ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ. ಸರೋಜ ಎಂ. ಇವರಿಗೆ ಯುಥ್ ಎಫರ್ಟ್ಸ್ ಫಾರ್ ಸೊಸೈಟಿ ಇವರು ಕೊಡಮಾಡುವ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕಿ ಪ್ರಶಸ್ತಿ ಮತ್ತು ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್ ಗೌರವ ದೊರೆತಿದೆ. ಇವರಿಗೆ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು. ಉಡುಪಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಜೀವನ್ ಕುಮಾರ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ತ್ರೋಬಾಲ್ ಪಂದ್ಯಾಟದ ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶುಭ ಹಾರೈಸಿದರು. ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷ ಸ್ಥಾನ ವಹಿಸಿ ಆರೋಗ್ಯ ಸದೃಡವಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟದ ಸಹಭಾಗಿತ್ವದಲ್ಲಿ ನೀಡಲಾಗುತ್ತಿರುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2023ರ ಸಾಲಿನಲ್ಲಿ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ವಿದ್ಯಾಭೂಷಣ್ ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ| ಬಿ.ಎಂ. ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಇದರ 63ನೇ ವಾರ್ಷಿಕ ಮಹಾಸಭೆ ಕುಂದಾಪುರದ ಶೆರೋನ್ ಸಂಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಎಚ್. ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಯ ಹಾದಿಯನ್ನು ಮೆಲುಕು ಹಾಕಿದರು. ತಾಲೂಕಿನ ಎಲ್ಲಾ ಸಹಕಾರಿ ಸಂಘಗಳ ಸಹಕಾರವನ್ನು ಸ್ಮರಿಸಿ ಅಭಿನಂದನೆ ತಿಳಿಸಿದರು. ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್ ಸ್ವಾಗತಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ವಂದಿಸಿದರು. ನಿರ್ದೇಶಕರಾದ ಮೋಹನ್ ದಾಸ್ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ. ಭುಜಂಗ ಶೆಟ್ಟಿ ವಂಡ್ಸೆ, ರವಿ ಗಾಣಿಗ, ಕೆ. ಮೋಹನ್ ಪೂಜಾರಿ, ಆನಂದ ಬಿಲ್ಲವ, ಕೆ. ಸುಧಾಕರ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಸ್. ಜಯರಾಮ ಶೆಟ್ಟಿ ಬೆಳ್ವೆ, ಚಂದ್ರಶೇಖರ ಶೆಟ್ಟಿ, ದಿನಪಾಲ ಶೆಟ್ಟಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಣಮಟ್ಟದ ಸೇವೆಯ ಮೂಲಕ ಹೆಸರಾಗಿರುವ ಉಡುಪಿಯ ಫಿಸಿಯೋಕೇರ್ ಸೆಂಟರ್ನ ನೂತನ ಶಾಖೆ ಸೆ.09ರಂದು ಕುಂದಾಪುರದಲ್ಲಿ ಶುಭಾರಂಭಗೊಳ್ಳಲಿದೆ. ಗಿರಿಜಾ ಹೆಲ್ತ್ಕೇರ್ ಮತ್ತು ಸರ್ಜಿಕಲ್ಸ್ ಮೂಲಕ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿರುವ ಗಿರಿಜಾ ಗ್ರೂಪ್ಸ್ನ ಅಂಗಸಂಸ್ಥೆಯಾಗಿರುವ ಫಿಸಿಯೋಕೇರ್ ಸೆಂಟರ್ ಕುಂದಾಪುರದಲ್ಲಿಯೂ ಕಾರ್ಯಾಚರಿಲಿದೆ. ಸೆ.9ರ ಸಂಜೆ 5:30ಕ್ಕೆ ಪಾರಿಜಾತ ಹೋಟೆಲ್ ಎದುರಿನ ಅಥರ್ವ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಫಿಸಿಯೋಕೇರ್ – ಫಿಸಿಯೋಥೆರಪಿ ಹಾಗೂ ರಿಹ್ಯಾಬಿಲಿಟೆಷನ್ ಸೆಂಟರ್ ಆಗಿದ್ದು, ಅಲ್ಪ ಕಾಲದ ಹಾಗೂ ಧೀರ್ಘ ಕಾಲದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದೊಂದು ಉತ್ತಮ ಆಯ್ಕೆಯಾಗಿದೆ. ಇದು ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದ್ದು, ಕುಂದಾಪುರದ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ನ ಪ್ರವರ್ತಕರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು ಅವರು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಹುಯ್ಯಾರು ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ. ಕಿಶನ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ. ದಿನೇಶ ಹೆಗ್ಡೆ, ಮುನಿಯಾಲು ಉದಯ ಕುಮಾರ ಶೆಟ್ಟಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿಕ್ರಾಸ್ ಇಗರ್ಜಿಯಲ್ಲಿ ಮೊಂತಿ ಫೆಸ್ತ್ (ತೆನೆ ಹಬ್ಬ) ಸಂಭ್ರಮದಿಂದ ಆಚರಿಸಲಾಯಿತು. ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಹಾಗೂ ಕಟ್ಕೇರಿಯ ಜೋಸ್ವೀ ಡಿಸೋಜಾ ರವರ ನೇತೃತ್ವದಲ್ಲಿ ಬಾಲೆ ಮರಿಯಮ್ಮಳಿಗೆ ಹೂವುಗಳನ್ನು ಅರ್ಪಿಸಿ, ತೆನೆಗಳ ಆಶೀರ್ವಚನ ನಡೆಸಲಾಯಿತು. ಬಳಿಕ ಮಾತೆಯ ನಾಮಕ್ಕೆ ಸ್ತುತಿಗೀತೆಗಳನ್ನು ಹಾಡುತ್ತಾ ಆಶೀರ್ವಾದಿತ ತೆನೆಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ವಿಶೇಷ ಬಲಿಪೂಜೆಯನ್ನು ನೆರೆವೆರಿಸಿ, ಎಲ್ಲರಿಗೂ ತೆನೆ ಮತ್ತು ಕಬ್ಬುಗಳನ್ನು ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.07: ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಿ ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಅರ್ಹ ಫಲಾನುಭವಿಗಳಿಗೆ ತಲಪುವ ಹಾಗೆ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈವರೆಗೆ 2,56,850 ಗುರಿ ಹೊಂದಿ 2,11,478 ರಷ್ಟು ನೋಂದಣಿಯಾಗಿ ಶೇಕಡಾ 82.34 ರಷ್ಟು ಆಗಿದ್ದು, ಈಗಲೂ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ರೇಷನ್ ಕಾರ್ಡ್ ನ ಸಮಸ್ಯೆಗಳು ಅಥವಾ ಆನ್ ಲೈನ್ ಪೋರ್ಟಲ್ಲಿನ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು. ಇಂದು ಹಿರಿಯಡ್ಕದ…
ನಮ್ಮೂರಂಗ್ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂದ್ ಕೂಡ್ಲೆ ಮನಿಯಂಗ್ ಮಾಡು ಹಬ್ಬದ್ ಜೊತಿಗೇ ಉಡುಪಿ ಮಠದ್ ಹಬ್ಬ ನೆನ್ಪ್ ಆಪುದ್ ಜಾಸ್ತಿ. ಎಲ್ಲಾ ಬದ್ಯಂಗ್ ಆಪಂಗೇ ಮನ್ಯಗಂತು ಹಬ್ಬ ಮಾಡತ್ತ್; ಮಠಕ್ಕ್ ಯಾಕ್ ಹೋಯಿಕ್ ಅಂದೇಳಿ ನೀವ್ ಕೇಂಡ್ರೆ, ನಾನ್ ಹೇಳುದ್ ಒಂದೇ ಮಾತ್; ಯಾಸ ಕಾಂಬುಕೆ. ಅದೇ ಹುಲಿಯಾಸ. ಯಾಬ್ಯಾ, 2-3 ಜಿಲ್ಲೆ ಇಂದ ಮಠಕ್ಕ್ ಬಪ್ಪು ಹುಲಿಯಾಸ ಕಂಡ್ಕಂಡ್ ಹೆದ್ರದೆ ಇಪ್ಪು ಮಕ್ಕಳೇ ಇಲ್ಲ. ಅವ್ರ್ ಓಟಿಗ್ ಒಂಚೂರ್ ಕುಣಿದೆ ಇಪ್ಪು ಜನವೇ ಇಲ್ಲ. ಹುಲಿಯಸದ್ ಚಂಡಿ ಮುಂದೆ ಯಾವ್ ಡಿಜೆಯೂ ಇಲ್ಲಾ ಕಾಣಿ. ಒಂದ್ ಸರ್ತಿ ಹುಲಿಯಾಸಾ ಹಾಕ್ದವ ಉಳ್ದರನ್ ಕುಣಿಸ್ದೆ ಬಿಡುದಿಲ್ಲ. ಇದ್ರದ್ ಒಂದ್ ನಮ್ನಿ ಗುಂಗ್ ಆರೆ ವಿಟ್ಲಪಿಂಡಿ ಗಮ್ಮತ್ತೆ ಬೇರೆ. ತೇರ್ ಎದ್ರ್ ನಡು ವಿಟ್ಲಪಿಂಡಿಯಂಗೆ ಕೈಗೆ ಸಿಕ್ದೆ ಇಪ್ಪು ಮಾಡ್ಕಿಗ್ ಕೊಕ್ಕಿ ಹಾಕುರೊಳ್ಗೆ ಆರ್ಜೀವ ಆಯಿ ಹೊತ್ತ್. ಇದ್ರ್ ಮೇಲೆ ಕಂಬುಕ್ ಸಿಕ್ಕುದ್ ರಾಕ್ಷಸರ್ ಗುಂಪ್ ಮತ್ತ್ ಗುಮ್ಮದ್ ಗಂಪ್. ಇವ್ರೆಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಟಿಕೇಟ್ ಕೈತಪ್ಪಿದಾಗಿನಿಂದ ಬಿಜೆಪಿ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಇದೀಗ ಬಹಿರಂಗವಾಗಿಯೇ ತಮ್ಮ ಅಸಮಾಧಾನ ತೋಡಿಕೊಂಡಿರುವುದಲ್ಲದೇ ಪಕ್ಷ ತೊರೆಯುವುದಾಗಿ ಹೇಳಿಕೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದರು ಅವರು, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 2013ರಿಂದ ಬೈಂದೂರು ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸಿದ್ದೆ. ಬಿಜೆಪಿ ಪಕ್ಷದಿಂದ ಶಾಸಕನಾಗಿದ್ದ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯವನ್ನು ಮಾಡಿದ್ದೇನೆ. ಆದಾಗ್ಯೂ ಬಿಜೆಪಿಯಲ್ಲಿ ಬೆಳೆಯಲು ಕೊಡಲಿಲ್ಲ. ಇದು ನನ್ನ ಮನಸಿಗೆ ನೋವಾಗಿದೆ. ಕರಾವಳಿಯಲ್ಲಿ ಸ್ವಲ್ಪ ಬಿಜೆಪಿ ಪರ ಅಲೆ ಇರಬಹುದು. ಕರ್ನಾಟಕದಲ್ಲಿ ಬಿಜೆಪಿ ನೆಲೆ ಕಳೆದುಕೊಂಡಿದೆ. ನಾಲ್ಕು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆಮಾಡಲಾಗದ ಬಿಜೆಪಿ ಇನ್ನೇನು ಮಾಡಲು ಸಾಧ್ಯ ಎಂದು ಟೀಕಿಸಿರುವ ಅವರು, ಸದ್ಯದಲ್ಲಿಯೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಬೈಂದೂರು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ. ಗೋಪಾಲ…
