ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಂಡಿಕಾ ಕಲಾಬಳಗ ಗ್ರಾಮೀಣ ಕರಾವಳಿ ಭಾಗದ ಸಂತೋಷದ ಸಂಭ್ರಮವನ್ನು ನಿರಂತರಗೊಳಿಸಲಿ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಹೇಳಿದರು. ಕೋಟದ ಅಮೃತೇಶ್ವರೀ ದೇಗುಲದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಇದರ ಇಂಡಿಕಾ ಸಂಭ್ರಮ 2026 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಸದಾ ಸಾಮಾಜಿಕ ಸಾಂಸ್ಕೃತಿಕ ಚಿಂತಕ ಸಂತೋಷ್ ಕುಮಾರ್ ಹುಟ್ಟುಹಾಕಿ ಎಲ್ಲರನ್ನು ಅಗಲಿದ್ದಾರೆ. ಅವರ ಹೆಸರನ್ನು ಈ ಬಳಗದ ನಿರಂತರ ಸಾಮಾಜಿಕ ಕಾರ್ಯದ ಮೂಲಕ ಜೀವಂತವಾಗಿಸೋಣ ಎಂದು ಶುಭಹಾರೈಸಿದರು. ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಶಿವ ಪೂಜಾರಿ ಮಣೂರು, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ಸಾಮಾಜಿಕ ಚಿಂತಕ ಸೋಮಶೇಖರ್ ಕದ್ರಿಕಟ್ಟು, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಜಯರಾಮ ಶೆಟ್ಟಿ, ಮಾಜಿ ಅಧ್ಯಕ್ಷ ಸಂತೋಷ್ ತಿಂಗಳಾಯ, ಪಂಚವರ್ಣ ಯುವಕಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಬಳಗದ ಪ್ರಮುಖರಾದ ನಾಗರಾಜ್ ಪಡುಕರೆ, ನಾಗೇಶ್ ಪಡುಕರೆ, ಪ್ರಶಾಂತ್ ಪಡುಕರೆ ಉಪಸ್ಥಿತರಿದ್ದರು. ಬಳಗದ ಪ್ರಮುಖರಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 25ರಿಂದ 27 ರವರೆಗೆ ರೈತ ಸೇವಾ ಕೇಂದ್ರ ಶಿವಳ್ಳಿ ತೋಟಗಾರಿಕಾ ಕ್ಷೇತ್ರ, ದೊಡ್ಡಣ್ಣ ಗುಡ್ಡೆಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸದರಿ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಚಟುವಟಿಕೆ ಹೊಂದಿರುವವರಿಗೆ ಹಾಗೂ ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗೆ 3500 ರೂ.ದರ ನಿಗದಿ ಪಡಿಸಲಾಗಿದೆ. ಮಳಿಗೆ ತೆರೆಯಲು ಬಯಸುವ ಆಸಕ್ತರು ಮಳಿಗೆಗಳ ಮೊತ್ತವನ್ನು ಆನ್ ಲೈನ್ ಕ್ಯೂ.ಆರ್ ಕೋಡ್ ಮೂಲಕವೇ ರೈತ ಸೇವಾ ಕೇಂದ್ರದ ಖಾತೆಗೆ ಜನವರಿ 20 ರ ಒಳಗಾಗಿ ಪಾವತಿಸಬಹುದಾಗಿದೆ. ಹೆಸರು ನೋಂದಾಯಿಸಲು ಇಚ್ಛಿಸುವವರು ಸಹಾಯಕ ತೋಟಗಾರಿಕಾ ನಿರ್ದೇಶಕರ ದೂರವಾಣಿ ಸಂಖ್ಯೆ 9741255168 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ನಾಯಕತ್ವ ಅಭಿವೃದ್ಧಿ, ಸಮುದಾಯ ಸೇವೆ ಸಾಮಾಜಿಕ ಬದಲಾವಣೆ ಮತ್ತು ಅಂತರಾಷ್ಟ್ರೀಯ ಯೋಜನೆಗಳ ಮೂಲಕ ವ್ಯಕ್ತಿತ್ವ ಅಭಿವೃದ್ಧಿ ಮೊದಲಾದ ಸಾಮಾಜಿಕ ಕಾರ್ಯಗಳ ಮೂಲಕ ಅಂತರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜೆ.ಸಿ.ಐ ಸಂಸ್ಥೆಯ ಶಂಕರನಾರಾಯಣ ಘಟಕ ಪ್ರವರ್ತಿತ, ನೂತನ ಘಟಕ ಹಾಲಾಡಿ – ವಾರಾಹಿ ಗುರುವಾರದಂದು ಹಾಲಾಡಿಯ ದುರ್ಗಾನುಗ್ರಹ ಸಭಾಂಗಣದಲ್ಲಿ ಶುಭಾರಂಭಗೊಂಡಿತು. ನಿವೃತ್ತ ಬ್ಯಾಂಕ್ ಉದ್ಯೋಗಿ ಬಿ. ಮಂಜುನಾಥ ಕಾಮತ್ ಹಾಲಾಡಿ ಅವರು ದೀಪ ಪ್ರಜ್ವಲಿಸುವ ಮೂಲಕ ಘಟಕವನ್ನು ಉದ್ಘಾಟಿಸಿ ಶುಭಕೋರಿದರು.. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ವಲಯಾಧ್ಯಕ್ಷರಾದ ಜೆ.ಎಫ್.ಎಫ್ ಸಂತೋಷ ಶೆಟ್ಟಿ, ಪೂರ್ವ ವಲಯದ ಉಪಾಧ್ಯಕ್ಷರಾದ ಜೆ.ಎಫ್.ಎಂ ಪ್ರದೀಪ ಶೆಟ್ಟಿ, ದುರ್ಗಾನುಗ್ರಹ ಸಭಾಂಗಣದ ಮಾಲಕರಾದ ನಾಗರಾಜ ಅಡಿಗ, ಶಂಕರನಾರಾಯಣ ಜೆ.ಸಿ.ಐ ಘಟಕದ ಅಧ್ಯಕ್ಷರಾದ ಜೇಸಿ ಪ್ರವೀಣ ಬಾಳೆಕೊಡ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲಾಡಿ – ವಾರಾಹಿ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಪ್ರದೀಪ ಹಾಲಾಡಿ, ಕಾರ್ಯದರ್ಶಿಯಾಗಿ ಅಶೋಕ ಆಚಾರ್ಯ, ಖಜಾಂಚಿಯಾಗಿ ಮಹೇಶ ಕುದ್ರುಬೆಟ್ಟು, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅವಶ್ಯ ಶೆಟ್ಟಿ, ಜೂನಿಯರ್ ಜೆಸಿಐ ಅಧ್ಯಕ್ಷರಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2025-26ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ.7.25ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲು ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಜನವರಿ 16ರ ಒಳಗಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮಕ್ಕೆ ಪಾರಂಪಳ್ಳಿ ಪಡುಕರೆ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸುಮಾರು 10ಸಾವಿರ ರೂ ಅಧಿಕ ಮೌಲ್ಯದ ದಿನಸಿ ಸಾಮಾನುಗಳನ್ನು ಆಶ್ರಮದ ಮುಖ್ಯಸ್ಥ ಹ.ರಾ. ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ನ ಪದಾಧಿಕಾರಿಗಳಾದ ಕೃಷ್ಣ ದೇವಾಡಿಗ, ದೇವೇಂದ್ರ ಶ್ರೀಯಾನ್, ರವಿ ಪೂಜಾರಿ, ಸುಧಾಕರ್ ಪೂಜಾರಿ, ವಿಶ್ವನಾಥ ಪೂಜಾರಿ, ಕೃಷ್ಣ,ಪ್ರಶಾಂತ್ ಪೂಜಾರಿ, ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃತಕ ಆಭರಣಗಳ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುನಿಯಾಲು ನಿವೃತ್ತ ಪ್ರೈಮರಿ ಶಾಲೆಯ ಶಿಕ್ಷಕರಾದ ಸುಬ್ರಹ್ಮಣ್ಯ ವಿ. ರಾವ್ ಅವರು ಮಹಿಳೆಯರ ಕೃತಕ ಆಭರಣಗಳ ತಯಾರಿಕೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಂದೊಂದು ರೀತಿಯ ಕಲೆ ಇರುತ್ತದೆ. ವಿಭಿನ್ನವಾಗಿ ಯೋಚಿಸುವ ಸಾಮರ್ಥ್ಯವಿರುತ್ತದೆ. ಸಾಕಷ್ಟು ಜನ ಅವರ ಸಾಮರ್ಥ್ಯವನ್ನು ಹುಡುಕಲು, ಯೋಚಿಸಲು ಕೂಡ ಮುಂದೆ ಬರುವುದಿಲ್ಲ. ಹಾಗಾಗಿ ಅಂಥವರು ಏನನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ನಾವು ಯಶಸ್ಸನ್ನು ಏರಬೇಕೆಂದರೆ ಈಗಾಗಲೇ ಇರುವ ವಿಷಯಗಳನ್ನು ಕೈಗೆತ್ತಿಕೊಳ್ಳುವ ಬದಲು, ಹೊಸತನ ಹಾಗೂ ವಿಭಿನ್ನವಾಗಿ ಯೋಚಿಸುವುದು ತುಂಬ ಅಗತ್ಯವಾಗಿರುತ್ತದೆ. ಹಾಗೆಯೇ, ತರಬೇತಿ ಅವಧಿಯಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಕೃತಕ ಆಭರಣಗಳನ್ನು ಗಮನಿಸಿ, ಸಂತೋಷ ವ್ಯಕ್ತಪಡಿಸಿದರು. ಹಾಗೆಯೇ ಇದೇ ರೀತಿ ನಿಮ್ಮಲ್ಲಿರುವ ಹೊಸ ಆಲೋಚನೆಗಳನ್ನು ಹೊಸತನಕ್ಕೆ ಪೂರಕವಾಗಿ, ಕನಸಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರು-ಬೈಕ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗುವನ್ನು ಪೊಲೀಸ್ ವಾಹನದಲ್ಲಿ ತುರ್ತಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ಸಿಬ್ಬಂದಿಗಳು ಮಾನವಿಯತೆ ಮೆರೆದಿದ್ದಾರೆ. ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಜಾಡಿ ಎಂಬಲ್ಲಿ ಬುಧವಾರ ಮಧ್ಯಾಹ್ನ ಅಪಘಾತದ ಸಂದರ್ಭ ಸ್ಥಳಕ್ಕೆ ತೆರಳಿದ್ದ ಪೊಲೀಸ್ ಇಲಾಖೆಯ ಹೈವೇ ಪಟ್ರೋಲ್ ವಾಹನದ ಚಾಲಕ ರಾಮ ಹಾಗೂ ಸಿಬ್ಬಂದಿ ಕಿರಣ್ ಬಿ. ಪಾಟೀಲ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ. ನೆಂಪು ಕಡೆಯಿಂದ ಕುಂದಾಪುರ ಕಡೆಗೆ ರಾಘವೇಂದ್ರ – ನಾಗವೇಣಿ ದಂಪತಿಗಳು ತಮ್ಮ ಮಗುವಿನೊಂದಿಗೆ ತೆರಳುತ್ತಿದ್ದ ಬೈಕಿಗೆ ಹೆಮ್ಮಾಡಿ ಕಡೆಯಿಂದ ಕೊಲ್ಲೂರು ಕಡೆಗೆ ತೆರಳುತ್ತಿದ್ದ ಕಾರು ಜಾಡಿ ಎಂಬಲ್ಲಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಾಘವೆಂದ್ರ ಅವರ ಬಲ ಕಾಲಿಗೆ ರಕ್ತ ಗಾಯವಾಗಿದ್ದು ಕೈ ಕಾಲುಗಳಿಗೆ ಸಣ್ಣ ಪುಟ್ಟ ಗಾಯಗಳು ಆಗಿದ್ದು ನಾಗರತ್ನ ರವರಿಗೆ ಕೈ ಕಾಲು ಹಾಗೂ ದೇಹದಲ್ಲಿ ಅಲ್ಲಲ್ಲಿ ತರಚಿದ ಗಾಯವಾಗಿರುತ್ತದೆ ಹಾಗೂ ದರ್ಶಿತ್ ರವರಿಗೆ ಬಲ ಕಣ್ಣು ಮುಖಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ., ಮೂಡುಬಿದಿರೆ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ, ಡಾ. ಎನ್ ಶೀತಲ್ಕುಮಾರ್, ಬೆಂಗಳೂರಿನ ಭಾರತೀಯ ಆಯುರ್ವೇದ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ರಸಶಾಸ್ರ್ತ ಮತ್ತು ಭೈಷಜ್ಯ ಕಲ್ಪನಾ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜಗದೀಶ್ ಕೋನರೆಡ್ಡಿ, ಕೇರಳದ ಕೊಟ್ಟಕ್ಕಲ್, ವೈಧ್ಯ ಶಾಲೆಯ ಗುಣಮಟ್ಟ ಭರವಸೆ ವಿಭಾಗದ ವೈದ್ಯಾಧಿಕಾರಿ ಮತ್ತು ವಿಭಾಗ ಮುಖ್ಯಸ್ಥ ಡಾ. ಜಿತೇಶ್ ಎಂಕೆರಿಗೆ ಶಾಲು, ಹಾರ, ಪ್ರಶಸ್ತಿ ಫಲಕ ಹಾಗೂ ನಗದು ಹಣ ಹತ್ತು ಸಾವಿರದೊಂದಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಧನ್ವಂತರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವೃತ್ತಿಯಾದರೂ ಅದರ ಬಗ್ಗೆ ಗೌರವ ಇರಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಬೇಕು. ಪರಿಸರ ರಕ್ಷಣೆ ಮುಖ್ಯವಾಗಿದ್ದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ಕಾರ್ಯದಲ್ಲಿ ಮಕ್ಕಳು ಕೈಜೋಡಿಸಿದರೆ ದೇಶ ಉದ್ಧಾರವಾಗಲು ಸಾಧ್ಯ ಎಂದು ರೋಟರಿ ಡಿಸ್ಟ್ರಿಕ್ ಚೇರ್ಮನ್ ವೊಕೇಶನಲ್ ಸರ್ವಿಸ್ ಪ್ರಭಾಕರ ಕುಂಭಾಶಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಶಾಲೆಯ ದಿ. ಕೊಂಚಾಡಿ ಗಣಪತಿ ಶೆಣೈ ವೇದಿಕೆಯಲ್ಲಿ ಜರಗಿದ ಪರಿಸರ ಹಾಗೂ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ ಮತ್ತು ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಸರಕಾರಿ ಶಾಲೆ ಎಂಬ ಕೀಳರಿಮೆ ಇರಬಾರದು. ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಮಾಜದ ಕಟ್ಟ ಕಡೆಯ ಸಹಸ್ರಾರು ಮಂದಿ ಉತ್ತಮ ಸ್ಥಾನಮಾನ ಗಳಿಸಿದ್ದಾರೆ. ಸರಕಾರಿ ಶಾಲೆಗಳಲ್ಲಿ ಶುಚಿತ್ವ, ಪಾಠೇತರ ಚಟುವಟಿಕೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಟವಾಡಲು ತೆರಳಿದ್ದ ಬಾಲಕ ಮನೆಗೆ ಹಿಂದಿರುಗದೇ ನಾಪತ್ತೆಯಾಗಿದ್ದ ಘಟನೆ ಬುಧವಾರ ಸಂಜೆ ನಡೆದಿದ್ದು, ವಿಚಾರ ಗಮನಕ್ಕೆ ಬರುತ್ತಿದ್ದಂತೆ ಗಂಗೊಳ್ಳಿ ಪಿಎಸ್ಐ ಪವನ್ ನಾಯಕ್ ನೇತೃತ್ವದ ಪೊಲೀಸರ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಾಲಕನ್ನು ಪತ್ತೆ ಮಾಡಿದೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆಗಿದ್ದಿಷ್ಟು:ಸರಕಾರಿ ಶಾಲೆಯೊಂದರಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕನೋರ್ವ ಶಾಲೆ ಮಗಿಸಿ ಮನೆಗೆ ಹಿಂದಿರುಗಿದ್ದ. ಅಲ್ಲಿಂದ ಬೆಣ್ಗೇರೆ ನಾಗ ದೇವಸ್ಥಾನದ ಬಳಿ ಸ್ನೇಹಿತರೊಂದಿಗೆ ಆಡವಾಡಲು ತೆರಳಿದ್ದ. ಸಂಜೆ 06:30ರ ತನಕವೂ ಬಾಲಕ ಅದೇ ಪರಿಸರದಲ್ಲಿ ಆಟವಾಡುತ್ತಿರುವುದನ್ನು ಆತನ ಪಕ್ಕದ ಮನೆಯವರೂ ಗಮನಿಸಿದ್ದರು. ಆದರೆ ರಾತ್ರಿ 07:00 ಗಂಟೆ ಆದರೂ ಆತ ಮನೆಗೆ ಹಿಂದಿರುಗದೇ ಇರುವುದನ್ನು ಗಮನಿಸಿದ ಬಾಲಕನ ಮಾವ ಪಕ್ಕದ ಮನೆ ಹಾಗೂ ಸುತ್ತಮುತ್ತಲು ವಿಚಾರಿಸಿದ್ದಾರೆ. ಎಲ್ಲಿಯೂ ಬಾಲಕನ ಸುಳಿವು ಸಿಗದಿದ್ದಾಗ ಊರವರು ಸೇರಿ ಹುಡುಕಾಟ ನಡೆಸಿದ್ದಾರೆ. ಬಾಲಕ ಆಡವಾಡುತ್ತಿದ್ದ ಸುತ್ತಲಿನ ಪರಿಸರದಲ್ಲಿ ನೂರಾರು ಮಂದಿ ಸ್ಥಳೀಯರು ಜಮಾಯಿಸಿ ಹುಡುಕಾಟ ನಡೆಸಿದರೂ…
