ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. ಮಧುಮೇಹ, ಬಿಪಿ ಮೊದಲಾದ ಕಾಯಿಲೆ ಇದ್ದವರು ಕಣ್ಣಿನ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದರು. ನೇತ್ರ ತಜ್ಞ ಡಾ. ಶಮಿತ್, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಲಲಿತಾ ಖಾರ್ವಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್ ಸ್ವಾಗತಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಚಿತ್ರನಟ ಡಾ. ರಮೇಶ್ ಅರವಿಂದ್ ಪ್ರಾಯೋಜಿತ ಉದಯೋನ್ಮುಖ ಸಾಧಕರಿಕೆ ನೀಡುವ ದತ್ತಿ ಪುರಸ್ಕಾರಕ್ಕೆ ಇಬ್ಬರು ಸಾಧಕರು ಆಯ್ಕೆ ಆಗಿದ್ದಾರೆ. ರೂಬಿಕ್ ಕ್ಯುಬ್ ಗಿನ್ನಿಸ್ ದಾಖಲೆಗಾರ ನಾವೀನ್ಯ ರೂಪಕ ಪ್ರತೀಕ ಪೃಥ್ವೀಶ್ ಕೆ. ಚೇರ್ಕಾಡಿ ಹಾಗೂ ಕಿರುಚಿತ್ರಗಳ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆ-ಸಂಭಾಷಣೆಗಾರ, ಸಾಹಿತಿ ರವೀಂದ್ರ ಶೆಟ್ಟಿ ತಂತ್ರಾಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜುಲೈ 21 ರಂದು ಸಂಜೆ 5 ಗಂಟೆಗೆ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಸಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ’ಜರ್ನಿಯಿಸಂ’ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜದಲ್ಲಿ ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು ಎಂದರು. ಕಲಿಕೆಯ ಕುರಿತು ಹುಮ್ಮಸ್ಸಿರಲಿ. ಆಲಸ್ಯ ಬೇಡ. ಶೈಕ್ಷಣಿಕವಾಗಿ ನೀವು ಮಾಡುವ ಕಾರ್ಯಗಳು ಕಲಿಕೆಗೆ ಸಹಕಾರಿಯೇ ಹೊರತು ಹೊರೆಯಲ್ಲ ಎಂದರು. ವ್ಯಕ್ತಿ ಎಂದಿಗೂ ಶಾಶ್ವತವಲ್ಲ ಬದಲಿಗೆ ವ್ಯಕ್ತಿತ್ವ ಮಾತ್ರ ಶಾಶ್ವತ ಆದ್ದರಿಂದ ವಿದ್ಯಾರ್ಥಿಗಳು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಸಗಳಿಂದ ದೂರವಿರಿ ಎಂದು ಕಿವಿಮಾತು ಹೇಳಿದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ತೇರ್ಗಡೆಯಾದ ಹಲವಾರು ವಿದ್ಯಾರ್ಥಿಗಳು ಪತ್ರಿಕೋದ್ಯಮದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಸಮಾಜದಲ್ಲಿ ವೈದ್ಯರು ಜಾತಿ, ಧರ್ಮ, ಲಿಂಗ ಮತ್ತಿತರ ತಾರತಮ್ಯ ಇಲ್ಲದೆ ಕಾರ್ಯ ನಿರ್ವಹಿಸುವುದು ಹೇಗೆ ಅಗತ್ಯವೋ ಹಾಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : 2024 ಮೇ ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ವಿಘ್ನೇಶ್ ಎಸ್. ಬಿ, ಶ್ರದ್ಧಾ ಬಿ. ಸಾಲಿಯಾನ್, ರಕ್ಷಿತಾ, ಪಂಚಮಿ ಕಿಣಿ, ವಂದನಾ ಪೈ, ಶ್ರೀನಿವಾಸ್ ಮಲ್ಯ, ಶೀತಲ್ ಬಾಳಿಗಾ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.15: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಬೈಂದೂರು ವತ್ತಿನಕಟ್ಟೆಯ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಪರಮೇಶ್ವರ ಗಾಣಿಗ ಉದ್ಘಾಟಿಸಿ, ಗಾಣಿಗ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಗಾಣಿಗ ಪ್ರತಿಷ್ಠಾನದ ಮೂಲಕ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಕೊಲ್ಲೂರು ರಮೇಶ ಗಾಣಿಗರ ನೇತೃತ್ವದಲ್ಲಿ ಸಮಾಜಕ್ಕೆ ಸ್ಪಂದಿಸುತ್ತಾ ಗಾಣಿಗ ಪ್ರತಿಷ್ಠಾನ ಮುನ್ನೆಡೆಯುತ್ತಿರುವುದು ಸಂತಷದ ವಿಚಾರ ಎಂದರು. ಗಾಣಿಗ ಪ್ರತಿಷ್ಠಾನ ಬೈಂದೂರು ಅಧ್ಯಕ್ಷರಾದ ರಮೇಶ ಗಾಣಿಗ ಕೊಲ್ಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಏಳ್ಗೆಯಲ್ಲಿ ಶಿಕ್ಷಣ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ಅವರ ಪ್ರತಿಭಾ ಪುರಸ್ಕಾರ ಮಾಡಿದಾಗ ಅವರು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಬೈಂದೂರು ಗಾಣಿಗ ಪ್ರತಿಷ್ಠಾನದ ಮೂಲಕ ವಿದ್ಯಾರ್ಥಿ ಸಾಧಕರಿಗೆ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿ ವಿತರಣೆ, ಹೊಲಿಗೆ ತರಬೇತಿ ಇತ್ಯಾದಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಹಾಗೆಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಡುವ ಕಾರಣೀಕ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದರ್ಜೆಯ ದೇವಾಲಯಗಳಲ್ಲಿ ಒಂದಾಗಿದ್ದು, ಹಲವು ವರ್ಷಗಳ ಬಳಿಕ ಇದೀಗ, ನೂತನ ವ್ಯಪಸ್ಥಾಪನಾ ಸಮಿತಿ ರಚನೆಗೊಂಡಿದೆ. ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಎಸ್. ಸತೀಶ ಶೆಟ್ಟಿ ಚಮಟೆಹರ್ಲು ಸೋಮವಾರ ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಾಗಿ ದೇಗುಲದ ಪ್ರಧಾನ ಅರ್ಚಕ ಪ್ರಕಾಶ ಉಡುಪ, ರಾಮ ಎಸ್. ಉಪ್ಪುಂದ, ಲಲಿತಾ ಶೆಟ್ಟಿ, ಅಂಬಿಕಾ, ನಾರಾಯಣ ಖಾರ್ವಿ, ರಾಜೇಶ್ ದೇವಾಡಿಗ, ರವೀಂದ್ರ ಪ್ರಭು, ಜನಾರ್ಧನ ಮಾಚ ಪೂಜಾರಿ ನೇಮಕಗೊಂಡಿದ್ದಾರೆ. ದೇವಳದ ಆಡಳಿತಾಕಾರಿ ಹಾಗೂ ತಹಶೀಲ್ದಾರ್ ಪ್ರದೀಪ ಕುಮಾರ ಅಧಿಕಾರಿ ಹಸ್ತಾಂತರಿಸಿದರು. ದೇವಾಲಯದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಸ್ಥಾಪನೆಯಾಗಿ ನೂರು ವರ್ಷಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಶತಮಾನೋತ್ಸವಕ್ಕೆ ಪೂರ್ವಭಾವಿಯಾಗಿ ಶತಮಾನೋತ್ಸವ ಭವನ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಶಾಲೆಯ ಅತ್ಯಂತ ಹಿರಿಯ ವಿದ್ಯಾರ್ಥಿ ಬಗ್ವಾಡಿ ಮೆತ್ತಿನಮನೆ ಪಾರ್ವತಿ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಬಿ. ರಾಜೀವ ಶೆಟ್ಟಿ, ಸಿಂಗಾರಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ, ಬಗ್ವಾಡಿ ಮೆತ್ತಿನಮನೆ ಕುಟುಂಬಸ್ಥರು, ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಷ್ಚಂದ್ರ ಶೆಟ್ಟಿ, ಸದಸ್ಯರಾದ ಅಶೋಕ್ ಪೂಜಾರಿ, ಶಿಕ್ಷಣ ಸಂಯೋಜಕ ಯೋಗೀಶ್, ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ್ ನಾಯ್ಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ್ ಪುತ್ರನ್, ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ ಶ್ರೀ ಶಾರಾದೋತ್ಸವ ಸಮಿತಿ ಮಕ್ಕಿಗದ್ದೆ 2024- 2026 ನೇ ಸಾಲಿನ ರಿಜಿಸ್ಟರ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚೆಗೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಠೆಯ ಪ್ರಕಟಣೆ ತಿಳಿಸಿದೆ.
