Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹೋಬಳಿ ಶಾಖೆ ಕೋಟ ಇದರ ವತಿಯಿಂದ ಮಹಾತ್ಮ ಗಾಂಧೀ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಕುಂದಾಪುರ ತಾಲೂಕು ಸಂಚಾಲಕ ಕೆ. ಸಿ. ರಾಜು ಬೆಟ್ಟಿನಮನೆ, ಕುಮಾರ್ ಕೋಟ, ಕೋಟ ಹೋಬಳಿ ಶಾಖೆ ಸಂಚಾಲಕ ನಾಗರಾಜ್ ಪಡುಕರೆ,ಕುಂದಾಪುರ ತಾಲೂಕು ಸಂಘಟನಾ ಸಂಚಾಲಕ ಚಂದ್ರ ಕೊರ್ಗಿ, ವಿಜಯ ಗಿಳಿಯಾರ್, ರೈತ ಧ್ವನಿ ಕೋಟ ಇದರ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ,ಗೋಪಾಲ್ ಗಿಳಿಯಾರು, ದಿನೇಶ್ ಹೊಸಮಠ, ದಿನೇಶ್ ಮೊಳಹಳ್ಳಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರಿಗೆ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾನಿಲಯದಿಂದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು”ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಅವರ ಧರ್ಮಪತ್ನಿ ಪೂರ್ಣಿಮಾ ಶೆಟ್ಟಿ, ಪುತ್ರಿ ಪೂರ್ವಿ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತಾಯ ಶುಭ ಹಾರೈಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ 51ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಶುಕ್ರವಾರ ಸಂಜೆ ತೆರೆ ಬಿದ್ದಿದೆ. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಮೇಲ್‌ಗಂಗೊಳ್ಳಿಯ ಬಾವಿಕಟ್ಟೆ ತನಕ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಗಂಗೊಳ್ಳಿಯ ಬಂದರಿನಲ್ಲಿ ಪಂಚಗಂಗಾವಳಿ ನದಿಯಲ್ಲಿ ಶಾರದಾ ವಿಗ್ರಹದ ಜಲಸ್ತಂಭನ ಮಾಡಲಾಯಿತು. ಶೋಭಾಯಾತ್ರೆಯಲ್ಲಿ ಶ್ರೀ ಶಾರದಾ ಮಾತೆಯನ್ನು ನೋಡಿ ಕಣ್ತುಂಬಿಕೊಳ್ಳಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಆಕರ್ಷಕ ಚಂಡೆ ವಾದನ, ಹುಲಿವೇಷ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದವು. ಕುಂದಾಪುರ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ (ಪ್ರಭಾರ) ನಿಲೇಶ್ ಚೌಹಾಣ್ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕೋಣಿ ಎಂಬಲ್ಲಿ ಶುಕ್ರವಾರ ಮೃತರನ್ನು ಕೃಷ್ಣ ಪೂಜಾರಿ(45) ಎಂದು ಗುರುತಿಸಲಾಗಿದೆ. ಅ. 2ರ ರಾತ್ರಿ ಕುಂದಾಪುರ – ಸಿದ್ದಾಪುರ ರಸ್ತೆಯಲ್ಲಿ ಬಸ್ರೂರು ಮೂರುಕೈಯಿಂದ ಕೋಣಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಅವರು ಬೈಕ್ ಆಯತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕೃಷ್ಣ ಪೂಜಾರಿ ತಲೆಗೆ ವಿದ್ಯುತ್ ಕಂಬ ತಾಗಿ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅರಣ್ಯಗಳತ್ತಾ ನಮ್ಮ ನಿಲುವು ಸದಾ ವಿವೇಚನೆಯಿಂದ ಕೂಡಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ನುಡಿದರು. ಅವರು ಆಳ್ವಾಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಹಳೆ ವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಕೃತಿಯನ್ನು ಅವಲೋಕಿಸುವುದು ಬಹಳ ಮುಖ್ಯ. ಪ್ರಕೃತಿಯ ಪ್ರತಿಯೊಂದು ಅಂಶವೂ ನಮಗೆ ಬದುಕಿಗೆ ಪಾಠವನ್ನು ಕಲಿಸುತ್ತದೆ. ಪ್ರಕೃತಿ, ಕೇವಲ ಸಂಪನ್ಮೂಲವಲ್ಲ, ಅದು ಸುಖ-ಶಾಂತಿಯ ಅಮೂಲ್ಯ ಸಂಪತ್ತು. ಅದನ್ನು ಕಾಪಾಡುವುದು ನಮ್ಮ ನೈತಿಕ ಕರ್ತವ್ಯ ಮಾತ್ರವಲ್ಲ, ಭವಿಷ್ಯದ ಪೀಳಿಗೆಗಾಗಿ ಜೀವಸಂಪತ್ತನ್ನು ಉಳಿಸುವ ಅಗತ್ಯವೂ ನಮ್ಮದಾಗಿದೆ. ನಾವು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಸುಖ ಮತ್ತು ಶಾಂತಿಯಿಂದ ಬದುಕಲು ಸಾಧ್ಯ. ನಾವು ವಾಸಿಸುತ್ತಿರುವ ಪ್ರದೇಶ ಜೀವ ವೈವಿಧ್ಯತೆಯ ಹಾಟ್ ಸ್ಪಾಟ್. ಜಗತ್ತಿನಲ್ಲಿ ಕೇವಲ 2 ರಿಂದ 3 ಶೇಕಡಾದಷ್ಟು ಪ್ರದೇಶವಷ್ಟೇ ಜೀವ ವೈವಿಧ್ಯ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಆದ್ದರಿಂದ ಜನರು ಈ ವಿಷಯವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ದಾನಗುಂದು ಮಲಸಾವರಿ ಸಪರಿವಾರ ದೈವಸ್ಥಾನದಲ್ಲಿ ಹಂದಟ್ಟು ಮಹಿಳಾ ಬಳಗದ ಆಶ್ರಯದಲ್ಲಿ ನವರಾತ್ರಿಯ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಇವರ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆದವು. ಗ್ರಾಮದ ಗ್ರಾಮಸ್ಥರು ವಿಶೇಷ ಪ್ರಾರ್ಥನೆ ಸಲ್ಲಿಸಿದರಲ್ಲದೆ ಬಳಗದ ವತಿಯಿಂದ ಅನ್ನಪ್ರಸಾದ ವಿತರಣೆ ನಡೆಯಿತು. ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಯಶೋದ ಹಂದಟ್ಟು, ಮಾಜಿ ಅಧ್ಯಕ್ಷೆ ರತ್ನಾ ಪೂಜಾರಿ, ಸ್ಥಾಪಕಾಧ್ಯಕ್ಷೆ ಪುಷ್ಭಾ ಹಂದಟ್ಟು, ಪಂಚವರ್ಣ ಮಹಿಳ ಮಂಡಲದ ಸಂಚಾಕಿ ಸುಜಾತ ಬಾಯರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಕಾರ್ಯದರ್ಶಿ ಪುಷ್ಭ, ಗೌರವಾಧ್ಯಕ್ಷೆ ಜಲಜ ಶಂಕರ್, ಉಪಾಧ್ಯಕ್ಷೆ  ಸರಸ್ವತಿ, ಪ್ರೇಮ ಆನಂದ್, ವಸಂತಿ, ಗೀತಾ, ಭಾರತಿ, ಪಂಚಾಯತ್ ಸದಸ್ಯರಾದ ಪ್ರಕಾಶ್, ಪೂಜಾ ಮತ್ತಿತರರು ಇದ್ದರು. ಗೆಳೆಯರ ಬಳಗ ಯುವಕ ಮಂಡಲ ದಾನಗುಂದು ಹಂದಟ್ಟು ಸಹಕಾರ ನೀಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಪೀಳಿಗೆಯ ಮಕ್ಕಳಲ್ಲಿ ತಾಳ್ಮೆ ಕಡಿಮೆ. ಮೊಬೈಲ್ ಯುಗದಲ್ಲಿ ಮೊಬೈಲ್ ಬಿಟ್ಟು ಹೊರಬರುವ ತಾಳ್ಮೆ ಯಾರಲ್ಲೂ ಇಲ್ಲ. ಯಾವುದೇ ವಿಷಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ನಮಗೆ ಅದರ ಉತ್ತಮ ಅನುಭವ ದೊರೆಯುತ್ತದೆ ಎಂದು ಬಿಎಸ್ಸೆನ್ನೆಲ್ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ ಭಾಸ್ಕರ ಭಟ್ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 17ನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತ್ರಾಸಿಯ ಮಿಲೇನಿಯಂ ಹಾಲ್‌ನಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ನಾವು ಏನಾಗಬೇಕು ಎಂಬುದರ ನಿರ್ಧಾರ ಮಾಡಿಕೊಳ್ಳಬೇಕು. ಮಿತ್ರತ್ವ, ಪ್ರೀತಿ ಬೆಳೆಸಿಕೊಳ್ಳಬೇಕು. ಮಕ್ಕಳು ಜೀವನದಲ್ಲಿ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು. ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೋ ಫೆರ್ನಾಂಡಿಸ್ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಷ್ಟ್ರಮಟ್ಟದಲ್ಲಿ ಮಹತ್ತರ ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ಹರ್ಷ ಎಂ., ಚಿನ್ಮಯ್ ಎಸ್., ಸಂಕೇತ್ ಭಟ್, ಸುಮಿತ್ ವಿ. ಕೆ., ಹರ್ಷ ರೆಡ್ಡಿ, ಮೋಹಿತ್ ಕುಮಾರ್, ಪ್ರಣವ್ ವಿ. ಪಂಡಿತ್, ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್, ಪಿಯೂಷ್ ಹೆಚ್, ವಿಸ್ಮಯ ನಾರಾಯಣ್, ಮೆಲ್ರೊಯ್ ಕ್ಯಾಸ್ಟೆಲಿನೊ, ಇಶಾನ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯು ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ ಅಕಾಡೆಮಿ- ಎನ್‌ಡಿಎ) ಮತ್ತು ಇಂಡಿಯನ್ ನೇವಲ್ ಅಕಾಡೆಮಿ (ಭಾರತೀಯ ನೌಕಾ ಅಕಾಡೆಮಿ- ಐಎನ್‌ಎ) ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯು ಭಾರತೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ವತಿಯಿಂದ ಪ್ರಥಮ ವರ್ಷ ಪದವಿಯ ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಅಭಿವಿನ್ಯಾಸ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ಎನ್‌ಎಸ್‌ಎಸ್‌ನ ವಾರ್ಷಿಕ ಚಟುವಟಿಗೆಗಳ ಉದ್ಘಾಟನೆಯನ್ನು ಸ್ಥಳೀಯ ಉದ್ಯಮಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಭರತ್ ಕುಮಾರ್ ಶೆಟ್ಟಿ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಸಮಾಜಮುಖಿ ಚಟುವಟಿಕೆಗಳಿಗೆ ಎನ್‌ಎಸ್‌ಎಸ್ ವೇದಿಕೆಯಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಶೆಟ್ಟಿ ಅವರು ಎನ್‌ಎಸ್‌ಎಸ್‌ನ ಸ್ಥಾಪನೆ, ಧ್ಯೇಯೋದ್ದೇಶ ಮತ್ತು ಅದರ ಕಾರ್ಯ ವಿಧಾನಗಳ ಕುರಿತು ಮಾರ್ಗದರ್ಶನ ನೀಡಿ, ವ್ಯಕ್ತಿಯನ್ನು ಸಮುದಾಯದ ಆಶೋತ್ತರಗಳಿಗೆ ಸೂಕ್ತವಾಗಿ ಸ್ಪಂದಿಸುವಂತೆ ಮಾಡುವುದೇ ಶಿಕ್ಷಣದ ಗುರಿ. ಈ ಗುರಿಯನ್ನು ತಲುಪಲು ಎನ್‌ಎಸ್‌ಎಸ್ ಉತ್ತಮ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತದೆ. ಶ್ರಮದ ತತ್ವದ ಮೇಲೆ ನಂಬಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಂದಿನ ಯುವ ಜನಾಂಗ ಪ್ರತಿಯೊಂದು ಕೆಲಸಕ್ಕೆ ಬೇರೆಯವರನ್ನ ಅವಲಂಬಿಸಿರುತ್ತೇವೆ. ಆದರೆ ಎನ್.ಎಸ್.ಎಸ್ ಶಿಬಿರಗಳು ನಮಗೆ ಜೀವನ ಪಾಠವನ್ನು ಕಲಿಸುವುದರಿಂದ ಪರಾವಲಂಬನೆಯಿಂದ ಸ್ವಾವಲಂಬನೆಯ ಪಾಠ ಸಿಗುತ್ತದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು. ಅವರು ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕರೆ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೋಟತಟ್ಟು ಸ.ಹಿ.ಪ್ರಾ ಶಾಲೆಯಲ್ಲಿ ಜರುಗಿದ ವಾರ್ಷಿಕ ಎನ್ಎಸ್ಎಸ್‌ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದ ಪ್ರತಿಯೊಂದು ಕ್ಷಣಗಳನ್ನು ಅನುಭವಿಸಿ ಜೀವನ ಪಾಠ ತಿಳಿಯುವಂತೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿ ಶಿಬಿರದ ರೂಪುರೇಷೆ ತಿಳಿಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ ಕುಂದರ್, ಗ್ರಾ.ಪಂ. ಸದಸ್ಯ ರವೀಂದ್ರ ತಿಂಗಳಾಯ, ಕೋಟತಟ್ಟು ಶಾಲಾ ಮುಖ್ಯ ಶಿಕ್ಷಕಿ ಜಾನಕಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಲೈಮಾನ್, ಕಾಲೇಜಿನ ಹಿಂದಿನ ವಿದ್ಯಾರ್ಥಿಗಳ…

Read More