ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಯುವ బంಟರ ಸಂಘ ರಿ., ಕುಂದಾಪುರ ಇದರ 2026-26ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಜೂನ್ 27ರಂದು ಕುಂದಾಪುರದ ಆರ್. ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾಗಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಅವರು ಕಾಲೇಜಿನ ರಾಷ್ಟ್ರೀಯ ಯೋಜನೆಯ ಸೇವಾ ಸಂಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’ ಅವರ ಸಂಪಾದಕತ್ವದ ಅವಧಿಯಲ್ಲಿ ಸತತ ಮೂರು ವರ್ಷಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕರ್ನಾಟಕ ಕರಾವಳಿಯ ಪ್ರಾದೇಶಿಕ ಸಂಸ್ಕೃತಿ ಎಂಬ ವಿಷಯದ ಕುರಿತು ಹಿರಿಯ ಸಂಶೋಧಕ ಡಾ. ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಸಂಘದ ನೂತನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿ. ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ. ನೀಟ್ ಹಾಗೂ ಜೆ.ಇ.ಇ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಸರ್ಕಾರಿ ಕಾಲೇಜು/ ಖಾಸಗಿ/ ಮ್ಯಾನೆಟ್‌ಮೆಂಟ್ ಕೋಟಾದಡಿ ಅರಿವು ಸಾಲ ಯೋಜನೆಯಡಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ನಿಗಮದ ವೆಬ್‌ಸೈಟ್ http://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ., ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ತಾಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಅರುಣಾಚಲಂ ಕಾಲುಸಂಕ ಯೋಜನೆಯ ಅಂಗವಾಗಿ, ಸಮ್ಯತ ಫೌಂಡೇಶನ್, ಬೆಂಗಳೂರು ಇವರ ಸಹಕಾರ ಹಾಗೂ ಚೆನ್ನೈನ ಇಂಡಸ್ 555 ಟಿಎಂಟಿ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾಕೋಡು ಗ್ರಾಮದಲ್ಲಿ ನಿರ್ಮಿಸಲಾದ ಎಸ್.ಆರ್. ಸದಾನಂದಮ್ ಕಾಲುಸಂಕವನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು. ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಈ ಕಾಲುಸಂಕ ನಿರ್ಮಾಣದಿಂದ ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದ್ದು, ಸ್ಥಳೀಯ ನಿವಾಸಿಗಳ ದೈನಂದಿನ ಜೀವನಕ್ಕೆ ಮಹತ್ತರ ನೆರವಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು, “ಎಲ್ಲಿ ಚೆನ್ನೈ… ಎಲ್ಲಿಯ ಬೈಂದೂರು… ಆದರೆ ಅಭಿವೃದ್ಧಿಗೆ ದೂರ ಎಂಬುದಿಲ್ಲ. ಜನರ ಅಗತ್ಯಗಳನ್ನು ಮನಗಂಡು ಉತ್ತಮ ಕೆಲಸಗಳಿಗೆ ಕೈಜೋಡಿಸುವ ಸಂಸ್ಥೆಗಳ ಸಹಕಾರದಿಂದ ಗ್ರಾಮೀಣ ಅಭಿವೃದ್ಧಿಗೆ ಹೊಸ ವೇಗ ಸಿಗುತ್ತಿದೆ. ಜನಸೇವೆಯೇ ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಇಂತಹ ಸಹಭಾಗಿತ್ವದ ಮೂಲಕ ಇನ್ನಷ್ಟು ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೊಳಿಸಲಾಗುವುದು” ಎಂದು ಹೇಳಿದರು. ಚೆನ್ನೈನ ಇಂಡಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ವಹಣೆ ಮಾಡುವುದರ ಜೊತೆಗೆ ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ ಪ್ರತೀ ಗಂಟೆಗೆ ವೇಗದ ಮಿತಿ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಒಳಗೆ ಸಂಚರಿಸುವ 6 ಚಕ್ರ ಮತ್ತು ಮೇಲ್ಪಟ್ಟ ಎಲ್ಲಾ ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್‌ಗಳನ್ನು ಅಳವಡಿಸಲು, ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳು ಓವರ್ ಲೋಡ್ ನಿಂದ ರಸ್ತೆ ಮೇಲೆ ಕಾಂಕ್ರೀಟ್ ಎಲ್ಲೆಡೆ ಬಿದ್ದು ರಸ್ತೆ ಹಾಳಾಗುವುದು ಹಾಗೂ ಮರಳು ಸಾಗಾಣಿಕೆ ವಾಹನಗಳ ಓವರ್ ಲೋಡ್‌ನಿಂದ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಹೆಚ್ಚುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣೂರು ಗೀತಾನಂದ ಫೌಂಡೇಶನ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮತ್ತು ಸಮೃದ್ಧಿ ಇಕೋ ಕ್ಲಬ್ ವತಿಯಿಂದ ಕೃಷಿಯ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ಸಂಭ್ರಮದ ಸಾಗುವಳಿ ಕಾರ್ಯಕ್ರಮ ಶನಿವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಕೃಷಿಯು ನಮ್ಮ ದೇಶದ ಬೆನ್ನೆಲುಬಾಗಿದ್ದು, ಯುವಜನತೆ ಕೃಷಿಯೊಂದಿಗೆ ಬೆಸೆದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಹಿಂದಿನ ಮತ್ತು ಇಂದಿನ ಕೃಷಿಯಲ್ಲಿನ ಬದಲಾವಣೆಯನ್ನು ತುಲನಾತ್ಮಕವಾಗಿ ಪರಿಚಯಿಸಿದರು. ಪ್ರಕೃತಿಯೊಂದಿಗೆ ಹೊಂದಾಣಿಕೆ ಸಾಧಿಸಿ ಆಹಾರ ಉತ್ಪಾದನೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಸರ್ಕಾರಿ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕರಾದ ರಾಮದಾಸ್ ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಕೃಷಿಯಂತಹ ಜೀವನ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಯುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜನತಾ ಫಿಶ್ ಮೀಲ್ & ಆಯಿಲ್ ಪ್ರಾಡಕ್ಟ್ಸ್‌ನ ಎಜಿಎಂ ಶ್ರೀನಿವಾಸ್ ಕುಂದರ್ ಹಾಗೂ ಫ್ಯಾಕ್ಟರಿ ಮ್ಯಾನೇಜರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2025-26ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕುಂದಾಪುರದ ವಿ.ಕೆ.ಆರ್ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ ಅವರು 625ರಲ್ಲಿ 617 (ಶೇ.98.72) ಅಂಕಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಪ್ರಾಪ್ತಿ ಮಡಪ್ಪಾಡಿ ಅವರು ಭರತನಾಟ್ಯದಲ್ಲಿ ಸೀನಿಯರ್ ಪದವೀಧರೆಯಾಗಿದ್ದಾರೆ. ಅಂತರ್ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ. ಮೂಲತಃ ಅವರು ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ವಾಲ್ತಾಜೆ ನಿವಾಸಿ, ಪ್ರಸ್ತುತ ಕುಂದಾಪುರದ ಹಿರಿಯ ಪತ್ರಕರ್ತರಾಗಿರುವ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ಹಿರಿಯ ಪುತ್ರಿ. ಪ್ರಸ್ತುತ ಕುಂದಾಪುರ ತಾಲೂಕಿನ ಸಿದ್ಧಾಪುರದಲ್ಲಿರುವ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾಗಿರುವ ಜ್ಞಾನಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ (ಪಿಸಿಎಂಬಿ) ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ರೈತರ ಹಿತರಕ್ಷಣೆ ಹಾಗೂ ಕೃಷಿ ಭೂಮಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಬೆಂಗಳೂರಿನಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜಕೀಯ ದುರುದ್ದೇಶ ಹಾಗೂ ತಪ್ಪು ಮಾಹಿತಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಬೈಂದೂರಿನ ಸಿದ್ಧಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಈ ಹಿಂದೆ ಅನುಮೋದನೆಯಾದ ರೀತಿಯಲ್ಲಿಯೇ ತಕ್ಷಣವೇ ಮುಂದುವರಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಂಸದರು ಸಚಿವರಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ. ಈಗಾಗಲೇ ಶೇ. 56% ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಸಿದ್ಧಾಪುರ ಏತ ನೀರಾವರಿ ಯೋಜನೆಯು ತಜ್ಞರ ತಂಡದ ವರದಿಯ ಆಧಾರದ ಮೇಲೆಯೇ ಅನುಮೋದನೆಗೊಂಡು ಕಾರ್ಯಾರಂಭವಾಗಿತ್ತು ಎಂದು ಬಿ.ವೈ.ರಾಘವೇಂದ್ರ ಅವರು ಸಚಿವರಿಗೆ ವಿವರಿಸಿದರು. ವರಾಹಿ ನದಿಯಲ್ಲಿ ಸದ್ಯ 3,000 ಕ್ಯೂಸೆಕ್ಸ್ ನೀರಿನ ಹರಿವಿದ್ದು, ಈ ಯೋಜನೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2026ರ ಮೇ. ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಸಿಎ ಅದಿತಿ ಮೊಗವೀರ ಉತ್ತೀರ್ಣರಾಗಿದ್ದಾರೆ. ಅವರು ಸವಿತಾ ಮತ್ತು ಈಶ್ವರ ಮೊಗವೀರ ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಸರಿಯಾದ ಮಾಹಿತಿಗಾಗಿ ಮತ್ತು ಶಿಸ್ತು – ಸಂಯಮ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ನಾಯಕರುಗಳ ಪದಗ್ರಹಣ ಮತ್ತು ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು. ಹತ್ತನೇ ತರಗತಿಯ ಸಂಗಮೇಶ ವ್ಯಾಪಾರಿ ಮತ್ತು ಸಂಶಿತಾ ಶೆಟ್ಟಿ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ನಾಯಕಿಯರಾಗಿ ಆಯ್ಕೆಗೊಂಡರು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಪಾಧ್ಯಕ್ಷರಾದ ರಮೇಶ ಎಚ್.ಎಸ್. ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರಬಾರದು. ಬದುಕಿನಲ್ಲಿ ಸಾಧನೆ ಮಾಡಬೇಕಾದರೆ ಏನೆಲ್ಲ ಬೇಕೋ ಆ ಎಲ್ಲಾ ವಿದ್ಯೆಗಳನ್ನೂ ಕಲಿಯಬೇಕು. ಸಮಾಜವನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಬೇಕಾದರೆ ಮಕ್ಕಳು ತಿಳಿಯಲೇ ಬೇಕಾದ ಎಲ್ಲಾ ವಿಚಾರಗಳನ್ನೂ ಅಭ್ಯಾಸ ಮಾಡಬೇಕು. ಅಂತಹ ವಿದ್ಯೆ ಇಂತಹ ವಸತಿ ಶಾಲೆಗಳಲ್ಲಿ ಸಿಗುತ್ತಿದ್ದು, ಸಮಯ ಹಾಳು ಮಾಡದೇ ಉತ್ತಮ ನಾಯಕತ್ವಾದಿಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕಿವಿಮಾತುಗಳನ್ನಾಡಿದರು. ಇನ್ನೊರ್ವ ಮುಖ್ಯ ಅತಿಥಿ…
