Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2022ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಇಂದ್ರ ಕುಮಾರ್ ಹೆಚ್. ಬಿ ಅವರ ” ಎತ್ತರ” ಕಾದಂಬರಿಗೆ ದೊರೆತಿದೆ. ಕಥೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಇವರು ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಲೇಖಕರುಗಳಾದ ಡಿ.ಎಸ್.ಚೌಗುಲೆ, ಶ್ರೀನಿವಾಸ ಮೂರ್ತಿ, ಅನುಪಮಾ ಪ್ರಸಾದ್ ಅವರು ನಿರ್ಣಾಯಕರಾಗಿ ಸಹಕರಿಸುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಇದೇ ಆಗಸ್ಟ್ ತಿಂಗಳಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಕೆಪಿಎಸ್ ಪ್ರೌಢಶಾಲೆ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟವನ್ನು ಸ್ಥಳೀಯ ಉದ್ಯಮಿ ಪ್ರಭಾಕರ್ ಕುಂಭಾಶಿ ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಪ್ರಾಮುಖ್ಯತೆ ಕೇವಲ ಒಬ್ಬರ ಫಿಟ್ನೆಸ್ಗೆ ಸೀಮಿತವಾಗಿಲ್ಲ ವಿದ್ಯಾರ್ಥಿಯ ಸಮಗ್ರ ಬೆಳವಣಿಗೆ ಯಶಸ್ವಿ ಜೀವನಕ್ಕೆ ಆಧಾರವಾಗಿದೆ ಎಂದರು ಸಂಸ್ಥೆಯ ಉಪಪ್ರಾಂಶುಪಾಲರದ ಚಂದ್ರಶೇಖರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡೆಯು ಸ್ಥಿತಿಸ್ಥಾಪಕತ್ವ, ಪರಿಶ್ರಮ ಮತ್ತು ಸಹಬಾಳ್ವೆ ಮನೋಭಾವದ ಗುಣಗಳನ್ನು ಅಭಿವೃದ್ಧಿಪಡಿಸುವ ಅದ್ಭುತ ಮಾರ್ಗವಾಗಿದೆ ಎಂದರು. ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರ್ವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಯುವಜನ ಮತ್ತು ಸಬಲೀಕರಣ ಇಲಾಖೆಯ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಸಂಸ್ಥೆಯ ಪ್ರಾಂಶುಪಾಲೆ ಸುಶೀಲಾ ಹೊಳ್ಳ ಉಪಸ್ಥಿತರಿದ್ದರು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಂಕರ್ ನಾಯ್ಕ್ ಲೆಕ್ಕಪರಿಶೋಧಕರು ಕೋಟೇಶ್ವರ ಇವರು ಬಹುಮಾನಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಅ.07: ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯ್ ಪತ್ನಿ ಸ್ಪಂದನಾ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದು, ಈ ವೇಳೆ ಹೃದಯಾಘಾತವಾಗಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಎಸಿಪಿ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ. ಪಾರ್ವತಮ್ಮ ರಾಜಕುಮಾರ್ ಅವರ ತಮ್ಮ ಚಿನ್ನೆಗೌಡರ ಮಗನಾದ ವಿಜಯ್ ಕುಟುಂಬ ಅಪ್ಪು ನಿಧನದ ಶಾಕ್ನಿಂದ ಹೊರಬರುವ ಹೊತ್ತಿಗೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ, 34 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ದೇವಾಡಿಗ ಹಾಗೂ ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು. ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿರುವ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಸಿಎ/ಸಿಎಸ್ ಕೋರ್ಸ್ ಗಳು ಬಹಳಷ್ಟು ಪ್ರಯೋಜನಕಾರಿ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜೊತೆ-ಜೊತೆಗೆ ಸಿಎ/ಸಿಎಸ್ ಕೋರ್ಸುಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎನ್ನುತ್ತಾ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಕಲಿಕಾ ಪ್ರಗತಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಉದ್ಯೋಗ ಮೇಳ ಕಾಲೇಜು ಆವರಣದಲ್ಲಿ ನಡೆಯಿತು. ಪ್ರಮುಖ 30 ಅಧಿಕ ಪ್ರತಿಷ್ಠಿತ ಕಂಪನಿಗಳು ಆಗಮಿಸಿ ವಿವಿಧ ಹುದ್ದೆಗಳಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು . ಕಾರ್ಯಕ್ರಮದಲ್ಲಿ ಶ್ರೀ ಜೀವನ್ ಕುಮಾರ್ ಹೆಚ್.ಆರ್ ರಿಕ್ರೂಟರ್, ಶ್ರೀ ಸುಬ್ರಹ್ಮಣ್ಯ ಸಂಸ್ಥಾಪಕರು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ,ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಪ್ಲೇಸ್ಮೆಂಟ್ ಆಫೀಸರ್ ಕುಮಾರಿ ವೈಷ್ಣವಿ ಹಾಗೂ ಎಲ್ಲಾ ಕಂಪನಿಯ ಹೆಚ್. ಆರ್ ಮ್ಯಾನೇಜರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಉದ್ಯೋಗಗಾಂಕ್ಷಿಗಳು ನಮ್ಮ ಸಂಸ್ಥೆ ಸಂಘಟಿಸಿರುವ ಇಂತಹ ಕಾರ್ಯಕ್ರಮವನ್ನು ಪ್ರಯೋಜನ ಪಡೆಯುವಂತೆ ತಿಳಿಸಲಾಯಿತು. ಸುಮಾರು 1500ಕ್ಕಿಂತಲೂ ಹೆಚ್ಚು ನೋಂದಣಿ ನಡೆದಿದ್ದು ಅದರಲ್ಲಿ 600 ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಆದೇಶ ಪತ್ರವನ್ನು ವಿತರಿಸಿ190 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ನಡೆಸಲಾಯಿತು. ಅತಿಥಿಗಳ ಪರಿಚಯವನ್ನು ಉಪನ್ಯಾಸಕಿ ಕುಮಾರಿ ಹೀಬಾ ಹಾಗೂ ಸಂಸ್ಥಾಪಕರ ಪರಿಚಯವನ್ನು ಉಪನ್ಯಾಸಕಿ ಶ್ರೀ ಲಕ್ಷ್ಮಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು, ಈ ತಿಂಗಳ ರಜತ ಗೌರವಕ್ಕೆ ಕುಂದಾಪ್ರ ಕನ್ನಡದ ಕಲಾವಿದ, ಶಿಕ್ಷಕ ಮನೋಹರ್ ಹೆಗ್ಡೆ (ಮನು ಹಂದಾಡಿ) ಅವರನ್ನು ಆಯ್ಕೆಮಾಡಲಾಗಿದೆ. ಪಂಚವರ್ಣ ಸಂಸ್ಥೆ ನೀಡುತ್ತಿರುವ ಎಂಟನೇ ಸಾಧಕ ಶಕ್ತಿಯಾಗಿದ್ದು, ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ. ತಿಮ್ಮ ಪೂಜಾರಿ, ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ, ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ. ವಿಶ್ವೇಶ್ವರ ತುಂಗ, ಸಹಕಾರಿ ಕ್ಷೇತ್ರದ ಕೊರಗ ಪೂಜಾರಿ , ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪಾರಂಪಳ್ಳಿ ಗಣೇಶ್ ಅಡಿಗ,ವೆರಿಕೋಸ್ ತಜ್ಞ ಡಾ.ಎಂ ವಿ ಉರಾಳ ಅವರನ್ನು ಗೌರವಕ್ಕೆ ಆಯ್ಕೆ ಮಾಡಲಾಗಿತ್ತು. ಇದೇ ಆ.೬ ರಂದು ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಆಸಾಡಿ ಒಡ್ರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಿಗ್ಗೆ 7:30ರ ಸುಮಾರಿಗೆ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಬಲೆಗಳ ನಡುವೆ ಸಿಲುಕಿದ್ದ ಓರ್ವ ಮೀನುಗಾನನ್ನು ಸಹಮೀನುಗಾರ ಚಂದ್ರ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಬಳಿಕ ಸಮೀಪದ ದೋಣಿಗಳಿಗೆ ಮಾಹಿತಿ ತಲುಪಿಸಿದ್ದು, ಮೀನುಗಾರರು ನೆರವಿಗೆ ಬಂದಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಮೀನುಗಾರರು ಹಾಗೂ ದೋಣಿಯನ್ನು ಮರವಂತೆ ಬಂದರಿಗೆ ಕೊಂಡೊಯ್ಯಲಾಯಿತು. ಅಪಘಾತದಲ್ಲಿ ದೋಣಿಯಲ್ಲಿ ಬಲೆ, ಇಂಜಿನ್‌ಗೆ ಹಾನಿಯಾಗಿದ್ದು 2 ಲಕ್ಷಕ್ಕೂ ಅಧಿಕ ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ. ಸೋಮವಾರವಷ್ಟೇ ಕರ್ಕಿಕಳಿ ಬಳಿ ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಬಂದರು ಕಾಮಗಾರಿ, ಕೊಡೇರಿ ಕಿರುಬಂದರು ಮಂಜೂರು ಸೇರಿದಂತೆ ಇನ್ನಿತರ ಬೇಡಿಕೆಗೆ ಶೀಘ್ರ ಅನುಮತಿ, ಅನುಮೋದನೆ ನೀಡುವಂತೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗರಿಗೆ ರೂ 85.00ಕೋಟಿ ಮಂಜೂರಾಗಿದ್ದು, ಸಿ.ಆರ್.ಝಡ್ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಅನುಕೂಲ ಮಾಡಿಬೇಕಾಗಿ ಕೋರಿದರು. ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿ ಮಾಡಿದರು. ಬೈಂದೂರಿನಲ್ಲಿ ರೂ 228.78 ಕೋಟಿ ವೆಚ್ಚದಲ್ಲಿ ಮಲ್ಟಿ ಪರ್ಪಸ್ ಹಾರ್ಬಾರ್ ನಿರ್ಮಾಣ ಮಾಡಲು ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾವುದೇ ಕಂಪನಿ ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಯೋಜನೆಗಳಿಗೆ ಬ್ರೇಕ್ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿರುಗಾಳಿ ಸಹಿತ ಬುಧವಾರ ಬೆಳಗಿನ ಜಾವ ಸುರಿದ ಮಳೆಯಿಂದಾಗಿ ಉಳ್ಳೂರು 74 ಗ್ರಾಮದಲ್ಲಿ ಮನೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿಯಿಂದಾಗಿ ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಉಳ್ಳೂರು 74 ಗ್ರಾಮದ ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ. ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25 ಸಾವಿರ, ಸುಮತಿ ಶೆಡ್ತಿ 50 ಸಾವಿರ, ರತ್ನಾಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 20 ನಷ್ಟ ಉಂಟಾಗಿದೆ. ಕೃಷಿ ತೋಟದಲ್ಲಿನ ಫಸಲು ಭರಿತ ಅಡಕೆ- ತೆಂಗು ಮರಗಳು ನೆಲಕಚ್ಚಿದ್ದು, ಅಪಾರ ನಷ್ಟ ಸಂಭವಿಸಿದೆ. ಸುಧಾಕರ ಶೆಟ್ಟಿ ಅವರ 225 ಅಡಿಕೆ ಮರ, ಶಂಕರ ಶೆಟ್ಟಿ 150, ಮಹಾಬಲ ನಾಯ್ಕರ 40, ಉದಯ ಪೂಜಾರಿ ತೋಟದ 15 ಮರ, ವನಜ ಆಚಾರ್ತಿಯವರ 35, ರತ್ನ ಆಚಾರಿ 75, ಲಕ್ಷ್ಮೀನಾರಾಯಣ ಆಚಾರಿ 25, ಕೃಷ್ಣ ಆಚಾರಿ 20, ಪಾರ್ವತಿ…

Read More