Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ದೇಶದಲ್ಲಿ ಗುರುಕುಲ ಮಾದರಿಯ ಶಿಕ್ಷಣ ಪದ್ದತಿಯನ್ನು ಜಾರಿಗೆ ತರಬೇಕು ಎಂದು ಕೇಮಾರಿನ ಸಾಂದೀಪನಿಸಾಧನಾಶ್ರಮದ ಶ್ರೀ ಈಶ ವಿಠಲದಾಸ ಶ್ರೀಪಾದಂಗಳ ನುಡಿದರು. ಅವರು ಭಾನುವಾರ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್‌ನಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕಿನ ಸಾಸ್ತಾನ ಮಂಡಲದ ಆಶ್ರಯದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಆಶ್ರೀವಚನ ನೀಡಿ ಮಾತನಾಡಿದರು. ಹಿಂದೆ ಗುರುಕುಲ ಮಾದರಿ ಶಿಕ್ಷಣ ಇದಿತ್ತು ಆದರೆ ಇಂದು ಗುಲಾಮಿ ಶಿಕ್ಷಣದಿಂದ ಇಡೀ ದೇಶವೇ ಸಮಸ್ಯೆ ಎದುರಿಸುತ್ತಿದ್ದೇವೆ. ಸಂಸ್ಕಾರಭರಿತ ಶಿಕ್ಷಣವನ್ನು ನಮ್ಮ ಮುಂದಿನ ತಲೆಮಾರಿಗೆ ತಾಯಂದಿರರು ನೀಡಬೇಕಿದೆ, ಆಂಗ್ಲ ಶಿಕ್ಷಣ ವ್ಯಾಮೂಹದಿಂದ ನಮ್ಮ ಸಂಪ್ರದಾಯ ಪರಂಪರೆಯನ್ನು ಮರೆತು ಬಿಡುತ್ತಿದ್ದೇವೆ ಇದರ ದುಷ್ಪರಿಣಾಮ ಇಂದು ಅನುಭವಿಸುತ್ತಿದ್ದೇವೆ ಇದಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮರ್ಪಣಾ ಮನೋಭಾವದಿಂದ ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸುತ್ತಿದೆ. ಹಿಂದೂ ಸಮುದಾಯದ ಮಕ್ಕಳಿಗೆ ಭಗವದ್ಗೀತೆ, ರಾಮಾಯಣ ಮಹಾಭಾರತದಂತ ಕಾವ್ಯವನ್ನು ಪ್ರತಿದಿನ ಓದಿಸಿ ಹಿಂದೂ ಧರ್ಮವನ್ನು ನಿರಂತರ ಜಾಗೃತಗೊಳಿಸುವ ಕೆಲಸ ನಮ್ಮ ಪೋಷಕರಿಂದಾಗಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ವಿದ್ಯಾಗಿರಿ: ‘ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ’ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು, ‘ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ವೈವಿಧ್ಯತೆಯಲ್ಲಿ ಏಕತೆಯೇ ದೇಶದ ಸುಭದ್ರತೆ. ಈ ಸದೃಢತೆಗೆ ನ್ಯಾಯಾಲಯದ ಕ್ರೀಯಾಶೀಲ ಪಾತ್ರ ಬಹುಮುಖ್ಯ. ಕಾನೂನು ಉಲ್ಲಂಘನೆ, ಅರಾಜಕತೆ ಮತ್ತಿತರ ಸಂದರ್ಭಗಳಲ್ಲಿ ನ್ಯಾಯಾಲಯವು ಪ್ರಜಾಪ್ರಭುತ್ವ ಚಿಂತನೆ ಮೂಲಕ ಪ್ರತಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ ನ್ಯಾಯಾಲಯ ಎಚ್ಚರದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದರು. ‘ಸ್ವಾತಂತ್ರಯದ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ’ಎಂದ ಅವರು, ‘ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ನಮ್ಮ ಸ್ವಾತಂತ್ರ‍್ಯದ ಮೂಲ ಮಂತ್ರವಾಗಿದೆ. ಇದಕ್ಕೆ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಹಾಗೂ 1942ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ ಉತ್ತಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದರು. ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಹಾಗೂ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ‌ ಎಂದರು. ವಾರಾಹಿ ನೀರಾವರಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರ ಕಚ್ಚಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಇದು ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ.‌…

Read More

ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಸೇಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಇಡೀ ದಿನ ವಿಚಾರಸಂಕಿರಣವೊಂದನ್ನು ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕರಾವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬೈಂದೂರು ಉತ್ಸವ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಜಿ.ಎನ್‌.ಆ‌ರ್ ಸಭಾಂಗಣದ ಪಕ್ಕದ ಮೈದಾನದ ನೆಲ್ಯಾಡಿ ಬಯಲು ಮಂದಿರದಲ್ಲಿ ಭಾನುವಾರ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲದ ಬದಲಾವಣೆಗೆ ತಕ್ಕಂತೆ ಹೈನುಗಾರಿಕೆಯನ್ನು ಮುಂದುವರಿಸಿದರೆ ಲಾಭದಾಯಕವಾಗಿಸಲು ಸಾಧ್ಯವಾಗುತ್ತದೆ. ಬೈಂದೂರು ಉತ್ಸವ ಬೈಂದೂರು ಜನರ ಜೀವನ ಕಟ್ಟಿಕೊಡುವ ಉದ್ದೇಶ ಒಳಗೊಂಡಿದೆ. ಒಕ್ಕೂಟು ಮೂಲಕ ಕರುಗಳ ಪ್ರದರ್ಶನ ಏರ್ಪಡಿಸಿರುವುದು ಹೈನುಗಾರಿಕೆಗೆ ಇನ್ನಷ್ಟು ಉತ್ತೇಜನ ನೀಡಿದಂತಾಗಿದೆ ಎಂದರು. ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ ಮಧ್ವರಾಜ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು. ಕನ್ನಡ ಭಾಷಾ ಮುಖ್ಯಸ್ಥರಾದ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಗೆಂಡದ ಹೈಗುಳಿ ಶ್ರೀ ಗಣಪನಾಯಕ ಸಪರಿವಾರ ದೇವಸ್ಥಾನದ ಪುನರ್‌ ಪ್ರತಿಷ್ಠಾ ತೃತೀಯ ವರ್ಧತ್ಯೋತ್ಸವ, ವಾರ್ಷಿಕ ಗೆಂಡ ಹಾಗೂ ಮಂಡಲೋತ್ಸವ ಜ.31 ರಿಂದ ಫೆ.2ರ ತನಕ ನಡೆಯಲಿದೆ. ಜ.31ರ ಬೆಳಿಗ್ಗೆ 9.00 ರಿಂದ ಶ್ರೀ ಭೂನಾಗ ದೇವರಿಗೆ ನವಕ ಪ್ರಧಾನ ಕಲಾಶಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6.00ರಿಂದ ಪುನರ್‌ ಪ್ರತಿಷ್ಠಾ ವರ್ಧತ್ಯೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಫೆ.1ರ ರಾತ್ರಿ 9.00ರಿಂದ ಗೆಂಡಸೇವೆ, 9.30 ಮಂಗಳಾರತಿ ಸೇವೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಫೆ.2ರ ಬೆಳಿಗ್ಗೆ 5.30ರಿಂದ ಮಂಡಲೋತ್ಸವ, 7.00ರಿಂದ ತುಲಭಾರ ಸೇವೆ ಹಾಗೂ ಅದೇ ದಿನ ರಾತ್ರಿ 7.00ರಿಂದ ಬೈಂದೂರು ಶ್ರೀ ಈಶ್ವರ ಮಾರಿಕಾಂಬ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಕಳವಾಡಿ ಇವರಿಂದ ಪೌರಣಿಕ ಕಥಾಪ್ರದರ್ಶನಗೊಳ್ಳಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಮಹತ್ವದ್ದು. ವಿದ್ಯಾರ್ಥಿ ದೆಸೆಯಲ್ಲಿಯೇ ದೇಶಾಭಿಮಾನದ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಸದೃಢ ರಾಷ್ಟç ನಿರ್ಮಾಣ ಸಾಧ್ಯ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು. ಭಾರತೀಯ ಸೇನೆಯ ನಿವೃತ್ತ ಸೈನಿಕ ದಿನೇಶ್ ಆಚಾರ್ಯ ಆಲೂರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿ ತಿಮ್ಮಪ್ಪ ಡಿ.ಎಸ್., ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ನಿರೂಪಿಸಿ, ಲೆಫ್ಟಿನೆಂಟ್ ಹರೀಶ್ ಬಿ., ಎ.ಎನ್.ಓ., ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಲ್ಕೂರ ರೆಫ಼್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ ಮೆಂಟ್ ಪ್ರೈವೇಟ್ ಲಿಮಿಟೆಡ್ ತಂಗದಗಡಿ ಅಂಬಾಗಿಲು ಉಡುಪಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೆ. ರಂಜನ್ ಕಲ್ಕೂರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಸಂವಿಧಾನದ ಪರಿಚಯವನ್ನು ತಿಳಿಸುತ್ತಾ ಮಾತನಾಡಿದ ಕೆ. ರಂಜನ್ ಕಲ್ಕೂರ ಅವರು ದೇಶದ ಪ್ರಜೆಗಳು ತಮ್ಮ ಹಕ್ಕುಗಳನ್ನು ಅರಿತು ಆನಂದಿಸಬೇಕು. ಕರ್ತವ್ಯಗಳನ್ನು ಎಂದೂ ಮರೆಯಬಾರದು. ಧ್ವಜದ ಬಣ್ಣಗಳು ನಮ್ಮ ತ್ಯಾಗ ಶಾಂತಿ ಮತ್ತು ಸಸ್ಯಶ್ಯಾಮಲತೆ, ಪ್ರಗತಿಗಳ ಸಂಕೇತ. ನಮ್ಮಲ್ಲಿರುವ ಭಿನ್ನತೆಯನ್ನು ಗೌರವಿಸಲು ಅರಿಯಬೇಕು. ಆದರೆ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಮರೆಯಬಾರದು. ರಜೆಯಲ್ಲಿ ಅಜ್ಜಿಯ ಮನೆಗೆ ಮಕ್ಕಳು ಹೋಗುವಂತೆ ಇಂದು ಕಾಡಿನಿಂದ ಪ್ರಾಣಿಗಳು ನಾಡಿಗೆ ಬರುತ್ತಿವೆ. ಅವುಗಳ ಅಜ್ಜಿಮನೆಯಾದ ಕಾಡನ್ನು ನಾಶ ಮಾಡಿದುದೇ ಈ ಕಾರ್ಯಕ್ಕೆ ಕಾರಣ. ಆದ್ದರಿಂದ…

Read More