ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ‘ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ’ಯ ಅಂತರಕಾಲೇಜು ಪುರುಷರ ಖೋಖೋ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ಮಂಗಳೂರು ವಿವಿಯ 25ಕಾಲೇಜುಗಳು ಭಾಗವಹಿಸಿದ್ದವು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃ? ಶೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಮಧು ಜಿ.ಆರ್ ಹಾಗೂ ಜಡ್ಕಲ್ನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೆಶಕ ಶೇಶಪ್ಪ ಗೌಡ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಊರಿನ ದೇವಾಲಯಗಳು ಅಭಿವೃದ್ಧಿ ಹೊಂದುವುದರಿಂದ ಊರಿಗೆ ಸುಭಿಕ್ಷೆ ಉಂಟಾಗುತ್ತದೆ. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ಪ್ರಸಕ್ತ ಆಡಳಿತ ಸಮಿತಿಯವರು ಗ್ರಾಮಸ್ಥರು ಮತ್ತು ಭಕ್ತಾಭಿಮಾನಿಗಳನ್ನು ಸೇರಿಸಿಕೊಂಡು ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಭಕ್ತರಿಗೆ ಇನ್ನಷ್ಟು ಅನುಕೂಲತೆಗಳನ್ನು ಕಲ್ಪಿಸುವ ಮತ್ತು ದೇವರ ಸೇವೆಗಾಗಿ ರಜತ ರಥ ನಿರ್ಮಿಸುವ ಅವರ ಯೋಜನೆಗಳು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಕೋಟ ಶ್ರೀ ಅಮೃತೇಶ್ವರೀ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಹಾರೈಸಿದರು. ಕೋಟೇಶ್ವರ ಕೊಡಿಹಬ್ಬದ ಸಾಂಸ್ಕೃತಿಕ ಸರಣಿ ಕಾರ್ಯಕ್ರಮಗಳಿಗೆ ದೇವಳ ರಂಗಮಂದಿರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಕೋಟ ಅಮೃತೇಶ್ವರೀ ದೇವಳದ ಜೀರ್ಣೋದ್ಧಾರ ಕಾರ್ಯಗಳಲ್ಲಿ ಭಕ್ತರು ಮತ್ತು ದಾನಿಗಳ ನೆರವನ್ನು ಸ್ಮರಿಸಿಕೊಂಡ ಅವರು, ತಮ್ಮ ಸಮಿತಿ ಅಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಪೂರೈಸಿ ಸಾಕಷ್ಟು ಹಣ ಉಳಿಸಿದೆ ಎಂದರು. ಕೋಟೇಶ್ವರ ದೇವಾಲಯದವರ ಬೆಳ್ಳಿ ರಥ ಯೋಜನೆಗೆ ಎರಡು ಕೆ.ಜಿ. ಬೆಳ್ಳಿ ತಾನು ನೀಡುವುದಾಗಿ ಘೋಷಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಸೋಮವಾರ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಯಶಸ್ವಿ ಚಲನಚಿತ್ರವಾದ ಕಾಂತಾರದ ಮೂಹರ್ತ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆದಿತ್ತು. ಚಿತ್ರದ ಯಶಸ್ಸಿನ ಬಳಿಕ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ, ರಾಧ್ಯಾ ಶೆಟ್ಟಿ ಮತ್ತು ಕುಟುಂಬಿಕರು ಆನೆಗುಡ್ಡೆ ವಿನಾಯಕನಿಗೆ ಪ್ರಿಯವಾದ ಮುಡಿಅಕ್ಕಿ, ಕಡಬು ಸೇವೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದಿಂದ ರಿಷಬ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ. ದೇವಿದಾಸ್ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದ 50 ವಿದ್ಯಾರ್ಥಿಗಳಿಗೆ, ಉದ್ಯಮಿ, ಬೆಂಗಳೂರು ಶ್ರೀ ಮೂಕಾಂಬಿಕಾ ಕೇಟರರ್ಸ್ ಮಾಲಕ ರಾಘವ ಗೌಡ ಅವರು ಕೊಡುಗೆಯಾಗಿ ನೀಡಿದ ವಸ್ತ್ರಗಳನ್ನು ವಿತರಿಸಿದರು. ಉದ್ಯಮಿ ಸದಾನಂದ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಸ್ತ್ರಗಳನ್ನು ವಿತರಿಸಿದರು. ಈ ವೇಳೆ ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ನೇತ್ರಾವತಿ ಗೌಡ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾನೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳೋತ್ಸವವು ಶುಕ್ರವಾರ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಜೃಂಭಣೆಯಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು. ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಓಡಿಸಿದರೇ, ಉಳಿದ ಕೋಣಗಳು ಹಗ್ಗ ಹಾಗೂ ಹಲಗೆ ವಿಭಾಗದ ಸ್ವರ್ಧೆಯಲ್ಲಿ ಪಾಲ್ಗೊಂಡವು. ಈ ಭಾರಿ ಕೋಣಗಳ ವೇಗವನ್ನು ಅಳೆಯಲು ಸೆನ್ಸಾರ್ ಅಳವಡಿಸಲಾಗಿತ್ತು. ಕಂಠದಮನೆ ಕುಟುಂಬದ ಟಿ. ನಾರಾಯಣ ಹೆಗ್ಡೆಯವರ ನೇತೃತ್ವದಲ್ಲಿ ಸಾಂಪ್ರದಾಯಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಸಹಕಾರಿ ಸಂಘಗಳು ಅತ್ಯಂತ ಯಶಸ್ವಿಯಾಗಿ ಮುನ್ನೆಡೆಯುತ್ತಿವೆ. ಕೇವಲ ಆಡಳಿತ ಮಂಡಳಿಯಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುವುದಲ್ಲ. ಸದಸ್ಯರು ಮತ್ತು ಗ್ರಾಹಕರ ಉತ್ತಮ ಸ್ಪಂದನೆ ಬಹಳ ಮುಖ್ಯವಾಗಿದೆ. ಜನರಿಗೆ ಉತ್ತಮ ಸೇವೆ ಸಿಗಲು ಸಿಬ್ಬಂದಿಗಳ ಪ್ರಾಮಾಣಿಕ ದುಡಿಮೆ ಕಾರಣವಾಗುತ್ತದೆ ಎಂದು ಶ್ರೀರಾಮ ಸೌಹಾರ್ದ ಕೋ ಅಪರೇಟೆವ್ ಸೊಸೈಟಿ ಬೈಂದೂರು ಇದರ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹೇಳಿದರು. ಅವರು ಗುರುವಾರ ನಾಗೂರಿನಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಇದರ ನಾಗೂರು ಶಾಖೆಯ ಗ್ರಾಹಕರ ಸಮಾವೇಶ ಮತ್ತು ಪೊಲೀಸ್ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶ್ರೀರಾಮ ಸೌಹಾರ್ದ ಸಹಕಾರಿ ಸಂಘವು ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪಡೆದ ಬಗ್ಗೆ ಎಲ್ಲ ಗ್ರಾಹಕರನ್ನು ಅಭಿನಂದಿಸಿದರು. ಎಲ್ಲರ ಸಹಕಾರದಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬೈಂದೂರು ಆರಕ್ಷಕ ಠಾಣೆಯ ತನಿಖಾ ವಿಭಾಗದ ಉಪ ನಿರೀಕ್ಷಕರಾದ ಮಹೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ 2022-23 ನೇ ಸಾಲಿನ ರಕ್ಷಕ- ಶಿಕ್ಷಕರ ಸಭೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಠಾಣೆ ಪಿಎಸ್ಐ ಸದಾಶಿವ ರಾಮಪ್ಪ ಗವರೋಜಿ ಮಾತನಾಡಿ ವಿದ್ಯಾರ್ಥಿಗಳು ಕಾನೂನುಬಾಹಿರ ಚಟುವಟಿಕೆಯಲ್ಲಿ ಮತ್ತು ಸೈಬರ್ ಅಪರಾಧಗಳಲ್ಲಿ ತೊಡಗುವುದರಿಂದ ಮುಂದೆ ಜೀವನದಲ್ಲಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಜಾಗ್ರತಿ ಮೂಡಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಮಟ್ಟದ ತರಬೇತುದಾರರಾದ ಆಝಾದ್ ಮೊಹಮ್ಮದ್ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯ ಪ್ರತಿ ಹಂತದಲ್ಲಾಗುವ ಬದಲಾವಣೆ ಮತ್ತು ಅದರ ಬಗ್ಗೆ ಪೋಷಕರು ವಹಿಸಬೇಕಾದ ಕಾಳಜಿ ಬಗ್ಗೆ ಮತ್ತು ಪೋಷಕರ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಹಾಗೂ ಶಿಕ್ಷಕ ರಕ್ಷಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. 2022-24 ನೇ ಸಾಲಿಗೆ ಸಂಘದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಭೌತಶಾಸ್ತ್ರ ಉಪನ್ಯಾಸಕರಾದ ಸಿದ್ದೀಕ್ ಅಕ್ಬರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.1: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 08, 09 ಮತ್ತು 10ರಂದು ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಕ್ರೀಡಾಂಗಣ ಭೂಮಿ ಪೂಜೆ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೆರಿತು. ಎಂ. ಎಂ. ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೆಬಲ್ ಟ್ರಸ್ಟ್ನ ಅದ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರು ಈ ವೇಳೆ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸಿದ ಸಂಸ್ಥೆಯು ಕಳೆದ ಕೆಲವು ದಿನಗಳಿಂದ ಸಿದ್ದತೆ ಆರಂಭಿಸಿದೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ ಎಂದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅದ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಮಾತಾನಾಡಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಆಯೋಜನೆ ನಮ್ಮ ಕಾಲೇಜಿಗೆ ಒದಗಿ ಬಂದಿರುವುದು ಒಂದು ಸುವರ್ಣ ಅವಕಾಶವಾಗಿದೆ. ಅದನ್ನು ಬಹಳ ಅಚ್ಚುಕಟ್ಟಾಗಿ ನಿಬಾಯಿಸಲು ಪಣ ತೋಟ್ಟಿದ್ದೆವೆ ಎಂದರು. ಪುರೋಹಿತರಾದ ಶಂಕರನಾರಾಯಣ ಉಡುಪ ಅವರ ನೇತೃತ್ವದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜನತಾ ಗೀತೋತ್ಸವ 2022 ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗರವರು ಕನ್ನಡ ನಾಡು- ನುಡಿ-ಸಂಸ್ಕ್ರತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ ಪ್ರತಿಭೆಗಳನ್ನು ಅಭಿನಂದಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಗಣೇಶ ಮೊಗವೀರರವರು ವಹಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಪಾಣರರವರು ಜಾನಪದ ಸಂಸ್ಕೃತಿಯ ಕುರಿತು ಮಾತನಾಡುತ್ತಾ ಕಾಂತಾರ ಸಿನಿಮಾದಲ್ಲಿ ತಾವು ಹಾಡಿರುವ ಜಾನಪದ ಹಾಡುಗಳನ್ನು ಹಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವಾರ ಅವರು ಅರ್ಥಪೂರ್ಣ ಕಾರ್ಯಕ್ರಮಗಳ ಕುರಿತು ಶ್ಲಾಘನೇ ವ್ಯಕ್ತಪಡಿಸಿದರು. ಜನತಾ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕಿ ಹಾಗೂ ವಿದೂಷಿ ಪ್ರವಿತಾ ಅಶೋಕ್ ಅವರು ಸಂಗೀತದ ಅಭ್ಯಾಸವನ್ನು ರೂಢಿಸಿಕೊಳ್ಳುವಂತ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…
