ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಪದಗ್ರಹಣ ಸಮಾರಂಭವು ಅಕ್ಷತಾ ಹಾಲ್ ನಲ್ಲಿ ನಡೆಯಿತು. ವಲಯ ಒಂದರ ಸಹಾಯಕ ಗವರ್ನರ್ ಬಿ.ರಾಜೇಂದ್ರ ಶೆಟ್ಟಿ ಪದ ಪ್ರಧಾನ ನೆರವೇರಿಸಿ ರೋಟರಿಯ ಮೂಲಕ ಸಮಾಜ ಸೇವೆಗೆ ಉತ್ತಮ ಅವಕಾಶಗಳಿವೆ ಇದನ್ನು ಬಳಸಿಕೊಂಡು ಕೃತಾರ್ಥರಾಗೊಣ ಎಂದು ಕರೆ ನೀಡಿದರು. ಡಾ. ಸಂದೀಪ್ ಕುಮಾರ್ ಶೆಟ್ಟಿ, ಸದಾನಂದ ಉಡುಪ, ಗೌತಮ್ ಕಾಮತ್, ಸದಾನಂದ ಬಳ್ಕೂರು, ನರಸಿಂಹ ಹೊಳ್ಳ, ರಾಜು ಪೂಜಾರಿ, ರಾಮಕೃಷ್ಣ ಐತಾಳ್, ಭಾಸ್ಕರ್, ಮಂಜುನಾಥ ಕೆ.ಎಸ್,. ಕೌಶಿಕ್ ಯಡಿಯಾಳ, ಮಂಜುನಾಥ್ ಗಾಣಿಗ ಹಾಗೂ ನಟರಾಜ್ ಇವರುಗಳು ಅತಿಥಿಗಳನ್ನು ಪರಿಚಯಿಸಿದರು. ಕ್ಲಬ್ ಬುಲೆಟಿನ್ ರಿವರ್ ನ್ನು ವಲಯ ಸೇನಾನಿ ವೆಂಕಟೇಶ್ ನಾವುಂದ ಬಿಡುಗಡೆಗೊಳಿಸಿದರು. ಸ್ಥಳೀಯ ಚರ್ಚಿನ ಧರ್ಮಗುರುಗಳಾದ ಅತೀ ವಂದನೀಯ ಫಾ.ಪೌಲ್ ರೇಗೋ ಮುಖ್ಯ ಅತಿಥಿಗಳಾಗಿ ಆಗಮಿಸಿ ರೋಟರಿಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೂತನ ಅಧ್ಯಕ್ಷರಾದ ವಿಶ್ರಾಂತ್ ಎನ್. ಶೆಟ್ಟಿ ಇವರು ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಪ್ರತಿಭಾವಂತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು. ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು, ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಡಿದ್ದ ಮನವಿಗೆ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾಂತ್ರೀಕೃತ ಕೃಷಿಯೇ ಹೆಚ್ಚಾಗಿರುವುದರ ನಡುವೆಯೂ ಮಕ್ಕಳಿಗೆ ಸಾಂಪ್ರದಾಯಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ. ಭತ್ತದ ಕೃಷಿಯೊಂದಿಗೆ ಕೃಷಿ ಸಂಸ್ಕೃತಿಯನ್ನು ತಿಳಿಸಿಕೊಡುವ ಕಾರ್ಯ ಸ್ಕೌಟ್ -ಗೈಡ್ಸ್ ಹಾಗೂ ವಿವಿಧ ಸಂಘಟನೆಗಳಿಂದ ಆಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ಮಂಗಲಪಾಂಡೆ ರಸ್ತೆ ವಾರ್ಡ್ನ ಕೋಟ್ಯಾನ್ ಕುಟುಂಬಸ್ಥರ ಗದ್ದೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕುಂದಾಪುರ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ ‘ಕೃಷಿಯ ಕಡೆ ನಮ್ಮ ನಡೆʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಹಾಗೂ ಗೈಡ್ಸ್ ಕುಂದಾಪುರದ ಅಧ್ಯಕ್ಷೆ ಗುಣರತ್ನ ಅವರು, ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಕಳೆದ 10 ವರ್ಷಗಳಿಂದ ಕೃಷಿಯ ಕಡೆ ನಮ್ಮ ನಡೆ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಮಕ್ಕಳಿಗೆ ಕೃಷಿಯ ಪ್ರಾಯೋಗಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಗೂ ಆರ್ಟಿಓ ಅಧಿಕಾರಿಗಳ ಸಭೆ ನಡೆಸಿದರು. ಖಾಸಗಿ ಬಸ್ ಇಲ್ಲದ ರೂಟ್ಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಕ್ಷಣದಿಂದಲೇ ಓಡಿಬೇಕು. ಹಾಗೆಯೇ ಖಾಸಗಿ ಬಸ್ ಮಾಲೀಕರು ಯಾವ ರೂಟ್ಗೆ ಪರ್ಮಿಟ್ ಪಡೆದಿದ್ದಾರೋ ಅದೇ ರೂಟ್ನಲ್ಲಿ ಬಸ್ ಓಡಿಸಬೇಕು. ಒಂದೊಮ್ಮೆ ಆ ರೂಟ್ನಲ್ಲಿ ಬಸ್ ಓಡಿಸದೇ ಇದ್ದರೆ ಅಲ್ಲಿಗೆ ಕೆಎಸ್ಆರ್ಟಿಸಿ ಬಸ್ ಓಡಿಸಲಾಗುವುದು ಎಂದು ಶಾಸಕರು ತಿಳಿಸಿದರು. ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಓಡಾಟದ ಸಮಯವು ಒಂದೇ ಆದಲ್ಲಿ ಘರ್ಷಣೆಯ ಜತೆಗೆ ಪ್ರಯಾಣಿಕರಿಗೂ ಅನಾನುಕೂಲವಾಗುತ್ತದೆ. ಹೀಗಾಗಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಇಬ್ಬರಿಗೂ ಸಮಸ್ಯೆ ಆಗದ ರೀತಿಯಲ್ಲಿ ಪ್ರತಿ ನಿಲ್ದಾಣವಾರು ಸಮಯ ನಿಗದಿ ಮಾಡಲು ಆರ್ಟಿಓ ಹಾಗೂ ಕೆಎಸ್ಆರ್ಟಿಸಿಯವರಿಗೆ ನಿರ್ದೇಶನ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಮಕ್ಕಳು ಮೊಬೈಲ್ ಬಳಕೆ ಮತ್ತು ಟಿವಿಯಿಂದ ದೂರವಿರಬೇಕು. ಶಾಲೆ ಹಾಗೂ ಇನ್ನಿತರ ಸ್ಥಳಗಳಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವುದು ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಂತೆ ಕ್ರಮ ಜರುಗಿಸಲಾಗುವುದು ಎಂದು ಬೈಂದೂರು ಪಿಎಸ್ಐ (ಸಹಾಯಕ ತನಿಖೆ) ಮಹೇಶ ಕಂಬಿ ಹೇಳಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಗುರುವಾರ ನಡೆದ ತೆರೆದಮನೆ ಕಾರ್ಯಕ್ರಮದಲ್ಲಿ ಅಲ್ಲಿನ ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ತಮ್ಮ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಜಾಗೃತರಾದರೆ ಶಾಂತಿ ಸುವ್ಯವಸ್ಥೆ ನೆಲೆಸಲು ಸಾಧ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಗೂ ಸುತ್ತಮುತ್ತಲಿನ ಪ್ರದೇಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ V ರ ಪ್ರಾಂತೀಯ ಅಧ್ಯಕ್ಷರಾಗಿ, ಕುಂದಾಪುರ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್ ನಿಯುಕ್ತಿಗೊಳಿಸಿದ್ದಾರೆ. ಪ್ರಾಂತೀಯ ಕಾರ್ಯದರ್ಶಿಯಾಗಿ ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿಯ ನಿವೃತ್ತ ಮ್ಯಾನೇಜರ್ ಹಾಗೂ ಬ್ರಹ್ಮಾವರ ಲಯನ್ಸ್ ಕ್ಲಬ್ನ ಆನಂದ ಶೆಟ್ಟಿ ಕಬ್ಬೈಲ್ ಇವರನ್ನು ನೇಮಿಸಲಾಗಿದೆ.ಪ್ರಾಂತ್ಯ V, ವಲಯ I ರ ವಲಯಾಧ್ಯಕ್ಷರನ್ನಾಗಿ ತೆಕ್ಕಟ್ಟೆ ಲಯನ್ಸ್ ಕ್ಲಬ್ನ ಧರ್ಮರಾಜ್ ಮುದಲಿಯಾರ್ ಮತ್ತು ವಲಯ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಶೆಟ್ಟಿ, ವಲಯ II ರ ವಲಯಾಧ್ಯಕ್ಷರನ್ನಾಗಿ ಹಂಗಳೂರು ಲಯನ್ಸ್ ಕ್ಲಬ್ನ ಬಾಲಕೃಷ್ಣ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ವಿಲ್ಫ್ರೆಡ್ ಮೆನೆಜಸ್ ಹಾಗೂ ವಲಯ III ರ ವಲಯಾಧ್ಯಕ್ಷರನ್ನಾಗಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ನ ಬೆಳ್ವೆ ವಂಸತ್ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ಪಟ್ಟಾಭಿರಾಮ್ ಭಟ್ ಇವರನ್ನು ನೇಮಿಸಲಾಗಿದೆ.ಲಯನ್ಸ್ ಕ್ಲಬ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಬನ್ನಾಡಿ- ವಡ್ಡರ್ಸೆ, ಲಯನ್ಸ್ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಹೊಸೂರಿನ ನಿವಾಸಿಯಾಗಿದ್ದು, ಜಯರಾಮ ಶೆಟ್ಟಿ ಮತ್ತು ಕಸ್ತೂರಿ ದಂಪತಿಗಳ ಪುತ್ರ ̤ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ತೇರ್ಗಡೆ ಹೊಂದಿದ ರಕ್ಷಿತ್ ಕುಮಾರ್ಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಸಹೋದರಿ ನಿವೇದಿತಾ ಪ್ರತಿಷ್ಠಾನ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟು ‘ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ, ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕೆಂಬ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು. ಕಾರ್ಯಕ್ರಮದಲ್ಲಿ ರೋಟರಿ ರಿವರ್ ಸೈಡ್ ಕುಂದಾಪುರದ ಅಧ್ಯಕ್ಷರಾದ ಡಾ| ವಿಶ್ರಾಂತ್ ಎನ್. ಶೆಟ್ಟಿ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿ ಮೆಲ್ಲೊ, ನಿಕಟಪೂರ್ವ ಅಧ್ಯಕ್ಷರಾದ ಕೌಶಿಕ್ ಯಡಿಯಾಳ, ಸಹೋದರಿ ನಿವೇದಿತಾ ಪ್ರತಿಷ್ಠಾನದ ಬಳಗದವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚೈತ್ರಾ ಪ್ರಭು ತೇರ್ಗಡೆ ಹೊಂದಿದ್ದಾರೆ. ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್ಶಿಫ್ ಪೂರೈಸಿದ್ದರು. ಅವರು ಭಟ್ಕಳ ಬೆಂಗ್ರೆಯ ಶಿರಾಲಿ ಮಾವಿನಕಟ್ಟೆ ನಿವಾಸಿಯಾಗಿದ್ದು, ದಿನಕರ ಪ್ರಭು ಮತ್ತು ದೀಪಾ ಡಿ. ಪ್ರಭು ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ, ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು “ವಿದ್ಯಾ ದಾನವೆಂಬುದು ಶ್ರೇಷ್ಠದಾನ. ಪ್ರತಿ ಮಗುವಿನಲ್ಲಿ ಬೌದ್ಧಿಕ ಹಸಿವನ್ನು ಗುರುತಿಸಿ ಸಮರ್ಥ ಪರಿಹಾರ ಒದಗಿಸಿಕೊಡುವುದು ವೃತ್ತಿ ಧರ್ಮವಾಗಬೇಕು” ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಥಾಪಕರಲ್ಲಿ ಒಬ್ಬರಾದ ಗಣಪತಿ ಭಟ್ ಕೆ. ಎಸ್., ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ್, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿಗಳಾದ ಸುಧೀರ್ ಪ್ರಭು, ಪೆರ್ಡೂರು ಸರಕಾರಿ ಪದವಿ ಪೂರ್ವ…
