Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ Inspire Award – MANAK ಯೋಜನೆಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮಿತ್ ಆರ್. ನಾಯ್ಕ್  ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೋಬ್ಬ ಅರ್ಹ ಫಲಾನುಭವಿಗೂ ತಲುಪಿಸಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಸರಕಾರದ ಯೋಜನೆಯಿಂದ ಯಾರೋಬ್ಬರು ವಂಚಿತರಾಗದಂತೆ ಶ್ರಮವಹಿಸಬೇಕಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಸುಸಜ್ಜಿತವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆಗಿದ್ದರೂ ಸರ್ವಿಸ್ ರಸ್ತೆ ಆಗದ ಕಾರಣ ಉಡುಪಿ ಭಾಗದ ಬಸ್ಸುಗಳನ್ನು ನಿಲ್ದಾಣಕ್ಕೆ ಬರದೇ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಸೂಕ್ತ ಕ್ರಮವಹಿಸಲು ಈಗಾಗಲೇ ಕೆ.ಎಸ್.ಆರ್.ಟಿ.ಸಿ ಡಿಸಿ ಅವರ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಎಲ್ಲಾ ಬಸ್ಸುಗಳು ನಿಲ್ದಾಣಕ್ಕೆ ಬರುವಂತೆ ಹೆಚ್ಚಿನ ಕ್ರಮವಹಿಸಲು ಅವರು ಸೂಚಿಸಿದರು. ಪರ್ಮಿಟ್‌ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು. ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ…

Read More

ಕುಂದಾಪ್ರ ಡಾಟ್‌ ಕಾಂ ಸುದದಿ.ಕುಂದಾಪುರ: ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ, ವಿದ್ಯಾರ್ಥಿಗಳಲ್ಲಿ ಸಂವೇದನಾ ಶೀಲತೆಯನ್ನು ಬೆಳೆಸಬೇಕಾಗಿರುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳನ್ನು ಆಂತರಿಕವಾಗಿ ಮತ್ತು ಭಾವನಾತ್ಮಕವಾಗಿ ಗಟ್ಟಿಗೊಳಿಸಲು ಸಾಹಿತ್ಯದ ಓದು ಮತ್ತು ಬರವಣಿಗೆ ಉಪಯೋಗಕಾರಿ. ಸಾಹಿತ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ತೊಡಗಿಕೊಂಡರೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಹಾಗೂ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಬೆಳ್ವೆ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ (53) ಅವರು ರಕ್ತಸಿಕ್ತ ವಾಂತಿ ಮಾಡಿ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮನೆಯ ಕೋಣೆಯಲ್ಲಿ ಮಲಗಿದ್ದ ಅವರು ರಕ್ತಸಿಕ್ತ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೇ ಅವರನ್ನು ಬೆಳ್ವೆ ಸರಕಾರಿ  ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಸ್ತಾನ ಟೋಲ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನ ಟೋಲ್ ಅಸಿಸ್ಟಂಟ್ ಮ್ಯಾನೇ ಜರ್ ಆಗಿ ಕೆಲಸ ಮಾಡುತ್ತಿರುವ ಯೋಗೀಶ್ ಕುಮಾ‌ರ್ (42) ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಸ್ಸೊಂದು ಟೋಲ್ ಪಾವತಿಸುತ್ತಿದ್ದ ಸಂದರ್ಭ ಅದರ ಹಿಂದೆ ಕಾರಿನಲ್ಲಿ ಇದ್ದ ವ್ಯಕ್ತಿಗಳು ದಾಂಧಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ವೆಂಕಟೇಶ ಪ್ರಸಾದ್ ಎಂಬಾತ ಕೂಗಾಡುತ್ತಾ ಟೋಲ್ ಬ್ಯಾರಿಯರ್‌ಗೆ ಕಾಲಿನಿಂದ ಒದ್ದಿದ್ದಾನೆ. ಅಲ್ಲದೆ ಅಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ದೂಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ ಕಾರಿನಲ್ಲಿದ್ದ ವಿನಾಯಕ್ ಎಂಬಾತ ಕಬ್ಬಿಣದ ರಾಡ್ ಹಿಡಿದು ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪಕ್ಕಕ್ಕೆ ಸರಿದ ಕಾರಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಚಾಲಕನ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಲಾರಿಯ ಟಯರ್ ಸಿಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು ಲಾರಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದ ಸಂದರ್ಭದಲ್ಲಿ ಎದುರಿನಿಂದ ಯಾವುದೇ ವಾಹನಗಳು ಬಾರದ ಕಾರಣ ದೊಡ್ಡ ಅಪಘಾತ ತಪ್ಪಿದಂತಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, 10 ವರ್ಷಗಳ ನಂತರ ಇತ್ತೀಚೆಗಷ್ಟೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿ (44) ವಿರುದ್ಧದ ಆರೋಪ ಸಾಬೀತಾಗಿದೆ. ವರದಕ್ಷಿಣೆ ಕಿರುಕುಳಕ್ಕಾಗಿ ಆತನಿಗೆ ಕುಂದಾಪುರ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶಿಸಿದೆ. ತಲೆಮರೆಸಿಕೊಂಡಿದ್ದ ಈತನನ್ನು ಮಾ.1 ರಂದು ಪಶ್ಚಿಮ ಬಂಗಾಳದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ► ಕುಂದಾಪುರ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ► https://kundapraa.com/?p=96365 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಯಕ್ಷಗಾನ ಗೊಂಬೆ ಆಟವು ಕರಾವಳಿ ಭಾಗದ ಆಕರ್ಷಕ ಕಲೆಯಾಗಿದ್ದು, ಪಪೆಟ್ (ಗೊಂಬೆ)ಗಳ ಮೂಲಕ ಯಕ್ಷಗಾನದ ಕಥಾವಸ್ತುಗಳನ್ನು ಪ್ರದರ್ಶಿಸುವ ಕಲಾರೂಪಕವಾಗಿದೆ. ಈ ಕಲೆ ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಪರಿಚಯಿಸುವ ಮಹತ್ವದ ಮಾಧ್ಯಮ ಎಂದರು. ಯಕ್ಷಗಾನ ಗೊಂಬೆ ಆಟಕ್ಕೆ ಸುಮಾರು 300 ರಿಂದ 400 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಪುರಾತನ ಕಾಲದಲ್ಲಿ ಜನರಿಗೆ ರಾಮಾಯಣ, ಮಹಾಭಾರತ ಹಾಗೂ ಪುರಾಣಗಳ ಕಥೆಗಳನ್ನು ಸುಲಭವಾಗಿ ತಲುಪಿಸಲು ಈ ಕಲೆಯನ್ನು ಬಳಸಲಾಗುತ್ತಿತ್ತು. ಈ ಗೊಂಬೆಗಳನ್ನು ಸಾಮಾನ್ಯವಾಗಿ ಮರ, ಬಟ್ಟೆ ಮತ್ತು ಚರ್ಮದಿಂದ ತಯಾರಿಸಲಾಗುತ್ತದೆ. ಕಲಾವಿದರು ಬಿದಿರಿನ ಕಡ್ಡಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.  ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗಧಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದ್ರಿರವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ…

Read More