Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪಪೂ ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರ – 2025ರ ಉದ್ಘಾಟನೆಗೊಳಿಸಲಾಯಿತು. ಶಿರಸಿಯ ಸಿದ್ಧಾಪುರ ಕಾನಸೂರಿನಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಮಾತನಾಡಿ, ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೋ ಅದನ್ನು ನನಸು ಮಾಡಲು ಮುಂದಿನ ಪಿ.ಯು.ಸಿ ಶಿಕ್ಷಣ ಅತ್ಯಂತ ಪ್ರಮುಖವಾದದ್ದು. ದೂರದರ್ಶಿತ್ವದೊಂದಿಗೆ ಮುಂದಿನ ಹೆಜ್ಜೆ ಇರಿಸಿ, ಉತ್ತಮ ಫಲಿತಾಂಶವೂ ಇಂತಹ ಶಿಬಿರಗಳಿಂದ ದೊರಕುತ್ತದೆ. ಶಿರಸಿ – ಸಿದ್ಧಾಪುರದ ಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ನಾಯ್ಕ ಅವರು ಮುಂದಿನ ಶೈಕ್ಷಣಿಕ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಮೂಡಿಬರುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ್‌ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದ ಚೆಸ್ ಪಂದ್ಯಾಟದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ (ಜನತಾ ನ್ಯೂ  ಇಂಗ್ಲೀಷ್ ಮೀಡಿಯಂ  ಸ್ಕೂಲ್) ಪ್ರಮುಖ್‌ ಬಿ. ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ‎

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದರ ವತಿಯಿಂದ 2025ರ ಕ್ಯಾಲೆಂಡರ್ ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷರು, ಬೈಂದೂರು ತಾಲೂಕು ನೌಕರ ಸಂಘದ ಅಧ್ಯಕ್ಷರಾದ ಶೇಕರ್ ಜಂಟಿಯಾಗಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಆನಂದ ಗಾಣಿಗ, ಶಿಕ್ಷಣ ಸಂಯೋಜಕರಾದ ಚಂದ್ರ ದೇವಡಿಗ, ಸತ್ಯನ ಕೊಡೇರಿ, ಯೋಗೀಶ್, ಶಾಲಾ ಮುಖ್ಯೋಪಾಧ್ಯಾಯರಾದ ಜನಾರ್ಧನ್ ದೇವಾಡಿಗ, ಬಿ. ಆರ್. ಪಿ. ಮಂಜುನಾಥ ದೇವಾಡಿಗ, ಸಂಘದ ಖಜಾಂಚಿ ಅಚ್ಚುತ ಬಿಲ್ಲವ, ಗಣೇಶ್ ಪೂಜಾರಿ,  ಸಿಆರ್‌ಪಿ ಲಕ್ಷ್ಮಿ, ಬಿ. ರಾಮನಾಥ ಮೇಸ್ತ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಐಆರ್‌ಟಿ ನಾಗರತ್ನ ಸರ್ವರನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಗಣೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇರ್ವರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಕಾರಿನಲ್ಲಿದ್ದ ಇರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿದರು. ಗಾಯಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಅಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೋಲಿಸ್‌  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಅವರು ಜ. 4 ಹಾಗೂ 5 ರಂದು ಏರ್ಪಡಿಸಿದ  ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್‌ಮಿಂಟನ್ ಲೀಗ್’ ಟೂರ್ನಮೆಂಟ್-2024ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದರು. ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್‌ ಕುಂದಾಪುರ ಜಯಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ  ಜ.5 ರಿಂದ ಜ.6 ರವರೆಗೆ ಯಾದಗಿರಿಯಲ್ಲಿ ನಡೆದ  ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು  ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ ದೃಶ್ಯ, ಸಾಕೇತ್, ಅಕ್ಷಯ್ ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ (59) ಅವರು ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‌ನಲ್ಲಿ ಜ.2ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿ ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ. ಸಮುದ್ರದಲ್ಲಿ ನಾಪತ್ತೆಯಾಗಿರುವ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ. ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜ. 2 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ. ಜ.7ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ. ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸರ ಸಹಕಾರದಿಂದ ಹಾಗೂ ಖಾಸಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರೂ ಸುಳಿವು ಸಿಕ್ಕಿಲ್ಲ, ಖಾಸಗಿ ಬೋಟ್‌ ಗೆ ಡಿಸೆಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, 2025 ರ ಜನವರಿ ಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜನಸಾಮಾನ್ಯರಲ್ಲಿ ಹೆಚ್ಚುತ್ತಿರುವ ರಕ್ತದೊತ್ತಡ, ಮಧುಮೇಹ ಮುಂತಾದ ಪ್ರಮುಖ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಹಾಗೂ ಇವುಗಳ ಸಂಭವನೀಯತೆಯನ್ನು ಪರಿಹರಿಸುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಗೃಹ ಆರೋಗ್ಯ ಯೋಜನೆಯ ಪ್ರಮುಖ ಅಂಶಗಳು:ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಭೇಟಿ ನೀಡಿ, ಪ್ರಮುಖ 6 ಅಸಾಂಕ್ರಾಮಿಕ ಕಾಯಿಲೆಗಳಿಗೆ ಪ್ರಾಥಮಿಕ ಹಂತದ ತಪಾಸಣೆ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ರೋಗಗಳಿಗೆ ಪ್ರಾಥಮಿಕ ಹಂತದ ತಪಾಸಣೆ ನಡೆಸಲಿದ್ದಾರೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ (ಬಿ.ಪಿ) ಗೆ ಉಚಿತ ಔಷಧಿ ವಿತರಿಸಲಿದ್ದಾರೆ. ನಿದ್ರೆಯಲ್ಲಿ ಉಸಿರು ಕಟ್ಟುವಿಕೆ, ಬಿ.ಎಂ.ಐ ಅಸಮತೋಲನ, ಧೂಮಪಾನ ಮತ್ತು ಆಪ್ತ ಸಮಾಲೋಚನೆ ನಡೆಸಲಿದ್ದು, ಸಾರ್ವಜನಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಮನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಕೊಕ್ಕರ್ಣೆ, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆ ಅಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ  ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾನೆ.  ಈತ ಚಿತ್ರಕಲಾ ಶಿಕ್ಷಕ, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಗಣಿತ ಉಪನ್ಯಾಸಕಿ ಸಾವಿತ್ರಿ ಎಸ್. ದೇವಾಡಿಗ ಗಂಗೊಳ್ಳಿ ಅವರ ಸುಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More