ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ “ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ” ಕಾರ್ಯಾಗಾರ ನಡೆಯಿತು. ಮದರ್ ತೆರೇಸಾಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾರಾವ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಷ್ಟೀಯ ಪದವಿ ಪೂರ್ವ ವಿದ್ಯಾರ್ಥಿ, ಶಿಕ್ಷಕರ ಮತ್ತುಪಾಲಕರ ಸಂಘ ಸ್ಥಾಪಕರಾದ ಮಿತೇಶ್ ಮೂಡುಕೊಣಾಜೆ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗಕೌಶಲ್ಯ ಮತ್ತು ವೃತ್ತಿ ಕೌಶಲ್ಯ ಅಗತ್ಯವಾಗಿದೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಬಹು ಕೌಶಲ್ಯ ಕಾರ್ಮಿಕರ ಬೇಡಿಕೆ ಹೆಚ್ಚಾಗಿದೆ. ಭಾರತದಂತಹ ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರದಲ್ಲಿ ಗುಣಮಟ್ಟದ ಕೌಶಲ್ಲ್ಯಾಭಿವೃದ್ಧಿ ಮತ್ತು ತರಬೇತಿ ಅಗತ್ಯ, ತಮ್ಮವೃತ್ತಿ ಆಯ್ಕೆಗಳನ್ನು ಗುರುತಿಸಲು ಮತ್ತು ಅಪೇಕ್ಷಿತ ವೃತ್ತಿಯನ್ನು ಆಯ್ಕೆಮಾಡಲು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಅತೀ ಅವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷಾಮಾಹಿತಿ, ಪರೀಕ್ಷಾದ್ವಂದ್ವಗಳು, ಭವಿಷ್ಯದಲ್ಲಿ ವೃತ್ತಿಯೋಜನೆ, ಕೋರ್ಸ್ಆಯ್ಕೆ, ವೃತ್ತಿಪರಿವರ್ತನೆ, ಸ್ವಯಂನಿರ್ಧಾರ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.07: ಇಲ್ಲಿನ ಕೋಡಿ ಬೀಚಿನಲ್ಲಿ ಈಜಾಡಲು ತೆರಳಿದ್ದ ಮೂವರು ಸಹೋದರರು ಸಮುದ್ರಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೊಡಿಯ ಸಮುದ್ರದಲ್ಲಿ ಈಜಾಡಲು ತೆರಳಿದ್ದು ಈ ವೇಳೆ ಅವಘಡ ನಡೆದಿದೆ. ಅಂಪಾರು ಗ್ರಾಮದ ಮೂಡುಬಗೆಯ ನಿವಾಸಿ ದಾಮೋದರ್ ಪ್ರಭು ಎಂಬುವರ ಪುತ್ರ ಧನರಾಜ್ (23) ಸಾವನ್ನಪ್ಪಿದ್ದರೆ, ಅವರ ಇನ್ನೊರ್ವ ಪುತ್ರ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದಾಮೋದರ್ ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು, ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಅವಘಡ ಗಮನಕ್ಕೆ ಬರುತ್ತಿದ್ದಂತೆ ಬೆಂಗಳೂರಿನ ಪ್ರವಾಸಿಗರು ತಕ್ಷಣ ಸಮುದ್ರಕ್ಕೆ ಹಾರಿ ರಕ್ಷಣೆಗೆ ಮುಂದಾದರು. ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ. ದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಸೂರು ಸಂಚಲನ ಆಶ್ರಯದಲ್ಲಿ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವ, ವನಸಿರಿಯಲ್ಲೊಂದು ರಂಗ ಸುಗ್ಗಿ ರಂಗ ಸಂಚಲನ 2024 ಕಾರ್ಯಕ್ರಮವು ಡಿ.16ರಿಂದ 18ರ ತೂದಳ್ಳಿ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಪ್ರತಿದಿನ ಸಂಜೆ 7-ಕ್ಕೆ ನಡೆಯಲಿದೆ ಎಂದು ಸಂಚಲನ ಹೊಸೂರು ಖಜಾಂಜಿ ನಾಗಪ್ಪ ಮರಾಠಿ ಹೇಳಿದರು. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 16 ವರ್ಷದಿಂದ ಪರಿಶಿಷ್ಠ ಪಂಗಡದ ಮರಾಠಿ ಕಲಾವಿದರ ರಂಗ ತಂಡವಾಗಿರುವ ಸಂಚಲನ ರಿ. ಹೊಸೂರು ಮೂಲಕ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಟಕೋತ್ಸವವನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಈ ವರ್ಷವು 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಡಿ.16ರಂದು ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಹಿಸಲಿದ್ದಾರೆ. ಗಂಗೊಳ್ಳಿ ಎಸ್.ವಿ ಕಾಲೇಜಿನ ಉಪನ್ಯಾಸಕರಾದ ಸುಜಯೀಂದ್ರ ಹಂದೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೈಂದೂರು ವಲಯ ಮರಾಟಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ಭೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕರ ಸಂಘದ ಎರಡು ಬಣಗಳ ನಡುವಿನ ಮುಸುಕಿನ ಗುದ್ದಾಟ, ತಾರಕಕ್ಕೇರಿ, ಒಂದೇ ದಿನ ಎರಡು ಪ್ರತ್ಯೇಕ ಹೋರಾಟ ನಡೆದ ಘಟನೆ ಶನಿವಾರ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶಾಸಕ ಗುರುರಾಜ ಗಂಟಿಹೊಳೆ, ದಿವಾಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಇಲ್ಲಿನ ಆಡಳಿತಸೌಧದ ಎದುರು ಪ್ರತಿಭಟನೆ ನಡೆದರೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ಕುಮಾರ್ ಶೆಟ್ಟಿ, ವಿಜಯಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ಲಾರಿ ಮತ್ತು ಕೆಂಪುಕೋರೆ ಮಾಲಕರು ಹಾಗೂ ಕಾರ್ಮಿಕರು, ಇಲ್ಲಿನ ಅಂಡರ್ಪಾಸ್ನಿಂದ ಮೆರವಣೆಗೆ ಮೂಲಕ ಬೈಂದೂರು ತಾಲೂಕು ಆಡಳಿತಸೌಧಕ್ಕೆ ತೆರಳಿ ತಹಶೀಲ್ದಾರ ಅವರಿಗೆ ಮನವಿಪತ್ರ ಸಲ್ಲಿಸಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಹಲವು ತಿಂಗಳಿನಿಂದ ಜಿಲ್ಲೆಯಾದ್ಯಂತ ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಬೀದಿ ಬೀಳುವಂತಾಗಿದೆ, ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗುರು ವೇದಿಕ್ ಮಾಥ್ಸ್-2024ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ತ್ಯುತ್ತಮ ಪ್ರತಿಭೆ ತೋರ್ಪಡಿಸಿರುತ್ತಾರೆ. ವಿಜೇತರ ಯಾದಿ:ರಿಷಿ ಎಸ್. ಶೆಟ್ಟಿ ತೃತೀಯ ಸ್ಥಾನ ಪ್ರೇರಕ ಪ್ರಶಸ್ತಿ ಚಾಂಪಿಯನ್1.ನಿಖಿಲ್ ಜಿ ಶೆಟ್ಟಿ2.ಆತ್ಮಿಕಾ3.ಶ್ರೀಲಕ್ಷ್ಮಿ ಸಮಾಧಾನಕರ ಬಹುಮಾನ1.ದಿವ್ಯಾ ಆರ್ ಶೆಟ್ಟಿ2.ತನಿಶಾ ಶೆಟ್ಟಿ3.ರಾಜೇಶ್ವರಿ4.ಅಬಿಗೈಲ್ ರಾಜಿ5.ರಶ್ಮಿತಾ6.ಕಿಶನ್ ಶೆಟ್ಟಿ7.ಶ್ರೀರಕ್ಷಾ ವಿದ್ಯಾರ್ಥಿಗಳು ಕ್ರಮವಾಗಿ ಪ್ರಶಸ್ತಿ ಪಡೆದಿರುತ್ತಾರೆ. ಅವರಿಗೆ ಅಬಾಕಸ್ ಮತ್ತು ವೇದಿಕ್ ಮ್ಯಾರ್ಥ್ಸ್ ಶಿಕ್ಷಕಿ ಗೀತಾ ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಾಶಯ ಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತ್ನ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಡಿ. 11 ರಂದು ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡಿ. 11 ರಂದು ಬೆಳಗ್ಗೆ 5 ಗಂಟೆಯಿಂದ ಮತದಾನ ಎಣಿಕೆ ಕಾರ್ಯವು ಮುಕ್ತಾಯವಾಗುವವರೆಗೆ ಮೇಲ್ಕಂಡ ತಾಲೂಕು ಕಚೇರಿಯ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರಾಮ ಮಂದಿರ ಬಳಿಯ ರಸ್ತೆ ಬದಿ ಬಸ್ಗಾಗಿ ಕಾಯುತ್ತಿದ್ದ ಸುಶೀಲಾ ಅವರಿಗೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ನಡೆದಿದೆ. ಗಾಯಗೊಂಡ ಸುಶೀಲಾ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರಿನಲ್ಲಿ ಬಾಡಿಗೆಗೆ ನೀಡಿದ್ದ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ನಿವಾಸಿ ರವಿ ತನ್ನ ತಾಯಿ ಮನೆಯನ್ನು ಮೂರು ತಿಂಗಳ ಹಿಂದೆ ಆವರ್ಸೆ ನಿವಾಸಿ ಸಂತೋಷ್ ಎಂಬವರಿಗೆ ವಾಸವಿರಲು ನೀಡಿದ್ದು ಆತ 2 ತಿಂಗಳ ಬಾಡಿಗೆ ಹಣ ನೀಡಲು ಬಾಕಿಯಿತ್ತು. ಡಿ.2ರಂದು ಸಂಜೆ ಬಾಡಿಗೆ ಕೇಳಲು ಬಂದ ವೇಳೆ ಮನೆಗೆ ಬೀಗ ಹಾಕಿತ್ತು. ಗುರುವಾರ ಬಾಡಿಗೆ ಕೇಳಲೆಂದು ಬಂದ ವೇಳೆಯೂ ಬಾಗಿಲು ಹಾಕಿದ್ದರಿಂದ ಅನುಮಾನಗೊಂಡು ಮನೆಯ ಹಿಂಬದಿಯ ಬಾಗಿಲು ತೆರೆದು ನೋಡುವಾಗ 1.04 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವು ಆಗಿತ್ತು. ಬಾಡಿಗೆಗೆ ಇದ್ದ ಸಂತೋಷ್ ಸೊತ್ತುಗಳನ್ನು ಕಳವು ಮಾಡಿರುವ ಸಂಶಯವಿದೆ ಎಂದು ಮನೆಯ ಮಾಲೀಕ ರವಿ ನೀಡಿದ ದೂರಿನಂತೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
