Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ – ಆಪರೇಟಿವ್ ಸೊಸೈಟಿಯ 2024 – 26 ನೇ ಸಾಲಿನ ಅಧ್ಯಕ್ಷರಾಗಿ ಜಿ. ವೆಂಕಟೇಶ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿಯ ಸಭಾ ಭವನದಲ್ಲಿ ಸೋಮವಾರ ನಡೆದ ಅಧ್ಯಕ್ಷರ ಸ್ಥಾನಕ್ಕೆ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆದ ಕಾರಣ ಜಿ. ವೆಂಕಟೇಶ ಶೆಣೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ನಿರ್ವಾಚನಾಧಿಕಾರಿ ಜಯರಾಮ ಕೆ. ಘೋಷಿಸಿದರು. ಸಹಕಾರಿಯ ಅಧ್ಯಕ್ಷರಾಗಿದ್ದ ಎಚ್. ಗಣೇಶ ಕಾಮತ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಹಕಾರಿಯ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಸಹಕಾರಿಯ ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎಚ್. ಗಣೇಶ ಕಾಮತ್, ಎನ್. ಮಾಧವ ಕಿಣಿ, ಎಸ್. ವೆಂಕಟರಮಣ ಆಚಾರ್ಯ, ಬಿ. ರಾಘವೇಂದ್ರ ಪೈ, ಜಿ. ವೇದವ್ಯಾಸ ಆಚಾರ್ಯ, ಕೆ. ಪರಮೇಶ್ವರ ನಾಯಕ್, ನಾಗಪ್ರಸಾದ ಪೈ. ಎಂ. ಜಿ., ಕೆ. ಗೋಪಾಲಕೃಷ್ಣ ನಾಯಕ್, ಮಹಾಬಲ ಪೂಜಾರಿ, ಕಿರಣ್ ಫಿಲಿಪ್ ಪಿಂಟೊ, ಮಾಲಾ ಕೆ. ನಾಯಕ್, ಗೀತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎ.ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಆಯೋಜಿಸಿದ ಇಂಟರ್‌ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್ 2024ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ಸಿಂಚನಾ ಕುಂದಾಪುರ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾಳೆ. ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನ, ಕೋಡಿಯ ಸತೀಶ್ ಮತ್ತು ನಾಗವೇಣಿ ದಂಪತಿ ಪುತ್ರಿ. ಸಿಂಚನ ಕರಾಟೆ ತರಬೇತಿಯನ್ನು ಕೆಡಿಎಫ್ ಕುಂದಾಪುರ ಸಂಸ್ಥೆಯಲ್ಲಿ ಶಿಕ್ಷಕರಾದ ಶಿಯಾನ್ ಶೇಕ್ ಮತ್ತು ಶಶಾಂಕ್ ಶೆಣೈ ಅವರಿಂದ ತರಬೇತಿ ಪಡೆದಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದೊಂದಿಗೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ  ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ  ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳಾದ ಸಿಧ್ವಿಕ್ ಪೂಜಾರಿ ೭B , ಯು.ವಿಶ್ರುತ್ ಮೇಲಾಡಿ 7D, ಸಾತ್ವಿಕ್ ಪೂಜಾರಿ 8̧D ಹರಿದಾಸ್ ಆರ್.ಮಲ್ಯ 9E, ವರ್ಣಿತಾ ವಿ.ಕುಂದರ್ 9F, ಮೇಘನ ಪ್ರಕಾಶ್ ಶ್ಯಾನಭಾಗ್ 7E, ದೇವಿಕಾ ಶೆಣೈ 8F ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಸಾಲಿನ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಹಾಗೂ ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಈ ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಪ್ರಶಸ್ತಿಯ ಅರ್ಜಿ ನಮೂನೆ ಹಾಗೂ ಹೆಚ್ಚಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ ಅನಾವರಣಕ್ಕೆ ವಿಶ್ವ ಕುಂದಾಪ್ರ ದಿನಚರಣೆ ಸಾಕ್ಷಿಯಾಗುತ್ತಿರುವುದು ಸಂತಸದ ವಿಷಯ ಎಂದು ಪ್ರಗತಿಪರ ಕೃಷಿಕ ಜಯರಾಮ್ ಶೆಟ್ಟಿ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಡಾ ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಯು – ಚಾನೆಲ್ ಆಶ್ರಯದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸಾವ ಹೊಸ ಹೂಂಗು ಕೋಲೆ… ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಸಾಂಸ್ಕೃತಿಕ ಚಿಂತಕ ಪ್ರದೀಪ್ ಬಸ್ರೂರು, ಚಿತ್ರಕಲಾ ಶಿಕ್ಷಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ – 580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ https://balavikasaacademy.karnataka.gov.in ಅಥವಾ ದೂ. ಸಂ:0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ  ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024 ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಬಾನುಲಿ ಕೇಂದ್ರ ಕುಂದಾಪುರದ ಕಾರ್ಯಕ್ರಮ ನಿರ್ವಾಹಕರಾದ ಜ್ಯೋತಿ ಅವರು ಹೃದಯದ ಭಾಷೆ ಅಂದರೆ ಅದು ಕುಂದಾಪ್ರ ಕನ್ನಡ‌, ಈ ನೆಲದ ಸಂಸ್ಕ್ರತಿ ಸಂಪ್ರದಾಯವನ್ನು ಉಳಿಸಿ ಬೆಳೆಸೋಣ,ಕುಂದಾಪುರದ ಸಂಸ್ಕ್ರತಿಯೇ ನಮ್ಮ ಆಸ್ತಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ಭಾಷಾಭಿಮಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಭಾಷೆಯ ಬಲವರ್ಧನೆಗಾಗಿ ಕಾಲೇಜಿನಲ್ಲಿ ಹತ್ತಾರು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಶ್ರಮಿಸುತ್ತಿದ್ದೇವೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದರಾದ ಚೇತನ್ ಕುಮಾರ್ ನೈಲಾಡಿ ಅವರು ಕುಂದಾಪ್ರ ಭಾಷೆಯಲ್ಲಿ ಕುಂದಾಪುರ ಕನ್ನಡದ ವಿವಿಧ ಸಂಪ್ರದಾಯಗಳನ್ನು ಹಾಸ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ನ್ಯಾಷನಲ್ ಇ – ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.disabilityaffairs.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಿ – ಮೆಟ್ರಿಕ್ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಮತ್ತು ಪೋಸ್ಟ್ ಮೆಟ್ರಿಕ್ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ” ಅತ್ಯಂತ‌ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರ್ ವ್ಯಾಸಂಗದಲ್ಲಿ ಪ್ರತಿಷ್ಠಿತ ಉನ್ನತ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬೇಕೆನ್ನುವುದು ನಮ್ಮ ಸಂಸ್ಥೆಯ ಮಹದಾಶಯ. ಈ ನಿಟ್ಟಿನಲ್ಲಿ ಈಗ ಪುರಸ್ಕೃತರಾದ ವಿದ್ಯಾರ್ಥಿಗಳು ಮತ್ತು ಮುಂಬರುವ ವರ್ಷಗಳಲ್ಲಿ ಪಿ.ಯು‌.ಸಿ ಹಂತವನ್ನು ಮುಗಿಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಶೈಕ್ಷಣಿಕ ಪ್ರಗತಿಯ ಹೆಜ್ಜೆಗಳತ್ತ ಸಾಗಿಸುವ ಪ್ರಯತ್ನ ಯಶಸ್ವಿಯಾಗಿ ಸಾಗುತ್ತಿದೆ ” ಎಂದು ಕಾಲೇಜಿನ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಡಿಸ್ಟಿಂಕ್ಷನ್ ದರ್ಜೆಯಲ್ಲಿ ಪಾಸಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಬಳಿಕ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾಯ ಇವರು ಪುರಸ್ಕ್ರತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು…

Read More