Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಸಂಘಟನೆಗೆ ಪರಿಸರ ಕಾಳಜಿಯ ಕಾರ್ಯಕ್ರಮವನ್ನು ಗುರುತಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದ.ಕ ಮತ್ತು ಉಡುಪಿ ಜಿಲ್ಲೆ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ ಸದಾ ಪರಿಸರಸ್ನೇಹಿ ಆಂದೋಲನ, ಜಾಗೃತಿ, ಕಾರ್ಯಕ್ರಮಗಳ ಮೂಲಕ ಮನೆಮಾತಾದ ಕೋಟದ ಪಂಚವರ್ಣ ಸಂಘಟನೆಯ ಕಾರ್ಯವೈಖರಿಯನ್ನು ಗುರುತಿಸಿ ಸೋಮವಾರ ರಾಜ್ಯ ಸರಕಾರದ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪಂಚವರ್ಣದ ಪರವಾಗಿ ಸಂಘದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರಕಾಲೇಜು ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ 19ನೇ ಬಾರಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಸೆಮಿಫೈನಲ್ ಹಂತದಲ್ಲಿ ಆಳ್ವಾಸ್ ಕಾಲೇಜು, ಉಜಿರೆಯ ಎಸ್‌ಡಿಎಮ್ ಕಾಲೇಜನ್ನು 3-0 ನೇರ ಸೆಟ್‌ಗಳಲ್ಲಿ ಸೋಲಿಸಿ ಫೈನಲ್‌ಗೆ ಅರ್ಹತೆ ಗಳಿಸಿತು. ಫೈನಲ್ ಪಂದ್ಯದಲ್ಲಿ ಆಳ್ವಾಸ್ ಕಾಲೇಜು, ಮಂಗಳೂರಿನ ಎಸ್‌ಡಿಎಂಬಿಬಿಎಂ ಕಾಲೇಜನ್ನು 3-0 ನೇರ ಸೆಟ್‌ಗಳಲ್ಲಿ ಸೋಲಿಸಿ,15ನೇ ಬಾರಿ, ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಸ್ಮಾರಕ ರೋಲಿಂಗ್ ಟ್ರೋಫಿಯನ್ನು ಪುರುಷರ ವಿಭಾಗದಲ್ಲಿ ಪಡೆದುಕೊಂಡಿತು. ಅಂತೆಯೇ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಮೂರನೇ ಸ್ಥಾನ ಪಡೆದುಕೊಂಡಿತು. ವಿಜೇತ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು”…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ ಪಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾ.ಹೆ 66 ಮತ್ತು 169ಎ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂತೆಕಟ್ಟೆ ಕಲ್ಯಾಣಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯನ್ನು ಹೆಚ್ಚುಸುವುದರೊಂದಿಗೆ ಶೀಘ್ರವಾಗಿ ಸಂಪೂರ್ಣ ಕಾಮಗಾರಿ ಮುಗಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅಂಬಲಪಾಡಿ ಜಂಕ್ಷನ್ ನಲ್ಲಿ ಫ್ಲೆö-ಓವರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದ ಅವರು ಕಾಮಗಾರಿಯಿಂದ ಗೋಪುರದ ಹತ್ತಿರ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಕಟಪಾಡಿಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾಡೋಜ ಡಾ. ಜಿ. ಶಂಕರ್‌ ಅವರ 70ನೇ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕುಂದಾಪುರ ಘಟಕದ ವತಿಯಿಂದ ಕುಂದಾಪುರದಲ್ಲಿರುವ ಲಕ್ಷ್ಮೀ ಸೋಮ ಬಂಗೇರ ಸ್ಮಾರಕ ತಾಲೂಕು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರ ಮರಕಾಲ, ವೈದ್ಯರಾದ ಡಾ. ನಾಗೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಿ. ಶಂಕರ್ ಅವರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಘಟಕ ಅಧ್ಯಕ್ಷ ನಾಗೇಶ್ ಮೊಗವೀರ ಹಳನಾಡು, ಮಾಜಿ ಜಿಲ್ಲಾಧ್ಯಕ್ಷ ಸದಾನಂದ್ ಬಳ್ಕೂರು, ಘಟಕದ ಕಾರ್ಯದರ್ಶಿ ಮಾಧವ, ಪಧಾಧಿಕಾರಿಗಳು, ಮಹಿಳಾ ಪಧಾಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು. ನಾಡೋಜರಿಗೆ ಶುಭಹಾರೈಸಿ ಕುಂದಾಪುರದ ಕುಂದೇಶ್ವರ ದೇವರಿಗೆ ರುದ್ರಭಿಷೇಕ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲುವಿನಲ್ಲಿ ನಡೆದಿದೆ. ಹೊಸಹಿತ್ಲು ಮಕ್ಕಿತಾರು ನಿವಾಸಿಗಳಾದ ಉದಯ ದೇವಾಡಿಗ ಎಂಬುವವರ ಪುತ್ರ ಆಶಿಶ್‌ ದೇವಾಡಿಗ (15), ಮಾರುತಿ ಪೂಜಾರಿ ಅವರ ಪುತ್ರ ಸೂರಜ್‌ ಪೂಜಾರಿ (16), ಸುಧಾಕರ ದೇವಾಡಿಗ ಅವರ ಪುತ್ರ ಸಂಕೇತ್‌ ದೇವಾಡಿಗ (18) ಮೃತ ದುರ್ದೈವಿಗಳು. ಆಶಿಶ್‌ ದೇವಾಡಿಗನ ಸಹೋದರ ಕೌಶಿಕ್‌ ದೇವಾಡಿಗ (18) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಸಂಜೆಯ ವೇಳೆಗೆ ಈಜಲು ತೆರಳಿದ್ದು, ಈ ವೇಳೆ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ ದಿಕ್ಕಾಪಾಲಾಗಿದ್ದಾರೆ. ಮೂವರು ನೀರಿನಲ್ಲಿ ಕೊಚ್ಚಿಹೋಗಿದ್ದರೇ, ಓರ್ವ ಹರಸಾಹಸಪಟ್ಟು ದಡಕ್ಕೆ ಸೇರಿಕೊಂಡಿದ್ದಾನೆ. ಮೃತಪಟ್ಟ ವಿದ್ಯಾರ್ಥಿಗಳಾದ ಆಶಿಶ್‌ ದೇವಾಡಿಗ ಕಿರಿಮಂಜೇಶ್ವರ ಹೈಸ್ಕೂಲಿನಲ್ಲಿ 9ನೇ ತರಗತಿ, ಸೂರಜ್‌ ಪೂಜಾರಿ 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೇ, ಸಂಕೇತ್‌ ದೇವಾಡಿಗ ಬೈಂದೂರು ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದರು. ನಾಲ್ವರು ಸ್ನೇಹಿತರು ಒಟ್ಟಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿ. ಇದರ ನಿರ್ದೇಶಕರಾಗಿ ಬೈಂದೂರಿನ ಭೀಮೇಶ್‌ ಕುಮಾರ್‌ ಎಸ್.‌ ಜಿ ಆಯ್ಕೆಯಾಗಿದ್ದಾರೆ. ಅವರು ಬೈಂದೂರಿನ ಕಾಮಾಕ್ಷಿ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭೀಮೇಶ್‌ ಅವರು ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದು, ಬೈಂದೂರಿನಲ್ಲಿ ಮಹಾವೀರ ಡೆವಲಪರ್ಸ್‌ ಮೂಲಕ ಮೊದಲ ಭಾರಿಗೆ ಮಹಾವೀರ ವಸತಿ ಸಮುಚ್ಛಯವನ್ನು ನಿರ್ಮಿಸಿದ್ದರು. ಇವರೊಂದಿಗೆ ಪುಣ್ಯಶ್ರೀ ಕನ್‌ಸ್ಟ್ರಕ್ಷನ್ಸ್‌ ಹಾಗೂ ಬನಶ್ರೀ ಪೆಟ್ರೋಲಿಯಂನ ಆಡಳಿತ ಪಾಲುದಾರರಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಠ್ಯಕ್ರಮದ ಚೌಕಟ್ಟಿಗೆ ಸೀಮಿತರಾಗದೆ, ಮೂಲ ವಿಜ್ಞಾನದಲ್ಲಿ ಲಭ್ಯವಿರುವ ವಿವಿಧ ಸಂಶೋಧನಾ ಅವಕಾಶಗಳಿಗೆ ಸಿದ್ಧರಾಗುತ್ತಾರೆ. ಶೀಘ್ರವಾಗಿ ಬದಲಾಗುತ್ತಿರುವ ವಿಜ್ಞಾನ ಲೋಕಕ್ಕೆ ತಮ್ಮನ್ನು ತಾವು ತೆರೆದುಕೊಳ್ಳುವತ್ತ ಯೋಚಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಸ್ವಅಧ್ಯಯನಕ್ಕೆ ಮೀಸಲಿಡಬೇಕು ಎಂದು ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಬೀಜಿಂಗ್ ಇಲ್ಲಿ ಪೋಸ್ಟ್ ಡಾಕ್ಟರೇಟ್ ಫೆಲೋ ಆಗಿರುವ ಡಾ. ಕೃಷ್ಣ ಯಮನಪ್ಪ ಪೂಜಾರಿ ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪದವಿ ನಂತರದ ಸಂಶೋಧನಾ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಆಶ್ರಯದಲ್ಲಿ ಕಾರಂತ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿಯ ಎಂ.ಜಿ.ಎಂ ಕಾಲೇಜಿನ ಸಭಾಂಗಣದಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ರಿದಂ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.

Read More