Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಾವುದೇ ಧಾರ್ಮಿಕ ಕ್ಷೇತ್ರದ ವಾರ್ಷಿಕ ಬ್ರಹ್ಮ ರಥೋತ್ಸವದ ಪೂರ್ವಭಾವಿ ಸಿದ್ಧತೆಗಳಲ್ಲಿ ಪ್ರಮುಖವಾದದ್ದು ರಥವನ್ನು ಸಜ್ಜುಗೊಳಿಸುವ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ಶ್ರೀ ನಾಗದೇವರಿಗೆ ಪವನಾಭಿಷೇಕ, ಶ್ರೀ ನರಸಿಂಹ ದೇವರಿಗೆ ಪಂಚಾಮೃತಾಭಿಷೇಕ, ಹರಿವಾಣ ನೈವೇದ್ಯ ಮುಂತಾದ ಸೇವೆಗಳ ನಂತರ ಸಾಮೂಹಿಕ ಫಲ ಪ್ರಾರ್ಥನೆಯೊಂದಿಗೆ ರಥಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ರಥಾರಂಭ ಕಾರ್ಯಕ್ಕೆ ಸಡಗರದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾ ಜಗತ್ತಿನ ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ ಹಂದೆ, ಗ್ರಾಮ ಮೊಕ್ತೇಸರ ವೃಂದದ ಮಹಾಬಲ ಹೇರ್ಳೆ, ಆನಂದರಾಮ ಹೇರ್ಳೆ, ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ,ವಾಸುಪಾಧ್ಯ, ಶ್ರೀನಿವಾಸ ಉಪಾಧ್ಯ, ವಿ.ಜಿ.ಮಯ್ಯ,ಅರ್ಚಕ ಜನಾರ್ದನ ಅಡಿಗ, ನಾಗಭೂಷಣ ಹೆಬ್ಬಾರ, ದೇವಕಾರಿ ರಘರಾಮ ಹೆಬ್ಬಾರ, ಕಚೇರಿ ಪ್ರಬಂಧಕ ನಾಗರಾಜ ಹಂದೆ, ಸಹಾಯಕ ಪ್ರಬಂಧಕ ಗಣೇಶ ಭಟ್ಟ, ಪ್ರಮುಖ ಬಾಣಸಿಗ ಸುಬ್ರಹ್ಮಣ್ಯ ಐತಾಳ, ಸಿಬ್ಬಂದಿ ಅಖಿಲೇಶ, ದೇವಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ರೂ. 25,000 ಗಳನ್ನು ನೀಡಲು ಆದೇಶಿಸಿದ್ದು, ಅದರಂತೆ 2024-25ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗಧಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ಶ್ರೀ ಗುರು ನರಸಿಂಹ ದೇವರ ಜಾತ್ರಾ ಮಹೋತ್ಸವವು ಜನವರಿ 16ರಿಂದ ನಡೆಯಲಿದ್ದು, ಸಾಲಿಗ್ರಾಮ ರಥಬೀದಿ ಹೊರತುಪಡಿಸಿ ಉಳಿದ ಖಾಸಗಿ, ಎನ್. ಹೆಚ್ ಒಳಪೇಟೆ, ಸರ್ವೀಸ್ ರಸ್ತೆ, ರಥಬೀದಿ ಸೇರಿದಂತೆ ಇತರೇ ಸರ್ಕಾರಿ ಸ್ಥಳಗಳಲ್ಲಿ ಜಾತ್ರಾ ಪ್ರಯುಕ್ತ ತಾತ್ಕಾಲಿಕವಾಗಿ ವ್ಯಾಪಾರ ನಡೆಸುವವರು ಜಾತ್ರೆ ಪ್ರಾರಂಭವಾಗುವ ಮೂರು ದಿನದ ಮುಂಚಿತವಾಗಿ ಪಟ್ಟಣ ಪಂಚಾಯತ್ ಕಚೇರಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಕಡ್ಡಾಯವಾಗಿ ಉದ್ಯಮದಾರರ ಭಾವಚಿತ್ರ, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಅಥವಾ ರೇಷನ್ ಕಾರ್ಡ್ ನಕಲು ಪ್ರತಿ ನೀಡಿ, ಪಟ್ಟಣ ಪಂಚಾಯತ್ ವಿಧಿಸುವ ನಿಗಧಿತ ಶುಲ್ಕ ಪಾವತಿಸಿ, ನಂತರ ಪಟ್ಟಣ ಪಂಚಾಯತ್ ಗುರುತಿಸಿದ ಸ್ಥಳಗಳಲ್ಲಿ ವ್ಯಾಪಾರ ನಡೆಸಬಹುದಾಗಿದೆ. ರಥಬೀದಿ ಹಾಗೂ ಖಾಸಗಿ ಜಾಗದಲ್ಲಿ ವ್ಯಾಪಾರ ನಡೆಸುವವರು ಪಟ್ಟಣ ಪಂಚಾಯತ್ ನಿಗಧಿಪಡಿಸಿರುವ ಘನತ್ಯಾಜ್ಯ ಶುಲ್ಕವನ್ನು ಪಾವತಿಸಬೇಕು ಹಾಗೂ ಸರಕಾರದಿಂದ ನಿಷೇಧಿಸಿರುವ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರಸ್ಥರು ಉದ್ಯಮದಲ್ಲಿ ಬಳಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ವರ್ಧತ್ಯೋತ್ಸವದ ಪ್ರಯುಕ್ತ ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಶುಕ್ರವಾರ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿಗೆ ಪಂಚ ವಿಂಶತಿ ದ್ರವ್ಯಕಲಶ ಪೂರ್ವಕ ಕಲಾತತ್ವ ಹೋಮ ಹಾಗೂ ಪರಿವಾರ ದೇವರುಗಳಿಗೆ ನವಕ ಪ್ರಧಾನ ಕಾಲಾಧಿವಾಸ ಹೋಮ ಇತ್ಯಾದಿ ಪೂಜಾ ಕಾರ್ಯಕ್ರಮಗಳು ಜರಗಿದವು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪ್ರಮುಖರಾಗಿ ಭಾಗವಹಿಸಿದರು. ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ರತನ್ ಐತಾಳ್, ಸುಬ್ರಾಯ ಜೋಗಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ. ಕಾಂಚನ್, ಶಿವ ಪೂಜಾರಿ, ಚಂದ್ರಶೇಖರ ಆಚಾರ್, ದೇಗಯಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಕವಾದ ಕಾಂಗ್ರೆಸ್ ನಿಯೋಗ ಶನಿವಾರ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನಿಯೋಗದ ಸದಸ್ಯರುಗಳಾದ ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಹೆಚ್. ಎಂ.ರೇವಣ್ಣ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಕುಮಾರ್ ನಾಯಕ್, ಚಳ್ಳಿಕೆರೆ ಶಾಸಕ ಟಿ. ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಜಕ್ಕಪ್ಪ ಅವರು ಹಾಗೂ ಬಸವನಗೌಡ ಬಾದರ್ಲಿ ಇದ್ದರು. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಜ.3 ರಂದು ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು ಹಾಗೂ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ವಿಸ್ತ್ರತವಾದ ವರದಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ಶಾಲೆ ಉಳಿಸಿ ಬೆಳಸುವಲ್ಲಿ ನಾವೆಲ್ಲ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಪೋಷಕರ ಸಹಕಾರದಿಂದ ಈ ಶಾಲೆ  ಕನ್ನಡ ಶಾಲೆಯಾಗಿ , ಸುಮಾರು 160ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿರುವುದು ತುಂಬಾ ಶ್ಲಾಘನೀಯ ಕಾರ್ಯ ಎಂದು ಸಾಮಾಜಿಕ ಚಿಂತಕ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಹೇಳಿದರು. ಅವರು ಇಲ್ಲಿನ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಇದರ ಮಕ್ಕಳ ಹಬ್ಬ ಚಿತ್ತಾರ 2026 ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸರಕಾರಿ ಶಾಲೆಗಳ ಉಳಿವಿಗೆ ಸರಕಾರ ಹೊಸ ಯೋಜನೆಗಳನ್ನು ರೂಪಿಸಬೇಕು ಎಂದರು. ಧ್ವಜಾರೋಹಣವನ್ನು ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್ ನಿರ್ವಹಿಸಿದರು. ಶಾಲಾ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಶಾಲಿಗಳಾದ ವಿದ್ಯಾರ್ಥಿಗಳಿಗೆ ಬ್ರಹ್ಮಾವರ ಕ್ಷೇತ್ರ ದೈಹಿಕ ಶಿಕ್ಷಣಪರಿವೀಕ್ಷಣಾಧಿಕಾರಿ  ನಿತ್ಯಾನಂದ ಶೆಟ್ಟಿ ನೆರವೆರಿಸಿದರು. ಮುಖ್ಯ ಅಭ್ಯಾಗತರಾಗಿ ಪಟ್ಟಣಪಂಚಾಯತ್ ಹಿರಿಯ ಲೆಕ್ಕಾಧಿಕಾರಿ ಚಂದ್ರಶೇಖರ ಸೋಮಯಾಜಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ವಿಶ್ವೇಶ್ವರ ಹೊಳ್ಳ, ಸಂಚಾಲಕ ಎನ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರೊಫೆಸರ್ ಕಟೀಲು ಮನೋಹರ ಪೈ (81) ಶುಕ್ರವಾರದಂದು ನಿಧನರಾದರು. ಸಸ್ಯಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವುಳ್ಳ ಅವರು ಉತ್ತಮ ಕ್ರೀಡಾಪಟುವಾಗಿ, ಕನ್ನಡ, ಇಂಗ್ಲೀಷ್ ಸಾಹಿತ್ಯ ಅಧ್ಯಯನದ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಪರಿಸರ ರಕ್ಷಣೆ ಬಗ್ಗೆ ಬಹಳ ಕಾಳಜಿವುಳ್ಳವರಾಗಿ ಸಮಾನ ಮನಸ್ಕರೊಂದಿಗೆ ಅಭಿಯಾನ ನಡೆಸಿದವರು. ರೋಟರಿ ಕುಂದಾಪುರ ದಕ್ಷಿಣದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದವರು. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ಕುಂದಾಪುರದ ಪ್ರಸಿದ್ಧ ಕಟೀಲು ಮನೆತನದ ಸದಸ್ಯರಾಗಿದ್ದ ಅವರು ಸ್ನೇಹಪರ ನಡವಳಿಕೆಯಿಂದ ಸಮಾಜದಲ್ಲಿ ಜನಪ್ರಿಯರಾಗಿದ್ದರು. ಅವರು ಪತ್ನಿ ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ. ಹಲವು ಗಣ್ಯರು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಳಿ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಕೇರಳದಿಂದ ಗೋವಾ ಕಡೆಗೆ ಹೋಗುವ ದುರಂತ್ ಎಕ್ಸ್ ಪ್ರೆಸ್ ರೈಲು ಆಕಸ್ಮಿಕವಾಗಿ ಡಿಕ್ಕಿಯಾಗಿ ಸಾವನಪ್ಪಿದ ಘಟನೆ ತಾಲೂಕಿನ ಹಟ್ಟಿಯಂಗಡಿ ಗ್ರಾಮದ ಸಬ್ಲಾಡಿಯ ಸ್ಟೀಲ್‌ ಬ್ರಿಡ್ಜ್‌ ಸಮೀಪ ಗುರುವಾರದಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರು ಹಟ್ಟಿಯಂಗಡಿ ಗ್ರಾಮದ ನಿವಾಸಿ ಜನಾರ್ದನ (39) ಎಂದು ಗುರುತಿಸಲಾಗಿದೆ. ಜನಾರ್ದನ ಅವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, 10 ದಿನಗಳ ಹಿಂದೆ ಊರಿಗೆ ಬಂದಿದ್ದರು. ಅವರ ದೊಡ್ಡಮ್ಮನ ಪುತ್ರ ಗಣೇಶ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಲ್ಲಿ ಧೈರ್ಯ ತುಂಬಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಯತ್ನ ಶಿಕ್ಷಕರಿಂದ ಆಗಬೇಕಿದೆ. ಎಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಪರೀಕ್ಷೆಯಲ್ಲಿ ಬರಬಹುದಾದ ಪ್ರಶ್ನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಫಲಿತಾಂಶ ವೃದ್ಧಿಗೆ ಪೂರಕವಾಗುವ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಕಾರ್ಯಾಗಾರ ಏರ್ಪಡಿಸಿ ಅವರಿಗೆ ಮಾಹಿತಿ ನೀಡಲಾಗುತ್ತಿದ್ದು, ಈ ಕಾರ್ಯಾಗಾರದ ಪ್ರಯೋಜನ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು ಎಂದು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಹೇಳಿದರು. ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಂಗೊಳ್ಳಿ ಇವರ ಸಹಯೋಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲಾ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಎಸ್.ವಿ. ವಿದ್ಯಾ ಸಂಸ್ಥೆಗಳ ಸಂಚಾಲ ಎನ್. ಸದಾಶಿವ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಂಡಿಕಾ ಕಲಾಬಳಗ ಗ್ರಾಮೀಣ ಕರಾವಳಿ ಭಾಗದ ಸಂತೋಷದ ಸಂಭ್ರಮವನ್ನು ನಿರಂತರಗೊಳಿಸಲಿ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಹೇಳಿದರು. ಕೋಟದ ಅಮೃತೇಶ್ವರೀ ದೇಗುಲದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಇದರ ಇಂಡಿಕಾ ಸಂಭ್ರಮ 2026 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಸದಾ ಸಾಮಾಜಿಕ ಸಾಂಸ್ಕೃತಿಕ ಚಿಂತಕ ಸಂತೋಷ್ ಕುಮಾರ್ ಹುಟ್ಟುಹಾಕಿ ಎಲ್ಲರನ್ನು ಅಗಲಿದ್ದಾರೆ. ಅವರ ಹೆಸರನ್ನು ಈ ಬಳಗದ ನಿರಂತರ ಸಾಮಾಜಿಕ ಕಾರ್ಯದ ಮೂಲಕ ಜೀವಂತವಾಗಿಸೋಣ ಎಂದು ಶುಭಹಾರೈಸಿದರು. ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಶಿವ ಪೂಜಾರಿ ಮಣೂರು, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ಸಾಮಾಜಿಕ ಚಿಂತಕ ಸೋಮಶೇಖರ್ ಕದ್ರಿಕಟ್ಟು, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಜಯರಾಮ ಶೆಟ್ಟಿ, ಮಾಜಿ ಅಧ್ಯಕ್ಷ ಸಂತೋಷ್ ತಿಂಗಳಾಯ, ಪಂಚವರ್ಣ ಯುವಕಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಬಳಗದ ಪ್ರಮುಖರಾದ ನಾಗರಾಜ್ ಪಡುಕರೆ, ನಾಗೇಶ್ ಪಡುಕರೆ, ಪ್ರಶಾಂತ್ ಪಡುಕರೆ ಉಪಸ್ಥಿತರಿದ್ದರು. ಬಳಗದ ಪ್ರಮುಖರಾದ…

Read More