ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಜಿಲ್ಲೆ 317 ಸಿ ವ್ಯಾಪ್ತಿಗೆ ಒಳಪಡುವ ಪ್ರತಿಷ್ಠಿತ ಲಯನ್ ಕ್ಲಬ್ ಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್‌ನ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಶ್ರೀ ದೇವಿ ಕಂಗನ್ ಸ್ಟೋರ್ ಹಾಗೂ ಶ್ರೀದೇವಿ ಸಿಲ್ವರ್‌ನ ಮಾಲೀಕರು, ಕೋಸ್ಟಲ್ ಕ್ಲಬ್‌ನ ಸ್ಥಾಪಕ ಸದಸ್ಯರು ಆದ ಗಣೇಶ್ ಬೈಂದೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವೀಧರರಾದ ಅವರು ದಿ. ವಾಸುದೇವ ಬಳೆಗಾರ ಮತ್ತು ಲಕ್ಷ್ಮಿ ಬಳೆಗಾರ ದಂಪತಿಯ ಸುಪುತ್ರರಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳು ಪದವಿ ಪೂರ್ವ ನಂತರ ಸಿಎ ಕೋರ್ಸ್ ಮಾಡುವುದರ ಬಗ್ಗೆ ಮತ್ತು ಆ ಕೋರ್ಸಿಗಿರುವ ಉದ್ದೇಶದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾದ ಸಿ.ಎ. ಸಂತೋಷ್ ಪ್ರಭು ಅವರು ಸಿ.ಎ, ಸಿ.ಎಸ್, ಸಿ.ಎಂ. ಎ ಕೋರ್ಸ್ ನ ಬಗ್ಗೆ, ಅದರಲ್ಲಿರುವ ವಿಷಯಗಳ ಕುರಿತು ತರಬೇತಿ ಹಾಗೂ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಿತಿಕ ಗಾಣಿಗ ಸ್ವಾಗತಿಸಿ, ಸಾಕೇತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯ ಶಿಕ್ಷಣ ಪದ್ಧತಿಯಂತೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) – ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ / ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ htts://uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯು ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜುಲೈ 6ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂಖ್ಯೆ: 0821-2438931 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆರಿ., ಕಾರ್ಕಳ ತಾಲೂಕು ಹಾಗೂ ಕಾರ್ಕಳ ನಗರ ಆರಕ್ಷಕ ಠಾಣೆ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದ ಜಂಟಿ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಎಂಬ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಕಳ ನಗರ ವಲಯದ ಪೊಲೀಸ್ ಉಪನಿರೀಕ್ಷಕರಾದ ಶಿವಕುಮಾರ್ ಎಸ್.ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅದಃಪತನಕ್ಕೆ ಕಾರಣವಾಗುತ್ತದೆ. ಯುವ ಜನತೆ ದೇಶಕ್ಕೆ ಶಕ್ತಿಯಾಗಿ ಪೂರಕವಾಗಬೇಕೇ ವಿನಹ ಮಾರಕವಾಗಬಾರದು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ವಹಿಸಿ ಮಾತನಾಡಿ, ವೈದ್ಯರು ತಮ್ಮ ನಿಸ್ವಾರ್ಥ ಸೇವೆ, ಕಾಳಜಿ ಹಾಗೂ ತ್ಯಾಗದಿಂದ ಅಸಂಖ್ಯಾತ ಜೀವಗಳನ್ನು ಉಳಿಸುತ್ತಿದ್ದಾರೆ. ಅವರ ಸೇವೆಯನ್ನು ಸದಾ ಗೌರವಿಸಬೇಕು ಮತ್ತು ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು ಎಂದು ಕರೆ ನೀಡಿದರು. ವೈದ್ಯರ ಸಮರ್ಪಣಾ ಮನೋಭಾವವು ಸಮಾಜಕ್ಕೆ ಆದರ್ಶವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ರಾಜೇಶ್ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಭಾಷಣದಲ್ಲಿ ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಮಾನವೀಯ ಸೇವೆಯ ಶ್ರೇಷ್ಠ ರೂಪವಾಗಿದೆ. ಆರೋಗ್ಯಕರ ಜೀವನಶೈಲಿ, ಸ್ವಚ್ಛತೆ, ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಹಾಗೂ ಸಮಯಕ್ಕೆ ಸರಿಯಾದ ವೈದ್ಯಕೀಯ ತಪಾಸಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಾರ್ಜಾ: ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026–28ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬಾಯಿಯ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನಲ್ಲಿ ಅತ್ಯಂತ ನೆರವೇರಿತು. ಸಂಘದ ಪಥ ಹಾಗೂ ಸಾಧನೆಗಳ ಕುರಿತು ಸತೀಶ್ ಪೂಜಾರಿ ಅವರು ಮಾಹಿತಿ ನೀಡಿದರು. ಬಳಿಕ ಸಂಘದ ಬೈಲಾ ಕುರಿತು ಗಣೇಶ್ ರೈ ಅವರು ಸದಸ್ಯರಿಗೆ ವಿವರಿಸಿದರು. ನಂತರ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪರಿಚಯ ನಡೆಯಿತು. ನಂತರ ಕರ್ನಾಟಕ ಸಂಘ ಶಾರ್ಜಾದ ಪೂರ್ವ ಅಧ್ಯಕ್ಷರು ಗಣೇಶ್ ರೈ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಅಧಿಕೃತವಾಗಿ ಪದಗ್ರಹಣ ಪ್ರಮಾಣ ವಚನ ಬೋಧಿಸಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಅವರು ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಸಂಘದ ಅಭಿವೃದ್ಧಿ, ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ವೃತ್ತಿ ಹಾಗೂ ವೈಯಕ್ತಿಕ ಆಸಕ್ತಿಗಳ ನಡುವೆ ಸಮತೋಲನ ಕಾಪಾಡಿಕೊಂಡು ನಿರಂತರ ಪ್ರಯತ್ನ ಮಾಡಿದಾಗ ಮಾತ್ರ ದೊಡ್ಡ ಸಾಧನೆ ಸಾಧ್ಯ ಎಂದು ಆಧ್ಯಾತ್ಮಿಕ ಕಂಟೆಂಟ್ ಕ್ರಿಯೇಟರ್ ‘ಟೆಂಪಲ್ ಗರ್ಲ್’ ಖ್ಯಾತಿಯ ನಮೃತಾ ಮೋಹನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ಬೆಳಂದಿಗಳ ಚಿಂತನಾ ಆವೃತ್ತಿಯ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಕಂಟೆಂಟ್ ಸೃಷ್ಟಿ, ವೃತ್ತಿ ಆಯ್ಕೆ, ಆಧ್ಯಾತ್ಮಿಕತೆ ಹಾಗೂ ಸಮಕಾಲೀನ ಸಾಮಾಜಿಕ ವಿಚಾರಗಳ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ವೃತ್ತಿ ಮತ್ತು ಆಸಕ್ತಿಯ ನಡುವಿನ ಸಮತೋಲನದ ಕುರಿತು ಮಾತನಾಡಿದರು. ತಮ್ಮ ಆರಂಭಿಕ ಜೀವನದ ಹೋರಾಟವನ್ನು ಹಂಚಿಕೊಂಡು. 19ನೇ ಪ್ರಯತ್ನದಲ್ಲಿ ಜೆ.ಪಿ. ಮಾರ್ಗನ್ ಸಂಸ್ಥೆಯಲ್ಲಿ ಉದ್ಯೋಗ ದೊರೆತಿದ್ದು, ಬಳಿಕ ಸಿಟಿಬ್ಯಾಂಕ್ ಹಾಗೂ ವಾಲ್ಟ್ ಡಿಸ್ನಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸಿದ ಪ್ರಸಂಗವನ್ನು ವಿವರಿಸಿದರು. ವಿಡಿಯೋ ನಿರ್ಮಾಣದ ಯಾವುದೇ ಹಿನ್ನೆಲೆಯಿಲ್ಲದಿದ್ದರೂ, ಬಳಿಕ ಪತಿಯೊಂದಿಗೆ ಕಾರ್ಪೊರೇಟ್ ಜೀವನ ತೊರೆದು ದೇವಾಲಯಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆ ವತಿಯಿಂದ ಮಾದಕ ವ್ಯಸನ ವಿರೋಧಿ ಜಾಗೃತಿ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ರ‍್ಯಾಲಿಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. “ಮಾದಕ ವ್ಯಸನಕ್ಕೆ ಇಲ್ಲ, ಆರೋಗ್ಯಕರ ಜೀವನಕ್ಕೆ ಹೌದು”ಎಂಬ ಘೋಷಣೆಗಳೊಂದಿಗೆ. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳನ್ನು ತಿಳಿಸುವ ಫಲಕಗಳನ್ನು ಪ್ರದರ್ಶಿಸಿ , ರೋಲ್ ಪ್ಲೇ ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿಯೂ ಭಾಗವಹಿಸಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಈ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಜೊತೆಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಬಲಪಡಿಸಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜಯ ಗಾಂಧಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಪ್ರತಿಷ್ಠಿತ ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಭಾಗವಹಿಸಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು. ವೇದಿಕೆಯಲ್ಲಿ ಶೈಕ್ಷಣಿಕ ಸಂಚಾಲಕರಾದ ಸುಭಾಷ್ಚಂದ್ರ ಶೆಟ್ಟಿ ಕೊಡ್ಲಾಡಿ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ, ಉಮೇಶ್ ಕೊಠಾರಿ, ಹಾಗೂ ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಭರತ್ ಶೆಟ್ಟಿ ಮಾತನಾಡಿ, ಯಾವುದೇ ಆರ್ಥಿಕ ಮೂಲವಿಲ್ಲದೆ ಸಮಾಜಸೇವೆಯ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೋಟಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನರ ನಡೆದಿದೆ. ಮೃತರನ್ನು ಗುಜ್ಜಾಡಿಯ ಗಣೇಶ ರಾಮಕೃಷ್ಣ ಆಚಾರ್ಯ(43) ಎಂದು ಗುರುತಿಸಲಾಗಿದೆ. ಅವರು ಜೂ.20ರಂದು ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿರುವ ಮಂಜುನಾಥ ಖಾರ್ವಿ ಎಂಬವರ ಬೋಟಿನ ಮರದ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
