Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಅರೆವಾಹಕ ಚಿಪ್‌ಗಳು (ಸೆಮಿಕಂಡಕ್ಟಡ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ. ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್‌ಗಳನ್ನು ತಯಾರಿಸಲು ಎಪ್ಪತ್ತಾರು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್‌ಡಿಒ ಹಾಗೂ ಸಿತಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು. ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಞ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್ ಎಂಬ  ನಾಲ್ಕು ದಿನಗಳ ಉಪನ್ಯಾಸಕರ ಕೌಶಲ್ಯಾಭಿವೃದ್ಧಿ (ಎಫ್‌ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.  ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್‌ಗೆ ಸಂಬಂದಿಸಿದ ನೂರೈವತ್ತುಕ್ಕೂ ಅಧಿಕ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿದ್ದೇವೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಾಟಕ ಮಾಧ್ಯಮದಿಂದ ಮಕ್ಕಳಿಗೆ ಇತಿಹಾಸ ಅರಿಯಲು ಸುಲಭ. ನಾಟಕಗಳು ರಂಜನೆಯ ಜೊತೆಗೆ ಚಿಂತನೆಯನ್ನು ಹಚ್ಚುತ್ತದೆ ಎಂದು ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಇದರ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಹೇಳಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರಿನಲ್ಲಿ ರೋಟರಿ ಕ್ಲಬ್ ಬೈಂದೂರು, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಚೇಂಬರ್ ಬೈಂದೂರು ಇವರ ಸಹಯೋಗದಲ್ಲಿ ನಿರ್ದಿಗಂತ ಮೈಸೂರು ತಂಡದ ನಾಟಕ ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೆಂಕಟರಮಣ ದೇವಾಡಿಗ ಮತ್ತು ದಯಾನಂದ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಟಕ ತಂಡದ ನಿರ್ವಾಹಕರಾದ ಗಣೇಶ್ ಅವರನ್ನು ಗೌರವಿಸಲಾಯಿತು. ನೀನಾಸಂ ಪದವೀಧರ ಸತ್ಯನ್‌ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ರೋಟರಿ ಕ್ಲಬ್‌ನ ಕಾರ್ಯದರ್ಶಿ ಸುನಿಲ್ ಹೆಚ್.‌ ಜಿ ಸ್ವಾಗತಿಸಿ, ಶಾಲಾ ಪದವೀಧರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತುಳು – ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು. ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್‌ನ ಆಡಳಿತ ನಿರ್ದೇಶಕ ಸುಧಾಕರ ಶೆಟ್ಟಿ ಮಾತನಾಡಿ, ಬಂಟರು ಸ್ವಂತಿಕೆ, ಸ್ವಾಭಿಮಾನದಡಿಯಲ್ಲಿ ಬದುಕಿದವರು ಹಾಗೂ ಸಂಘಟನಾ ಚತುರರು. ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸುವುದರ ಜೊತೆಗೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವಿಷಯಗಳಿಗೆ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಾ ಬಂದವರು. ಬಂಟರು ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವ ಮೂಲಕ ಸಾಮಾಜಿಕವಾಗಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡವರು ಎಂದು ಹೇಳಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋವಾ ಬಂಟರ ಸಂಘದ ರಜತ ಸಂಭ್ರಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇರಿಸಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಕರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರುದಾರರು ನೀಡಿದ ದೂರಿನಂತೆ ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟ‌ರ್ ಅಮನುಲ್ಲ ಹಾಗೂ ಚಂದ್ರಶೇಖ‌ರ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಲತಾ, ಮಲ್ಲಿಕಾ, ಅಬ್ದುಲ್ ಜಲಾಲ್, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಚ್‌ ಬಳಿ ಮನೆಯೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಆಭರಣಗಳನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಲು ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಜ್ಜಾಡಿ‌ ನಿವಾಸಿ ವಿನಾಯಕ ಖಾರ್ವಿ (41), ಪ್ರಮೀಳಾ (30) ಬಂಧಿತರು. ಜ.21 ರಂದು ಉದಯ ಪೂಜಾರಿ ಎಂಬುವವರ ಮನೆಯ ಟೇಬಲ್‌ ಮೇಲೆ ಇಡಲಾಗಿದ್ದ ಬ್ಯಾಗಿನ ಜೀಪ್‌ ತೆಗೆದು ಬ್ಯಾಗ್‌ ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ. 21 ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳಾದ ಗುಜ್ಜಾಡಿ‌ ನಿವಾಸಿ ವಿನಾಯಕ(41), ಪ್ರಮೀಳಾ(30) ಎನ್ನುವರನ್ನು ವಶಕ್ಕೆ ಪಡೆದು ಆರೋಪಿಗಳು ಕಳವುಗೈದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ‌ ಬಿ.ಸಿ ರೋಡ್ ರಸ್ತೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತ ದುರ್ದೈವಿ. ಸೋಮಯ್ಯ ಅವರು ಬುಧವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ರಿಕ್ಷಾ ಡಿಕ್ಕಿಯಾಗಿದ್ದು, ಗಾಯಗೊಂಡು ಅವರು ಗದ್ದೆಗೆ ಬಿದ್ದಿದ್ದರು. ಕೆಲ ಸಮಯದ ಬಳಿಕ ಯಾರೋ ಗದ್ದೆಯಲ್ಲಿ ಬಿದ್ದಿರುವುದನ್ನು ಕಂಡಿದ್ದು ಪರಿಶೀಲಿಸಿದಾಗ ಸೋಮಯ್ಯ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಾಗಲೇ ಸೋಮಯ್ಯ ಮೃತಪಟ್ಟಿರುವುದು ತಿಳಿದುಬಂದಿದೆ. ಕುಂದಾಪುರದ ಮೂಡ್ಲಕಟ್ಟೆ ರೈಲು ನಿಲ್ದಾಣದಿಂದ ಮುಂಜಾನೆ 6 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಕರೆದೊಯ್ಯುವಾಗ ಸೋಮಯ್ಯ ಅವರಿಗೆ ರಿಕ್ಷಾ ಡಿಕ್ಕಿಹೊಡೆದಿದೆ. ಅಪಘಾತದ ಬಗ್ಗೆ ತಿಳಿದರೂ ಕೂಡ ರಿಕ್ಷಾ ಚಾಲಕ ನಾರಾಯಣ ಎಂಬಾತನು ರಿಕ್ಷಾ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ತದನಂತರ ಬೆಳಿಗ್ಗೆ 9 ಗಂಟೆ ಬಳಿಕ ಅರೋಪಿ ಚಾಲಕ ಕುಂದಾಪುರ ಸಂಚಾರ ಪೊಲೀಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ “ರಾಷ್ಟ್ರೀಯ ಯುವ ದಿನ”ದಂದು ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ ಮತ್ತು ಮೂಲ ವಿಜ್ಞಾನ ವಿಭಾಗದ ಸಹಯೋಗದೊಂದಿಗೆ NSS-YRC ಘಟಕವು ಪ್ರೇರಣಾದಾಯಕ ಕಾರ್ಯಕ್ರಮ ಆಯೋಜಿಸಲಾಗಿತ್ತು. “ಯುಥ್ ಫಾರ್ ಎ ಸಸ್ಟೆನೇಬಲ್ ಪ್ಯೂಚರ್” ಶೀರ್ಷಿಕೆಯ ಈ ಅಧಿವೇಶನವನ್ನು ಪ್ರಮುಖ ತಂತ್ರಜ್ಞಾನ ಉದ್ಯಮಿ, ಫೋರ್ತ್‌ಫೋಕಸ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ವಿ. ಗೌತಮ್ ನಾವಡ ಮಾತನಾಡಿ “ಉದ್ಯಮಶೀಲತೆ ಕೇವಲ ಯಶಸ್ಸಿನ ಬಗ್ಗೆ ಅಲ್ಲ. ವೈಫಲ್ಯಗಳನ್ನು ಸ್ವೀಕರಿಸುವುದು, ಅವುಗಳಿಂದ ಕಲಿಯುವುದು ಮತ್ತು ಮುಂದುವರಿಯುವುದರ ಬಗ್ಗೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಸಚಿನ್ ಪ್ರಭು ಕೆ ಮತ್ತು ರಘುನಾಥ್ ಅವರು ಅಲಂಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಗೆ ಹೊಂದಿಕೊಂಡ ಅಪ್ಪಟ ಗ್ರಾಮೀಣ ಸೊಗಡಿನ ಹಿರಿಮೆ ಇರುವುದು ಉಪ್ಪುಂದ ಗ್ರಾಮದ್ದಾಗಿದೆ. ಕೃಷಿ ಹಾಗೂ ಮೀನುಗಾರಿಕೆ ಇಲ್ಲಿನವರ ಮುಖ್ಯ ಕುಲಕಸುಬು. ಅಕ್ಕಪಕ್ಕದ ಗ್ರಾಮಗಳಿಗಿಂತ ಉತ್ತಮ ಮಟ್ಟದಲ್ಲಿ ಅಭಿವೃದ್ದಿಯಾಗಿದೆ. ಇಲ್ಲಿನ ಗ್ರಾಮ ಪಂಚಾಯತ್, ವಿವಿಧ ಇಲಾಖೆಗಳ ಯೋಜನೆ ಅನುಷ್ಠಾನದ ಮೂಲಕ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಬಹಳ ಹಿಂದಿನಿಂದಲೂ ಗುರುತಿಸಿಕೊಂಡಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಉಪ್ಪುಂದ ಗ್ರಾಮ ಪಂಚಾಯತ್‌ನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ಗ್ರಾಮದ ಸ್ಥಳಿಯಾಡಳಿತ ಸದಸ್ಯರ ದೂರದೃಷ್ಠಿತ್ವದಿಂದ ಕೂಡಿದ ಚಿಂತನೆಗಳು, ಇಚ್ಛಾಶಕ್ತಿ ಹಾಗೂ ಗ್ರಾಮದ ಮತ್ತು ಗ್ರಾಮಸ್ಥರ ಕುಂದು ಕೊರತೆಗಳನ್ನು ವ್ಯವಸ್ಥಿತವಾಗಿ ಶೀಘ್ರವಾಗಿ ಸ್ಪಂದಿಸಿ ಪರಿಹರಿಸುವ ಕೆಲಸ ಮಾಡಿದ್ದಲ್ಲಿ ಅದು ನಿರೀಕ್ಷಿತಮಟ್ಟ ತಲುಪಲು ಸಾಧ್ಯ. ಗ್ರಾಮಾಭಿವೃದ್ಧಿಗೆ ಸದಸ್ಯರ ಉತ್ತಮ ಯೋಚನೆ ಹಾಗೂ ಯೋಜನೆಗಳೂ ಕೂಡ ಅತ್ಯಗತ್ಯ ಎಂದರು. ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಹಾಲಕ್ಷ್ಮೀ ಗಾಣಿಗ, ವಿಧಾನ ಪರಿಷತ್ ಸದಸ್ಯ ಕಿಶೋರಕುಮಾರ್ ಪುತ್ತೂರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಕೊಸೆಸಾಂವ್ ಅಮ್ಮನವರ ಇಗರ್ಜಿಯ ಕುಟುಂಬ ಆಯೋಗ ಮತ್ತು 2025 ಜುಬಿಲಿ ಸಮಿತಿಯ ಮುಂದಾಳತ್ವದಲ್ಲಿ ದಂಪತಿಗಳ ಜಯಂತೋತ್ಸವ ಆಚರಣೆ ಇತ್ತೀಚಿಗೆ ಸಂಭ್ರಮದಿಂದ ನಡೆಯಿತು. ಉಡುಪಿ ಧರ್ಮ ಪ್ರಾಂತ್ಯದ ದಿವ್ಯ ಜ್ಯೋತಿ ನಿರ್ದೇಶಕ ಧರ್ಮ ಗುರು ಸೀರಿಲ್ ಲೋಬೊ, ಗಂಗೊಳ್ಳಿ ಚರ್ಚಿನ ಧರ್ಮ ಗುರು ಥಾಮಸ್ ರೋಶನ್ ಡಿಸೋಜ ನೇತೃತ್ವದಲ್ಲಿ ಪವಿತ್ರ ಬಲಿ ಪೂಜೆ ನೆರವೇರಿತು. ಬಳಿಕ ಮಾತನಾಡಿದ ಸೀರಿಲ್ ಲೋಬೊ, ಸುಖದಲ್ಲಿ ದುಃಖದಲ್ಲಿ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿ ಸಹಕಾರವನ್ನು ನೀಡಿ ನಿಮ್ಮ ದಾಂಪತ್ಯ ಜೀವನವನ್ನು ನಿರ್ವಹಿಸಬೇಕೆಂದು ಸಂದೇಶ ನೀಡಿದರು. ಥಾಮಸ್ ರೋಶನ್ ಡಿಸೋಜ ದಂಪತಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು. ದಂಪತಿಗಳು ವಿವಾಹದ ಪ್ರತಿಜ್ಞೆಯನ್ನು ಪುನಃ ಮಾಡಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಬ್ಯಾಂಡ್ ಮತ್ತು ಬಣ್ಣದ ಕೊಡೆಗಳ ಮೂಲಕ ಮೆರವಣಿಗೆಯಲ್ಲಿ ದಂಪತಿಗಳನ್ನು ಸಂತ ಜೋಸೆಫ್ ವಾಜರ ಸಭಾಂಗಣಕ್ಕೆ ಕರೆದಯ್ಯಲಾಯಿತು. ಸಭಾಂಗಣದಲ್ಲಿ ದಂಪತಿಗಳಿಗೆ ವಿವಿಧ ಬಗೆಯ ನೃತ್ಯ ಕಾರ್ಯಕ್ರಮ ನೆರವೇರಿಸಲಾಯಿತು. ಕೊಂಕಣಿ ಕ್ರೈಸ್ತ ಸಂಪ್ರದಾಯದ ಹಾಡುಗಳನ್ನು (ವೋವಿಯೋ ವೇರ್ಸ್)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಿವೃತ್ತಿ ವೃತ್ತಿ ಬದುಕಿಗೆ ಹೊರತು ನಮ್ಮ ಸಾಮಾಜಿಕ ಜೀವನಕ್ಕಲ್ಲ. ವಯಸ್ಸು ಮಾನದಂಡವಾಗಿಸದೇ ಪ್ರತಿಯೊಬ್ಬರಿಗೂ ತಮ್ಮಲ್ಲಿರುವ ಸೂಪ್ತ ಪ್ರತಿಭೆ ಹೊರಹೊಮ್ಮವ ಸಕಾಲವಿದು. ನಿವೃತಿಯ ನಂತರದ ಸ್ವತಂತ್ರ ಬದುಕಿನಲ್ಲಿ ನಮ್ಮ ಪ್ರವೃತ್ತಿಯ ಮೂಲಕ ಇನ್ನಷ್ಟು ಪ್ರಕಾಶಮಾನರಾಗಿ ಜೀವನೋತ್ಸಾಹವನ್ನು ವೃದ್ಧಿಸಿಕೊಳ್ಳಬೇಕು ಎಂದು ಕುಂದಾಪುರ ಹಿರಿಯ ನ್ಯಾಯವಾದಿ ಎಎಸ್ಎನ್ ಹೆಬ್ಬಾರ್ ಅವರು ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಂಗಣದಲ್ಲಿ ಬೈಂದೂರು ಹಿರಿಯ ನಾಗರೀಕರ ವೇದಿಕೆಯ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸರ್ಕಾರಿ, ಅರೆ ಸರ್ಕಾರಿ ಮತ್ತು ಸಂಘಟಿತ ವಲಯದ ಉದ್ಯೋಗಸ್ಥರಿಗೆ ನಿವೃತ್ತಿಯ ನಂತರದ ಬದುಕು ಹೊಸಲೋಕದ ಪರಿಚಯ ಮೂಡಿಸುತ್ತದೆ. ಕೆಲವರಿಗೆ ಅದು ಮಧುರವಾದರೆ ಇನ್ನು ಕೆಲವರಿಗೆ ಯಮಯಾತನೆಯಾಗಬಹುದು. ಇದೆಲ್ಲವೂ ಅವರವರು ಜೀವನವನ್ನು ಕಾಣುವ ಮತ್ತು ಸ್ವೀಕರಿಸುವ ವೈಖರಿಯಿಂದ ನಿರ್ಧಾರವಾಗುತ್ತದೆ ಎಂದರು. ನಿರ್ಗಮನ ಅಧ್ಯಕ್ಷ ಕೆ. ಪುಂಡಲೀಕ ನಾಯಕ್ ನೂತನ ಅಧ್ಯಕ್ಷ ಗಿರೀಶ ಶ್ಯಾನುಭಾಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಿವೃತ್ತ ಉಪನ್ಯಾಕ ಎಸ್. ಜನಾರ್ದನ ಮರವಂತೆ, ವೇದಿಕೆ…

Read More