ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮಾ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಚಾರ್ಯರೂ ಆದ ಶರಣ ಕುಮಾರ ಅವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮಹಾನ್ ವ್ಯಕ್ತಿಗಳ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು. ಆಗ ಮಾತ್ರ ನಾವು ಕಲಿತ ವಿದ್ಯೆಗೆ ಅರ್ಥ ಸಿಗಲು ಸಾಧ್ಯ, ಗಾಂಧೀಜಿ ಮತ್ತು ಶಾಸ್ತ್ರಿಯವರ ಮೌಲಿಕವಾದ ಆದರ್ಶ ಗುಣಗಳನ್ನು ನಾವು ಪಾಲಿಸಿದರೆ ಅದು ಮಹಾನ್ ವ್ಯಕ್ತಿಗಳಿಗೆ ನಾವು ಕೊಡಬಹುದಾದ ಬೆಲೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಹ ಶಿಕ್ಷಕಿ ಲತಾ ದೇವಾಡಿಗ ಮಾತನಾಡುತ್ತಾ, ಗಾಂಧೀಜಿಯವರ ಜೀವನದಲ್ಲಿಯ ಕೆಲವು ಮಹತ್ತರ ಘಟನೆಗಳನ್ನು ಉಲ್ಲೇಖಿಸಿ ಮಹಾತ್ಮ ಗಾಂಧೀಜಿಯವರ ಸರಳತೆ, ಸತ್ಯ ಮತ್ತು ಅಹಿಂಸಾ ತತ್ವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿದ್ಯಾರ್ಥಿಗಳಾದ ಹರಿ ಮತ್ತು ನಿಧಿ ಗಾಂಧೀಜಿ ಅವರ ವ್ಯಕ್ತಿತ್ವದ ಕುರಿತಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದು ಆಧುನಿಕ ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವವನ್ನು ಹೊಂದಿದವರು. ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ (ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೊತೆಯಾಗಿ ಆಯೋಜಿಸಿದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಸ್ವಚ್ಚತಾ ಅಭಿಯಾನ – ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯಲ್ಲಿ ಅಭ್ಯಾಗತರಾಗಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಖಜಾಂಚಿ ಭರತ್ ಶೆಟ್ಟಿ ಮಾತನಾಡುತ್ತಾ “ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರು ಭಾರತಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಪರಿಸರ ಸ್ವಚ್ಚತೆ ಪ್ರತಿಯೊಬ್ಬರ ಆಧ್ಯತೆಯಾಗಬೇಕು”…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ವೈಭವ್, ವಿಶ್ವಾಸ್, ಸಂಕೇತ್, ಅಕ್ಷಯ್ ಬಿಲ್ಲವ ಮತ್ತು ಪ್ರಜ್ವಲ್ ಪೈ ತಂಡವನ್ನು ಪ್ರತಿನಿಧಿಸಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈಯಕ್ತಿಕ ಸ್ವಚ್ಛತೆಯೊಂದಿಗೆ ಪರಿಸರದ ಸ್ವಚ್ಛತೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮನೆಯಿಂದಲೇ ಸ್ವಚ್ಛತೆಯ ಪಾಠ ಆರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಾವು ಸಮಾಜದಲ್ಲಿ ಮಾಡಬಹುದಾದ ಬಹುದೊಡ್ಡ ಸೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್. ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ರೋಟರ್ಯಾಕ್ಟ್ ಕ್ಲಬ್ – ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಸಹಯೋಗದೊಂದಿಗೆ ಗಾಂಧಿ ಜಯಂತಿಯ ಅಂಗವಾಗಿ ಗುರುವಾರ ಇಲ್ಲಿನ ಸೋಮೇಶ್ವರ ಬೀಚ್ ತೀರದಲ್ಲಿ ಆಯೋಜಿಸಲಾದ ಕಡಲತೀರ ಸ್ವಚ್ಛತಾ ಅಭಿಯಾನ & ಕೋಸ್ಟ್ ಟು ಕೋಸ್ಟ್ 3.0 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಂದೂರು ತಾಲೂಕು ಹಲವು ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು, ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಭಾಗದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಪ್ರತಿಯೊಬ್ಬರನ್ನೂ ಸ್ವಚ್ಛತೆಯ ಅರಿವು ಮೂಡಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕಿದೆ ಎಂದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿದ್ದ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.30ರಂದು ಆಯೋಜಿಸಿದ ಪದವಿ ಪೂರ್ವ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ್ ಹಾಗೂ ಯೋಗೀಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ ಸ್ಥಾನವಿದ್ದು, ಅವರನ್ನು ಪ್ರೀತಿ, ಸಹಾನುಭೂತಿಯಿಂದ ಕಾಣುವುದರೊಂದಿಗೆ ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದರು. ಅವರು ಅಂದು ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್, ಪ್ರಾದೇಶಿಕ ಕಛೇರಿ ವಲಯ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಬಂದರಿನ ಸವಾಂಗಿಣ ಅಭಿವೃದ್ಧಿ ಹಾಗೂ ಕುಂಠಿತಗೊಂಡಿರುವ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ನಡೆಸುವ ಸಂಬಂಧ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲು ಗಂಗೊಳ್ಳಿ ಮೀನುಗಾರಿಕೆ ಬಂದರಿಗೆ ಸಂಬಂಧಪಟ್ಟ 26 ಮೀನುಗಾರಿಕೆ ಸಂಘಟನೆಗಳು ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿ ಚರ್ಚೆ ನಡೆಸಿದರು. ತಡವಾಗಿ ಆಗುತ್ತಿರುವ ಬಂದರಿನ ವಿವಿಧ ಕಾಮಗಾರಿಗಳನ್ನು ಶೀಘ್ರವಾಗಿ ವ್ಯವಸ್ಥಿತವಾಗಿ ಪ್ರಾರಂಭವಾಗಲು ವಿವಿಧ ರೀತಿಯಲ್ಲಿ ಹೋರಾಟ ಮಾಡುವ ದೃಷ್ಠಿಯಿಂದ ಮೀನುಗಾರರ 26 ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸರ್ವ ಸಂಸ್ಥೆಗಳ ಒಕ್ಕೂಟವನ್ನು ರಚಿಸುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ಗಂಗೊಳ್ಳಿ ಮೀನುಗಾರಿಕೆ ಬಂದರು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗುತ್ತಿದ್ದು, ಮೀನುಗಾರಿಕೆ ಚಟುವಟಿಕೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ಮೀನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ಸಾವಿರಾರು ಬಡ ಮೀನುಗಾರ ಕುಟುಂಬಗಳು ಬೀದಿ ಪಾಲಾಗುವ ಸಾಧ್ಯತೆ ಇದೆ ಅಲ್ಲದೆ ಗಂಗೊಳ್ಳಿ ಜನರ ಬದುಕು ಮೂರಾಬಟ್ಟೆಯಾಗುವ ಸಾಧ್ಯತೆಗಳಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಹಂಗಳೂರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ 2024ರ ಸ್ವಚ್ಛತೆಯ ಸೇವಾ ಕಾರ್ಯಕ್ರಮವನ್ನು ಕೋಡಿ ಕಿನಾರ ಕಡಲ ತೀರದಲ್ಲಿ ಹಮ್ಮಿಕೊಂಡು ಕಡಲ ತಡಿಯ ಭಾಗದಲ್ಲಿರುವ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ವಸ್ತುಗಳನ್ನು ಸಂಪೂರ್ಣವಾಗಿ ಸ್ವಚ್ಛಮಾಡುವ ಅಭಿಯಾನವನ್ನು ನಮ್ಮ ಎಕ್ಸಲೆಂಟ್ ಸಂಸ್ಥೆಯು ಕೈಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಹ ಈ ಕಾಯಕದಲ್ಲಿ ಪಾಲ್ಗೊಂಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ವಿನಾಯಕ ಸಿಬಿಎಸ್ಇ ಶಾಲೆಯಲ್ಲಿ ಆ.2ರಂದು ಗಾಂಧಿ ಜಯಂತಿ ಆಚರಿಸಲಾಯಿತು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್. ಅವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿ ಗಾಂಧೀಜಿಯವರ ಸರಳ ಜೀವನ ಹಾಗೂ ತತ್ವಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಾಲಾ ಪ್ರಾಂಶುಪಾಲರು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನಗಳನ್ನು ಸಲ್ಲಿಸಿದರು. ಗಾಂಧಿ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ವಠಾರ ಹಾಗೂ ಶಾಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರಮದಾನ ಕಾರ್ಯಕ್ರಮ ನಡೆಸಿ ಸ್ವಚ್ಛತೆಯನ್ನು ಮಾಡಿ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು. ಸಭಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಾರಿಧಿ ಕಾರ್ಯಕ್ರಮ ನಿರೂಪಿಸಿದರು, ಅದ್ನಾನ್ ಸ್ವಾಗತಿಸಿದರು, ಶಿವಾನಿ ವಂದಿಸಿದರು. ಶಿಕ್ಷಕಿಯರಾದ ಸ್ಮಿತಾ ನಾಯ್ಕ್ , ರಜನಿ ಹಾಗೂ ಮಂಜುಶ್ರೀ ಕಾರ್ಯಕ್ರಮ ಸಂಘಟಿಸಿದರು.
