Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದ NATA (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2023-24ನೇ ಶೈಕ್ಷಣಿಕ ವರ್ಷದ ಐ. ಸಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರೀಯ ಐ. ಸಿ. ಎಸ್. ಇ. ಪಠ್ಯಕ್ರಮ ಆಧಾರಿತ ಶಿಕ್ಷಣದಲ್ಲಿ ಸತತವಾಗಿ 21ನೇ ಬಾರಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದ ಕುಂದಾಪುರ ತಾಲೂಕಿನ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಪರೀಕ್ಷೆಗೆ ಹಾಜರಾದ 173 ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ತನ್ವಿಶ್ರೀ ಎಸ್. ಆಚಾರ್ ಮತ್ತು ಮಾನ್ಯ ಪೂಜಾರಿ 97.4 ಶೇಕಡಾ ಅಂಕದೊಂದಿಗೆ ಪ್ರಥಮ, ಜ್ಞಾನದೀಪ್ ವಿ. ಶೆಟ್ಟಿ 96 ಶೇಕಡಾ ಅಂಕದೊಂದಿಗೆ ದ್ವಿತೀಯ, ಪಾವನಿ ಪಾಟೀಲ್ 95.8 ಶೇಕಡಾ ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಟಾನ, ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ರಜತ ವರ್ಷದ ಸಂಭ್ರಮದಲ್ಲಿ ಎರಡು ಗಿನ್ನಿಸ್ ಪ್ರಶಸ್ತಿ ಪುರಸ್ಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆದಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.78.24 ಮತದಾನ ನಡೆದಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76.40 ಮತದಾನ ನಡೆದಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ 83.61%, ಶಿಕಾರಿಪುರ-82.66%, ಸಾಗರ-80.2%, ಭದ್ರಾವತಿ-71.72%, ಸೊರಬ-83.27%, ತೀರ್ಥಹಳ್ಳಿ-82.23%, ಶಿವಮೊಗ್ಗ-70.33%, ಬೈಂದೂರು-76.4% ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯ ತನಕ ಶಿವಮೊಗ್ಗ ಕ್ಷೇತ್ರದಲ್ಲಿ ಶೇ.11.45 ಮತದಾನ, ಮಧ್ಯಾಹ್ನ 1 ಗಂಟೆಯ ತನಕ ಶೇ.45.19 ಮತದಾನ, ಮಧ್ಯಾಹ್ನ 3 ಗಂಟೆಗೆ ಶೇ.58.04 ಮತದಾನವಾಗಿದ್ದು, ಅಂತಿಮವಾಗಿ ಶೇ.78.24 ಮತದಾನವಾಗಿದೆ. ಬೈಂದೂರು ಕ್ಷೇತ್ರದಲ್ಲಿ ಹಳ್ಳಿಹೊಳೆ ಬೂತ್‌ 141ರಲ್ಲಿ ಅತಿಹೆಚ್ಚು ಶೇ.88 ಹಾಗೂ ಶಿರೂರು ಮೇಲ್ಪಂಕ್ತಿ ಬೂತ್‌ 3ರಲ್ಲಿ ಅತಿ ಕಡಿಮೆ ಶೇ.66.67 ಮತದಾನವಾಗಿದೆ.  ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ತಂದೆ, ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಹೋದರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬಿಕರ ಜೊತೆ ಮತ ಚಲಾಯಿಸಿದರು. ಸೊರಬದಲ್ಲಿ ಜಿಲ್ಲೆಯ ಉಸ್ತುವಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡದ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಇಂದು ಮತದಾನ ಮಾಡಿದರು. ಕೆರಾಡಿ ಶಾಲೆಯ ಮತಗಟ್ಟೆ 135ರಲ್ಲಿ ಮತದಾನ ಮಾಡಿದ ಅವರು ಮತದಾನ ನನ್ನನ ಹಕ್ಕು ಹಾಗೂ ಜವಾಬ್ದಾರಿ ಎಂದಿದ್ದಾರೆ. ತಾನು ಓದಿ ಸದ್ಯ ದತ್ತು ಸ್ವೀಕಾರ ಮಾಡಿರುವ ಶಾಲೆಯಲ್ಲಿ ಮತದಾನ ಮಾಡಿದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮತನಾಡಿ, ನಾನು ದೇಶದ ಹಿತಕ್ಕಾಗಿ ಮತ ಹಾಕಿದ್ದೇನೆ. ಸರ್ಕಾರದ ನಿರೀಕ್ಷೆ ಬೇಡಿಕೆ ಬಗ್ಗೆ ಮಾತಾಡಲ್ಲ. ಈಗ ಅದು ರಾಜಕೀಯವಾಗುತ್ತೆ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಎಂದರು. ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದರು. ಕಾಂತಾರ ಪ್ರಿಕ್ವೆಲ್ ಬಗ್ಗೆ ಪ್ರತಿಕ್ರಿಯಿಸಿದ ಅವರು ಜನ ಸಿನಿಮಾವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಂಚಿಕಾನ್ ಶಾಲೆಯ ಮತಗಟ್ಟೆ ಸಂಖ್ಯೆ 68ರಲ್ಲಿ ಮತ ಚಲಾಯಿಸಿದರು. ಕಂಚಿಕಾನ್ ಮತಗಟ್ಟೆಗೆ ತೆರಳಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದಕ್ಕೂ ಮೊದಲು ನವದುರ್ಗೆಯರಿಂದ ಬಿಜೆಪಿಗೆ ಮೊದಲು ಮತದಾನ ಅಭಿಯಾನದ ಭಾಗವಾಗಿ ಮಹಿಳೆಯರಿಂದ ಮೊದಲು ಮತದಾನ ಮಾಡಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಮೇ.7ರಂದು ಜರುಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ನಡೆಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು 2,40,500 ಮತದಾರರಿದ್ದಾರೆ. 9 ವಿಶೇಷ ಮತಗಟ್ಟೆಗಳನ್ನು ನಿರ್ಮಿಸಿದ್ದು 5 ಸಖಿ 1 ವಿಶೇಷ ಚೇತನ, 1 ಸಾಂಸ್ಕೃತಿಕ, ಸಾಂಪ್ರದಾಯಿಕ ಮತಗಟ್ಟೆಗಳಿವೆ. ಚುನಾವಣೆಗಾಗಿ ಒಟ್ಟು 1192 ಅಧಿಕಾರಿಗಳಿದ್ದು 20 ಸಿಬಂದಿಗಳನ್ನು ಕಾಯ್ದಿರಿಸಲಾಗಿದೆ.598 ಆರಕ್ಷಕರಿದ್ದು 85 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.ಮತದಾನಕ್ಕೆ ತಯಾರಿ ಪೂರ್ಣಗೊಂಡಿದ್ದು ಮತಗಟ್ಟೆಯಲ್ಲಿ ಕುಡಿಯುವ ನೀರು, ಆರೋಗ್ಯ ಸೇರಿದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.06: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ “ಪುಸ್ತಕ ಮನೆ” ಮೂಡುಬಿದಿರೆಯಲ್ಲಿ ತನ್ನ ಎರಡನೇ ಪುಸ್ತಕ ಮಳಿಗೆಯನ್ನು ಲೋಕಾರ್ಪಣೆ ಮಾಡಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಎಂ. ಮೋಹನ್ ಆಳ್ವ, ಎಕ್ಸಲೆಂಟ್ ಸಂಸ್ಥೆಯ ಮುಖ್ಯಸ್ಥರಾದ ಯುವರಾಜ್ ಜೈನ್ , ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ರವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ ಬಿ , ಅಮೃತ್ ರೈ, ಅಶ್ವಥ್ ಎಸ್.ಎಲ್, ಆದರ್ಶ ಎಂ. ಕೆ , ವಿಮಲ್ ರಾಜ್ ಜಿ , ಗಣಪತಿ ಕೆ. ಎಸ್ ರವರು ಉಪಸ್ಥಿತರಿದ್ದು, ಗಣ್ಯರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕದಲ್ಲಿ ಪುಸ್ತಕ ಲೋಕದಲ್ಲಿ ಪುಸ್ತಕಮನೆ ಹೊಸ ಮೈಲುಗಲ್ಲು ಸಾಧಿಸಿದ್ದು, ಕರಾವಳಿಯಲ್ಲಿ ತನ್ನ ಎರಡನೇ ಮಳಿಗೆ ಶುರುಮಾಡಿದೆ. ನೂರಾರು ಬರಹಗಾರರ ಪುಸ್ತಕಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ,ವಿದ್ಯಾರ್ಥಿ ಪೋಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 ಅಧಿಕ ಸೀಟ್ ಗೆಲ್ಲಿಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರವ ಅವರು ಕನಿಷ್ಠ 3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಬರುವ ವಿಶ್ವಾಸವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ…

Read More