ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿ ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಗೋ ಪೂಜೆ ಕಾರ್ಯಕ್ರಮವು ಕೋಟೇಶ್ವರದ ಹಾಲಾಡಿ ರಸ್ತೆಯಲ್ಲಿರುವ ರಾಘವೇಂದ್ರ ಭಟ್ಟರ ನಿವಾಸದಲ್ಲಿ ಸಕಲ ವಿಧಿ ವಿಧಾನಗಳ ಮೂಲಕ ಬುಧವಾರ ಆಯೋಜಿಸಲಾಗಿದೆ. ಗೋ ಪೂಜಾ ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗಿಯಾಗಿ ಮಾತನಾಡಿ, ಕೃಷಿಕರ ಜೀವನಾಧಾರ ಗೋವು ಮತ್ತು ಗೋವಿನ ಉತ್ಪನ್ನಗಳು. ಜೀವಜಲ ನೀರು ನಮಗೆಷ್ಟು ಅಗತ್ಯವೇ ಅಂತೆಯೇ ಗೋವಿನ ಉತ್ಪನ್ನಗಳೂ ಕೂಡ ನಮ್ಮ ಜೀವನಕ್ಕೆ ಅಗತ್ಯವಾಗಿದೆ. ದಿನನಿತ್ಯ ನಮ್ಮ ಕಣ್ಣಿಗೆ ಕಾಣುವ ದೇವರೆಂದರೆ ಹಸು. ಹಸುವನ್ನು ಭೂಮಿ ತಾಯಿ, ಸಕಲ ದೇವರ ಆವಾಸ ಸ್ಥಾನ ಎಂಬ ನಂಬಿಕೆಯೂ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ವಹಿಸಿದ್ದರು. ಸದ್ರಿ ಈ ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್. ಶೆಟ್ಟಿ ಅವರು ದೀಪವನ್ನು ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ವಿದ್ಯಾ ಸಂಸ್ಥೆಯ ಆವರಣದಲ್ಲಿ ಆಚರಿಸಿ ಮಾತನಾಡಿ, ಕತ್ತಲಿನಿಂದ ಬೆಳಕಿನೆಡೆಗೆ ಸಾಗುತ್ತಾ, ಅಂಧಕಾರದಿಂದ ಜ್ಞಾನದ ಕಡೆಗೆ ನಮ್ಮ ಜೀವನ ಕ್ರಮವನ್ನು ಹೊತ್ತು ನಡೆಯಬೇಕು. ದೀಪಾವಳಿ ಹಬ್ಬವು ನಮ್ಮ ದೇಶೀಯ ಸಂಸ್ಕೃತಿಯನ್ನು ಅರ್ಥಪೂರ್ಣವಾಗಿ ಬಿಂಬಿಸಿದ ಹಬ್ಬವಾಗಿದೆ. ಸುಸಂಸ್ಕೃತಿಯ ಜೀವನ ಕ್ರಮಕ್ಕಾಗಿ ನಾವೆಲ್ಲರೂ ಹಣತೆಯನ್ನು ಹಚ್ಚಿ ನಮ್ಮ ಒಳಗಿನ ಕತ್ತಲನ್ನು ದೂರ ಮಾಡೋಣ ಎಂದರು. ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾಶಣೈ ಅವರು ದೀಪಾವಳಿ ಹಬ್ಬದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಕೋರಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ವಿದ್ಯಾರ್ಥಿ ಪೃಥ್ವೀಶ್ ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೇಗವಾಗಿ ಹೋಗುತ್ತಿದ್ದ ಬೈಕ್‌ಗೆ ಅಡ್ಡ ಬಂದ ಚಿರತೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕ್ ಸವಾರ ಗಂಭೀರ ಗಾಯಗೊಂಡರೆ, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರಿನಲ್ಲಿ ಇತ್ತೀಚಿಗೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ನಂಚಾರಿನ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗ್ಡೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿರುತ್ತಾರೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಳಿವುದು ಕಾಯ, ಉಳಿಯುವುದು ಕೀರ್ತಿ. ಸಿಕ್ಕ ಕಿರು ಅವಧಿಯಲ್ಲಿಯೇ ಸಮಾಜಕ್ಕೆ ಅಗಾಧ ಕೊಡುಗೆ ನೀಡಿ ಇಹಲೋಕ ತ್ಯಜಿಸಿ ಅಮರನಾದ ಶ್ರೀನಿಧಿ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಅಸಾಧಾರಣ ವ್ಯಕ್ತಿತ್ವ ತೋರಿದವರು. ಅವಸರವಸರವಾಗಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಅವಸರವಸರವಾಗಿಯೇ ಬದುಕಿನಿಂದ ನಿರ್ಗಮಿಸಿದ್ದು ಸಮಾಜಕ್ಕೆ ದೊಡ್ಡ ನಷ್ಟ ಎಂದು ಮಾಜಿ ಅಸಿಸ್ಟೆಂಟ್ ಗವರ್ನರ್ ರೊ. ಚಂದ್ರಶೇಖರ ಮೆಂಡನ್ ಪುಷ್ಪನಮನ ಸಲ್ಲಿಸಿ ಸಂಸ್ಮರಣಾ ನುಡಿಗಳನ್ನಾಡಿದರು. ಅವರು ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ, ರೋಟರಿ ಕ್ಲಬ್ ಕೋಟ ಸಿಟಿ, ಆನ್ಸ್ ಕ್ಲಬ್ ಕೋಟ ಸಿಟಿ ಹಾಗೂ ಮಹಂಕಾಳಿ ಫ್ರೆಂಡ್ಸ್ ಕೊರವಡಿ ಇವರ ಸಂಯುಕ್ತ ಆಶ್ರಯದಲ್ಲಿ ʼಸ್ಮೃತಿಗಳಲ್ಲಿ ಶ್ರೀನಿಧಿ’ ಶ್ರೀನಿಧಿ ಉಪಾಧ್ಯ ಸಂಸ್ಮರಣೆಯಲ್ಲಿ ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಮೃತರ ಸಮಾಜಿಕ ಕಾರ್ಯಗಳನ್ನು ಸ್ಮರಿಸಿದರು. ಭಗವಂತನ ಸೇವೆಗಾಗಿ ಮಂತ್ರಾಲಯ ಕ್ಷೇತ್ರ ಸಂದರ್ಶನ ಮಾಡಿ, ಸ್ನೇಹಿತ ಬಂಧು ಬಳಗದವನ್ನು ಮಾತನ್ನಾಡಿಸುತ್ತಿರುವಾಗಲೇ ಭಂಗವಂತನಲ್ಲಿ ಐಕ್ಯರಾದ ಶ್ರೀನಿಧಿ ದೇವನಿಗೆ ಪ್ರಿಯರಾದವರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ. ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಅಭಿಪ್ರಾಯಿಸಿದರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮೀಸಲಾತಿಯನ್ನು ಬಳಸಿಕೊಂಡು ಉದ್ಯೋಗ ಪಡೆಯುವಂತೆ ಪ್ರೇರೆಪಿಸಿದರು. ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜೀವನ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನತಾ ವಿದ್ಯಾ ಸಂಸ್ಥೆ ಅನೇಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಆ ಮೂಲಕ ಜನತಾ ಕಾಲೇಜು ರಾಜ್ಯ ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಹೆಜ್ಜೆ ಗುರುತು ಮೂಡಿಸಿದೆ ಎಂದರು. ಕಾರ್ಯಕ್ರಮದಲ್ಲಿ ಕ್ರೀಡಾಪಟು ಸಚಿನ್ ಸುವರ್ಣ ರನ್ನು ಸನ್ಮಾನಿಸಲಾಯಿತು. ಕ್ರೀಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550 ವರ್ಷಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ 550 ದಿನಗಳ ಶ್ರೀ ರಾಮನಾಮ ಜಪ ಅಭಿಯಾನದ ಅಂಗವಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಗಂಗಾರಾಮ: ಜಪ ಕೇಂದ್ರದಲ್ಲಿ ರಾಮನಾಮ ಜಪ ಅಭಿಯಾನ 550 ದಿನ ಪೂರ್ಣಗೊಂಡ ಹಿನ್ನಲೆಯಲ್ಲಿ ಶ್ರೀರಾಮ ನಗರೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರೀ ರಾಮ ನಾಮ ಮಹಾ ಜಪ ಅಭಿಯಾನ ನಡೆಯಿತು. ಮಧ್ಯಾಹ್ನ ಪೂಜೆ, ಸಮಾರಾಧನೆ, ಸಂಜೆ ಶ್ರೀರಾಮ ನಗರೋತ್ಸವ ನಡೆಯಿತು. ದೇವಸ್ಥಾನದಿಂದ ಹೊರಟ ದೇವರ ನಗರೋತ್ಸವ ಪುರಮೆರವಣಿಗೆ ಬಂದರು ಪೋರ್ಟ್ ಆಫೀಸಿನವರೆಗೆ ಸಾಗಿ ಮರಳಿ ಮುಖ್ಯರಸ್ತೆ ಮೂಲಕ ಎಸ್.ವಿ. ಜ್ಯೂನಿಯರ್ ಕಾಲೇಜಿವರೆಗೆ ತೆರಳಿ ದೇವಸ್ಥಾನದ ಬಳಿ ಸಮಾಪನಗೊಂಡಿತು. ರಾತ್ರಿ ದೇವರಿಗೆ ದೀಪಾರಾಧನೆ, ವಿಶೇಷ ಪೂಜೆ, 108 ರಾಮನಾಮ ಜಪ ಪಠಣ ನಡೆದು ಶ್ರೀ ರಾಮ ದೇವರಿಗೆ ಮಹಾಮಂಗಳಾರತಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ವತಿಯಿಂದ ಗರ್ಭಿಣಿ / ಬಾಣಂತಿ ಮಹಿಳೆಯರಿಗಾಗಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿ ಮಹಿಳೆಯರಿಗೆ 5000 ರೂ.ಗಳ ಸಹಾಯಧನ ಲಭ್ಯವಿದ್ದು, ಮೊದಲ ಪ್ರಸವದ ಗರ್ಭಿಣಿಯು ಎಲ್.ಎಂ.ಪಿ ದಿನಾಂಕದಿಂದ 150 ದಿನಗಳ ಒಳಗೆ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಮೊದಲನೇ ಕಂತಿನ ಅರ್ಜಿಯನ್ನು ನೋಂದಾಯಿಸಬೇಕು ಹಾಗೂ ಎರಡನೇ ಕಂತಿನಲ್ಲಿ ಮಗುವಿನ ಜನನದ ನೋಂದಣಿ ಮತ್ತು 3 ನೇ ಚುಚ್ಚುಮದ್ದು ಪೂರ್ಣಗೊಂಡ ಬಳಿಕ ಅರ್ಜಿಯನ್ನು ನೋಂದಾಯಿಸಬಹುದಾಗಿದೆ. ಮೊದಲನೆ ಕಂತಿನಲ್ಲಿ ರೂ.3000 ಹಾಗೂ ಎರಡನೇ ಕಂತಿನಲ್ಲಿ ರೂ. 2000 ನ್ನು (ಮಗುವಿನ ಜನನದ ನಂತರ 3 ನೇ ಚುಚ್ಚುಮದ್ದು ಪೂರ್ಣಗೊಂಡ ನಂತರ) ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ವರ್ಗಾಯಿಸಲಾಗುವುದು. 2 ನೇ ಪ್ರಸವದ ಬಾಣಂತಿ ಮಹಿಳೆಯರಿಗೆ ಹೆಣ್ಣು ಮಗು ಜನಿಸಿದಲ್ಲಿ ರೂ. 6000 ಸಹಾಯಧನ ದೊರೆಯಲಿದ್ದು, ಜನನದ ನಂತರ ಒಂದನೇ ಕಂತಿನಲ್ಲಿ ನೇರ ನಗದು ವರ್ಗಾವಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ. ಜೀವನದಲ್ಲಿ ಮಾನಸಿಕವಾಗಿ ಕುಗ್ಗಿದ ಮನಸ್ಸುಗಳಿಗೆ ಯಕ್ಷಗಾನವು ಔಷಧೋಪಚಾರದಂತೆ. ಪರಂಪರೆಯ ಯಕ್ಷಗಾನದ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನಗಳು ಹೆಚ್ಚು ಫಲಪ್ರದ. ಮಕ್ಕಳ ಮನಸ್ಸು ಕಲ್ಮಶವಿರದ ಶುದ್ಧ ಮನಸ್ಸು. ಹಾಗಾಗಿ ಮಕ್ಕಳ ಪ್ರದರ್ಶನಗಳಲ್ಲಿ ಯಾವುದೇ ಅಪಸವ್ಯಗಳು ಕಾಣಿಸಿಕೊಳ್ಳುವುದಿಲ್ಲ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವದಿಸಿದರು. ಅವರು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಮಕ್ಕಳ ಮೇಳದ 50ರ ಸಂಭ್ರಮದ ಸುವರ್ಣ ಪರ್ವ ಸಮಾರೋಪ ಸಮಾರಂಭವನ್ನು ಚಂಡೆ ನುಡಿಸಿ, ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಯಕ್ಷಗಾನವು ವಾಣಿಜ್ಯೀಕರಣವಾದಾಗ ಅದರ ಮೂಲ ಸ್ವರೂಪಕ್ಕೆ ಧಕ್ಕೆ ಬಂದಿದೆ. ಕಲಾವಿದರ ವೈಯಕ್ತಿಕ ಮಾತುಕತೆಗಳೇ ರಂಗದ ಸಂಭಾಷಣೆಗಳಾಗಿ ಮೂಡಿಬರುತ್ತಿವೆ. ಇಂಥವುಗಳಿಗೆ ಕಡಿವಾಣ ಹಾಕಬೇಕು. ಯುವಜನತೆ ಸಮಾಜ ಬಾಹಿರ ಕೆಲಸದಲ್ಲಿ ತೊಡಗಿ ಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಮಕ್ಕಳು ಯಕ್ಷಗಾನದಲ್ಲಿ ತೊಡಗಿಸಿ ಕೊಂಡಾಗ ಅವರಲ್ಲಿ ಉತ್ತಮ ಸಂಸ್ಕಾರ ಮೂಡುವುದಕ್ಕೆ ಸಾಧ್ಯ. ಉಡುಪ ಮತ್ತು ಹಂದೆಯವರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳು ಡಿಜಿಟಲ್ ವ್ಯವಸ್ಥೆಯ ಅಡಿಯಲ್ಲಿ ನಡೆಯುತ್ತಿದ್ದು ಗ್ರಾಹಕನು ಅತ್ಯಂತ ಜಾಗರೂಕನಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸದೇ ಇದ್ದ ಪಕ್ಷದಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾನೆ. ಹಾಗಾಗಿ ಎಚ್ಚೆತ್ತ ಗ್ರಾಹಕ ಗುರಿಯತ್ತ ಸಾಗುವನೆಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಿ. ಮೊಹನ್ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ನಡೆದ ಬ್ಯಾಂಕ್ ವ್ಯವಹಾರದಲ್ಲಿ ಜಾಗೃತೆ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕನು ನೈಪುಣ್ಯತೆಯೊಂದಿಗೆ ವ್ಯವಹರಿಸದಿಲ್ಲಿ ಮೋಸದ ಬಲೆಗೆ ಬೀಳದೆ ಇರಲು ಸಾಧ್ಯ ಎಂದು ನುಡಿದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಮುಖ್ಯಸ್ಥರಾದ ಡಾ. ಶೇಖರ ಬಿ. ಅವರು ಪ್ರಾಸ್ತಾವಿಕ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಅಂತರಾಷ್ಟ್ರೀಯ ಪ್ರತಿಷ್ಠಾನದ ವೇದಿಕೆ ಕೊಡಲ್ಪಡುವ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಲೋಕಾಯುಕ್ತ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ವಾಸ್ತುತಜ್ಞ, ಪ್ರಸಂಗಕರ್ತ ಡಾ. ಬಸವರಾಜ್ ಶೆಟ್ಟಿಗಾರ್ ಅವರಿಗೆ ಪ್ರದಾನ ಮಾಡಿದರು. ಮಾಜಿ ಲೋಕಾಯುಕ್ತರಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದವರಿಗೆ ಮತ್ತಷ್ಟು ಜವಾಬ್ದಾರಿ ಹೆಚ್ಚುತ್ತದೆ ಅಲ್ಲದೇ 42 ವರ್ಷಗಳಿಂದ ವಿವಿಧ 16 ಕ್ಷೇತ್ರಗಳಲ್ಲಿ ಸಾಧನೆ ಮಾಡಿ 50 ಕ್ಷೇತ್ರಗಳ ಅಧ್ಯಯನ ಮಾಡಿ 50 ಕ್ಷೇತ್ರ ಮಹಾತ್ಮೆ ಪ್ರಸಂಗವನ್ನು ರಚಿಸಿ ಜಾಗತಿಕ ದಾಖಲೆ ನಿರ್ಮಿಸಿದ ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಪ್ರಶಸ್ತಿಯನ್ನು ನೀಡಿರುವುದರಿಂದ ಸಂಸ್ಥೆಯ ಗೌರವ ಮತ್ತಷ್ಟು ಹೆಚ್ಚಿದಂತಾಗಿದೆ ಎಂದು ಶುಭ ಹಾರೈಸಿದರು. ಸಮಾರಂಭವ…
