ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನಾಡ ಗ್ರಾಮದ ನಿವಾಸಿ ಸೂಲ್ಯಣ್ಣ ಶೆಟ್ಟಿ ಅವರ ಪುತ್ರ ಸುಧಾಕರ ಶೆಟ್ಟಿ ಗುರುವಾರ ಸಂಜೆ ವಂಡ್ಸೆ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಈತ ವರ್ಷದ ಹಿಂದೆ ಊರಿಗೆ ಬಂದಿದ್ದರು. ಹೆಂಡತಿ ಮನೆಯಾದ ವಂಡ್ಸೆಯಲ್ಲಿ ನೆಲೆಸಿದ್ದರು. ಗುರುವಾರ ಸಂಜೆ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ನನ್ನ ಬಾವ ನಾಗರಾಜ ಮತ್ತು ಹೆಂಡತಿ ಗುಣರತ್ನ ತೊಂದರೆ ನೀಡುತ್ತಿದ್ದು, ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದು ನಂತರ ಬೈಕ್ನಲ್ಲಿ ವಂಡ್ಸೆ ಸೇತುವೆ ಬಳಿ ಹೋಗಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ. ಈತನ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು 3 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ದಾಖಲಾಗಿರುವ 3 ಪ್ರಕರಣಗಳ ಪೈಕಿ ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ. ಉಳಿದ ಎರಡು ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿವೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ (ಮೇ.14) ಈ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ. ಅದರಂತೆ ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ 2026-28ನೇ ಅವಧಿಗೆ ಅಧ್ಯಕ್ಷರಾಗಿ ಆರ್. ರೇಣುಕುಮಾರ್, ಉಪಾಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಶೋಭಾ ಗೌಡ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ, ಖಜಾಂಚಿಯಾಗಿ ಎಂ. ಆಶಾಲತಾ, ಜಂಟಿ ಕಾರ್ಯದರ್ಶಿಯಾಗಿ ಜೆ. ಸಂತೋಷ, ಬಿ. ಎಸ್.ಅಶ್ವಿನಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪೂಜಾ ಪಿ.ರಾವ್, ಎಂ.ಶಿವಪ್ಪ, ಡಾ. ವೆಂಕಟಾಚಲ ಜಿ. ಹೆಗಡೆ, ಡಾ. ಎಂ. ಎಸ್. ಶಶಿಕುಮಾರ್, ಬಿ. ನಾರಾಯಣ, ಎಂ. ಕೃಷ್ಣಪ್ಪ, ಬಿ.ಕೆ. ಜಯಶ್ರೀ, ಬಸವರಾಜು, ಶುಭ ದೇವಿ ಪ್ರಸಾದ್ ಅವರು ದೆಹಲಿ ಕರ್ನಾಟಕ ಸಂಘದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ದೆಹಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಕಾಸರಗೋಡು ಕನ್ನಡ ಗ್ರಾಮದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026- ಕೇರಳ- ಕರ್ನಾಟಕ ಉತ್ಸವ ಸಮಿತಿ, ಕೇರಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಆರ್ಟಿಓ ಅಧಿಕಾರಿ ಮಾರುತಿ ನಾಯ್ಕ್, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಸಿಬ್ಬಂದಿಗಳು, ಐ.ಆರ್.ಬಿ ಸಂಸ್ಥೆಯ ಮನೋಜ್ ಮೊದಲಾದವರು ತ್ರಾಸಿ – ಮರವಂತೆ ಬೀಚ್ ಬಳಿ ಪರಿಶೀಲನೆ ನಡೆಸಿ ಹೆದ್ದಾರಿ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಸೂಚನೆ ನೀಡಿದ್ದರು. ಅದರಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. ತಾಲೂಕಿನ ತ್ರಾಸಿ – ಮರವಂತೆ ಬೀಚ್ ಬಳಿ ಎ.29 ರಂದು ಪ್ರವಾಸಿ ಬಸ್ವೊಂದು ನಿಂತಿದ್ದ ಟ್ಯಾಂಕರ್ ಹಾಗೂ ಟ್ರಕ್ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಆ ಬಳಿಕ ಜಂಟಿ ಪರಿಶೀಲನೆ ನಡೆಸಲಾಗಿತ್ತು. ರಾ.ಹೆ–66ರ ತ್ರಾಸಿ ಮರವಂತೆ ಮಧ್ಯೆ ನೋ ಪಾರ್ಕಿಂಗ್, ಅಪಘಾತ ವಲಯ ಸೂಚಕ ನಾಮಫಲಕಗಳು, ವಾಹನಗಳ ವೇಗ ಮಿತಿ ಸಂಬಂಧಿತ ಸೂಚನೆಗಳು, ರಿಫ್ಲೆಕ್ಟರ್ʼಗಳನ್ನು ಅಳವಡಿಸಲಗಿದೆ. ವಾಹನ ಸವಾರರ ಸುರಕ್ಷತೆ ಹಾಗೂ ಅಪಘಾತ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗುತ್ತಿಗೆ ಸಂಸ್ಥೆ ಅಗತ್ಯ ಕ್ರಮವಹಿಸಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಳ್ಕೂರು ಗ್ರಾಮದಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಕೂರಿನ ನಿವಾಸಿ ರಾಜು (47) ಮೃತರು. ಅವರು ಕಳೆದ ಒಂದೂವರೆ ತಿಂಗಳಿನಿಂದ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮೇ.13 ರಂದು ಅಸ್ವಸ್ಥತೆಯಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಪತ್ನಿ ಶಕುಂತಲಾ ತಾಯಿ ಮನೆಗೆ ತೆರಳಿದ್ದು, ರಾಜು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ಸಂಜೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ಅಶುತೋಷ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಲವಜೋತ್ ಸಿಂಗ್ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಾದ್ಯಂತ ಮೇ.3ರಂದು ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಶ್ ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ. ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಅನೀಶ್ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಎಂ.ಎಸ್ಸಿ (ಮೈಕ್ರೋಬಯಾಲಜಿ) ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಬಳ್ಳೂರು ಗ್ರಾಮದ ರೂಪಾ ಅವರು ಪ್ರಥಮ ರ್ಯಾಂಕ್ ಪಡೆಯುವುದರ ಜೊತೆಗೆ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಕೂರು ನಿವಾಸಿಗಳಾದ ಗೋಪಾಲ ಪೂಜಾರಿ ಹಾಗೂ ಯಶೋಧ ಪೂಜಾರ್ತಿ ದಂಪತಿಯ ಪುತ್ರಿಯಾಗಿರುವ ರೂಪಾ ಅವರು ಹುಟ್ಟಿನಿಂದಲೇ ವಿಕಲಚೇತನರಾದರೂ ವಿಜ್ಞಾನದಂತಹ ಕಠಿಣ ವಿಷಯದಲ್ಲಿ ಈ ಅತ್ಯುನ್ನತ ಸಾಧನೆ ಮಾಡಿರುವುದು ರಾಜ್ಯಕ್ಕೇ ಮಾದರಿಯಾಗಿದೆ. ಗ್ರಾಮೀಣ ಭಾಗದ ಪ್ರತಿಭೆಯಾಗಿರುವ ರೂಪಾ ಅವರ ಶೈಕ್ಷಣಿಕ ಸಾಧನೆಯ ಹಾದಿಯು ಪ್ರಾಥಮಿಕ/ಪ್ರೌಢ ಶಿಕ್ಷಣವನ್ನು ಬಸ್ರೂರು ಸರ್ಕಾರಿ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣವನ್ನು ಸರ್ಕಾರಿ ಪದವಿಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್), ಕು೦ದಾಪುರ, ಪದವಿಯನ್ನು ಕುಂದಾಪುರ ಭ೦ಡಾರ್ಕರ್ಸ್ ಕಾಲೇಜಿನಲ್ಲಿ ಮುಗಿಸಿ ಸೂಕ್ಷ್ಮ ಜೀವ ವಿಜ್ಞಾನದಂತಹ (ಮೈಕ್ರೋಬಯಾಲಜಿ) ಪ್ರಾಯೋಗಿಕ ಮತ್ತು ಕಠಿಣ ವಿಷಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಲುಬಾಯಿ ರೋಗವು ಜಾನುಬಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದ್ದು, ಮೇ.22ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಾನುವಾರುಗಳಿಗೆ ವೈರಾಣುವಿನಿಂದ ಹರಡುವ ಈ ರೋಗ ತಡೆಗೆ ಲಸಿಕೆಯೊಂದೇ ಪರಿಹಾರವಾಗಿದ್ದು, ರೈತರುಗಳು ನಿರ್ಲಕ್ಷಯ ವಹಿಸದೇ ತಪ್ಪದೇ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಜಾನುವಾರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ವಾಷಿಂಗ್ಟನ್ ಡೀಸಿಯಲ್ಲಿರುವ ಪ್ರತಿಷ್ಠಿತ ವಾಷಿಂಗ್ಟನ್ ಎಡ್ಡೆಂಟಿಸ್ಟ್ ಯುನಿವರ್ಸಿಟಿಯ 111ನೇ ಪದವಿ ಪ್ರದಾನ ಸಮಾರಂಭದಂದು ಮೆರಿಲ್ಯಾಂಡ್ ನಿವಾಸಿ ಉದ್ಯಮಿ, ಸಾಧಕ ಆನಂದ ಪೂಜಾರಿ ಅವರಿಗೆ ‘ಡಾಕ್ಟರ್ ಆಫ್ ಹೂಮನ್ ಲೆಟರ್ಸ್’ ಗೌರವ ಪದವಿಯನ್ನು ನೀಡಿ ಗೌರವಿಸಲಾಯಿತು. ಆರಂಭದಲ್ಲಿ ಪ್ರಾಸ್ತಾವಿಕವಾಗಿ ‘ಬ್ಯುಸಿನೆಸ್ ಎಂಡ್ ಕಮುನಿಟಿ ಸರ್ವಿಸೆಸ್’ನಲ್ಲಿ ಸಮಾಜಕ್ಕೆ ಅಸಾಧರಣ ಕೊಡುಗೆ ನೀಡಿದ ಸಾಧಕರಿಗೆ ಈ ಗೌರವ ಡಾಕ್ಟರೇಟ್ ಗೌರವವನ್ನು ನೀಡಲಾಗುತ್ತದೆ ಎಂದು ಉದ್ಯೋಷಕ ಚೆರ್ಲಿ ಕಿಸುಂಝು ಹೇಳಿದರು. ವಿಶ್ವವಿದ್ಯಾಲಯದ ಅಧ್ಯಕ್ಷರಾದ ವೇಯಮೌತ್ ಸ್ಟೆನ್ಸ್ ಅವರು, ಆನಂದ ಪೂಜಾರಿ ಅವರ ಹೊಟೇಲು ಮತ್ತು ಆತಿಥ್ಯ ಉದ್ಯಮದಲ್ಲಿ ವೃತ್ತಿಪರ ಸೇವೆ; ಸರಕಾರದ ರಾಜತಾಂತ್ರಿಕ ಸಂಸ್ಥೆಗಳೊಂದಿಗಿನ ಸೌಹಾರ್ದಪೂರ್ಣ ವೈಯಕ್ತಿಕ ಬಾಂದವ್ಯ ಮತ್ತು ತಮ್ಮ ವಿವಿಧ ಉದ್ಯಮದ ಮೂಲಕ ನೂರಾರು ಉದ್ಯೋಗಗಳನ್ನು ಸೃಷ್ಟಿ ಮಾಡಿರುವುದಲ್ಲದೆ, ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಸೇವಾ ವಲಯದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿ ಆನಂದ ಪೂಜಾರಿ ಅವರನ್ನು ಅಭಿನಂದಿಸಿ, ನೆರೆದ ವಿದ್ಯಾರ್ಥಿಗಳು, ಅವರ ಪರಿವಾರದವರು…
