ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಬ್ಲಿರ್ಸ್ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬಂದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ಜಿಲ್ಲೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೀನುಗಾರಿಕೆ ಇಲಾಖೆ ಮಂಡ್ಯ ಜಿಲ್ಲೆ ಮತ್ತು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಉಡುಪಿ ಜಿಲ್ಲೆ ಜಂಟಿಯಾಗಿ ಆಯೋಜಿಸಿದ ಮುತ್ತು ಕೃಷಿ ಪ್ರಾಯೋಗಿಕ ಮಾಹಿತಿ ಕಾರ್ಯಾಗಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಜಟಕ ಗ್ರಾಮದಲ್ಲಿ ನಡೆಯಿತು. ಉಡುಪಿ ಕಿನಾರ ಎಫ್‌ಪಿಓ ಮಂಡ್ಯ ಜಿಲ್ಲೆಯಲ್ಲಿನ ಮುತ್ತು ಕೃಷಿ ಆಸಕ್ತ ರೈತರನ್ನು ಗುರುತಿಸಿ ಇವರುಗಳ ಮೂಲಕ 20 ಸಾವಿರ ಕಪ್ಪೆಚಿಪ್ಪಿಗೆ ನ್ಯೂಕ್ಲೆಸ್ ಅಳವಡಿಸಿ ಅವರ ಕೃಷಿ ಹೊಂಡದಲ್ಲಿ ಮುತ್ತು ಕೃಷಿ ಪ್ರಾರಂಭಿಸಲು ಉತ್ತೇಜನ ನೀಡಲಾಯಿತು. ಮಂಡ್ಯ ಜಿಲ್ಲೆಯ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಬಾಬಾಸಾಬ್..ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಿಲನ ಭರತ್ ಅವರು ತಮ್ಮ ತಾಲೂಕಿನ 35 ಆಸಕ್ತ ಮುತ್ತು ಕೃಷಿ ರೈತರನ್ನು ಅಧ್ಯಯನ ಪ್ರವಾಸದ ಮೂಲಕ ಈ ಮಾಹಿತಿ ಕಾರ್ಯಾಗಾರದಲ್ಲಿ ರೈತರು ಭಾಗವಹಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಾದ್ಯಂತ ಮನೆ ಮನೆಯಲ್ಲಿ ಮುತ್ತು ಕೃಷಿ ಆರಂಭಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ,ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗಗಳವರೆಗೆ ವಿದ್ಯಾರ್ಥಿಗಳ ಹೆತ್ತವರ ಸಭೆಯು ಇತ್ತೀಚಿಗೆ ನಡೆಯಿತು. ಆಡಳಿತ ನಿರ್ದೇಶಕರು ಪೋಷಕರೊಂದಿಗೆ ಸೇರಿ ಸಭೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಾಯಕ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ‘ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು. ಆಡಳಿತ ನಿರ್ದೇಶಕರಾದ ರೆನಿಟೋ ಲೋಬೊ ಅವರು ಮಾತನಾಡಿ ” ಮೊಬೈಲ್ ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು ಹಾಗೂ ಮಕ್ಕಳಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುವುದು ಪೋಷಕರ ಆದ್ಯ ಕರ್ತವ್ಯ ಎನ್ನುವುದನ್ನು ಮನಮುಟ್ಟುವಂತೆ ತಿಳಿಸಿದರು. ನಂತರ ಇನ್ನೋರ್ವ ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕನಸಿಗೆ ಪ್ರೋತ್ಸಾಹದ ನೀರೆರೆಯುವುದು ಪೋಷಕರ ಕರ್ತವ್ಯ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದರು. ಪ್ರೌಢಶಾಲಾ ವಿಭಾಗದ ಹೆತ್ತವರ ಸಭೆಯಲ್ಲಿ ಪದವಿ ಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮುದೂರು ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮುದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮಂದರ್ತಿ ಶಿರೂರು ಮುದ್ದು ಮನೆ ಇವರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಠಾರದಲ್ಲಿ ಜರುಗಿತು. ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಶಾಸ್ತ್ರಿ ಮುದೂರು ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಎನ್‌ಸಿಡಿ ವೈದ್ಯಾಧಿಕಾರಿ ಡಾ. ನಿವೇದಿತಾ, ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯ ಸೂಲ್ಯ ಭೋವಿ ನಾಗದ್ದೆ, ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಭಾಕರ್ ಪೂಜಾರಿ, ಊರಿನ ಎಲ್ಲಾ ಶಿಬಿರ್ತಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯು ಸೋಮವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಳಾವರ ವರದಾರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇದರ ಗ್ರಂಥಪಾಲಕರಾದ ರವಿಚಂದ್ರ ಹೆಚ್. ಎನ್. ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದು, ಅರ್ಥ ಮಾಡಿಕೊಳ್ಳುವುದರಿಂದ ಅವರ ಆಲೋಚನೆ ವಿಸ್ತರಿಸುವುದಲ್ಲದೇ ಜೀವನದ ಮೌಲ್ಯ ಮತ್ತು ಸಾರ್ಥಕತೆಯನ್ನು ತಿಳಿಸಿಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಭಳಕೆಯಿಂದ ಸ್ವಯಂ ವ್ಯಕ್ತಿತ್ವ ವಿಕಾಸ ಮತ್ತು ಶೈಕ್ಷಣಿಕ ಪ್ರಕ್ರಿಯೆಗಳ ಉತ್ತಮ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಘಟಕ ಸಂಯೋಜಕರಾದ ಸಂದೀಪ ಕೆ., ಉಪಸ್ಥಿತರಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋʼ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಹೇಳಿದರು. ಅವರು ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಮಾತನಾಡಿದರು. ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ ಹಾಕಿ ಮೂರು ಬಾರಿ ಬಹುಮಾನ ಗೆದ್ದಿದ್ದೇನೆ”ಎಂದು ಬಾಲ್ಯದಲ್ಲಿ ತಮಗಾದ ಪ್ರಭಾವವನ್ನು ಮೆಲುಕು ಹಾಕಿದರು. ಇಂತಹ ಕಾರ್ಯಕ್ರಮಗಳ ಮೂಲಕ ಸುಜ್ಞಾನ ಸಂಸ್ಥೆಯು ಮಕ್ಕಳ ಬೆನ್ನೆಲುಬಾಗಿ ನಿಂತಿದೆ. ಇದರಿಂದ ಮಕ್ಕಳ ವ್ಯಕ್ತಿತ್ವ ರೂಪುಗೊಳ್ಳಲು ಸಹಾಯವಾಗುತ್ತದೆ ಎಂದು ಅವರು ಮೆಚ್ಚುಗೆಯ ನುಡಿಗಳನ್ನಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಮೇಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತೇವೆ. ಯುವ ಪೀಳಿಗೆಗೆ ಭಾರತೀಯ ಸಂಸ್ಕೃತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಮಾತನಾಡಿ, ರ್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ ದೇಶದಾದ್ಯಂತ ಎಲ್ಲಾ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ರ್ಯಾಗಿಂಗ್ ತಡೆಗಟ್ಟಲು ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದರು. ಒನ್ ಪೆಗ್, ಒನ್ ದಮ್‌ನಿಂದ ಆರಂಭ ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟ, ನಿಧಾನವಾಗಿ ಮಾದಕ ವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಒನ್ ಪೆಗ್, ಒನ್ ದಮ್‌ನಿಂದ ಆರಂಭವಾಗುವ ವ್ಯಸನಗಳು ಮುಂದೆ ದುಶ್ಚಟಗಳ ದಾಸರಾಗುವಂತೆ ಮಾಡುತ್ತವೆ. ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದರು. ಎಫ್‌ಐಆರ್ ಧಾಖಲಾದರೆ ಬದುಕೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಚಿಕ್ಕಬಳ್ಳಾಪುರದ ಶಾಂತಾ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಕಬಡ್ಡಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಾದ ವೇದಿತ್, ಅರುಣ, ಮಾಣಿಕ್ಯ ಮತ್ತು ದೀಕ್ಷಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮೀ, ಭವ್ಯಶ್ರೀ, ತನಿಷ್ಕಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.
ಆದಿತ್ಯ ಪ್ರಸಾದ್ | ಕುಂದಾಪ್ರ ಡಾಟ್ ಕಾಂ ಲೇಖನ.ವರ್ಷವೂ ಆಗಸ್ಟ್ 19 ರಂದು ವಿಶ್ವ ಛಾಯಾಗ್ರಹಣ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಇದು ಬರಿಯ ಛಾಯಾಗ್ರಾಹಕರ ಆಚರಣೆಯ ದಿನವಾಗಿರದೇ ಛಾಯಾಗ್ರಹಣ ಕಲೆಯ ಇತಿಹಾಸ, ತಾಂತ್ರಿಕವಾಗಿ ಹೇಗೆ ಬೆಳೆದು ಅಭಿವೃದ್ಧಿ ಆಯ್ತು ಮತ್ತು ಛಾಯಾಗ್ರಹಣವು ಸಮಾಜದ ಮೇಲೆ ಯಾವ ರೀತಿ ಪ್ರಭಾವವನ್ನು ಬೀರಿದೆ ಎನ್ನುವ ಬಗ್ಗೆಯೂ ಸ್ಮರಿಸುವ ಹಾಗೂ ಛಾಯಾಗ್ರಾಹಕನ ಸೃಜನಶೀಲತೆಯನ್ನು ಗೌರವಿಸುವ ವಿಶೇಷ ಸಂದರ್ಭವಾಗಿದೆ. ಛಾಯಾಗ್ರಹಣ ಕೇವಲ ಚಿತ್ರಗಳನ್ನು ಸೆರೆಹಿಡಿಯುವ ಒಂದು ತಂತ್ರವಲ್ಲ, ಬದಲಿಗೆ ಕಲೆ, ವಿಜ್ಞಾನ ಮತ್ತು ಸಂಸೃತಿಯನ್ನು ಬೆಸೆಯುವ ಒಂದು ಮಾಧ್ಯಮ. ಮಾನವಕುಲದ ದೃಶ್ಯ ಸ್ಮರಣೆಯ ದಾಖಲೆಯಾಗಿ, ಛಾಯಾಗ್ರಹಣ ತನ್ನ ಅಸ್ತಿತ್ವವನ್ನು ಕಂಡುಕೊಂಡ ದಿನದಿಂದಲೂ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಅದು ನಿನ್ನೆಯ ಕಥೆಗಳನ್ನು ಹೇಳುವ, ಭಾವನೆಗಳನ್ನು ವ್ಯಕ್ತಪಡಿಸುವ ಮತ್ತು ಇತಿಹಾಸವನ್ನು ದಾಖಲಿಸುವ ಒಂದು ಅದ್ಭುತ ಕಲೆ. ಮನುಷ್ಯನು ಬೆಳಕನ್ನು ಬಳಸಿ ಚಿತ್ರಗಳನ್ನು ರಚಿಸುವ ಕನಸು ಕಂಡ ದಿನದಿಂದ ಇಂದಿನ ಡಿಜಿಟಲ್ ಯುಗದವರೆಗೆ, ಛಾಯಾಗ್ರಹಣವು ನಿರಂತರವಾಗಿ ವಿಕಸನಗೊಂಡು ಬೆಳೆದು ಬಂದಿದೆ. ನಿನ್ನೆಯ ದಿನಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ – ಕೇರಳ ವತಿಯಿಂದ ಸೋಮವಾರ 18ನೇ ವರ್ಷದ ಕೊರಗರ ಭೂಮಿ ಹಬ್ಬ ಹೆಬ್ರಿ ಬಡಾಗುಡ್ಡೆ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಹೆಬ್ರಿ ಬಸ್ ನಿಲ್ದಾಣದಿಂದ ಬಡಾಗುಡ್ಡೆ ಸಮುದಾಯ ಭವನಕ್ಕೆ ಹೊರಟ ಕಾಲ್ನಡಿಗೆ ಜಾಥಕ್ಕೆ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರನಾಥ ಬಂಗೇರರವರು ಡೋಲು ಬಾರಿಸುವುದರೊಂದಿಗೆ ಚಾಲನೆ ನೀಡಿ, ಭೂಮಿ ಹಬ್ಬಕ್ಕೆ ಶುಭವನ್ನು ಕೋರಿದರು. ಜಾಥದಲ್ಲಿ ಡೋಲು, ಚೆಂಡೆ, ಕೊಳಲು ವಾದನಕ್ಕೆ ಮಕ್ಕಳು, ಮಹಿಳೆಯರು, ಯುವಜನರು, ವಯಸ್ಕರು ಸಂಭ್ರಮದಿಂದ ಕುಣಿದಾಡಿದರು. ಸುರಿಯುವ ಮಳೆಯನ್ನು ಲೆಕ್ಕಿಸದೆ ʼಆದಿವಾಸಿ ಕೀ ಜೈʼ, ʼಬಿರ್ಸ ಮುಂಡರಿಗೆ ಜೈʼ, ʼಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟಕ್ಕೆ ಜೈʼ ಎಂದು ಘೋಷಣೆ ಕೂಗುತ್ತ ಹೊರಟರು. ಬಡಾಗುಡ್ಡೆ ಸಮುದಾಯ ಭವನದ ಮುಂಭಾಗದಲ್ಲಿ ಭೂಮಿ ಹಬ್ಬದ ಧ್ವಜಾರೋಹಣವನ್ನು ಸಮುದಾಯದ ಮುಖಂಡರಾದ ಬೊಗ್ರ ಕೊಕ್ಕರ್ಣೆರವರು ನೆರವೇರಿಸಿ ಭೂಮಿ ಹಬ್ಬದ ಮಹತ್ವ ಮತ್ತು ವಿಶೇಷತೆಯನ್ನು ಸಾರಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾದ ಸಮುದಾಯ ಬಾಂಧವರೆಲ್ಲರಿಗೂ ಸಮುದಾಯದ…
