Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವ್ಯಕ್ತಿ ಯಶಸ್ಸನ್ನು ಕಾಣಲು ಪರಿಶ್ರಮ ಮತ್ತು ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಶಾಲೆಯ ಕಲಿಕೆಯ ಜೊತೆಯಲ್ಲಿ ಸ್ವಯಂ ಪರಿಶ್ರಮದಿಂದ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು  ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್  ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಉಪನ್ಯಾಸಕ ಹೆಚ್. ಸುಜಯೀಂದ್ರ  ಹಂದೆ ಪಠ್ಯೇತರ  ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕರಾದ ಪ್ರವೀಣ್ ಕಾಮತ್ ಕಾಲೇಜಿನ ನೀತಿ ನಿಯಮಗಳ ಬಗ್ಗೆ  ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗೆಗೆ ಮಾಹಿತಿ ನೀಡಿದರು.  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.  ವಿದ್ಯಾರ್ಥಿ ಪ್ರತಿನಿಧಿಗಳಾಗಿ ಸಮೀಕ್ಷಾ ಮತ್ತು ವಿಶ್ವಾಸ್ ಉಪಸ್ಥಿತರಿದ್ದರು. ಕಾಲೇಜು ಕಛೇರಿಯ ಪ್ರಬಂಧಕಿ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಮಾಧ್ಯಮ, ಸಾರ್ವಜನಿಕ ರೊಂದಿಗೆ ಅಧಿಕಾರಿಗಳ ವಿಶೇಷ ಕಾಳಜಿಯಿದ್ದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಮಳೆಗಾಲದ ಪ್ರಾಕೃತಿಕ ವಿಕೋಪ ಮುಂಜಾಗೃತಾ ಕ್ರಮಗಳ ಕುರಿತು ಇಲ್ಲಿನ ಬೈಂದೂರು ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ವಂಡ್ಸೆ ಹೋಬಳಿಯಲ್ಲಿ ಒಂದು ಜೀವ ಹಾನಿ ಸೇರಿದಂತೆ 55 ಮನೆಗಳು ಭಾಗಶಃ ಹಾನಿಗೀಡಾಗಿದೆ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸುಮಾರು 30 ಪ್ರಕರಣಗಳು ಸಂಭವಿಸಿದ್ದು, ಸಂತೃಸ್ತ ಕುಟುಂಬಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರರಿಗೆ ಸೂಚನೆ ನೀಡಿದರು. ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿ, ಮುಂಜಾಗೃತಾ ಕ್ರಮವಾಗಿ ದೋಣಿ ಹಾಗೂ ಜಾಕೆಟ್ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶೋಭಾ ಸಿ. ಶೆಟ್ಟಿಯವರಿಗೆ ‘ಕಾಯಕ ಯೋಗಿʼ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕುಂದಾಪುರದ ಲಯನ್ಸ್ ಕ್ಲಬ್ ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಮ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ಸೇವೆಯನ್ನು ಸಮಾಜ ಗುರುತಿಸುತ್ತದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಬಗ್ಗೆ ಗೌರವನ್ನು ಬೆಳೆಸಿಕೊಂಡು ಸತ್ಪಂಜೆಗಳಾಗಿ ಎಂದು ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ರಾಜ್ಯ ಮತ್ತು ಅಂತರ್-ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಾಧಕ ಎನ್.ಎಸ್.ಎಸ್. ಸ್ವಯಂಸೇವಕರನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ ಎಂ ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ ರಚನೆಯು ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ವಿದ್ಯುನ್ಮಾನ ಮತಯಂತ್ರ ಬಳಸಿ ನಡೆಸಲಾಯಿತು.  ಚುನಾವಣಾ ಅಧಿಸೂಚನೆ, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ನಾಮಪತ್ರ ಪರಿಶೀಲನೆ, ಚುನಾವಣಾ ಪ್ರಚಾರ, ಚುನಾವಣಾ ದಿನಾಂಕ, ಮತ ಎಣಿಕೆ ದಿನಾಂಕ ಇತ್ಯಾದಿಗಳನ್ನು ಕ್ರಮಬದ್ಧವಾಗಿ ನಿರ್ವಹಿಸಲಾಯಿತು. ಅಲ್ಲದೇ ವಿಷೇಷವಾಗಿ ನೋಟಾ ಮತದಾನಕ್ಕೂ  ಅವಕಾಶ ಕಲ್ಪಿಸಲಾಗಿತ್ತು. ಬೂತ್ ಮಟ್ಟದ ಅಧಿಕಾರಿಗಳಾಗಿ ಪ್ರತೀ ವಿದ್ಯಾರ್ಥಿಗಳಿಗೆ ಮತಚೀಟಿಗಳನ್ನು ನವ್ಯಾ ಮತ್ತು ವಂಶಿ ನೀಡಿದರು. ಪ್ರಿಸೈಡಿಂಗ್ ಅಧಿಕಾರಿಯಾಗಿ ಪ್ರಥ್ವಿ ಮೊಗವೀರ ಹಾಗೂ ಮತದಾನ ಅಧಿಕಾರಿಗಳಾಗಿ ವಿದ್ಯಾರ್ಥಿಗಳಾದ ದೀಕ್ಷಿತ್, ಸಹನಾ ಮತ್ತು ಪೂಜಾ ಕರ್ತವ್ಯ ನಿರ್ವಹಿಸಿದರು. ಮತದಾನದ ಕಂಟ್ರೋಲ್ ಯುನಿಟ್‌ಗಳನ್ನು ಶಿಕ್ಷಕಿಯರಾದ ವಿಶಾಲಾ ಹಾಗೂ ಲಿಖಿತಾ ಅವರು ನಿರ್ವಹಿಸಿದರು. ಎಲ್ಲಾ ನಾಲ್ಕು ಅಭ್ಯರ್ಥಿಗಳಿಗೆ ಮತ್ತು ಮತದಾನ ಅಧಿಕಾರಿಗಳಿಗೆ ವಿದ್ಯಾರ್ಥಿ ಮತದಾರರ ಪಟ್ಟಿಯನ್ನು ನೀಡಲಾಗಿತ್ತು. ಮತದಾನ ಕೇಂದ್ರದಲ್ಲಿ ಗುರುತಿಗಾಗಿ ತಮ್ಮ ಆಧಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಜ್ರಿಯಿಂದ ನೇರಳಕಟ್ಟೆ ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಜೂ.8ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ ಆಜ್ರಿಯಿಂದ ಕುಂದಾಪುರಕ್ಕೆ ಬಸ್ ಸಂಚಾರ ಆರಂಭಿಸಿರುವುದು ಶ್ಲಾಘನೀಯ. ಇದರಿಂದ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯವಾದಂತಾಗಿದೆ. ಹಲವು ಭಾರಿ ಈ ಮಾರ್ಗಕ್ಕೆ ಬಸ್ ಸಂಚಾರದ ಬೇಡಿಕೆ ಇರಿಸಿದ್ದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಇನ್ನು 15 ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ಸಂಚಾರದ ಅವಶ್ಯಕತೆ ಇದ್ದು ಆದಷ್ಟು ಬೇಗ ಇದು ಆಗುವಂತೆ ಮಾರ್ಗದ ಅವಶ್ಯಕತೆಯ ಕುರಿತು ಈಗಾಗಲೇ ಎಬಿವಿಪಿ, ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು 15 ದಿನಗಳ ವೊಳಗೆ ಎಲ್ಲಾ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ, ಇಬ್ಬರು ಹಳೆ ವಿದ್ಯಾರ್ಥಿಗಳು ಪ್ರಾಯೋಜಿಸಿದ್ದ ಉಚಿತ ನೋಟ್ ಪುಸ್ತಕಗಳನ್ನು ಗುರುವಾರ ವಿತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಉಪಾಧ್ಯಕ್ಷರಾದ ನಾಗವೇಣಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಕಾರ್ಯದರ್ಶಿಯಾದ ಸುಧಾಕರ್ ಮೊಗವೀರ, ಕೋಶಾಧಿಕಾರಿಯಾದ ಮಹಾದೇವ ಬಿಲ್ಲವ, ಹಳೆ ವಿದ್ಯಾರ್ಥಿಯಾದ ಸುಭಾಷ್ ಪೂಜಾರಿ ಹಾಗೂ ಮುಖ್ಯ ಶಿಕ್ಷಕರಾದ ಮುಕ್ತಾ ಪಿ ಪುಸ್ತಕಗಳನ್ನು ವಿತರಿಸಿದರು. ಈ ವೇಳೆ ಎಸ್.ಡಿ.ಎಂ.ಸಿ ಸದಸ್ಯರು , ಪೋಷಕರು ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎ.1 ರಿಂದ ಜೂ.10ರ ತನಕ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ 1.20 ಲಕ್ಷ ರೂ. ಮೌಲ್ಯದ ಒಟ್ಟು 12 ಮೊಬೈಲ್‌ ಫೋನ್‌ಗಳನ್ನು ಸಿಇಐಆರ್ ಪೋರ್ಟೆಲ್ ಮೂಲಕ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದ ಕುಂದಾಪುರ ಪೊಲೀಸರು, ಆ ಮೊಬೈಲ್‌ಗಳನ್ನು ಕುಂದಾಪುರ ಠಾಣೆಯಲ್ಲಿ ಅದರ ಮಾಲೀಕರಿಗೆ ಹಸ್ತಾಂತರಿಸಿದ್ದರು. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈವರೆಗೆ ಒಟ್ಟು 65 ಮೊಬೈಲ್‌ಗಳನ್ನು ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಹಚ್ಚಿ ಅದರ ಮಾಲೀಕರಿಗೆ ಈಗಾಗಲೇ ನೀಡಲಾಗಿರುತ್ತದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಐಪಿಎಸ್‌ರವರ ಮಾರ್ಗದರ್ಶನದಲ್ಲಿ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ಧಲಿಂಗಪ್ಪ, ಹಾಗೂ ಪರಮೇಶ್ವರ ಹೆಗಡೆರವರ ಮತ್ತು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪರವರ ನಿರ್ದೇಶನದಂತೆ ಕುಂದಾಪುರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಯು.ಬಿ. ನಂದಕುಮಾರ್‌ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ಉಪನಿರೀಕ್ಷಕರಾದ ವಿನಯ್ ಎಂ ಕೊರ್ಲಹಳ್ಳಿ, ಪ್ರಸಾದ್ ಕುಮಾರ್ ಕೆ ಹಾಗೂ ಸಿಬ್ಬಂದಿಯವರಾದ ಸಿದ್ದಪ್ಪ ಸಕನಳ್ಳಿ, ಮಾರುತಿ ನಾಯ್ಕ ತಾಂತ್ರಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ ಹೇಳಿದರು. ಅವರು ಇಂದು ನಗರದ ಮಿಷನ್ ಕಂಪೌಂಡ್ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಸಹ ಮಾಡಲಾಗಿದೆ. ಸರಕಾರವು ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಅಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಯನ್ನು ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಗೆ ಭೇಟಿ ನೀಡಲಾಯಿತು. ಕೈಗಾರಿಕಾ ಭೇಟಿ, ರಾಷ್ಟ್ರೀಯ ಸೇವಾ ಯೋಜನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದು ಈ ಸಂಸ್ಥೆಯ ವಿಶೇಷ. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮೇಶ್, ಚಂದ್ರಕಾಂತ್, ಮಹೇಶ್ ಶೆಣೈ, ಸುಧಿಕ್ಷಾ ಪೈ, ಕೃಪಾ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜೂ.12: ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ ಯಂತ್ರಗಳ ಬಳಕೆ ಹಾಗೂ ಹೆಚ್ಚು ಕಾರ್ಮಿಕರುಗಳನ್ನು ನಿಯೋಜಿಸುವುದರೊಂದಿಗೆ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೆರೆಗೆ ಪೂರ್ಣಗೊಳಿಸಲು ಮುಂದಾಗಬೇಕೆಂದು ಅಭಿಯಂತರುಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಂತೆಕಟ್ಟೆ ಅಂಡರ್‌ಪಾಸ್, ಇಂದ್ರಾಳಿ ಸೇತುವೆ, ಕರಾವಳಿ ಜಂಕ್ಷನ್‌ನಿಂದ ಮಲ್ಪೆ ರಸ್ತೆ, ಪರ್ಕಳದಿಂದ ಆಗುಂಬೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳು ಮಂದಗತಿಯಲ್ಲಿದ್ದು ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿವೆ ಎಂಬ ದೂರುಗಳು ಪ್ರತಿನಿತ್ಯ ಕೇಳಿಬರುತ್ತಿದೆ. ಕಾಮಗಾರಿಯ ವೇಗವನ್ನು ಹೆಚ್ಚಿಸುವುದರೊಂದಿಗೆ ಅಲ್ಪ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿ ಹಾಗೂ ಗುತ್ತಿಗೆದಾರರು ಕಾರ್ಯಪ್ರವೃತರಾಗಬೇಕು ಎಂದರು. ಕಲ್ಸಂಕ ಬಳಿ ರಸ್ತೆ ಕಾಮಗಾರಿಯು ದಿನವೊಂದಕ್ಕೆ 10 ಮೀಟರ್ ಸಹ ಆಗುತ್ತಿಲ್ಲ. ಈ ರೀತಿ ಕಾಮಗಾರಿಯನ್ನು ಮಾಡಿದರೆ…

Read More