ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬಿಜೆಪಿಯ ನೂತನ ಪದಾಧಿಕಾರಿಗಳ ತಂಡವು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಇತ್ತಿಚಿಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಸಲಹೆ ಸೂಚನೆ ಪಡೆದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಭೇಟಿ ಬಳಿಕ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಿಜೆಪಿ ಯುವ ಪಡೆ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿಯಾಗಿರುವು ಮತ್ತು ಕುತೂಹಲ ಹುಟ್ಟುಹಾಕಿದೆ. ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಕುಂದಾಪುರ, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪಕ್ಷದ ಮುಖಂಡರಾದ ಸಂಪತ್ ಶೆಟ್ಟಿ ಶಾನಾಡಿ, ಪ್ರವೀಣ್ ಶೆಟ್ಟಿ ವಂಡಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಿಂದ ಹೊರಟು ನಾಯ್ಕನಕಲ್ಲು ಎಂಬಲ್ಲಿ ತೆರಳಿ ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್, ಬೈಂದೂರು ತಹಶಿಲ್ದಾರ್ ಪ್ರದೀಪ್ ಅವರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸ್ಥಳಿಯರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಮುದ್ರದಲ್ಲಿ ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ ಡಾ. ಶಿವರಾಮ ಕಾರಂತ ವಿಶೇಷ ಸಾಧಕ ಸ್ತ್ರೀ ಪುರಸ್ಕಾರಕ್ಕೆ ಕುಂದಾಪುರದ ವಿಶೇಷ ಚೇತನ ಯುವತಿ ಸೃಜನಾ ಎಸ್ ಪಿ ಅವರನ್ನು ಆಯ್ಕೆ ಮಾಡಲಾಗಿದೆ. ಹುಟ್ಟು ಕಿವುಡುತನದೊಂದಿಗೆ ಮೂಕಿಯಾಗಿರುವ ದಿಟ್ಟ ಹುಡುಗಿಯೊಬ್ಬಳು ತನ್ನ ಅಹರ್ನಿಶಿ ಶ್ರಮದೊಂದಿಗೆ ತನ್ನ ಕನಸನ್ನು ಬೆನ್ನೇರಿಕೊಂಡು ಸಾಧನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಕ್ರಿಕೆಟ್ ಎಂದರೆ ಪ್ರಾಣಕ್ಕಿಂತಲೂ ಹೆಚ್ಚಾಗಿ ಪ್ರೀತಿಸುವ ಈಕೆ ಹರಿಯಾಣದಲ್ಲಿ ನಡೆಯಲಿರುವ ಟಿ-10 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ ಆಗುವುದರ ಮೂಲಕ ವಿಶೇಷ ಚೇತನ ಮಕ್ಕಳಿಗೆಲ್ಲ ರೋಲ್ ಮಾಡಲ್ ಆಗುವುದರ ಮೂಲಕ ಪ್ರಯತ್ನಕ್ಕಿಂತ ದೊಡ್ಡದು ಯಾವುದು ಇಲ್ಲ ಎಂಬ ಸಾಧನೆಯ ಮೂಲಕ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಆಫ್ ದಿ ಡೆಫ್ ಆಯೋಜಿಸಿರುವ ಪ್ರಥಮ ರಾಜ್ಯ ಮಟ್ಟದ ಟಿ-10 ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಐಎಎಸ್ ಹೇಳಿದರು. ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತಿಚಿಗೆ ಯುವಜನತೆ ಚುನಾವಣೆಯಿಂದ ವಿಪುಖರಾಗುತ್ತಿರುವುದು ಕಂಡುಬರುತ್ತಿದೆ. ಚುನಾವಣಾ ದಿನವೆಂದರೆ ರಜಾ ದಿನವಲ್ಲ. ಸಂವಿಧಾನ ನಮಗೆ ನೀಡುವ ಹಕ್ಕು ಹಾಗೂ ಜವಾಬ್ದಾರಿಯನ್ನು ನಿಭಾಯಿಸಲು ಮತದಾನ ಮಾಡುವುದು ಅಗತ್ಯ. ವಿಧಾನಸಭಾ ಚುನಾವಣೆಯಲ್ಲಿ ಶೇ.22 ಮಂದಿ ಮತ ಚಲಾಯಿಸಿಲ್ಲ. ಶೇ.100 ಮತದಾನ ಮಾಡುವ ಕಾರ್ಯವಾಗಬೇಕು ಎಂದರು. ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಸಹಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗೋಪಾಲ ಪೂಜಾರಿ ಅವರ ಸೋಲು ಇಂದಿಗೂ ನಮಗೆ ಆಘಾತಕಾರಿಯಾಗಿದ್ದು, ಅವರ ಸೋಲಿನ ನೋವನ್ನು ಗೀತಾ ಶಿವರಾಜಕುಮಾರ್ ಅವರ ಗೆಲುವಿನೊಂದಿಗೆ ಮರೆಯೋಣ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. ಅವರು ಬೈಂದೂರು – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೂರು ಸಾಲಿಮಕ್ಕಿಯಲ್ಲಿ ಗುರುವಾರ ಜರುಗಿದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ದಿವಂಗತ ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನರಿಗಾಗಿ ನೀಡಿದ ಕೊಡುಗೆಗಳು ಇಂದಿಗೂ ಜಾರಿಯಲ್ಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ನೀಡಿದ ಗ್ಯಾರೆಂಟಿ ಯೋಜನೆಗಳು ಪ್ರತಿ ಮನೆಯನ್ನೂ ತಲುಪಿದೆ. ಗೀತಾ ಶಿವರಾಜಕುಮಾರ್ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಅವರನ್ನು ಗೆಲ್ಲಿಸುವ ಮೂಲಕ ಋಣ ತೀರಿಸಿ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ತಂದೆಯವರು ಜನರಿಗಾಗಿ ನೀಡಿದ ಯೋಜನೆಗಳು ಕೋಟ್ಯಂತರ ಮಂದಿಗೆ ನೆರವಾಗಿದೆ. ಅವರ ಜನಸೇವೆಯ ದಾರಿಯಲ್ಲಿಯೇ ಮುಂದುವರಿಯಬೇಕೆಂಬ ಆಸೆ ನನ್ನದು. ಈ ಭಾರಿ ಗೆಲುವಿಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು.…
ಕುಂದಾಪ್ರ ಡಾಟ್ ಕಾಂಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾಟಿ ಸಿನಿಮಾದ ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು. ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೋಮ್ಯಾಂಟಿಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು ಸಿನಿಮಾದಲ್ಲಿ ಯಾರು ಡೆವಿಲ್ ಎನ್ನುವುದು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಸತೀಶ್, ರಚಿತಾ ರಾಮ್ ಸೇರಿದಂತೆ ಅದಿತಿ ಪ್ರಭುದೇವಾ ಶಿವರಾಜ್ ಕೆಆರ್ ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್ ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯ ಮಾಡಿದ್ದಾರೆ. ಇನ್ನು ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜದ ಆರಾಧ್ಯ ಕ್ಷೇತ್ರ ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬಣ್ಣದ ಅಲಂಕಾರ ಪೂಜೆ ನೆರವೇರಿತು. ಹೋಳಿ ಉತ್ಸವ ಕೊನೆಯ ಆಚರಣೆ ಯ ಈ ವಿಶೇಷ ಪೂಜಾ ವಿಧಿಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. 6 ದಿನಗಳ ಹೋಳಿ ಉತ್ಸವದ ಕೊನೆಯ ದಿನ ಶ್ರೀ ದೇವರಿಗೆ ವಿಶೇಷ ಅಭಿಷೇಕದ ಬಳಿಕ ಬಣ್ಣಗಳಿಂದ ಅಲಂಕರಿಸಲಾಯಿತು. ನಾನಾ ಬಣ್ಣಗಳನ್ನು ದೇವಿಯ ಸಮ್ಮುಖ ಇಟ್ಟು ಮಂಗಳಾರತಿ ಬೆಳಗ ಲಾಯಿತು. ಬಣ್ಣದ ನೀರಿನ ವೈವೇದ್ಯ ಬಳಿಕ ಭಕ್ತರಿಗೆ ಸಮರ್ಪಿಸಿ ಹಂಚಲಾಯಿತು. ಬಣ್ಣ ಹಾಗೂ ಬಣ್ಣದ ನೀರನ್ನು ಪ್ರಸಾದವಾಗಿ ಸ್ವೀಕರಿಸಿದ ಭಕ್ತರು ಸಮಾಜದ ಪ್ರತಿ ಮನೆಗಳಿಗೂ ವಿತರಿಸಿ, ಪರಸ್ಪರ ಹಚ್ಚಿಕೊಂಡು ಸಂಭ್ರಮಿಸಿದರು. ಸಾಂಪ್ರದಾಯಿಕ ಗುಮಟೆ ವಾದನದೊಂದಿಗೆ ದೇವಳಕ್ಕೆ ಆಗಮಿಸಿದ ಭಕ್ತರು, ಸಂಜೆಯ ವೇಳೆಗೆ ಕುಂದಾಪುರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೋಳಿ ಹಬ್ಬವನ್ನು ಸಂಭ್ರಮಿಸಿದರು. ಈ ಈ ಸಂದರ್ಭ ದೇವಳದ ಅಧ್ಯಕ್ಷ ಜಯಾನಂದ ಖಾರ್ವಿ, ಖಜಾಂಚಿ ರಾಜು ನಾಯ್ಕ, ಮೊತ್ತೇಸರರಾದ ಶಂಕರ ಕೊಗ್ಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿಯೋರ್ವರಿಗೆ ವಂಚಿಸಿ ಜೈಲುಪಾಲಾಗಿ, ಸದ್ಯ ಬೇಲ್ ಪಡೆದು ಹೊರಗಿರುವ ಚೈತ್ರಾ ಕುಂದಾಪುರ ಮತ್ತು ಸಹಚರರು ಮತ್ತೆ ಪುಂಡಾಟಕ್ಕೆ ಇಳಿದಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯೋರ್ವ ಈ ಬಗ್ಗೆ ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದ್ದಾನೆ. ಚೈತ್ರಾ ಗ್ಯಾಂಗ್ನ ಟಿಕೆಟ್ ಡೀಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ರಾಮಕುಮಾರ್ ಕೊಲೆಗೆ ಯತ್ನ ಆರೋಪ ಕೇಳಿಬಂದಿದೆ. ಸಲೂನ್ ಮಾಲೀಕನಾಗಿರುವ ರಾಮಕುಮಾರ್ ಮೇಲೆ ಗಗನ್ ಕಡೂರು ಕಡೆಯವರಿಂದ ದಾಳಿ ನಡೆದಿದೆ ಎಂದು ದೂರು ದಾಖಲಿಸಿದ್ದಾನೆ. ಗೋವಿಂದ ಪೂಜಾರಿ ಎಂಬುವವರಿಗೆ ವಂಚನೆ ಕೇಸ್ನಲ್ಲಿ ಪ್ರಮುಖ ಸಾಕ್ಷಿಯಾಗಿರುವ ರಾಮಕುಮಾರ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಆರೋಪಿ ಕಡೆಯಿಂದ ಬೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾನೆ. ಈ ಬಗ್ಗೆ ಮೊದಲಿಗೆ ಕಡೂರು ಠಾಣೆಯಲ್ಲಿ ದೂರು ನೀಡಲಾಗಿತ್ತು ಆದರೆ ಸರಹದ್ದು ಸಮಸ್ಯೆ ಕಾರಣಕ್ಕಾಗಿ ಬೀರೂರು ಠಾಣೆಗೆ ತೆರಳಿ ದೂರು ನೀಡಲಾಗಿತ್ತು. ಹಲ್ಲೆ, ಗಾಯ ಬಗ್ಗೆ ವೈದ್ಯಕೀಯ ವರದಿ ಇದ್ದರೂ ಎಫ್.ಐ.ಆರ್ ದಾಖಲಿಸದೇ ಎನ್.ಸಿ.ಆರ್ ದಾಖಲಿಸಿ ಕಳುಹಿಸಿದ್ದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ ಊಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಅರುಣ್ ಎ. ಎಸ್. ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕಲಾ ವಿಭಾಗದ ವಿದ್ಯಾರ್ಥಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.27: ತಾಲೂಕಿನ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಎಸ್. ( 52) ಅವರು ಮಾರ್ಚ್ 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಕಛೇರಿಯ ಸಿಬ್ಬಂದಿಗಳ ವಿರುದ್ಧವೇ ದೂರು ದಾಖಲಾಗಿದೆ. ಸಂಘದ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ರಾವ್, ಸಿಬ್ಬಂದಿ ಮಂಜುನಾಥ್, ವಲಯ ಮೇಲ್ವಿಚಾರಕ ಉದಯ್ ಕುಮಾರ್ ಶೆಟ್ಟಿ ಅವರೇ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ಮೃತ ಆಶಾ ಅವರ ಪತಿ ವಿಜಯ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಚೇರಿಯ ಸಿಬ್ಬಂದಿ ಪತ್ನಿಗೆ ಸದಾ ಕಿರುಕುಳ ನೀಡುತ್ತಿದ್ದು,ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಯಾರೊಂದಿಗೂ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ ಇದರ ಬಗ್ಗೆ ವಿಚಾರಿಸಿದಾಗ ಸಂಘದ ಮಹೇಶ್ ರಾವ್, ಮಂಜುನಾಥ್ ಶೆಟ್ಟಿ ಅವರು ಸಂಘದಲ್ಲಿ ನಡೆದ ವಂಚನೆಯನ್ನು ತಾವೇ ಒಪ್ಪಿಕೊಳ್ಳುವಂತೆ ಒತ್ತಡ ಹಾಕಿದ್ದಲ್ಲದೆ ವಂಚನೆಗೊಳಗಾದ ಸಂಘದ ಹಣವನ್ನು ಕೂಡಲೇ ಕೊಡು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೋ ಎಂದು ಸತಾಯಿಸುತ್ತಿದ್ದರು. ಮಾರ್ಚ್…
