ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಾತ್ಮ ಗಾಂಧಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳ ತತ್ವಗಳು ಮತ್ತು ಜೀವನಾದರ್ಶಗಳು ಎಂದಿಗೂ ಸರ್ವಕಾಲಿಕ ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಗುರುವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಪುಷ್ಪ ಸಮರ್ಪಣೆಗೖದು ಮಾತನಾಡಿದರು. ಅವರೀರ್ವರ ಅಹಿಂಸಾ ತತ್ವ, ಪ್ರಾಮಾಣಿಕತೆ ಕರ್ತವ್ಯ ನಿಷ್ಠೆ, ಮತ್ತು ಸತ್ಯದ ದಾರಿಯ ನಡೆ- ನುಡಿಗಳು ನಮಗೆ ಮಾರ್ಗದರ್ಶಿಯಾಗಿವೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಬಂಧಕರಾದ ಗೋಪಾಲ್ ನಾಯ್ಕ, ಇಂಗ್ಲಿಷ್ ಉಪನ್ಯಾಸಕಿ ಮೀನಾಕ್ಷಿ ಎನ್ಎಸ್ ವಾಣಿಜ್ಯ ವಿಭಾಗ ಮುಖ್ಯಸ್ಥ ಅರುಣ್ ಎಎಸ್, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕ ರಾಮಚಂದ್ರ ಆಚಾರ್ಯ, ಮತ್ತಿತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ಶರನ್ನವರಾತ್ರಿಯ ಮಹಾನವಮಿಯಂದು ದೇವಳದ ತಂತ್ರಿ ಹಾಗೂ ಪ್ರಧಾನ ಅರ್ಚಕ ಕೆ. ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಬೆಳಿಗ್ಗೆ ಗಂಟೆ 11.30ಕ್ಕೆ ವಿಶೇಷ ಚಂಡಿಕಾಯಾಗ ಹಾಗೂ ಮಧ್ಯಾಹ್ನ 01.15ಕ್ಕೆ ಧನುರ್‌ಲಗ್ನ ಸುಹೂಮೂರ್ತದಲ್ಲಿ ಪುಷ್ಪರಥೋತ್ಸವ ನಡೆಯಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತವೃಂದ ’ಅಮ್ಮಾ ದೇವಿ, ನಾರಾಯಣಿ’ ಎಂಬಿತ್ಯಾದಿ ಉದ್ಘೋಷದಿಂದ ಮೈಮರೆತು ಭಕ್ತಿಪರವಶರಾದರು. ಪ್ರಾರಂಬಿಕ ಹಂತದಲ್ಲಿ ದೇವಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ದೆವಾಲಯದ ಒಳಪ್ರಾಂಗಣದಲ್ಲಿ ಒಂದು ಸುತ್ತು ಬರುತ್ತಿದ್ದಂತೆ ಶ್ರೀ ಮೂಕಾಂಬಿಕೆಯ ಸ್ತೋತ್ರಪಠಿಸಿ ದೇವಿಯ ದರ್ಶನ ಪಡೆದು ಕಣ್ತುಂಬಿಕೊಂಡು ಪುಳಕಿತರಾದರು. ಬಳಿಕ ಪುಷ್ಪರಥದಿಂದ ಅರ್ಚಕರು ಪ್ರಸಾದ ರೂಪವಾಗಿ ಎಸೆಯುವ ನಾಣ್ಯಗಳನ್ನು ಪಡೆಯಲು ಸೇರಿದ ಭಕ್ತರಲ್ಲಿ ಪೈಪೋಟಿ ಹೆಚ್ಚಾಗಿ ಸ್ವಲ್ಪಕಾಲ ನೂಕುನುಗ್ಗಲು ಉಂಟಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ್, ಯು. ರಾಜೇಶ ಕಾರಂತ್, ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, ಅಭಿರಾಮ್ ಭಟ್ ಜಿ.ಪಿ, ಪ್ರಜ್ವಲ್ ಭಟ್, ಆರ್ಯ ವಿ., ಸೃಜನಾ ಎಸ್., ಯಜತ್ ಗೌಡ ಎಸ್.ಪಿ, ವಿಶ್ವೇಶ್ ಎನ್.ಎಚ್, ನಿನಾದ್ ರಾಜೇಶ್ ನಾಯ್ಕ್, ಅನುರಾಗ್ ಎಸ್. ಶಿರ್ಸಟ್ ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಸಾಧನೆಗೈದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ತೇರ್ಗಡೆಗೊಂಡ 7,650 ವಿದ್ಯಾರ್ಥಿಗಳಲ್ಲಿ 14 ಜನ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ತೇರ್ಗಡೆಗೊಂಡ 500 ವಿದ್ಯಾರ್ಥಿನಿಯರಲ್ಲಿ ಒಬ್ಬರು ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿ ಎಂಬುದು ಶ್ಲಾಘನೀಯ ವಿಚಾರ. ಎನ್. ಡಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದುಷ್ಟ ಶಕ್ತಿ ಸಂವಾರಕ್ಕಾಗಿ ನವದರ್ಗೆಯರು ಅವತರಿಸಿ, ಧರ್ಮ ರಕ್ಷಣೆಯ ಪ್ರತೀತಿ ಪಡೆದುಕೊಂಡಿದೆ. ಅದರ ಮೂಲಕ ಮಹತ್ವ ಪಡೆದ ಶರನ್ನವರಾತ್ರಿ ಉತ್ಸವ ಇಂದು ವ್ಯಾಪಕವಾಗಿ ಧಾರ್ಮಿಕ ಶ್ರದ್ಧಾ ಭಕ್ತಿಯಿಂದ ಗ್ರಾಮ ಗ್ರಾಮಗಳಲ್ಲಿ ಶಾರದೋತ್ಸವ ರೂಪದಲ್ಲಿ ಸಂಪನ್ನಗೊಳ್ಳುತ್ತಿದೆ ಎಂದು ಕೋಟದ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಪಾಂಡೇಶ್ವರ ಶಾಲಾ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ಶಾರದೋತ್ಸವ 2025 ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದ ಒಳಿತಿಗೆ ಧಾರ್ಮಿಕ ಆಚರಣೆಗಳು ವಿಶೇಷವಾಗಿ ಮನ್ನಣೆ ಪಡೆದುಕೊಂಡಿದೆ, ಗ್ರಾಮದ ಸ್ವಾಸ್ಥ್ಯ ಸಂರಕ್ಷಣೆಗೆ ಶಾರದೋತ್ಸವ ಕಾರ್ಯಕ್ರಮಗಳು ವಿಶೇಷತೆ ಪಡೆದುಕೊಂಡಿದೆ ಎಂದರಲ್ಲದೆ ಒಗ್ಗಟ್ಟಿನ ಮೂಲಕ ನಮ್ಮ ಸಂಪ್ರದಾಯ ಸಂಸ್ಕೃತಿಗಳ ಅನಾವರಣ ಈ ಪಾಂಡೇಶ್ವರ ಗ್ರಾಮದಲ್ಲಿ ಕಾಣಬಹುದಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಶಾರದೋತ್ಸವ ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ವಹಿಸಿದ್ದರು. ಈ ವೇಳೆ ಶಾರದೋತ್ಸವ ಸಮಿತಿಯ ಹಿರಿಯ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಂಡಿದ್ದು, ಗಣತಿದಾರರು ಜಿಲ್ಲೆಯ ನಾಗರೀಕ ಮನೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಕುಟುಂಬದ ಪಡಿತರ ಚೀಟಿ, ಆಧಾರ್ ಸಂಖ್ಯೆ, ವಿಶೇಷ ಚೇತನರು ಕುಟುಂಬದಲ್ಲಿದ್ದರೆ ಯು.ಡಿ.ಐ.ಡಿ ಸಂಖ್ಯೆಯನ್ನು ಗಣತಿದಾರರಿಗೆ ನೀಡಬೇಕಾಗಿರುತ್ತದೆ. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್‌ಗಳಿಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿರುತ್ತದೆ ಹಾಗೂ ಸಮೀಕ್ಷೆ ವೇಳೆ E-Kyc (Aadhar)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಅವರಿಗೆ ಆರೋಗ್ಯ ವಿಜ್ಞಾನದ ಶೈಕ್ಷಣಿಕ ವಲಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಪ್ರಶಸ್ತಿ ನೀಡಿ ಗೌರವಿಸಿದರು. ಅವರು ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಕಳೆದ 18 ವರ್ಷಗಳಿಂದ ಪ್ರಾಚರ್ಯಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜುಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 51ನೇ ವರ್ಷದ ಸಮಾರಂಭದ ಅಂಗವಾಗಿ ಶ್ರೀ ದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಮತ್ತು ಗ್ರಾಮಾಭಿವೃದ್ಧಿಗೋಸ್ಕರ ಶ್ರೀ ಚಂಡಿಕಾ ಯಾಗ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಮಂಗಳವಾರ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ರಾಜ ಪೂಜಾರಿ ದಂಪತಿ, ಶಿವಾನಂದ ಗಾಣಿಗ ದಂಪತಿ ಹಾಗೂ ರಘುರಾಮ ಪೂಜಾರಿ ದಂಪತಿ ಯಾಗದ ಯಜಮಾನಿಕೆ ವಹಿಸಿದ್ದರು. ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್‌ಆರ್‌ಜಿ., ಕಾರ್ಯದರ್ಶಿ ಎಂ. ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್, ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಭಜಕರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸೋಮವಾರಂದು ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಸಂದೇಶಗಳ ಪರಿಚಯಕ್ಕಾಗಿ ’ಗೀತಾ ಸಂದೇಶ ಸಾರ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಬ್ರಾಯ ನಂದೋಡಿ, ಕಾಸರಗೋಡು ಪ್ರಧಾನ ಗುರುಗಳು ಗೀತಾ ಜ್ಞಾನ ಯಜ್ಞ ಸಮಿತಿಯವರು ಮಕ್ಕಳಿಗೆ ಭಗವದ್ಗೀತೆಯ ಬಗ್ಗೆ ತಿಳಿಸುತ್ತಾ, ನಾವು 84 ಲಕ್ಷ ಕೋಟಿ ಜನ್ಮಗಳನ್ನು ದಾಟಿ ಮನುಷ್ಯ ಜನ್ಮ ಪಡೆದಿದ್ದೇವೆ. ದೇಹವನ್ನು ಶುದ್ಧೀಕರಿಸುವಂತೆ ಸದಾ ಮನಸ್ಸನ್ನು ಶುದ್ಧ ಮಾಡಿಕೊಳ್ಳುತ್ತಿರಬೇಕು. ಇಂದು ನೀವು ಈ ಶಾಲೆಯಲ್ಲಿ ನಿಮ್ಮ ದೈನಂದಿನ ದಿನಚರಿಯನ್ನು ಹೇಗೆ ಪಾಲಿಸುತ್ತಿರೊ ಅದೇ ದಿನಚರಿಯನ್ನು ನಿಮ್ಮ ಮುಂದಿನ ಜೀವನದಲ್ಲೂ ಮುಂದುವರಿಸಿಕೊಳ್ಳಬೇಕು. ನಾವು ನಮ್ಮ ಬಗ್ಗೆಯಷ್ಟೇ ಮಾತಾಡಬೇಕು. ನಮ್ಮ ಉದ್ಧಾರ ನಮ್ಮ ಪ್ರಯತ್ನದಿಂದಲೇ ಸಾಧ್ಯ. ಪ್ರಾಮಾಣಿಕತೆಯನ್ನು ಬೆಳೆಸಿಕೊಳ್ಳಬೇಕು. ಸುಖ-ದುಃಖವನ್ನು ಸಮಾನವಾಗಿ ಕಾಣಬೇಕು. ಹಿರಿಯನ್ನು ಗೌರವಿಸಿ, ಕಲಿಯುವ ತವಕದಿಂದ ಪ್ರಶ್ನಿಸಬೇಕು. ಆಗಷ್ಟೇ ವಿದ್ಯಾಭ್ಯಾಸ ಸುಲಲಿತವಾಗಿ ಸಾಗಬಲ್ಲದು ಎನ್ನುತ್ತಾ ಭಗವದ್ಗೀತೆಯ ಅಧ್ಯಯನವನ್ನು ನಿರಂತರ ನಡೆಸಿರೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆಯ ದಿನೇಶ್ ಬೋವಿ ಅವರು ʼಪರಿಸರ ಉಳಿಸಿʼ ಎಂಬ ಸಂದೇಶದೊಂದಿಗೆ ಸತತ 11 ತಿಂಗಳ ಕಾಲ ಉಡುಪಿಯಿಂದ ಲಡಾಕ್ ತನಕ 3,300 ಕಿಮೀ ಯಾತ್ರೆಯನ್ನು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದ ದಿನೇಶ್, 2025ರ ಸೆ.15ರಂದು ಲಡಾಖ್ ತಲುಪಿ ಸತತ 330 ದಿನಗಳ ಸೈಕಲ್ ಯಾತ್ರೆಯನ್ನು ಸಂಪೂರ್ಣಗೊಳಿಸಿದ್ದಾರೆ. ಕರ್ನಾಟಕದಿಂದ ಆರಂಭಗೊಂಡ ಸೈಕಲ್ ಪ್ರಯಾಣ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮೂಲಕವಾಗಿ ಜಮು ಕಾಶ್ಮೀರ ತಲುಪಿದ್ದು 8 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. ಲಡಾಕ್‌ಗೆ 11 ತಿಂಗಳಿಗಿಂತ ಬೇಗ ತಲುಪ ಬಹುದಾಗಿದ್ದರೂ, ಕಾಶ್ಮೀರದ ಥಾಂಗ್ ಗ್ರಾಮದ ರಸ್ತೆ ವರ್ಷದಲ್ಲಿ 6 ತಿಂಗಳು ಮಾತ್ರ ತೆರೆದಿರುತ್ತದೆ. ಹಾಗಾಗಿ 1 ತಿಂಗಳು ಮುಂಬೈಯಲ್ಲಿ ವಿಶ್ರಾಂತಿ ಮಾಡಿದ್ದರೆ, 3 ತಿಂಗಳು ಗುಜರಾತಿನಲ್ಲಿ ತಂಗಿದ್ದರು. 11 ತಿಂಗಳ ಸೈಕಲ್ ಪ್ರಯಾಣದಲ್ಲಿ ಒಟ್ಟು ಸುಮಾರು 1.5 ಲಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
