ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್ ಅವರ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ರಾಜ್ಯ ಎರಡನೇ ಬಿಎಸ್‌ಸಿ ಟ್ರೋಫಿಯ ಸಮಾರೋಪ ಸಮಾರಂಭವು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ಶೆಟ್ಟಿ, ಇವರುಗಳು ಉಪಸ್ಥಿತರಿದ್ದು, ವಿಜೇತರಿಗೆ ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ಟ್ರಾಫಿಗಳನ್ನು ನೀಡಿ ಶುಭಕೋರಿದರು ಹಾಗೂ ಬ್ರಹ್ಮಾವರ ಸ್ಫೋರ್ಟ್ಸ್ ಕ್ಲಬ್ಬಿನ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನ ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಬಿಜು ಜಿ. ನಾಯರ್ ಅವರು ವಹಿಸಿ, ಸರ್ವರನ್ನು ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಎಂ. ಚಂದ್ರಶೇಖರ್ ಹೆಗ್ಡೆ ಮತ್ತು ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರು , ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಷನ್, ಅಧ್ಯಕ್ಷ ಉಮಾನಾಥ ಠಾಕೂರ್, ಮುಖ್ಯ ತೀರ್ಪುಗಾರರಾಗಿ ಸಾಕ್ಷಾತ್ ಯು.ಕೆ. ಅವರುಗಳು ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ಅನಿಶ್ ಎಸ್. ಸಿ. ಉಡುಪಿ, ಮೂಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಂಜುಮನ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಧನ್ಯ ಯು. (ಚರ್ಚಾ ಸ್ಪರ್ಧೆ ಪ್ರಥಮ), ಝುವೈನಾ ಯೂಸುಫ್ (ಗಜಲ್ ಪ್ರಥಮ) ಪ್ರಾರ್ಥನಾ ಪೈ (ಸಂಸ್ಕೃತ ಭಾಷಣ ದ್ವಿತೀಯ) ಅದಿತಿ ಖಾರ್ವಿ (ಭರತನಾಟ್ಯ ದ್ವಿತೀಯ) ಮತ್ತು ಆಯಿಷಾ ನಿಫಾ (ಉರ್ದು ಭಾಷಣ ತೃತೀಯ) ಬಹುಮಾನಗಳನ್ನು ಪಡೆದಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಭೋದಕ ಬೋಧಕೇತರ ಬಳಗವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಯಣ: ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ. ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಮದರ್ ತೆರೇಸಾ ಶಾಲೆಯ 8ನೇ ತರಗತಿಯ ಅತ್ಯುತ್ತಮ ಚಂಡೆ ಹಾಗೂ ಕೊಳಲು ವಾದಕ ಪನ್ನಗ ಕೆ. ಆರೂರು ಅವರು ಪ್ರಶಸ್ತಿ ಪಡೆದಿದ್ದಾರೆ. ಕೋಟ ಕಾರಂತ ಥೀಮ್ ಪಾರ್ಕಿನಲ್ಲಿ ಇದೇ ದಿನಾಂಕ 30 ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಲಿರುವ ಈ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ, ಅವರು ಆಯೋಜಿಸಿದ ಜಿಲ್ಲಾ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಇಲ್ಲಿನ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸಂಸ್ಥೆಯ ವಿದ್ಯಾರ್ಥಿನಿ ಶ್ರಿಯಾ ಕೆ. (7ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಜನತಾ ಸಮೂಹ ಸಂಸ್ಥೆಗಳ ಶಿಕ್ಷಕ/ ಶಿಕ್ಷಕಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಹೆಮ್ಮೆಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿಯನ್ನು ಒಳಗೊಂಡ ಭಾರತೀಯ ಮಹಿಳಾ ರಾಷ್ಟ್ರೀಯ ತಂಡವು ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ದ್ವಿತೀಯ ಮಹಿಳಾ ಕಬಡ್ಡಿ ವಿಶ್ವಕಪ್-2025ರಲ್ಲಿ ಅಪ್ರತಿಮ ಪ್ರದರ್ಶನ ಮೂಲಕ ಕಿರೀಟ ಮುಡಿಗೇರಿಸಿಕೊಂಡು ದೇಶದ ಕೀರ್ತಿಯನ್ನು ಮತ್ತಷ್ಟು ಎತ್ತರಿಸಿದೆ. ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು 35–28 ಅಂಕಗಳಿಂದ ಸೋಲಿಸಿದ ಭಾರತ ಮಹಿಳಾ ತಂಡವು ಜಾಗತಿಕ ಕಬಡ್ಡಿ ಚಾಂಪಿಯನ್ಸ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ದಕ್ಷಿಣ ಭಾರತದ ಏಕೈಕ ಆಟಗಾರ್ತಿ ಧನಲಕ್ಷ್ಮೀ, ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬ ಹಿರಿಮೆಯೊಂದಿಗೆ, ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿ ಮೂಡಿಬಂದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ತಮ್ಮ ಶಿಕ್ಷಣವನ್ನು ಪೂರೈಸಿದ್ದರು. ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರ ಸ್ಮರಿಸಲಾಗಿದೆ. ಆಳ್ವಾಸ್‌ನ ಕ್ರೀಡಾ ದತ್ತು ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸನ್ಮಾನ್ಯ ಪ್ರಧಾನಮಂತ್ರಿ ಅವರು ನವೆಂಬರ್ 28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸನ್ಮಾನ್ಯ ಭಾರತದ ಪ್ರಧಾನಮಂತ್ರಿಯವರು ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಠಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28ರಂದು ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಠನ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಕಾರ್ಯಕ್ರಮ-ಗೀತೋತ್ಸವದಲ್ಲಿ ಭಾಗವಹಿಸಲಿದ್ದು, ಭೇಟಿ ಸಂದರ್ಭದಲ್ಲಿ ಭದ್ರತೆಗೆ ಅಗತ್ಯವಿರುವ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ, ರಸ್ತೆಯಲ್ಲಿ ಹಾಗೂ ಮತ್ತಿತರ ಕಡೆಗಳಲ್ಲಿ ಸಿ.ಸಿ.ಟಿವಿ ಅಳವಡಿಸಬೇಕು. ಅನಧಿಕೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಯ್ಯಂಗರ್ ಎಂಬಲ್ಲಿ ನಿರ್ಮಾಣಗೊಂಡಿರುವ ಬಿಎಸ್‌ಎನ್‌ಎಲ್ ಟವರ್‌ನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಟವರ್ ಆರಂಭದಿಂದ ಹಯ್ಯಂಗರ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಮೊಬೈಲ್ ಸಂಪರ್ಕ ಹಾಗೂ ಡಿಜಿಟಲ್ ಸೇವೆಗಳ ಸುಲಭ ಲಭ್ಯತೆ ಸಿಗಲಿದೆ. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ., ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗೆ ಸ್ಟ್ರೆಸ್ ಮ್ಯಾನೇಜ್ಮೆಂಟ್ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಗಾರದಲ್ಲಿ ಜೀವನ ಕೌಶಲ್ಯ ತರಬೇತುದಾರ ಜೈಕಿಶನ್ ಭಟ್ ಅವರು ಮಾತನಾಡಿ, “ಒತ್ತಡರಹಿತ ಮನಸ್ಥಿತಿಯಿಂದಷ್ಟೇ ಉತ್ತಮ ಗುಣಮಟ್ಟದ ಫಲಿತಾಂಶ ಸಾಧ್ಯ.” ಎಂದು ಹೇಳುವುದರೊಂದಿಗೆ ಒತ್ತಡದ ಕಾರಣಗಳು, ಸಮಯ ನಿರ್ವಹಣೆ ಮತ್ತು ಧನಾತ್ಮಕ ಚಿಂತನೆಯ ಮಹತ್ವ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದದ ಜೊತೆಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು. ಅಂತಿಮ ಬಿಸಿಎ 120 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮತ್ತು ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಉಪಸ್ಥಿತರಿದ್ದರು. ಕಾರ್ತಿಕ್ ಅತಿಥಿಗಳನ್ನು ಪರಿಚಯಿಸಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಾದ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿ, ಸಿಂಚನಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ವಚ್ಛ ಹಾಗೂ ಹಸಿರು ಪರಿಸರಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮಣೂರು ಚಿತ್ತಾರಿ ನಾಗಬ್ರಹ್ಮ ದೇಗುಲದ ಅಧ್ಯಕ್ಷ ಕೆ. ರಮೇಶ್ ಪ್ರಭು ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಮಣೂರು ಸಹಯೋಗದೊಂದಿಗೆ ದೇಗುಲದ ಆಡಳಿತ ಮಂಡಳಿಯ ಸಂಯೋಜನೆಯೊಂದಿಗೆ 280ನೇ ವಾರದ ಪರಿಸರಸ್ನೇಹಿ ಕಾರ್ಯಕ್ರಮದ ಅಂಗವಾಗಿ ಮಣೂರು ಶ್ರೀ ಚಿತ್ತಾರಿ ನಾಗಬ್ರಹ್ಮ ದೇಗುಲದ ವಾರ್ಷಿಕ ದೀಪೋತ್ಸವ ಸಲುವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಸ ವಿಲೇವಾರಿಯಲ್ಲಿ ಜನಸಾಮಾನ್ಯರು ಅರಿತು ಎಲ್ಲಂದರಲ್ಲಿ ಎಸೆಯದೆ ಸ್ಥಳೀಯಾಡಳಿತ ಘಟಕಕ್ಕೆ ನೀಡಬೇಕು, ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಿ ಪರಿಸರಕ್ಕೆ ಪೂರಕ ವಾತಾವರಣ ಕಲ್ಪಿಸಿ ಎಂದು ಕರೆ ಕೊಟ್ಟರು. ಈ ಸಂದರ್ಭದಲ್ಲಿ ಚಿತ್ತಾರಿ ದೇಗುಲ ಆಡಳಿತ ಮಂಡಳಿಯ ಗೋಪಾಲ್ ಪೈ, ನಿತ್ಯಾನಂದ ಪೈ, ಪಂಚವರ್ಣ ಪೂರ್ವಾಧ್ಯಕ್ಷ ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೆನರಾ ಬ್ಯಾಂಕ್‌ನ ಸ್ಥಾಪಕರಾದ ಅಮ್ಮೆಂಬಲ್ ಸುಬ್ಬ ರಾವ್ ಪೈ ಅವರ 173ನೇ ಜನ್ಮದಿನವನ್ನು ಆಚರಿಸಿಕೊಂಡು ಹಾಗೂ ಮೋಟಾರ್ ರಿವೈಂಡಿಂಗ್ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಉಡುಪಿ ಕೆನರಾ ಬ್ಯಾಂಕ್ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ಕೆನರಾ ಬ್ಯಾಂಕ್ ಮೂರನೇ ಸ್ಥಾನ ಪಡೆದುಕೊಂಡಿದೆ. ಸ್ವಉದ್ಯೋಗ ಮಾಡುವಂತ ಎಲ್ಲಾ ಶಿಬಿರಾರ್ಥಿಗಳಿಗೆ ಕೆನರಾ ಬ್ಯಾಂಕು ಬೆನ್ನೆಲುಬಾಗಿ ಸಾಲ ಸೌಲಭ್ಯಗಳನ್ನು ಕೊಡುತ್ತದೆ. ಜೊತೆಗೆ ತೆಗೆದುಕೊಂಡ ಸಾಲವನ್ನು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿದರೆ ಯಾವುದೇ ರೀತಿಯ ತೊಂದರೆಗಳು ಉದ್ಯಮದಲ್ಲಿ ಬರುವುದಿಲ್ಲ ಎಂದರು. ಅದೇ ರೀತಿ ಕೆನರಾ ಬ್ಯಾಂಕ್‌ನ ಸ್ಥಾಪಕರಾದ ಅಮ್ಮೆಂಬಲ್ ಸುಬ್ಬ ರಾವ್ ಪೈ ಅವರ ಸಾಮಾಜಿಕ ಕಳಕಳಿಯನ್ನು ಹಾಗೂ ಬ್ಯಾಂಕಿನ ಸ್ಥಾಪನೆಯಿಂದಾಗಿ ಸಾವಿರಾರು ಮಂದಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿರುವುದು ಅಸಾಧಾರಣ ಸಾಧನೆಯನ್ನು ಕೊಂಡಾಡಿದರು. ಹಾಗೆಯೇ ಬ್ಯಾಂಕಿನ ಹೆಚ್ಚಿನ…
