ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಣ್ಣು ಸಮಾಜದ ತಾರತಮ್ಯ ಧೋರಣೆಯಿಂದ ಅನುಭವಿಸುವ ಕಷ್ಟಗಳ ಕುರಿತು ಮಾತನಾಡುತ್ತಾ ಕಲಾಕ್ಷೇತ್ರದಲ್ಲೂ ಸಾಹಿತ್ಯ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ತಮಗೆ ಸಹಜವಾಗಿ ಅನ್ನಿಸಿದ್ದನ್ನು ಹೇಳಲು ಭಯಪಡುವಂಥ ಪರಿಸ್ಥಿತಿಯಿದೆ. ಆದರೆ ಕೊಲ್ಲಿರಾಷ್ಟ್ರಗಳನ್ನು ಹೆಣ್ಣನ್ನು ಒಂದು ವಸ್ತುವಿನಂತೆಯೋ ಪ್ರಾಣಿಯಂತೆಯೋ ಕಾಣುವ ತಾತ್ಸಾರ ಭಾವದಿಂದ ನಾವು ಭಾರತೀಯರು ಸಂಪೂರ್ಣ ಮುಕ್ತರಾಗಿದ್ದೇವೆ. ಆ ಮಟ್ಟಿಗೆ ನಾವು ಅದೃಷ್ಟವಂತರು ಎಂದು ಖ್ಯಾತ ರಂಗಭೂಮಿ ಕಲಾವಿದೆ, ಚಿತ್ರನಟಿ-ಲೇಖಕಿ ಪೂರ್ಣಿಮಾ ಸುರೇಶ್ ಹೇಳಿದರು. ಅವರು ಕುಂದಾಪುರ ಜನಪ್ರತಿನಿಧಿ ಸಂಸ್ಥೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ’ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆʼಯ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಲೇಖಕಿ ಪಾರ್ವತಿ ಜಿ. ಐತಾಳ್, ಮಹಿಳೆಯರನ್ನು ಮಹಿಳಾ ದಿನಾಚರಣೆಯಂದು ಹಾಡಿಹೊಗಳುವುದಕ್ಕಿಂತಲೂ ಅವರು ಅಂತರಂಗದಲ್ಲಿ ಅನುಭವಿಸುವ ನೋವುಗಳೇನು ಮತ್ತು ಆ ನೋವಿಗೆ ಕಾರಣಗಳೇನು ಎಂಬುದನ್ನು ತಿಳಿದುಕೊಂಡು ಅವರ ಕಷ್ಟಗಳನ್ನು ಸಮಾನವಾಗಿ ಹಂಚಿಕೊಳ್ಳುವ ಕೆಲಸ ಆಗಬೇಕಾಗಿದೆ .ಇತಿಹಾಸ-ಪರಂಪರೆ-ಪದ್ಧತಿಗಳನ್ನು ಅನುಸರಿಸುವ ನೆಪದಲ್ಲಿ ಹೆಣ್ಣಿನ ಮೇಲೆ ಮನೆಯೊಳಗಿನ ಎಲ್ಲರ ಚಾಕರಿ ಮಾಡಿಸುವುದನ್ನು ಇಂದಿನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಷಣೆಗೆ ಸರಕಾರ ಜಾರಿಗೆ ತಂದಿರುವ ಹಕ್ಕುಗಳು, ನಿಯಮಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಮಕ್ಕಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆರ್. ಟಿ. ಇ ಕಾಯ್ದೆ 2009, ಪೋಕ್ಸೋ ಕಾಯ್ದೆ 2012, ಬಾಲ್ಯ ವಿವಾಹ ಕಾಯ್ದೆ 2006 ಹಾಗೂ ಬಾಲನ್ಯಾಯ ಕಾಯ್ದೆ 2015ರ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 1ರಿಂದ10ನೇ ತರಗತಿವರೆಗೆ 1,59,731 ಮಕ್ಕಳು ಇದ್ದಾರೆ. ಪ್ರತಿಯೊಬ್ಬರೂ ಆಧಾರ್ ಸೀಡಿಂಗ್ ಆಗಿರಬೇಕು, ಅದರ ಜೊತೆಗೆ ಆಧಾರ್ ಮಾಪಿಂಗ್ ಸಹ ಆಗಿರಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಅವರು ಸಮಸ್ಯೆ ಎದುರಿಸುತ್ತಾರೆ. ಪ್ರತಿಯೊಬ್ಬ ಮಗುವೂ ಆಧಾರ್ಕಾರ್ಡ್ ಹೊಂದುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನಾರೋಗ್ಯ ಹಿನ್ನೆಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೂಜಾಡಿ ಗ್ರಾಮದ ಕೊಡ್ಲಾಡಿ ಮನೆಯ ಭಾಸ್ಕರ ಪೂಜಾರಿ (60) ಅವರು ಬಗ್ವಾಡಿ ಸಮೀಪ ಚಕ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಧುಮೇಹ ತಪಾಸಣೆಗಾಗಿ ಆಸ್ಪತ್ರೆಗೆಂದು ಹೋಗಿದ್ದು, ಆ ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ಬಂಧುಗಳು ಹುಡುಕಾಡಿದಾಗ ಅವರ ಮೃತದೇಹವು ಮಾ.12 ರಂದು ಮಧ್ಯಾಹ್ನದ ಸುಮಾರಿಗೆ ಬಗ್ವಾಡಿಯ ಸೇತುವೆಯ ಕೆಳಗೆ ಚಕ್ರಾ ನದಿಯಲ್ಲಿ ಪತ್ತೆಯಾಗಿದೆ. ಭಾಸ್ಕರ ಪೂಜಾರಿ ಅವರು ಪತ್ನಿ ಮಕ್ಕಳೊಂದಿಗೆ ಹುಬ್ಬಳಿಯಲ್ಲಿ ನೆಲೆಸಿದ್ದು, ಮನೆಯಲ್ಲಿಯೇ ಇರುತ್ತಿದ್ದರು. ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಇವರು ಬಿಪಿ, ಶುಗರ್ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ನೊಂದಿದ್ದರು. ಇದೇ ಕಾರಣದಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅವರ ಸಹೋದರ ಗೋವಿಂದ ಪೂಜಾರಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ಇಂದು ಅನೇಕ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಸಾಧನೆ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 2022–23ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್–2026’ ಉದ್ದೇಶಿಸಿ ಮಾತನಾಡಿದರು. ಆಯುರ್ವೇದವು ವಿಶ್ವಮಟ್ಟದಲ್ಲಿ ಹೊಸ ಅವಕಾಶಗಳನ್ನು ತೆರೆದಿಟ್ಟಿರುವ ಕ್ಷೇತ್ರವಾಗಿದ್ದು, ವಿದ್ಯಾರ್ಥಿಗಳು ಆಶಾವಾದಿಗಳಾಗಿ ಗುರಿಯೆಡೆಗೆ ಸಾಗಬೇಕು. ವಿದ್ಯಾಭ್ಯಾಸದ ಜೊತೆಗೆ ನಿರಂತರ ಅಭ್ಯಾಸ ಮತ್ತು ಪರಿಶ್ರಮ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ ಎಂದರು. ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವಿಭಾಗಗಳಲ್ಲಿ ಉತ್ತಮ ಬೇಡಿಕೆ ಇದ್ದು, ವಿದ್ಯಾರ್ಥಿಗಳು ಸಂಶೋಧನೆಯ ನೆಲೆಯಲ್ಲಿ ಔಷಧಿ ತಯಾರಿಕೆಯ ಮೂಲಕವೂ ಮುಂದುವರಿಬಹುದು. ಸ್ವದೇಶಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಆಯುರ್ವೇದ ಔಷಧಿ ಸಂಬಂಧಿತ ಗಿಡಗಳನ್ನು ಬೆಳೆಸಲು ದೊಡ್ಡ ಮಟ್ಟದ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.ಅವಕಾಶಗಳನ್ನು ಬಳಸಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೋಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹ ಬಳಕೆ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿರುವುದಿಲ್ಲ. ವಾಣಿಜ್ಯ ಬಳಕೆಯ ಅನಿಲ ಹೊರ ದೇಶಗಳಿಂದ ಪೂರ್ಣ ಪ್ರಮಾಣದಲ್ಲಿ ಆಮದು ಆಗುತ್ತಿದ್ದು, ಯುದ್ಧ ಭೀತಿಯಿಂದಾಗಿ ಅನಿಲ ಆಮದು ನಿಗಧೀತ ಪ್ರಮಾಣದಲ್ಲಿ ಆಗದೆ ವಾಣಿಜ್ಯ ಬಳಕೆ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆ ಆಗಿದೆ. ಇದಕ್ಕೆ ಪರ್ಯಾಯ ಉರುವಲುಗಳ ಬಳಕೆಯೊಂದೇ ಮಾರ್ಗ ಎಂದರು.…
ಕುಂದಾಪ್ರ ಡಾಠ್ ಕಾಂ ಸುದ್ದಿ.ಉಡುಪಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು ಉಡುಪಿ ಇಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲಾಗುವುದು. ಎಂ.ಟೆಕ್/ಬಿ.ಇ(ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ,ಎ&ಸಿ) ಎಂ.ಎಸ್ಸಿ(ಎಲೆಕ್ಟ್ರಾನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ದೂ.ಸಂ: 9880510585, 8618760169 ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹಜ ಯೋಗದಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ. ಅತ್ಯಂತ ಸರಳವಾದ ಯೋಗ ಕ್ರಿಯೆಗಳು ಮತ್ತು ಕ್ರಮಬದ್ಧವಾದ ಆಹಾರ ಸೇವನೆಯಿಂದ ಒತ್ತಡವನ್ನು ನಿರ್ವಹಿಸಬಹುದು ಎಂದು ಚಂದ್ರಕಾಂತ ಡಿಯೋಡ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಸಹಜ ಯೋಗ ಕುರಿತ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 5 ಗೋಷ್ಠಿಯಲ್ಲಿ ನಡೆದ ಈ ಶಿಬಿರದಲ್ಲಿ ಡಾ| ಆಶಿಶ್, ಕಲ್ಪನಾ, ಕೋಪಾಲ್, ಪ್ರಣಮ್, ತಿಮ್ಮಪ್ಪ, ನೀತು, ಡಾ. ವೀರೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ ಹರಡಲು ಕಾರಣವಾಗುತ್ತದೆ. ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಹೆಚ್.ಪಿವಿ ಲಸಿಕಾ ಅಭಿಯಾನಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಪ್ರಸ್ತುತ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿರಿಯ ನಾಗರಿಕರ ವೇದಿಕೆ ಕೋಟ ಗಿಳಿಯಾರು ಮಾಸಿಕ ಸಭೆಯಲ್ಲಿ ಹಿರಿಯ ನಾಗರಿಕರ ಆರೋಗ್ಯ ಪಾಲನೆ ಮತ್ತು ಮಾನಸಿಕ ನೆಮ್ಮದಿ ಕುರಿತು ಉಪನ್ಯಾಸ ಕಾರ್ಯಕ್ರಮ ಮೂಡುಗಿಳಿಯಾರಿನ ಅಲ್ಸೆಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ವೇದಿಕೆ ಅಧ್ಯಕ್ಷ ಹಂದಕುಂದ ಸೋಮಶೇಖರ ಶೆಟ್ಟಿ ಗಿಳಿಯಾರು ಅಧ್ಯಕ್ಷತೆ ವಹಿಸಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಕುರಿತು ಮಾಹಿತಿ ನೀಡಿದರು. ಉಡುಪಿ ಡಾ| ಎ.ವಿ. ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋರೋಗ ತಜ್ಞರಾದ ಡಾ| ವಿರೂಪಾಕ್ಷ ದೇವರುಮನೆ ಹಿರಿಯ ನಾಗರಿಕರ ಸ್ವಸ್ತ ಜೀವನ ಸದೃಢ ಆರೋಗ್ಯದ ಬಗ್ಗೆ ಮಾನಸಿಕ ನೆಮ್ಮದಿಯ ಕುರಿತು ಸರಳ ವ್ಯಾಯಾಮದ ಬಗ್ಗೆ ವಿಚಾರಗೋಷ್ಠಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಹೊಸತಾಗಿ ಸೇರ್ಪಡೆಗೊಂಡ ಸದಸ್ಯರಾದ ಗೋಪಾಲ ಕೃಷ್ಣ ಜೋಗಿ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ನಿವೃತ್ತ ಉಪನ್ಯಾಸಕ ಶ್ರೀಪತಿ ಜೋಗಿ ಅವರನ್ನು ಮುಖ್ಯ ಅತಿಥಿ ವಿರೂಪಾಕ್ಷ ದೇವರುಮನೆ ಗೌರವಿಸಿದರು. ಹುಟ್ಟುಹಬ್ಬ ಆಚರಿಸಿಕೊಂಡ ಜಿ. ಸರಸ್ವತಿಯಮ್ಮ, ಸುಬ್ರಹ್ಮಣ್ಯ ಹೇರ್ಳೆ, ಸುಶೀಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಲಜೀವನ್ ಮಿಷನ್ ಪ್ರಧಾನಿಯವರ ಮಹತ್ಮಾಕಾಂಕ್ಷೆಯ ಯೋಜನೆಯಾಗಿದೆ. ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗಬೇಕು ಎಂಬುದು ಅವರ ಕನಸು. ಸಂಸದರ ಪ್ರಯತ್ನದ ಫಲವಾಗಿ ಯೋಜನೆ ಬೈಂದೂರು ಕ್ಷೇತ್ರಕ್ಕೆ ದೊರಕಿದ್ದು ಅದರ ಸಮರ್ಪಕ ಅನುಷ್ಠಾನ ಆಗಬೇಕಿದ್ದು, ಯಾವುದೇ ಲೋಪ ಕಂಡುಬಂದರೂ ಅಧಿಕಾರಿಗಳು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಎಚ್ಚರಿಸಿದ್ದಾರೆ. ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದ ಸಂದರ್ಭ ವಿವಿಧ ತೊಡಕು ಎದುರಾಗಿದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪದೇ ಪದೇ ಎಚ್ಚರಿಸಲಾಗಿದೆ. ಆದಾಗ್ಯೂ ಅರ್ಧಂಬರ್ಧ ಯೋಜನೆಯನ್ನು ಕೈಗೊಂಡು ಗ್ರಾಮ ಪಂಚಾಯತಿಯಿಂದ ನಿರಪೇಕ್ಷಣಾ ಪತ್ರ ಪಡೆದರೆ ಅದಕ್ಕೆ ಆಯಾ ಪಿಡಿಓಗಳೇ ಹೊಣೆಯಾಗುತ್ತಾರೆ. ಅವರ ಮೇಲೆ ನಿರ್ಣಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ. ಮನೆ ಮನೆಗೆ ಕುಡಿಯುವ ನೀರು ಯೋಜನೆ ಎರಡು ಹಂತದಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಜನಜೀವನ್ ಮಿಷನ್ ಮೂಲಕ ನಳ್ಳಿ ಹಾಗೂ ಪೈಪ್…
