Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,28: ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವೈಯುಕ್ತಿಕ ತೇಜೋವಧೆ ಮಾಡಿರುವುದು ಖಂಡನೀಯ. ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ ಕೃತ್ಯವಾಗಿದೆ ಹಾಗೂ ಆಧಾರರಹಿತವಾಗಿ ವೈಯುಕ್ತಿಕ ನಿಂದನೆ, ಧಾರ್ಮಿಕ ನಿಂದನೆ ಕಾನೂನಾತ್ಮಕವಾಗಿ ಅಪರಾಧವಾಗಿದೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ. ಶ್ರೀ ಕ್ಷೇತ್ರದ ಅಭಿಮಾನಿಗಳ ಪರವಾಗಿ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸಲಾಗಿದೆ. ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಪ್ರಚೋದನಕಾರಿ ಮಾತುಗಳನ್ನಾಡಲು ಅವಕಾಶ ಮಾಡಿಕೊಟ್ಟಿರುವುದು ಕಾನೂನು ಬಾಹಿರವಾಗಿದೆ. ಬಹಿರಂಗ ಸಭೆಯಲ್ಲಿ ಮಾತನಾಡಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಅಳ್ವೆಗದ್ದೆಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಶಿರೂರು ತಸ್ಫಿಯಾ ಮಂಜಿಲ್ ನ್ಯೂ ಕಾಲೋನಿ ನಿವಾಸಿ, ಗಂಗೊಳ್ಳಿ ಮುಸ್ತಾಫಾ ಎಂಬುವರ ಮಗ ಗಂಗೊಳ್ಳಿ ಮೊಹಮ್ಮದ್ ಮುಸಾಬ್ (22) ಹಾಗೂ ಕೆಸರಕೋಡಿ ನಿವಾಸಿ ಬಾವು ನೂರುಲ್ ಅಮೀನ್ ಎಂಬುವರ ಪುತ್ರ ಬಾವು ನಝಾನ್ (24) ಸಮುದ್ರದಲ್ಲಿ ನಾಪತ್ತೆಯಾದವರು. ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಕೊಂಡಿದ್ದ ನಾಲ್ವರು ಯುವಕರು ಎಂದಿನಂತೆ ಕೈರಂಪಣಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಪಾಲಾಗಿದ್ದಾರೆ. ತಕ್ಷಣ ಸ್ಥಳೀಯ ಮೀನುಗಾರರು ನಾಪತ್ತೆಯಾದವರ ಶೋಧಕ್ಕಾಗಿ ಪ್ರಯತ್ನಿಸಿದರು ಕೂಡ ಪತ್ತೆಯಾಗಿಲ್ಲ. ರಾತ್ರಿಯ ತನಕವೂ ಶೋಧ ಕಾರ್ಯ ಮುಂದುವರಿಸಿದ್ದರು. ಯುವಕರು ಬದುಕುಳಿದಿರುವ ಸಾಧ್ಯತೆ ಕಡಿಮೆಯಿದ್ದು, ಮೃತದೇಹ ಪತ್ತೆ ಕಾರ್ಯದಲ್ಲಿ ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರು ತೊಡಗಿಕೊಂಡಿದ್ದರು. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ, ಕರಾವಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು. ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಈ ವೇಳೆ ಗೌರವಿಸಿದರು. ಈ ಸಂದರ್ಭ ಬೈಂದೂರು ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಾಜೇಶ್ ಎಂ. ದೇವಾಡಿಗ ಹಾಗೂ ಉಪಾಧ್ಯಕ್ಷೆಯಾಗಿ ಸಿಂಗಾರಿ ತಾರಿಬೇರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ಸದಸ್ಯ ಬಲದ ಪಂಚಾಯತ್ನಲ್ಲಿ 8 ಮಂದಿ ಕಾಂಗ್ರೆಸ್ ಹಾಗೂ 6 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಆಲೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗೇಶ್ ನಾಯ್ಕ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಗ್ರಾ.ಪಂ. ಪಿಡಿಒ ರೂಪಾ ಗೋಪಿ ಸಹಕರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಾಬು ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಉದಯ ಪೂಜಾರಿ, ಗುಂಡು ಪೂಜಾರಿ ಹರವರಿ, ಸುರೇಶ್ ದೇವಾಡಿಗ, ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆದೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಭಿನಂದನಾ ಸಮಾರಂಭವು ಕೆದೂರು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆದೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಬಿಜೆಪಿ. ಮಂಡಲ ಅಧ್ಯಕ್ಷರಾದ ಶಂಕರ್ ಅಂಕದ ಕಟ್ಟೆ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ. ಬಿಜೆಪಿ. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ, ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶರತ ಕುಮಾರ್ ಹೆಗ್ಡೆ ಶಾನಾಡಿ,ಕೋಟೇಶ್ವರ ವ್ಯ.ಸೇ.ಸ ಸಂಘದ ನಿರ್ದೇಶಕರಾದ ನವೀನ ಹೆಗ್ಡೆ ಶಾನಾಡಿ, ಕೆದೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಕೆ. ಭುಜಂಗ ಶೆಟ್ಟಿ ಹಾಗೂ ವಸಂತ ಶೆಟ್ಟಿ ಕೆದೂರು, ಮಾಜಿ ಎಪಿಎಂಸಿ ನಿರ್ದೇಶಕರು, ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷೆ ಜ್ಯೋತಿ ದೇವಾಡಿಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಎಲ್ಲರ ಸಹಕಾರದೊಂದಿಗೆ, ಅಭಿವೃದ್ಧಿ ಕಾರ್ಯಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಹಿರ್ಗಾನ ಗ್ರಾಮದಲ್ಲಿರುವ ʼಬೆಂಗಾಲ್‌ʼ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ ಇಲ್ಲದೇ ಹೋದರೆ ಎಷ್ಟೇ ಹಣವಿದ್ದರೂ ಬದುಕಲು ಅಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಕೃಷಿಯನ್ನು ತುಚ್ಛವಾಗಿ ಕಾಣದೇ ಭೂಮಿತಾಯಿಯ ಸೇವೆ ಎಂದು ಭಾವಿಸುವಂತಾಗಿ, ಭಾರತವು ಎಲ್ಲಾ ಕ್ಷೇತ್ರದಲ್ಲಿ ನಾಯಕತ್ವ ವಹಿಸುವಂತಾಗಲಿ, ಹಾಳು ಬಿದ್ದಿರುವ ಕೃಷಿ ಜಮೀನು ಬೆಳೆ ಬೆಳೆಯುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಮಾತನಾಡಿ ʼಕೈಕೆಸರಾದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಚಂದ್ರಯಾನ – 3ರ ಮೈಲಿಗಲ್ಲು, ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದ ಸಂಭ್ರಮ ದೇಶದೆಲ್ಲೆಡೆಯೂ ಮನೆಮಾಡಿದೆ. ಈ ವೈಜ್ಞಾನಿಕ ಪರಾಕ್ರಮದ ಹಿಂದೆ ಶ್ರಮಿಸಿದ ಇಸ್ರೋ ವಿಜ್ಞಾನಿಗಳ ಪೈಕಿ, ಕುಂದಾಪುರ ಮೂಲದ ಯುವ ವಿಜ್ಞಾನಿ ಆಕಾಶ್ ಶೆಟ್ಟಿ ಅವರು ತೊಡಗಿಸಿಕೊಂಡಿರುವುದು ಕರಾವಳಿಗರ ಸಂಭ್ರಮ ಹೆಚ್ಚಿಸಿದೆ. ತಾಲೂಕಿನ ಗುಜ್ಜಾಡಿ ಮಂಕಿ ಕೇಳಾಮನೆಯವರಾದ ಆಕಾಶ್ ಶೆಟ್ಟಿ ಅವರು ಇಸ್ರೋದಲ್ಲಿ ಯುವ ವಿಜ್ಞಾನಿಯಾಗಿದ್ದು, ಚಂದ್ರಯಾನ – 3ರ ಸ್ಪೇಸ್ ಕ್ರಾಫ್ಟ್ ಮೆಕ್ಯಾನಿಸಂ ಗ್ರೂಪಿನ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ಆಕಾಶ್ ಶೆಟ್ಟಿ ಅವರು ಕೋಟ ವಿವೇಕ ಹೈಸ್ಕೂಲ್‌ನಲ್ಲಿ ಪಿಯುಸಿ, ಬಳಿಕ ಇಂಜಿನಿಯರಿಂಗ್ ಹಾಗೂ ಎಂಟೆಕ್ ಪದವಿ ಪೂರ್ಣಗೊಳಿಸಿ 2015ರಲ್ಲಿ ಇಸ್ರೋಗೆ ಸೇರ್ಪಡೆಗೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಪ್ರಸ್ತುತ ಮುರುಡೇಶ್ವರದ ನಿವಾಸಿಯಾಗಿರುವ ಆಕಾಶ್ ಶೆಟ್ಟಿ ಅವರು, ಮಂಕಿ ಕೇಳಾಮನೆ ಪಾರ್ವತಿ ಶೆಟ್ಟಿ ಹಾಗೂ ಕೆರಾಡಿ ಚಪ್ಪರಮಕ್ಕಿ ದಿ. ಅಶೋಕ್ ಶೆಟ್ಟಿ ಅವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ 12 ವರ್ಷದಿಂದ ಸತತವಾಗಿ ಪಾದಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಪಿ ಲಕ್ಷ್ಮೀ ನಾರಾಯಣ ರಾವ್ ಅವರ ನೇತೃತ್ವದಲ್ಲಿ ಹಾಗೂ ಶ್ರೀಧರ ಪಿ. ಎಸ್. ಅವರ ಮುಂದಾಳತ್ವದಲ್ಲಿ 13ನೇ ವರ್ಷದ ತಿರುಪತಿ ಯಾತ್ರೆ ಆ.22ರಂದು ಸಾಸ್ತಾನದಿಂದ ಹೊರಟಿದೆ. ಸತತ 18 ದಿನಗಳ ಕಾಲ ಕ್ರಮಿಸಲಿರುವ ತಿರುಪತಿ ಯಾತ್ರೆಯಲ್ಲಿ ಮೊದಲ ದಿನ ಹಿರಿಯಡಕ ನಾರಾಯಣಗುರು ಸಭಾಭವನದಲ್ಲಿ ಉಳಿದು, ಮುಂದೆ ಹೊಸ್ಮಾರು, ಧರ್ಮಸ್ಥಳ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನಾರಾಯಪಟ್ಟಣ, ಬೆಳ್ಳೂರು ಕ್ರಾಸ್, ಕುದೂರು, ಚಿಕ್ಕಬೆಲವಂಗಲ, ನಂದಿಗ್ರಾಮ, ಕೈವಾರ, ರಾಯಲ್ಪಡು ಶಾಲೆ, ಚಿಂತಪರ್ತಿ ಹಾಲ್, ಬಾಕ್ರಪೇಟೆ ಶಾಲೆ, ಶ್ರೀನಿವಾಸ ಮಂಗಾಪುರ ಹೀಗೆ ಒಂದು ಊರಿನಲ್ಲಿ ತಂಗಿ ಕೊನೆಗೆ ತಿರುಪತಿ ತಲುಪುತ್ತಾರೆ. ಅಲ್ಲಿ ತಿರುಪತಿ ಶ್ರೀ ವೆಂಕಟೇಶ್ವರನ ದರ್ಶನ ಪಡೆಯಲಾಗುತ್ತದೆ. ಈ ಪಾದಯಾತ್ರೆಯಲ್ಲಿ 200 ಮಂದಿ ಒಟ್ಟಿಗೆ ತೆರಳುತ್ತಿದ್ದಾರೆ. ಪ್ರತಿವರ್ಷ ಸಾಸ್ತಾನ ಮಾತ್ರವಲ್ಲದೇ ಉಡುಪಿ ಉತ್ತರ ಕನ್ನಡ ಜಿಲ್ಲೆಯ ಹಲವು ಭಕ್ತಾದಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತದ ಚಂದ್ರಯಾನ – 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ISRO ಎಂಬ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಿದರು.

Read More