ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಪದವೀಧರರನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣವು ಕೇವಲ ಶೈಕ್ಷಣಿಕ ಸಾಧನೆಗಳಿಗೆ ಸೀಮಿತವಲ್ಲ. ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ರೂಪಿಸಿಕೊಂಡ ವ್ಯಕ್ತಿತ್ವ, ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಬದ್ಧತೆಯೇ ಅವರ ನಿಜವಾದ ಗುರುತು. ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿವೆ. ಆಳ್ವಾಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅವರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಾಸಕ ಗುರುರಾಜ ಗಂಟಿಹೊಳೆ ಅವರ ಕಲ್ಪನೆಯಂತೆ ಯುವಜನರಲ್ಲಿ ಸ್ವಾವಲಂಬನೆ ಮತ್ತು ಉದ್ಯಮಶೀಲತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಆಯೋಜಿಸಲಾದ “ಭೀಮೋದ್ಯಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವ ಜನತೆಗೆ ಅವರ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಸಾಲ ಸೌಲಭ್ಯವನ್ನು ನೀಡಲು ಇಲಾಖೆಗಳು ಶ್ರಮ ವಹಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಬಾರಿಗೆ ಬೈಂದೂರು ಕ್ಷೇತ್ರದ ಶಾಸಕರು ಭೀಮೋದ್ಯಮ ಎನ್ನುವ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರಿಂದ ಪ್ರೇರಿತರಾಗಿ ಒಂದಿಷ್ಟು ಯುವಜನತೆ ಉದ್ಯೋಗ ಆರಂಭಿಸಿ ಅವರು ಹತ್ತಾರು ಜನರಿಗೆ ಉದ್ಯೋಗ ನೀಡಿದರೆ ಈ ಕಾರ್ಯಕ್ರಮ ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು. ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮುಂಗಾರು ಮಳೆ ಸಿನೆಮಾ ಖ್ಯಾತಿಯ ಚಿತ್ರನಟ ಗೋಲ್ಡನ್ ಸ್ಟಾರ್ ಗಣೇಶ್ ಸಾಲಿಗ್ರಾಮ ದೇವಸ್ಥಾನ ಹಾಗೂ ಆಂಜನೇಯ ದೇವಸ್ಥಾನದ ದೇವರ ದರ್ಶನ ಪಡೆದರು. ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ ಕಾರಂತರು ಗಣೇಶರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ ಹಾಗೂ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಕೂ ಮ ಜ ಸಾಲಿಗ್ರಾಮ ಅಂಗ ಸಂಸ್ಥೆಯ ಅಧ್ಯಕ್ಷ ಪಿ. ಚಂದ್ರಶೇಖರ ಹೊಳ್ಳ,ಬ್ರಾಹ್ಮಣ ಸಭಾ ಸಾಲಿಗ್ರಾಮದ ಅಧ್ಯಕ್ಷ ಪಟ್ಚಾಭಿ ರಾಮಚಂದ್ರ ಸೋಮಯಾಜಿ, ಕಾರ್ಯದರ್ಶಿ ರಾಜರಾಮ ಐತಾಳ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿಂದೂ ರುದ್ರಭೂಮಿಗೆ ತಮ್ಮಶಾಸಕ ನಿಧಿಯಿಂದ ಒಂದು ಹಂತದಲ್ಲಿ ಕಾರ್ಯನಿರ್ವಹಣೆಗೆ ಯೋಗ್ಯ ವಾತಾವರಣ ಕಲ್ಪಿಸಿದರೆ ಇನ್ನುಳಿದ ಅಭಿವೃದ್ಧಿಯನ್ನು ದಾನಿಗಳ ಸಹಕಾರ ಪಡೆದು ನಿರ್ಮಿಸಿಕೊಳ್ಳಬಹುದು ಎಂದು ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು. ಅವರು ಕೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೋಡಿ ತಲೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಮ್ಮ ಶಾಸಕರ ಅನುದಾನದಡಿ ಹಿಂದೂ ರುದ್ರಭೂಮಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಗ್ರಾಮದ ಕೆಲ ಪ್ರದೇಶಕ್ಕೆ ಅನುಗುಣವಾಗಿ ಹಿಂದೂ ರುದ್ರಭೂಮಿ ಅಗತ್ಯ ಈ ದಿಸೆಯಲ್ಲಿ ಕೋಡಿ ತಲೆ ಗ್ರಾಮದ ಬಹುಕಾಲದ ಬೇಡಿಕೆಯ ರುದ್ರಭೂಮಿ ಕನಸು ಸಾಕಾರಗೊಂಡಂತ್ತಾಗಿದೆ ಎಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶವಸಂಸ್ಕಾರದ ಸಿಲಿಕಾನ್ ಛೇಂಬರ್ ಅನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಉದ್ಘಾಟಿಸಿದರು. ಅನುದಾನ ಒದಗಿಸಿದ ಶಾಸಕರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕೋಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಮಾಜಿ ಅಧ್ಯಕ್ಷೆ ಗೀತಾ ಖಾರ್ವಿ, ಮಾಜಿ ಸದಸ್ಯರಾದ ಕೃಷ್ಣ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಪರಿಚಯ ಹೋಟೆಲ್‌ನ ದಕ್ಷಿಣ ಬದಿಯ ಗ್ಯಾರೇಜ್ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಕೋಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೈಂದೂರು ಪೊಲೀಸ್ ಉಪನಿರೀಕ್ಷಕರಾದ ಸುನಿಲ್ ಕುಮಾರ ಬಿ.ಎನ್. ಅವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಾದ ಉಪ್ಪುಂದ ಗ್ರಾಮದ ಸಚಿನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿಯಿದ್ದ VIVO V20 ಮೊಬೈಲ್ ಫೋನ್ ಸ್ವಾದೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘ ಹಾಗೂ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಯಕ್ಷಗಾನ ಗೊಂಬೆಯಾಟ ರಂಗಭೂಮಿಗೆ ವಿದ್ಯಾರ್ಥಿಗಳು ಅಧ್ಯಯನ ಭೇಟಿ ನಡೆಸಿದರು. ಉಪ್ಪಿನಕುದ್ರು ದೇವಣ್ಣ ಪದ್ಮನಾಭ ಕಾಮತ್ ಸ್ಮಾರಕ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ನ ಅಧ್ಯಕ್ಷರಾದ ಭಾಸ್ಕರ ಕೊಗ್ಗ ಕಾಮತ್ ಅವರು ವಿದ್ಯಾರ್ಥಿಗಳಿಗೆ ಗೊಂಬೆಯಾಟ ಕುರಿತು ವಿಸ್ತೃತ ಮಾಹಿತಿ ನೀಡಿದರು. ಕರ್ನಾಟಕದ ಜನಪದ ಕಲಾಪರಂಪರೆಯಲ್ಲಿ ಯಕ್ಷಗಾನ ಗೊಂಬೆಯಾಟವು ವಿಶಿಷ್ಟ ಹಾಗೂ ಅಪರೂಪದ ಸ್ಥಾನವನ್ನು ಪಡೆದಿದೆ. ಸುಮಾರು 12ನೇ ಶತಮಾನದಿಂದಲೇ ಈ ಕಲೆ ಆರಂಭವಾಗಿದೆ ಎಂದು ಹೇಳಲಾಗುತ್ತದೆ. ಈ ಕಲೆ ಕೇವಲ ಮನರಂಜನೆಯ ಸಾಧನವಲ್ಲ; ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಸತ್ವವನ್ನು ಪ್ರತಿಬಿಂಬಿಸುವ ಅದ್ಭುತ ಕಲಾ ರೂಪವಾಗಿದೆ. ಕಳೆದ 350 ವರ್ಷಗಳಿಂದಲೂ ತೀರ ಅಳಿವಿನಂಚಿನಲ್ಲಿರುವ ಗೊಂಬೆಯಾಟ ಕಲೆಯನ್ನು ನಿರಂತರವಾಗಿ ಆರು ತಲೆಮಾರುಗಳಿಂದ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಹಾಗೂ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೂಜಿ ಸಮೀಪ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಸ್ಕತ್ತೂರು ನಿವಾಸಿ ಮಂಜುನಾಥ (47) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು. ರಾತ್ರಿ ಊಟದ ಬಳಿಕ ಮನೆಯ ಹೊರಗೆ ಕುಳಿತಿದ್ದ ಮಂಜುನಾಥ ಬಳಿಕ ಕಾಣೆಯಾಗಿದ್ದು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಅಂಗನವಾಡಿ ಶಾಲೆಯ ಎದುರಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಪತ್ನಿ ಲಕ್ಷ್ಮಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರದ ಮೂಡುಬಗೆ ಬಳಿಯ ಬಾಳ್ಕಟ್ಟು ಸೇತುವೆ ಬಳಿ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ. ಬಸವ ನಾಯ್ಕ (80) ಮೃತಪಟ್ಟರು. ಬಸ್ ಸಿದ್ದಾಪುರದಿಂದ ಕುಂದಾಪುರದ ಕಡೆಗೆ ಸಾಗುತ್ತಿತ್ತು. ಬೈಕ್ ಸವಾರ ಅಂಪಾರು ಕಡೆಯಿಂದ ತನ್ನ ಮನೆ ಶಾನ್ಕಟ್ಟು ಕಡೆಗೆ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಸವ ನಾಯ್ಕ ಅವರನ್ನು ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು, ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ -26 ಎಂಬ ಶಿಕ್ಷಕರ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಶಿಕ್ಷಕರ ಕೌಶಲ್ಯ ಅಭಿವೃದ್ಧಿಗೆ ಪೂರಕವಾದ ಈ ಕಾರ್ಯಗಾರವನ್ನು ಸತೀಶ್ ಆರ್ ಬಂಗೇರ ಇಂಗ್ಲೀಷ ಉಪನ್ಯಾಸಕರು ಮೂಡುಬಿದರೆ ಅವರು ಉದ್ಘಾಟಿಸಿ ಮಾತನಾಡಿ, ದೇಶದ ಬೆನ್ನೆಲುಬಾದ ಶಿಕ್ಷಕರು ಇಡೀ ಸಮಾಜದ ಆರೋಗ್ಯಕರ ಬೆಳವಣಿಗೆಗೆ ಶ್ರಮಿಸುವವರು. ಶಿಕ್ಷಕ ವೃತ್ತಿ ಬೇರೆ ಎಲ್ಲಾ ಪ್ರತಿಪರ ಬದುಕನ್ನು ಸೃಷ್ಟಿಸುತ್ತದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಬೇಕಾದರೆ ಶಿಕ್ಷಕರ ಕಲಿಕಾ ಸಾಮರ್ಥ್ಯ ಅರ್ಥಪೂರ್ಣವಾಗಿರಬೇಕು. ವರ್ತಮಾನದ ಶಿಕ್ಷಕರ ಸಮಸ್ಯೆಗಳು ಪರಿಹಾರಗೊಂಡಾಗ ಆರೋಗ್ಯಕರ ವಾತಾವರಣ ಸೃಷ್ಟಿಯಾಗಲು ಸಾಧ್ಯ ಎಂದರು. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ಈ ಕಾರ್ಯಗಾರಕ್ಕೆ ಶುಭ ಕೋರಿದರು. ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಕರು ಶಾಶ್ವತ ವಿದ್ಯಾರ್ಥಿಗಳು ಅವರ ಕಲಿಕೆಗೆ ಕೊನೆ ಎಂಬುದಿಲ್ಲ. ಶಿಕ್ಷಕರ ಕಲಿಕಾ ಸಾಮರ್ಥ್ಯ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ಯೋಜನೆ ವಿಳಂಬದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎನ್ನುವ ಸಂಸದ ಬಿ. ವೈ. ರಾಘವೇಂದ್ರರವರ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿರುತ್ತಾರೆ. 1979 ರಂದು ಅಂದಿನ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ರವರು ವರಾಹಿ ಮೂಲ ಯೋಜನೆಗೆ ಶಂಖುಸ್ಥಾಪನೆ ಮಾಡಿದರು. ಇದು ಅಂದಿನ ಅಂದಾಜು ಮೊತ್ತ ಒಂಬತ್ತು ಕೋಟಿ ಅದರಲ್ಲಿ ಬಲ ದಂಡೆ, ಎಡ ದಂಡೆ ಮತ್ತು ಏತ ನೀರಾವರಿ ಕಾಲುವೆ ಮುಖಾಂತರ ಕುಂದಾಪುರ ತಾಲ್ಲೂಕು ಮತ್ತು ಅಂದಿನ ಉಡುಪಿ ತಾಲ್ಲೂಕಿನ ಬ್ರಹ್ಮಾವರದ ತನಕ ಸುಮಾರು ಹದಿನೆಂಟು ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರು ಹಾಯಿಸುವ ಯೋಜನೆ. ಆದರೆ ಸಂಸದರು ಹೇಳುವಂತೆ ಈ ಯೋಜನೆ ವಿಳಂಬಕ್ಕೆ ಯಾವುದೇ ಖಾಸಗಿ ವಿದ್ಯುತ್ ಉತ್ಪಾದಕರಾಗಲಿ ಇಲ್ಲಾ ರಾಜಕೀಯ ಹಿತಾಸಕ್ತಿಗಳಾಗಲಿ ಕಾರಣವಲ್ಲಾ. ಜನಪ್ರತಿನಿದಿನಗಳ ಇಚ್ಚಾಶಕ್ತಿಯ ಕೊರತೆ …
