ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಹಾಗೂ ಕುಂದಾಪ್ರ ಡಾಟ್ ಕಾಂ ಆಶ್ರಯದಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರಲ್ಲಿ ಸೆ.16 ಹಾಗೂ 17ರ ಸಂಜೆ 6:30ರಿಂದ ಯಕ್ಷೋತ್ಸವ ಕಾರ್ಯಕ್ರಮ ಜರುಗಲಿದೆ. ಕಾಲಮಿತಿ ಯಕ್ಷಗಾನದಲ್ಲಿ ಉಚಿತ ಪ್ರವೇಶವಿದ್ದು, ಸೆ.16ರಂದು ನಾಗಶ್ರೀ ಹಾಗೂ ಸೆ.17ರಂದು ಮಾಗದ ವಧೆ ಪ್ರಸಂಗ ಪ್ರದರ್ಶನ ಜರುಗಲಿದೆ. ಸುಧೀರ್ ಭಟ್ ಗಾನ ಸಾರಥ್ಯದಲ್ಲಿ, ಹಳ್ಳಾಡಿ ದ್ವಿತೇಶ್ ಹಾಸ್ಯದಲ್ಲಿ, ಕಾಂಚನ್, ಶಿಥಲ್, ಯುವರಾಜ್ ಮುಂತಾದ ಕಲಾವಿದರ ಕೂಡುವಿಕೆಯಲ್ಲಿ ಅದ್ದೂರಿ ಯಕ್ಷಗಾನ ಪ್ರದರ್ಶನ ಜರುಗಲಿದೆ ಎಂದು ಮೇಳದ ಸಂಚಾಲಕ ವಕ್ವಾಡಿ ರಂಜಿತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ದ.ಕ-ಉಡುಪಿ ಜಿಲ್ಲೆ. ಕುಂದಾಪುರ-ಬೈಂದೂರು ವಲಯವು ಶಿಕ್ಷಕರ ದಿನಾಚರಣೆ ಅಂಗವಾಗಿ ಕುಂದಾಪುರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕ ಸನ್ಮಾನ ಕಾರ್ಯಕ್ರಮವನ್ನು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಉದ್ಘಾಟಿಸಿದರು. ಸಂಸ್ಥೆಯ ನಿಯೋಜಿತ ಅಧ್ಯಕ್ಷರಾದ ದಿವಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರ ಸನ್ಮಾನದ ಅಂಗವಾಗಿ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖಿ ಸೇವಾ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. . ಈ ಸಂದರ್ಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ನಿಕಟ ಪೂರ್ವ ಅಧ್ಯಕ್ಷ ರಾಜಾ ಮಠದಬೆಟ್ಟು, ನಿಯೋಜಿತ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ ನಿಯೋಜಿತ ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ, ಉಪಾಧ್ಯಕ್ಷರಾದ ರಾಘವೇಂದ್ರ ಭಟ್ ,ಪ್ರಕಾಶ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಛಾಯಾಕಾರ್ಯದರ್ಶಿ ಅಮೃತ ಬೀಜಾಡಿ ಸನ್ಮಾನ ಪತ್ರ ವಾಚಿಸಿದರು. ನಾಗೇಶ್ ಕೋಟ ಕಾರ್ಯಕ್ರಮವನ್ನು ನಿರೂಪಿಸಿದರು , ಸುರೇಶ್ ಜಮದಗ್ನಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶ್ವಕರ್ಮ ಜಯಂತೋತ್ಸವ ಯೋಜನೆಗೆ ಸೆ. 17ರಂದು ಅವರಿಂದ ಚಾಲನೆ ದೊರೆಯಲಿದ್ದು, ಅದೇ ಸಮಯಕ್ಕೆ ದೇಶದಾದ್ಯಂತ ಸುಮಾರು 70 ಪ್ರಮುಖ ಸ್ಥಳದಲ್ಲಿ, ಕೇಂದ್ರದ 70 ಸಚಿವರು ಚಾಲನೆ ನೀಡಲಿದ್ದಾರೆ. ಇದು ಸಮಸ್ತ ವಿಶ್ವಕರ್ಮ ಸಮುದಾಯದವರಿಗೆ ನೀಡಿದ ಗೌರವ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಅಧ್ಯಕ್ಷ ನೇರಂಬಳ್ಳಿ ರಮೇಶ್ ಆಚಾರ್ ಹೇಳಿದರು. ಅವರು ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ಧೇಶಿಸಿ ಮಾತನಾಡಿ ವಿಶ್ವಕರ್ಮ ಜಯಂತೋತ್ಸವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದಿನಲ್ಲಿ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಕ್ನೋದಲ್ಲಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮಾನ್ಯ ನಿತಿನ್ ಗಡ್ಕರಿಯವರು ನಾಗಪುರದಲ್ಲಿ. ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ತಿರುವನಂತಪುರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. ರಾಜ್ಯಾದ್ಯಂತ ವಿಶ್ವಕರ್ಮ ಜಯಂತೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆ, ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು 5 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಪ್ರತ್ಯೇಕವಾಗಿ ಬಂಧಿಸಿ ಬೆಂಗಳೂರಿಗೆ ಕರೆತಂದ ಪೊಲೀಸರು, ಸಿಸಿಬಿ ಕಛೇರಿಯಲ್ಲಿ ಮೊದಲ ಹಂತದ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್, ಧನರಾಜ್ ಹಾಗೂ 10ನೇ ಆರೋಪಿ ಪ್ರಜ್ವಲ್ ಎಂಬಾತನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ:► ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚನೆ: ಬಿದಿಬದಿ ವ್ಯಾಪಾರಿ, ಮಿಮಿಕ್ರಿ ಆರ್ಟಿಸ್ಟ್ಗೆ ವೇಷ ಹಾಕಿಸಿ 5 ಕೋಟಿ ವಂಚನೆ – https://kundapraa.com/?p=68995 . ನ್ಯಾಯಾಲಯದಲ್ಲಿ ಉಡುಪಿ ಪೊಲೀಸರು ತನಗೆ ತೊಂದರೆ ಕೊಟ್ಟಿದ್ದಾರೆ. ಬಂಧನ ಮಾಡಿರುವ ಬಗ್ಗೆ ಮನೆಯವರಿಗೆ ಮಾಹಿತಿ ನೀಡಲು ಅವಕಾಶ ನೀಡಿಲ್ಲ…
ಕಬಾಬ್ ಮಾರುವ ಬಿದಿ ಬದಿ ವ್ಯಾಪಾರಿ, ಮಿಮಿಕ್ರಿ ಆರ್ಟಿಸ್ಟ್ಗೆ ವೇಷ ಹಾಕಿಸಿ 5 ಕೋಟಿ ವಂಚನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಉದ್ಯಮಿಯೋರ್ವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಹಿತ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಮಂದಿ ವಿರುದ್ಧ ದೂರು:ಸೆ.8ರಂದು ಬೈಂದೂರು ಬಿಜೆಪಿ ಮುಖಂಡ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನಲ್ಲಿ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಹಾಗೂ ತಂಡವನ್ನು ಉಡುಪಿ ಕೃಷ್ಣ ಮಠದ ಹಾಗೂ ಬೆಂಗಳೂರಿನಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರಕರಣದ 1ನೇ ಆರೋಪಿ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್ ಹಾಗೂ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಎಂಎಲ್ಎ ಟಿಕೆಟ್ ಕೊಡಿಸುವ ಭರವಸೆ ನೀಡಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರ ಸಹಿತ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್ ಹಾಗೂ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ 3ನೇ ಆರೋಪಿ ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮೀಜಿ, 5ನೇ ಆರೋಪಿ ನಾಯ್ಕ್ ಎಂಬುವವನ್ನು ಇನ್ನಷ್ಟೇ ಬಂಧಿಸಬೇಕಿದ್ದು 8ನೇ ಆರೋಪಿ ಪ್ರಸಾದ್ ಬೈಂದೂರು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸೆ.8ರಂದು ಬೈಂದೂರು ಬಿಜೆಪಿ ಮುಖಂಡ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನಲ್ಲಿ ಬಂಡೇಪಾಳ್ಯ ಪೊಲೀಸರಿಗೆ ದೂರು ನೀಡಿದ್ದು, ಇದರ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಹಾಗೂ ತಂಡವನ್ನು ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಅಧಿ ದೇವರಾದ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಕರಾವಳಿ ಭಾಗದಲ್ಲೇ ಪ್ರಥಮ ಬಾರಿಗೆ ವಾಸುದೇವ ಜೋಯಿಷರ ನೇತೃತ್ವದಲ್ಲಿ 1200ಕ್ಕೂ ಮಿಕ್ಕಿ ಮಹಿಳೆಯರಿಂದ ಸಾಮೂಹಿಕ ಶಿವ ಸಹಸ್ರನಾಮ ಭಸ್ಮಾರ್ಚನೆ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಾಜ ಸೇವಕರಾದ ಸುಬ್ರಹ್ಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ್ ಪೂಜಾರಿ ಗರಡಿ ಮನೆ, ನಾಗರಾಜ್ ರಾಯಪ್ಪನ ಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್, ಸವಿತ ಜಗದೀಶ್ ಊರಿನ ಪ್ರಮುಖರಾದ ಕಿಶೋರ್ ಹೆಗ್ಡೆ, ಚಂದ್ರಶೇಖರ್ ಕಲ್ಪತರು, ಸಟ್ವಡಿ ವಿಜಯ್ ಶೆಟ್ಟಿ, ರಾಜೀವ ಕೋಟ್ಯಾನ್,ಹೃದಯ ಕುಮಾರ್ ಶೆಟ್ಟಿ, ಮಂಜುನಾಥ್ ರಾವ್, ಜಿ ಎಸ್ ಭಟ್, ಸಚಿನ್ ನಕ್ಕತ್ತಾಯ, ಚಂದ್ರಶೇಖರ್ ಶೆಟ್ಟಿ ಶ್ರವಣ್ ಚಾತ್ರ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ,ಸೆ.12: ಕುಂದಾಪುರ ತಾಲೂಕಿನ ಮೋವಾಡಿ ಎಂಬಲ್ಲಿ ಸೌಪರ್ಣಿಕಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಮರಳು ಅಡ್ಡೆ ಮೇಲೆ ಗಂಗೊಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್ ಹಾಗೂ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ಆಪಾದಿತರು ಕೃತ್ಯಕ್ಕೆ ಬಳಿಸಿದ ಒಟ್ಟು 2,13,500 ರೂಪಾಯಿ ಮೌಲ್ಯದ 2 ದೋಣಿ, ಪ್ಲಾಸ್ಟಿಕ್ ಬುಟ್ಟಿಗಳು, ಕಬ್ಬಿಣದ ಬಕೆಟುಗಳು, ಮರದ ಹಲಗೆ, ಕಬ್ಬಿಣದ ಸ್ಟ್ಯಾಂಡ್ ಮತ್ತು ಒಂದು ಯುನಿಟ್ ಮರಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಓರ್ವ ಸ್ಥಳೀಯ ಅಕ್ರಮ ದಕ್ಕೆ ನಡೆಸುತ್ತಿದ್ದ ಅಲ್ಟನ್ ಎಂಬುವವರನ್ನು ವಶಕ್ಕೆ ಪ್ರಕರಣ ದಾಖಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.12: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 312 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.25 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 58.70 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 43.82 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 45.71 ಕೋಟಿ ರೂ. ಸಂಚಯಿಸಲಾಗಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿವಿಧ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮಳೆ ಕೊರತೆಯಿಂದಾಗಿ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ಒಣಗುತ್ತಿದೆ. ಹಾಗಾಗಿ ಬೈಂದೂರನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. ಅವರು ಬೈಂದೂರು ಮಿನಿವಿಧಾನಸೌಧ ಶಾಸಕರ ಕಛೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಸರಕಾರ ರೈತರಿಗೆ ನೀಡಿದ ಉಚಿತ ವಿದ್ಯುತ್ ಯೋಜನೆಯಂತೆ ಲೋಡ್ ಶೆಡ್ಡಿಂಗ್ ಮಾಡದೇ ವಿದ್ಯುತ್ ಒದಗಿಸಬೇಕು. ವಿದ್ಯುತ್ ಕೊರತೆ ಇದ್ದರೆ, ಬೇರೆ ರಾಜ್ಯದಿಂದಾದರೂ ಖರೀದಿಸಿ ನೀಡಲಿ. ರೈತರಿಗೆ ನೀರು, ವಿದ್ಯುತ್ ದೊರೆತರೆ ಯಾವುದೇ ಭಾಗ್ಯದ ಅವಶ್ಯಕತೆ ಇರುವುದಿಲ್ಲ ಎಂದ ಅವರು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸುಗಳ ಸಂಖ್ಯೆ ತೀರಾ ಕಡಿಮೆಯಿದ್ದು ಶಕ್ತಿ ಯೋಜನೆಯ ಲಾಭ ಜಿಲ್ಲೆಯ ಮಹಿಳೆಯರಿಗೆ ದೊರೆಯುತ್ತಿಲ್ಲ. ಖಾಸಗಿ ಬಸ್ಸುಗಳಿಗೂ ಸಬ್ಸಿಡಿ ಒದಗಿಸಿದರೆ ಕರಾವಳಿಯ ಹೆಣ್ಣುಮಕ್ಕಳಿಗೆ ಅನುಕೂಲ ಮಾಡಿದಂತಾಗುವುದು ಇಲ್ಲದಿದ್ದರೆ ಕೇವಲ ಪ್ರಚಾರದ ಯೋಜನೆಯಾಗುವುದು. ಮಹಿಳೆಯರಿಗೆ ಒಂದು ಕಡೆ ಹಣವನ್ನು ಕೊಟ್ಟಂತೆ ಮಾಡಿ…
