ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ(ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ.25 ರಷ್ಟು ಮೊತ್ತವನ್ನು ಪಾವತಿಸಿ, ಯೋಜನೆಯಡಿ ನೋಂದಾಯಿಸಿಕೊಂಡು 2026 ರ ಮೇ 1 ರಿಂದ ಜುಲೈ 31 ರವರೆಗೆ ಬಾಕಿ ಉಳಿದ ಪೂರ್ಣ ಮೊತ್ತವನ್ನು ಪಾವತಿಸಿ ಸರ್ಕಾರದ ಒಟಿಎಸ್ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ನಿಗದಿತ ಸಮಯದಲ್ಲಿ ಸಾಲವನ್ನು ಪಾವತಿಸದಿದ್ದಲ್ಲಿ ನಿಗಮದ ನಿಯಮಾವಳಿಯಂತೆ ಮರುಪಾವತಿಸಿದ ಮೊತ್ತವನ್ನು ಸಾಲದ ಖಾತೆಗೆ ಸರಿಹೊಂದಿಸಲಾಗುವುದು. ಒ.ಟಿ.ಎಸ್ ಬಡ್ಡಿಯನ್ನು ಮನ್ನಾ ಯೋಜನೆ ಅಪೇಕ್ಷಿಸುವ ಫಲಾನುಭವಿಗಳು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ots-repayment ಮೂಲಕ ಅಥವಾ ನಿಗಮದ ಕಚೇರಿಯಾದ ಮೌಲಾನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ.17 ಕೊನೆಯ ದಿನ, ಜೂ.19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೇ.26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಇದರಿಂದ ರೋಗ ರುಜಿನಗಳು ಹರಡದಂತೆ ತಡೆಯಲು ಸಾಧ್ಯ ಎಂದ ಅವರು, ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕ್ಷೇತ್ರ ವ್ಯಾಪ್ತಿಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಪ್ರವರ್ಗ ಎ, ಬಿ ಹಾಗೂ ಸಿ ವರ್ಗದ ದೇವಸ್ಥಾನಗಳ ಮುಖ್ಯಸ್ಥರುಗಳೊಂದಿಗೆ ದೇವಸ್ಥಾನಗಳ ಜಲ ಮೂಲಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಕ್ಷೇತ್ರ ವ್ಯಾಪ್ತಿಯ ದೇವಸ್ಥಾನಗಳ ವಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಅನ್ವೇಷಣೆಯೊಂದಿಗೆ ದೇವಸ್ಥಾನ, ಊರಿನ ಹಾಗೂ ಸರಕಾರದ ಸಹಕಾರದೊಂದಿಗೆ ಹಾಗೂ ಸರಕಾರೇತರ ಸಂಸ್ಥೆಗಳ ಸಹ ಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವುದರ ಮೂಲಕ ಗ್ರಾಮಗಳ ಜಲ ಮೂಲಗಳನ್ನು ಬಲ ಪಡಿಸುವ ಉದ್ದೇಶದೊಂದಿಗೆ ಈ ಸಭೆಯನ್ನು ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಅವಶ್ಯಕ ಇರುವ ದೇವಸ್ಥಾನಗಳ ಸಂಬಂಧಪಟ್ಟ ಎಲ್ಲಾ ಕೆರೆಗಳ ಸರ್ವೇ ಮೂಲಕ ಕೆರೆಗಳ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ರೂಪು ರೇಷೆ ಹಾಕಿ ಕೊಳ್ಳಲಾಗುವುದು ಎಂದರು. ದೇವಸ್ಥಾನಗಳ ಹೆಸರಿಗೆ ಆರ್ ಟಿಸಿ ದಾಖಲೆ ವರ್ಗಾವಣೆಗೆ…
ಕುಂದಾಪ್ರ ಡಾಟ್ ಕಾಂ ಸದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2026ರ ಜೂನ್.12 ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಅರುಣಾಚಲಂ ಕಾಲುಸಂಕ ಯೋಜನೆಯಲ್ಲಿ ಬೆಂಗಳೂರಿನ ಸಮ್ಯತ ಫೌಂಡೇಶನ್ ಇವರ ಸಹಕಾರದಿಂದ ಇಂಡಸ್ಟ್ 555 ಟಿಎಂಟಿ ಇವರ ಸಿಎಸ್ಆರ್ ನಿಧಿಯಿಂದ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾಕೋಡು ಎಂಬಲ್ಲಿ ಎಸ್. ಆರ್. ಸತಾನಂತಮ್ ಕಾಲು ಸಂಕದ ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಿಎಸ್ಆರ್ ಅನುದಾನದಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳು ಆಯೋಜನೆಯಾಗುತ್ತಿದ್ದು ಈ ಕಾಲು ಸಂಕವನ್ನು ಕೊಡುಗೆಯಾಗಿ ನೀಡಿದ ಇಂಡಸ್ 555 ಟಿಎಂಟಿ ಸಂಸ್ಥೆಯ ಮಾಲಕರಾದ ಎಸ್.ಎಸ್ ಶ್ರೀಕಾಂತ್ ಹಾಗೂ ಸಹಕಾರಿಸಿದ ಸಮ್ಯತ ಫೌಂಡೇಶನ್ ಸ್ಥಾಪಕರಾದ ಮುರುಳಿ ಅವರಿಗೆ ಶಾಸಕರು ಧನ್ಯವಾದವನ್ನು ತಿಳಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಸಿಎಸ್ಆರ್ ನಿಧಿಯ ಸದ್ಬಳಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು ಕಾರ್ಯಕರ್ತರ ಸಹಕಾರದಿಂದ ಇವೆಲ್ಲವೂ ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಲಚಂದ್ರ ಭಟ್ ಹಾಗೂ ಪ್ರವೀಣ್ ಶೆಟ್ಟಿ ಕೊಡ್ಲಾಡಿ ಶುಭ ಆಶಿಸಿದರು. ಗ್ರಾಮ ಪಂಚಾಯತ್ ನಿಕಟ ಪೂರ್ವ ಸದಸ್ಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಡಾ. ಕಾರಂತ ಥೀಂ ಪಾರ್ಕ್ನಲ್ಲಿ ಯಕ್ಷಾಂತರಂಗ ವ್ಯವಸಾಯೀ ಯಕ್ಷ ತಂಡ ಕೋಟ ನೇತೃತ್ವದಲ್ಲಿ ಉಚಿತ ಯಕ್ಷಗಾನ ತರಬೇತಿ ಕೇಂದ್ರದ 2025-26ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಜರಗಿತು. ಕಾರ್ಯಕ್ರಮವನ್ನು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಮಾತನಾಡಿ, ನಮ್ಮ ನಾಡಿನ ಹಿರಿಯರು ಕಂಡು ಹಿಡಿದು ಪೋಷಿಸಿಕೊಂಡು ಬಂದ ಯಕ್ಷಗಾನದಂಥಾ ಶ್ರೇಷ್ಟ ಕಲೆಯ ಪರಿಚಯ ಮಾಹಿತಿಗಳನ್ನು ಇಂದಿನ ಯುವ ಜನತೆ, ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಅಗತ್ಯವಾಗಿದೆ, ಇಂತಹ ಕಾರ್ಯಗಳನ್ನು ಯಕ್ಷಾಂತರಂಗ ಸಂಸ್ಥೆ ಅವರು ಉಚಿತ ತರಬೇತಿ ಕೇಂದ್ರದ ಮೂಲಕ ಈ ಕಾರಂತ ಥೀಂ ಪಾರ್ಕ್ನಲ್ಲಿ ಹನ್ನೊಂದು ವರ್ಷಗಳಿಂದ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದರಲ್ಲದೆ ಡಾ. ಕಾರಂತರ ಸಾಮಿಪ್ಯದ ಶಿಷ್ಯರಲ್ಲೋರ್ವ ಚಿತ್ರಪಾಡಿ ಕೃಷ್ಣಮೂರ್ತಿ ಉರಾಳರ ನೇತೃತ್ವದಲ್ಲಿ ನಡೆಸಲ್ಪಡುತ್ತಿರುವ ಈ ಕಾರ್ಯ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭವನ್ನು ಹಾರೈಸಿದರು. ಈ ವೇಳೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025-26ರ ಸಾಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮುಂಗಾರು ಮಳೆಗಾಲದಲ್ಲಿ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅಗತ್ಯ ರೀತಿಯ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾನವ ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯಗಳು ಹಾಗೂ ಇತರೆ ಯಾವುದೇ ರೀತಿಯ ಹಾನಿಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ಮುಂಗಾರು ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ ರಸ್ತೆಗಳು, ಹಾಳಾಗಿ ಜನರ ಸುಗಮ ಸಂಚಾರಕ್ಕೆ ವ್ಯತ್ಯಯ ವಾಗದಂತೆ ಕ್ರಮವಹಿಸಬೇಕು. ಕಾಲುಸಂಕಗಳ ಬಳಕೆಯ ಸಂದರ್ಭದಲ್ಲಿ ಜಾರಿಬಿದ್ದು, ಅನಾಹುತಗಳು ಆಗದಂತೆ ಕ್ರಮವಹಿಸಬೇಕು. ಈಗಿನಿಂದಲೇ ಜಂಗಲ್ ಕ್ಲಿಯರೆನ್ಸ್ ಮಾಡುವುದರೊಂದಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ದಳಿ ಎಂಬಲ್ಲಿ ಜೀಪು ಹಾಗೂ ಇನ್ಸುಲೆಟರ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಕೇರಳದ ಪ್ರವಾಸಿಗರು ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಕೊಡಚಾದ್ರಿಯಿಂದ ಕೊಲ್ಲೂರಿಗೆ ಹಿಂದಿರುಗುತ್ತಿದ್ದ ಜೀಪಿನಲ್ಲಿ ಮಕ್ಕಳು, ಚಾಲಕ ಸೇರಿದಂತೆ 10 ಮಂದಿ ಪ್ರಯಾಣಿಸುತ್ತಿದ್ದು, ಕೊಲ್ಲೂರು ಕಡೆಯಿಂದ ನಾಗೋಡಿ ಘಾಟಿಯತ್ತ ಸಾಗುತ್ತಿದ್ದ ಇನ್ಸುಲೆಟರ್ ವಾಹನದ ನಡುವೆ ಅಪಘಾತದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಪ್ ಎಂಬುವವರು ಮೃತಪಟ್ಟಿದ್ದಾರೆ. ಜೀಪು ಚಾಲಕ ಸೇರಿದಂತೆ ಗಾಯಗೊಂಡ ಇತರರನ್ನು ಕುಂದಾಪುರ ಹಾಗೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಕೇರಳದ ಪ್ರವಾಸಿಗರಾಗಿದ್ದು ಕೊಲ್ಲೂರಿನಿಂದ ಸ್ಥಳೀಯ ಜೀಪ್ ಮೂಲಕ ಕೊಡಚಾದ್ರಿಗೆ ತೆರಳಿ ಹಿಂದಿರುಗುವ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೊಲ್ಲೂರು ಠಾಣೆ ಪಿಎಸ್ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇನ್ಸುಲೇಟರ್ ವಾಹನ ಚಾಲಕ ಪರಾರಿಯಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…
