ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೋಟಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನರ ನಡೆದಿದೆ. ಮೃತರನ್ನು ಗುಜ್ಜಾಡಿಯ ಗಣೇಶ ರಾಮಕೃಷ್ಣ ಆಚಾರ್ಯ(43) ಎಂದು ಗುರುತಿಸಲಾಗಿದೆ. ಅವರು ಜೂ.20ರಂದು ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿರುವ ಮಂಜುನಾಥ ಖಾರ್ವಿ ಎಂಬವರ ಬೋಟಿನ ಮರದ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗುತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ಕೆಲವು ಗ್ರಾಮ ಪಂಚಾಯತಿ, ಗ್ರಾಮಗಳು, ಬಹುಮಹಡಿ ವಸತಿ ಸಮುಚ್ಛಯಗಳು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಅಧಿಕೃತ ಘೋಷಣೆಗಳನ್ನು ಮಾಡಲಾಗಿದೆ. ಸಾರ್ವಜನಿಕರಲ್ಲಿ ಇವುಗಳ ಸೇವನೆಯಿಂದ ಉಂಟಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಸಮುದಾಯಗಳಲ್ಲಿ ಜಾಗೃತಿಗೊಳಿಸಿ ಹೆಚ್ಚು ಹೆಚ್ಚು ಗ್ರಾಮ ಪಂಚಾಯತಿಗಳನ್ನು ಹಾಗೂ ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಬೇಕೆಂದರು. ಜಿಲ್ಲೆಯ ಶಾಲಾ ಕಾಲೇಜುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ,2ಬಿ,3ಎ,3ಬಿ, ಪ.ಜಾತಿ ಮತ್ತು ಪ.ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕ. ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in ಅನ್ನು ನೋಡಬಹುದಾಗಿದ್ದು, ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್, ಸಹಾಯವಾಣಿ ಸಂ: 8050770004 ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ಸಾಗಾಣಿಕೆ, ಬಳಕೆ ಮತ್ತು ಮಾರಾಟದ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕ್ಯೂ.ಆರ್ ಕೋಡ್ ಅನ್ನು ಅಭಿವೃದ್ಧಿಗೊಳಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಕ್ಯೂ ಆರ್ ಕೋಡ್ ಬಳಕೆ ಮೂಲಕ ಮಾಹಿತಿ ಹಂಚಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ನಿಯಂತ್ರಣಕ್ಕೆ ಅನುಕೂಲವಾಗಲು ಪೋಲೀಸ್ ಇಲಾಖೆಯು ಕ್ಯೂ ಆರ್ ಕೋಡ್ ಅನ್ನು ಅಭಿವೃದ್ಧಿಗೊಳಿಸಿದೆ. ಸಾರ್ವಜನಿಕರು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಬಳಕೆ ಹಾಗೂ ಮಾರಾಟ ಕಂಡುಬಂದಲ್ಲಿ ಕ್ಯೂ ಆರ್ ಕೋಡ್ ಬಳಕೆಯ ಮೂಲಕ ಮಾಹಿತಿಯನ್ನು ಪೊಲೀಸ್ ಇಲಾಖೆಯ ಜೊತೆಗೆ ಹಂಚಿಕೊಳ್ಳಬಹುದಾಗಿದೆ. ಮಾಹಿತಿ ನೀಡಿದವರ ವಿವರವನ್ನು ರಹಸ್ಯವಾಗಿ ಇಡಲಾಗುವುದು. ಜಿಲ್ಲೆಯನ್ನು ಮಾದಕ ವಸ್ತು ಮುಕ್ತವನ್ನಾಗಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಭಾಗವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆ ಮನೆಗಳಿಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ, ಮತದಾರರ ವಿವರವನ್ನು ಇಂದಿನಿಂದ (ಜೂನ್ 30) ಕಲೆ ಹಾಕುತ್ತಿದ್ದು, ಈ ಬಗ್ಗೆ ನಗರದ ಇಂದ್ರಾಳಿ, ಕುಂಜಿಬೆಟ್ಟು, ಕಾಡಬೆಟ್ಟು, ಪಣಿಯಾಡಿ ಸೇರಿದಂತೆ ಮತ್ತಿತರ ವಾರ್ಡ್ಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯು ಎಲ್ಲಾ ಅರ್ಹ ನಾಗರಿಕರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳೀಸುವುದೇ ಮುಖ್ಯ ಉದ್ದೇಶವಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದರು. ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳ ಪ್ರಕ್ರಿಯೆಗಳು ನಡೆದಿವೆ. ಇಂದಿನಿಂದ (ಜೂನ್ 30) ಜುಲೈ 29 ರ ವರೆಗೆ ಬಿಎಲ್ಒ ಗಳು ಮನೆ ಮನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆಗೊಳಿಸಲಾಗಿದೆ. ಅಗಸ್ಟ್ 9ರ ಭಾನುವಾರ ಬೆಳಿಗ್ಗೆ 9ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು. ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ (ಮನೋಹರ್ ಶೆಟ್ಟಿ) ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರಿ ಸೇವೆಯಲ್ಲಿ ತನ್ನ ನೈಜತೆಯನ್ನು ಪ್ರದರ್ಶಿಸಿದ ಜಾನಕಿ ಟೀಚರ್ ಜನಸ್ನೇಹಿ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟತಟ್ಟು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ತನ್ನ ಸೇವಾ ನಿವೃತ್ತಿ ಹೊಂದಿದ ಜಾನಕಿ ಟೀಚರ್ ಸಾರ್ವಜನಿಕ ಅಭಿನಂದನೆ, ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಸರಕಾರಿ ಸೇವೆಯಲ್ಲಿ ಜನಪರ ಕಾಳಜಿ ಅಪರೂಪ ಆದರೆ ಜಾನಕಿ ಟೀಚರ್ ಸೇವಾ ಅವಧಿಯಲ್ಲಿ ಸರಕಾರ ಶಾಲೆಯನ್ನು ಬಹು ಎತ್ತರಕ್ಕೆ ಕೊಂಡ್ಯೊಯ್ದಿದ್ದಾರೆ.ಇಂತಹ ಶಿಕ್ಷಕರು ಬೆರಳೆಣಿಕೆಯಲ್ಲಿ ಕಾಣಲು ಸಾಧ್ಯ,ಶಿಕ್ಷಕಿ ಅನ್ನುವುದಕ್ಕಿಂತ ಮಾತೃ ಹೃದಯಿಯಾಗಿ ನಗುಮೊಗದ ಶೈಕ್ಷಣಿಕ ಸೇವೆಯನ್ನು ನೀಡಿದ್ದಾರೆ ಎಂದರು. ಪ್ರಸಿದ್ಧ ಮನೋವೈದ್ಯ ಡಾ.ಪ್ರಕಾಶ್ ತೋಳಾರ್ ಮಾತನಾಡಿ ಶಿಕ್ಷಣ ವ್ಯವಸ್ಥೆಯಲ್ಲಿ ನಿಸ್ವಾರ್ಥ ಸೇವೆ ಅಪರೂಪ ಆದರೆ ಜಾನಕಿ ಟೀಚರ್ ಮಕ್ಕಳ ಮನಸ್ಸು ಗೆದ್ದ ಬಲು ಅಪರೂಪದ ಶಿಕ್ಷಕರಾಗಿದ್ದಾರೆ,ಸರಕಾರಿ ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಇಂತಹ ಶಿಕ್ಷಕಿ ಮಾದರಿಯಾಗಿದ್ದಾರೆ ಎಂದರು. ಸನ್ಮಾನಗಳ ಮಹಾಪೂರಬಿಳ್ಕೋಡುಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಸಮನ್ವಯ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇಲ್ಲಿ ಸುಮಾರು ಆರು ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ವಂಡ್ಸೆ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಸ.ಹಿ.ಪ್ರಾಶಾಲೆ ಸೆಳ್ಕೋಡು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಮ್. ನಾಗರಾಜ್ ಶೆಟ್ಟಿ ಅವರನ್ನು ಕ್ಷೇತ್ರ ಸಮನ್ವಯ ಕೇಂದ್ರ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿಯೋಜಿತ ಸಿ.ಆರ್.ಪಿಯಾಗಿ ಕಾರ್ಯ ನಿರ್ವಹಿಸಿದ ಚಂದ್ರ ನಾರಾಯಣ ಬಿಲ್ಲವ ಪಿ.ಎಂ.ಶ್ರೀ ಶಿರೂರು ಮತ್ತು ಲಕ್ಷ್ಮೀ ಸ.ಹಿ.ಪ್ರಾ ಶಾಲೆ ಅರೆಶಿರೂರು ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕ ಅರುಣೇಶ್, ಅಧೀಕ್ಷಕ ಮನೋರಾಜ್ ಶೆಟ್ಟಿ, ಬೈಂದೂರು ವಲಯದ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಬಿ.ಐ.ಆರ್.ಟಿ ನಾಗರತ್ನ ಪ್ರಾರ್ಥಿಸಿದರು. ಶಿರೂರು ಸಿ.ಆರ್.ಪಿ ಗಣೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ.ಎ. ಇಂಟರ್ ಮೀಡಿಯಟ್ ಮೇ. 2026ರ ಪರೀಕ್ಷೆಯಲ್ಲಿ ಕುಂಭಾಶಿಯ ಸುರೇಶ್ ಎಸ್.ಎ. ಮತ್ತು ಪುಷ್ಪ ದಂಪತಿಗಳ ಪುತ್ರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿ ಪನ್ನಗ ಅವರು ಗ್ರೂಪ್–2ರಲ್ಲಿ ಯಶಸ್ಸು ಸಾಧಿಸುವ ಮೂಲಕ, ಈಗಾಗಲೇ ಉತ್ತೀರ್ಣರಾಗಿದ್ದ ಗ್ರೂಪ್–1 ಜೊತೆಗೆ ಸಿ.ಎ. ಇಂಟರ್ ಮೀಡಿಯಟ್ನ ಎರಡೂ ಗ್ರೂಪ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರ ಈ ಸಾಧನೆಯು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ಈ ಸಾಧನೆ ಮಾಡಿರುವುದು ಪನ್ನಗ ಅವರ ನಿರಂತರ ಪರಿಶ್ರಮ, ಶಿಸ್ತು, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಅವರ ಈ ಯಶಸ್ಸು ವಾಣಿಜ್ಯ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಶಿಕ್ಷಣವನ್ನು ಆಯ್ಕೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಪನ್ನಗ ಅವರ ಈ ಗಮನಾರ್ಹ ಸಾಧನೆಗಾಗಿ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯ ಪ.ವರ್ಗದ ಕೊರಗ ಸಮುದಾಯದ 10ನೇ ತರಗತಿ ಹಾಗೂ ಮೇಲ್ಪಟ್ಟ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಐಟಿಡಿಪಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಕುಂದಾಪುರ, ಕಾರ್ಕಳ ತಾಲೂಕು ಕಚೇರಿ ಹಾಗೂ ಎಲ್ಲ ಗ್ರಾಮ ಪಂಚಾಯತ್ಗಳಿಂದ ಪಡೆಯಬಹುದು. ಅರ್ಜಿ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು/ಕಾಲೇಜಿನ ಪ್ರಾಂಶುಪಾಲರಿಂದ ಧೃಡೀಕರಿಸಿಕೊಂಡು ರಜತಾದ್ರಿಯಲ್ಲಿರುವ ಐಟಿಡಿಪಿ ಕಚೇರಿಗೆ ಸಲ್ಲಿಸುವಂತೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
