ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಾಂಧಿ ಮೈದಾನದ ಸಮಗ್ರ ಅಭಿವೃದ್ಧಿ – ವಾಲಿಬಾಲ್ ಕೋರ್ಟ್ ಮತ್ತು ಕಬ್ಬಡಿ ಕೋರ್ಟ್ ಮಾಡುವ ಸಲುವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಕುಂದಾಪುರ ಪುರಸಭಾ ಮುಖ್ಯ ಅಧಿಕಾರಿ ಆನಂದ್ ಜಿ., ಮತ್ತು ಕ್ರೀಡಾಭಿಮಾನಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಮ್ಜೆ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಡಿ, ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಆಧಾರಿತ ನವೀನತೆ ಹಾಗೂ ಜಾಗತಿಕ ಸಹಕಾರಗಳತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್ನ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಗುರುವಾರ ಉದ್ಘಾಟಿಸಲಾಯಿತು. ಈ ಕೇಂದ್ರವನ್ನು ಸಂಶೋಧನೆ ಹಾಗೂ ಸಲಹಾ ವಿಭಾಗದ ಡೀನ್ ಆಗಿರುವ ಡಾ. ಇಂದ್ರ ವಿಜಯ್ ಸಿಂಗ್ ಅವರು ಮುನ್ನಡೆಸುತ್ತಿದ್ದು, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಉನ್ನತ ಸಂಶೋಧನೆ, ನವೀನತೆ ಹಾಗೂ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಮುಖ್ಯ ಅತಿಥಿಯಾಗಿ ತಾಕೇಶಿ ಒಗುರಾ, ಏಶಿಯ ಬಿಸ್ ನೆಸ್ ಹೆಡ್, ಕೆಟಿಸಿ ಹೋಲ್ಡಿಂಗ್ ಜಪಾನ್ ಅವರು ಆಗಮಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಅವರು ಜಪಾನಿನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅಂತರರಾಷ್ಟ್ರೀಯ ವೃತ್ತಿ ಅವಕಾಶಗಳ ಕುರಿತು ಮಾತನಾಡಿ, ಕೃತಕ ಬುದ್ಧಿಮತ್ತೆ ಮತ್ತು ಉನ್ನತ ತಂತ್ರಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫೇಸ್ಬುಕ್ನಲ್ಲಿ ಪೋಸ್ಟ್ ಒಂದಕ್ಕೆ ಅವಾಚ್ಯವಾಗಿ ಕಮೆಂಟ್ ಮಾಡಿದ ಪ್ರಕಾಶ್ ಎಸ್(45) ಎಂಬಾತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಫೆ.04 ಫೇಸ್ ಬುಕ್ ವಾರ್ತಾ ಭಾರತಿ ಪೇಜ್ ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುವ ಮಹಮ್ಮದ್ ರವರ ಸಂದರ್ಶನದ ಕುರಿತು ರಂಜಾನ್ ಕಥೆಯ ಇಂದಿನ ಹೀರೋ ಮಂಗಳೂರಿನ ಮಹಮ್ಮದ್ ಎಂಬ ಪೇಜ್ ನ್ನು ನೋಡುತ್ತಿದ್ದಾಗ, ಸದ್ರಿ ಫೇಜ್ ಗೆ ಪೇಸ್ ಬುಕ್ ನಲ್ಲಿ ಹೆಮ್ಮೆಯ ಕಾರ್ಯಕರ್ತ ಎಂಬುವವರು ಅವಾಚ್ಯವಾಗಿ ಕಮೆಂಟ್ ಮಾಡಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಿ, ಪೋಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ. ಹೆಚ್ ಡಿ ಕುಲಕರ್ಣಿ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕರಾದ ಜಯರಾಮ್ ಡಿ ಗೌಡ ನೇತೃತ್ವದ ಕುಂದಾಪುರ ಠಾಣಾ ಪಿ.ಎಸ್.ಐ ನಂಜಾನಾಯ್ಕ್ ಎನ್ (ಕಾ&ಸು), ಪಿ.ಎಸ್.ಐ ಪುಷ್ಪ (ತನಿಖೆ) ಹಾಗೂ ಸಿಬ್ಬಂದಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕಿನ ನಿವೃತ್ತ ಮ್ಯಾನೇಜರ್, ಗಂಗೊಳ್ಳಿ ನಿವಾಸಿ ಎಂ. ಭಾಸ್ಕರ ಪೈ (91) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ಕೆನರಾ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಒಟ್ಟು ಸುಮಾರು 40 ವರ್ಷ ಕಾಲ ಸೇವೆ ಸಲ್ಲಿಸಿ ಮತ್ತು ಸುಮಾರು 20 ವರ್ಷ ಕೆನರಾ ಬ್ಯಾಂಕಿನ ಶಾಖಾ ಪ್ರಬಂಧಕರಾಗಿ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮುಳ್ಳಿಕಟ್ಟೆಯಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದ ಅವರು ಕೃಷಿಕರಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಸುಮಾರು ಒಂದು ವರ್ಷಗಳಿಂದ ಗಂಗೊಳ್ಳಿಯಲ್ಲಿ ವಾಸವಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಜನಾನುರಾಗಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹಕಾರಿ ಸಂಸ್ಥೆಗಳ ಗುಣಮಟ್ಟ ಕಾಪಾಡುವಲ್ಲಿ ಸಹಕಾರಿಯ ಆಡಳಿತ ಮಂಡಳಿ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಸಹಕಾರಿ ರಂಗದಲ್ಲಿ ಆಗುತ್ತಿರುವ ಬದಲಾವಣೆಗಳು ಹಾಗೂ ಸಹಕಾರಿ ಕಾಯ್ದೆಗಳಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕು. ಆಡಳಿತ ಮಂಡಳಿ ಸದಸ್ಯರು ತಮ್ಮ ಅಧಿಕಾರ ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಸಹಕಾರಿ ರಂಗವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸಲು ಮತ್ತು ಸಹಕಾರಿ ಸಂಸ್ಥೆಗಳ ಗುಣಮಟ್ಟ, ಸೇವೆಯನ್ನು ಬೆಳೆಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಹೇಳಿದರು. ಅವರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಯೂನಿಯನ್ ಉಡುಪಿ ಇವರ ಸಹಯೋಗದೊಂದಿಗೆ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರಿಗಾಗಿ ತ್ರಾಸಿ ಪ್ರೆಸ್ಟೀಜ್ ಪ್ಯಾಲೇಸ್ನ ನಕ್ಷತ್ರ ಮಿನಿ ಹಾಲ್ನಲ್ಲಿ ಗುರುವಾರ ನಡೆದ ವಿಷಯಾಧಾರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಫೆ.13: ವರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಡುತ್ತಿದ್ದ ದಂಧೆಯ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಹಳ್ನಾಡಿನ ದೇವಾನಂದ ಶೆಟ್ಟಿ ಹಾಗೂ ಉತ್ತರ ಪ್ರದೇಶ ಮೂಲದ 21 ಮಂದಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಫೆ.12 ರಂದು ಮಧ್ಯಾಹ್ನ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪವಿರುವ ಖಾಲಿ ಜಾಗಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 15 ರಿಂದ 20 ಮಂದಿ ಕಾರ್ಮಿಕರು ನದಿಯಿಂದ ತೆಗೆದ ಮರಳನ್ನು ರಾಶಿ ಹಾಕುತ್ತಿರುವುದು ಕಂಡುಬಂದಿದೆ. ಅಲ್ಲದೆ ಪಕ್ಕದ ಹೊಳೆಯಲ್ಲಿ ಮರಳು ತೆಗೆಯಲು ಬಳಸುತ್ತಿದ್ದ ಮೂರು ಬೋಟ್ಟ್ಗಳು ಪತ್ತೆಯಾಗಿವೆ. ಸ್ಥಳದಲ್ಲಿದ್ದ ಕೆಲಸಗಾರರನ್ನು ವಿಚಾರಿಸಿದಾಗ, ಹಳ್ನಾಡಿನ ದೇವಾನಂದ ಶೆಟ್ಟಿ ಎಂಬುವವರು ಮರಳು ತೆಗೆಯಲು ಸೂಚಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ಪ್ರಕಾಶ್ ಎಸ್. ಶೆಟ್ಟಿ (55) ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ. ಅವರು 10 ದಿನಗಳ ಹಿಂದೆ ಹೃದಯ ಸಂಬಂಧಿ ತೊಂದರೆ ಕಾಣಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲುಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಫೆ.12ರಂದು ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಗ್ರಾಮದ ಹಂದಕೊಡ್ಲು ಇಳಿಜಾರಿನಲ್ಲಿ ಬೈಕ್ ಬಿಟ್ಟು ರಸ್ತೆಗೆ ಉರುಳಿದ ಸವಾರ ಮೃತಪಟ್ಟ ಘಟನೆ ನಡೆದಿದೆ. ಸಿದ್ದಾಪುರದಿಂದ ಆವರ್ಸೆಗೆ ಸಾಗುತ್ತಿದ್ದ ಆಟೋರಿಕ್ಷಾ ಹಂದಕೊಡ್ಲು ಸಾಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಇಳಿಜಾರಿನಲ್ಲಿ ಆಟೋರಿಕ್ಷಾ ಕಂಡು ಗಲಿಬಿಲಿಗೊಂಡು ಬೈಕ್ನ್ನು ಬಿಟ್ಟು ರಸ್ತೆಗೆ ನೆಗೆದಿದ್ದು, ನಂತರ ರಸ್ತೆಯಲ್ಲಿ ಉರುಳಿಕೊಂಡು ಹೋಗಿದ್ದಾರೆ. ಬೈಕ್ ಆಟೋರಿಕ್ಷಾದ ಬಲಭಾಗದ ಸೇಫ್ಗೆ ಬಂದು ಬಡಿದಿತ್ತು. ರಸ್ತೆಯಲ್ಲಿ ಉರುಳಿ ಬಿದ್ದ ಬೈಕ್ ಸವಾರ ಕುಂಬಾರಮಕ್ಕಿ ಕಳಿಗೆ ಚಂದ್ರ ಶೆಟ್ಟಿ (63) ಗೆ ಗಂಭೀರ ಗಾಯಗೊಂಡಿದ್ದು, ಕೂಡಲೆ ಆಟೋರಿಕ್ಷಾ ಚಾಲಕ ಮತ್ತು ಪ್ರಯಾಣಿಕರು ಚಿಕಿತ್ಸೆಯ ಬಗ್ಗೆ ಹಾಲಾಡಿಯ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಆಯೋಜಿಸಲಾಗಿದ್ದು, ಯುವಜನತೆ ತರಬೇತಿಯ ಲಾಭ ಪಡೆದುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಯಾವುದೇ ಕರ್ತವ್ಯ ನಿರ್ವಹಿಸುವಾಗ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ. 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದರು. ಸೃಜನಶೀಲತೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ 26ನೇ ವಾರ್ಷಿಕ ಉತ್ಸವದ ನಾಲ್ಕು ದಿನಗಳ ಸುರಭಿ “ಜೈಸಿರಿ” ಮತ್ತು “ಬಿಂದುಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ನ್ಯಾಯವಾದಿ ಮಂಗೇಶ ಶಾನುಭಾಗ್ ಏಳಜಿತ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ, ನಿರಂತರ ವೈವಿಧ್ಯಮಯ ಸಾಂಸ್ಕೃತಿಕ ಉತ್ಸವಗಳ ಮೂಲಕ ಬೈಂದೂರನ್ನು ಸಾಂಸ್ಕೃತಿಕ ನಗರಿಯನ್ನಾಗಿಸುತ್ತಿರುವ ಸುರಭಿ ಸಂಸ್ಥೆಗೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರಭಿ ಸಂಸ್ಥೆಯ ಅಧ್ಯಕ್ಷರಾದ ಆನಂದ ಮದ್ದೋಡಿ ವಹಿಸಿದ್ದು ಕಾರ್ಯಕ್ರಮದ ರೂಪುರೇಷೆ ತಿಳಿಸಿದರು. ಸಂಸ್ಥೆಯ ನಿರ್ದೇಶಕ ಸುಧಾಕರ್ ಪಿ. ಬೈಂದೂರು ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ ವಂದಿಸಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು.
