ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೈವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಶ್ರೀ ರಾಮ ನಾಮ ಕೋಟಿ ಜಪ ಯಜ್ಞಕ್ಕೆ ಇತ್ತೀಚಿಗೆ ಚಾಲನೆ ನೀಡಲಾಯಿತು. ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಏಕಾಹ ಅಖಂಡ ಭಜನೋತ್ಸವ ಪ್ರಾರಂಭಿಸಿ ಐವತ್ತು ವರ್ಷಗಳು ಪೂರ್ಣಗೊಳ್ಳುವ ಸಂದರ್ಭದಲ್ಲಿ ಪರಿವಾರ ದೈವಗಳ, ನಾಗ ದೇವರ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ಭಜನಾ ಸುವರ್ಣ ಮಹೋತ್ಸವದ ಅಂಗವಾಗಿ ಕೋಟಿ ಜಪ ಯಜ್ಞ ನಡೆಯಿತು. ಶ್ರೀ ನಂದಿಕೇಶ್ವರ ದೇವರಿಗೆ ಹಾಗೂ ಶ್ರೀ ರಾಮ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆಯೊಂದಿಗೆ ಶ್ರೀ ರಾಮ ನಾಮ ಕೋಟಿ ಜಪ ಯಜ್ಞ ಪ್ರಾರಂಭಿಸಲಾಯಿತು. ವೇ.ಮೂ. ಮಹಾಬಲ ಭಟ್ ಮತ್ತು ವೇ.ಮೂ. ತಿರುಮಲೇಶ್ವರ ಭಟ್ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಹಿರಿಯ ಭಜಕರಾದ ಗುಳೈ ಮಂಜಣ್ಣ ಉಪ್ಪುಂದ, ರವಿ ಖಾರ್ವಿ ಅಳ್ವಕೊಡಿ, ಗಣಪತಿ ಪೂಜಾರಿ, ಬಾಬು ದೇವಾಡಿಗ ಕಸಿನಮನೆ, ದೈವಸ್ಥಾನದ ಮಾಜಿ ಅಧ್ಯಕ್ಷ ಕ್ರಷ್ಣ ಮೂರ್ತಿ ದೇವಾಡಿಗ, ಬಿಜೂರು ಗ್ರಾಮ ಪಂಚಾಯಿತ ಸದಸ್ಯರಾದ ರಮೇಶ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ ಪ್ರಚಾರದ ನೆಲೆಯಲ್ಲಿ ಸಹಕರಿಸುತ್ತಿರುವ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಿವೃತ್ತ ಹಿರಿಯ ಕ್ರೀಡಾ ಸಂಪಾದಕ ಸ್ಟಾನ್ ರಾಯನ್ ವಿಶೇಷ ಉಪನ್ಯಾಸ ನೀಡಿದರು. ವಿಶ್ವದ ಅನೇಕ ದೇಶಗಳಿಗೆ ಪ್ರವಾಸ ಮಾಡಿ ಒಲಿಂಪಿಕ್ಸ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ವರದಿ ಮಾಡಿದ ಅನುಭವವನ್ನು ಹಂಚಿಕೊಂಡ ಅವರು, ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು ಎಂದು ಹೇಳಿದರು. ಕ್ರೀಡಾ ವರದಿಗಾರರು ಸ್ಥಳೀಯ ಕ್ರೀಡಾ ಪಂದ್ಯಗಳಿಗೆ ಹಾಜರಾಗುವ ಮೂಲಕ ಕ್ರೀಡೆಯ ನೈಜ ಸ್ವರೂಪವನ್ನು ಅರ್ಥಮಾಡಿಕೊಳ್ಳಬೇಕು. ಸಮಯದ ಪರಿಧಿಯೊಳಗೆ ಕೆಲಸ ನಿರ್ವಹಿಸುವ ಕಲೆಯನ್ನು ಮೊದಲು ಅರಿಯಬೇಕು. ಸರಳ ಹಾಗೂ ಸ್ಪಷ್ಟ ಬರವಣಿಗೆಗೆ ಆದ್ಯತೆ ನೀಡಬೇಕು. ಕ್ರೀಡಾ ವರದಿಗಳು ಜನರಿಗಾಗಿಯೇ ಹೊರತು ಯಾರನ್ನೂ ಮೆಚ್ಚಿಸಲು ಅಲ್ಲ ಎಂದು ತಿಳಿಸಿದರು. ಭಾರತದಲ್ಲಿ ಡೋಪಿಂಗ್ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪರಿಶುದ್ಧ ಕ್ರೀಡೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕು ಕೋಟ ಮಂಡಲ ಇದರ ಆಶ್ರಯದಲ್ಲಿ ಇದೇ ಜ.25ರಂದು ಕೋಟದ ಮಾಂಗಲ್ಯ ಮಂದಿರ ಮುಂಭಾಗ ಅಪರಾಹ್ನ 3.00ಗ ಬೃಹತ್ ಹಿಂದೂ ಸಂಗಮ ಹಾಗೂ ಶೋಭಾಯಾತ್ರೆ ಸಮಾವೇಶ ಆಯೋಜಿಸಿದ್ದು ಈ ಹಿನ್ನಲ್ಲೆಯಲ್ಲಿ ಬುಧವಾರ ಇದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಕೋಟ ಅಮೃತೇಶ್ವರೀ ದೇಗುಲದ ಸಭಾಂಗಣದಲ್ಲಿ ಜರಗಿತು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಸಂಗಮ ಕೋಟ ಮಂಡಲ ಸಮಿತಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಕೋಟ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸದಾನಂದ ಗಿಳಿಯಾರು, ಕದ್ರಿ ಮಂಜನಾಥೇಶ್ವರ ದೇಗುಲದ ಮಾಜಿ ಟ್ರಸ್ಟಿ ಕುಸುಮಾ ದೇವಾಡಿಗ, ಹಿಂದೂ ಸಂಗಮ ಆಯೋಜನಾ ಸಮಿತಿಯ ಸಾಲಿಗ್ರಾಮ ತಾಲೂಕು ಸಂಯೋಜಕ ಸುರೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಉಪ್ಪುಂದ ಇಲ್ಲಿಗೆ ನಬಾರ್ಡ್ನ ಡಿಡಿಎಮ್ ಸಂಗೀತಾ ಕರ್ತಾ ಭೇಟಿ ನೀಡಿ ಕೃಷಿ ಸಾಲದ ದಾಖಲೆಗಳನ್ನು ಹಾಗೂ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರನ್ನು ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಗೌರವಿಸಿದರು. ಸಹಕಾರ ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ, ಸಂದೀಪ ಶೆಟ್ಟಿ , ಸಂಘದ ಸಿಇಓ ವಿಷ್ಣು ಪೈ, ಮಾರಾಟಾಧಿಕಾರಿ ಚಂದಯ್ಯ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಿ ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಲಭ್ಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳ ಎಲ್ಲ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರೂ ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು 2.6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಿರಿಯ ನಾಗರಿಕರ ಅನುಕೂಲಕ್ಕಾಗಿ 3 ಲಿಫ್ಟ್ಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಿಕ್ಷಕ ವರ್ಗಕ್ಕೆ ಪ್ರಾಥಮಿಕ ಚಿಕಿತ್ಸೆಯ ಅರಿವು ಮೂಡಿಸುವ ಕಾರ್ಯಗಾರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರದ ಸಹಯೋಗದಲ್ಲಿ ನಡೆಸಲಾಯಿತು. ಡಾ. ಕಿರ್ತೀ ಮಾತನಾಡಿ, ಪ್ರಥಮ ಚಿಕಿತ್ಸೆಯ ಜ್ಞಾನದ ಅಗತ್ಯತೆಯನ್ನು ತಿಳಿಸುತ್ತಾ ಪ್ರಾಥಮಿಕ ಚಿಕಿತ್ಸೆಯನ್ನು ನಮ್ಮವರಿಗಾಗಿ ನಾವು ತಿಳಿಯಬೇಕಾದದ್ದು ಅತ್ಯಗತ್ಯ. ಕೇವಲ ತಿಳಿದರೆ ಸಾಕಾಗಲ್ಲ ಅದನ್ನು ನಮ್ಮರಿಗೆ ತಿಳಿಸುವ ಹೊಣೆಗಾರಿಕೆಯೂ ನಮ್ಮೆಲ್ಲರ ಮೇಲಿದೆ. ಸಹಾಯವನ್ನು ಬಯಸುವ ಜೀವದ ಸಹಾಯಕ್ಕೆ ಧಾವಿಸಬೇಕಾದರೆ ಮೊಟ್ಟ ಮೊದಲು ನಾವು ಸಹಾಯ ಮಾಡುವ ಯೋಗ್ಯತೆಯನ್ನು ಹೊಂದಿರಬೇಕಾಗುತ್ತದೆ. ನಮ್ಮ ಒಳಗಡೆಯ ಭಯವನ್ನು ದೂರ ಮಾಡಿಕೊಳ್ಳಲು, ನಮ್ಮಿಂದ ನೊಂದ ಜೀವಕ್ಕೆ ಅಪಾಯ ಆಗದಿರಬೇಕಾದರೆ, ನಮ್ಮ ಜೀವ ಸುರಕ್ಷವಾಗಿರಬೇಕಾದರೆ ನಾವು ಪ್ರಾಥಮಿಕ ಚಿಕಿತ್ಸೆಯ ಜ್ಞಾನ ಹೊಂದಿರಲೇ ಬೇಕಾಗುತ್ತದೆ ಎಂದು ತಿಳಿಸುತ್ತಾ ಪ್ರಾತ್ಯಕ್ಷತೆಯ ಮೂಲಕ ಅಗ್ನಿ ಅಪಘಾತ, ಮೂಳೆ ಮುರಿತ, ವಿವಿಧ ಅಂಗಾಂಗಗಳಲ್ಲಿ ಉಂಟಾದ ಗಾಯಗಳ ಪ್ರಥಮ ಚಿಕಿತ್ಸೆಯ ವಿಚಾರಗಳನ್ನು ಮತ್ತು ಸಿಪಿಆರ್ ನಡೆಸುವ ವಿಧಾನಗಳನ್ನು ವಿವರಿಸಿದರು. ಶ್ರೀ ಸಿದ್ಧಿ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಂಗಳವಾರ ಮತ್ತು ಬುಧವಾರ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ ಮಕರ ಸಂಕ್ರಾಂತಿ ಉತ್ಸವ ಜರುಗಿತು. ಮಂಗಳವಾರ ಬೆಳಿಗ್ಗೆ ಬಡಾ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮತು ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಮತ್ತು ರುದ್ರಾಭಿಷೇಕ, ಕಲ್ಪೋಕ್ತ ಪೂಜೆ, ನಾಗರಡಿಯಲ್ಲಿ ಋಕ್ ಸಂಹಿತಾ ಪಾರಾಯಣ, ಮಹಾ ಪೂಜೆ ಜರುಗಿತು. ಮಂಗಳವಾರ ಸಂಜೆ ಭಜನೆ, ರಂಗಪೂಜೆ, ನಾಗರಡಿಯಲ್ಲಿ ಕಾಯಿ ಪೂಜೆ, ನಾಗದೇವರ ಪ್ರಸನ್ನ ಪೂಜೆ, ಹಾಲಿಟ್ಟು ಸೇವೆ ಬಳಿಕ ಮಾರಿ ಹೊರಡಲಿದ್ದು ಊರಿನ 4 ಭಾಗಕ್ಕೆ ನಾಗಪಾತ್ರಿಯವರೊಂದಿಗೆ ಸಾತ್ವಿಕವಾದ ಬಲಿಯೊಂದಿಗೆ ಮಾರಿ ಪೂಜೆ ಜರುಗಿತು. ಬುಧವಾರ ಮುಂಜಾನೆ ನಾಗಮಂಡಲ, ನಾಗದರ್ಶನ, ತುಲಾಭಾರ ಸೇವೆ, ಸ್ವರಸೇವೆ 2 ದಿನವೂ ಅನ್ನ ಸಂತರ್ಪಣೆಯಲ್ಲಿ ಮತ್ತು ಪೂಜೆ ಉತ್ಸವದಲ್ಲಿ ಸಹಸ್ರಾರು ಮಂದಿಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ (ಪ್ರಾಥಮಿಕ ಶಾಲಾ ವಿಭಾಗ) ಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭಕ್ಕೆ ಗೌರವಾನ್ವಿತ ಅತಿಥಿಗಳಾಗಿ ಡಾ. ಉದಯಕುಮಾರ್ ತಲ್ಲೂರು (ಸಾಮಾಜಿಕ ನ್ಯಾಯ ಸಮಿತಿ ಹಾಗೂ ಆಹಾರ ಸಮಿತಿಯ ಅಧ್ಯಕ್ಷರು, ಗ್ರಾಮಪಂಚಾಯತ್ ತಲ್ಲೂರು) ಹಾಗೂ ಡಾ. ಎಂ. ದಿನೇಶ್ ಹೆಗ್ಡೆ (ನಿವೃತ್ತ ಪ್ರಾಂಶುಪಾಲರು, ಶ್ರೀ ಶಾರದಾ ಕಾಲೇಜು, ಬಸ್ರೂರು) ಅವರು ಆಗಮಿಸಿದ್ದರು. ಡಾ. ಉದಯಕುಮಾರ್ ತಲ್ಲೂರು ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಇಂದು ಮನೆ ಹಾಗೂ ಶಾಲೆಯಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡು ಚೆನ್ನಾಗಿ ಅಭ್ಯಾಸ ಮಾಡಲು ಹೇಳಿದರು. ಮಾದಕವಸ್ತುಗಳು, ಟಿವಿ ಹಾಗೂ ಮೊಬೈಲ್ ಪೋನ್ಗಳ ಆಕರ್ಷಣೆಯಿಂದ ದೂರವಿದ್ದು, ಬೆಳಿಗ್ಗೆ ಬೇಗನೆ ಎದ್ದು ವ್ಯಾಯಾಮ ಮಾಡುತ್ತಾ, ಚಟುವಟಿಕೆಯಿಂದ ಕೂಡಿದ ಆರೋಗ್ಯಕರ ಹಾಗೂ ಉತ್ತಮ ಜೀವನಶೈಲಿಯನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ಇನ್ನೊರ್ವ ಅತಿಥಿಗಳಾಗಿ ಆಗಮಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿಯ ವೆಬ್ಸೈಟ್ನಲ್ಲಿ ತಿಳಿಸಿರುವ ಶೀರ್ಷಿಕೆಯಲ್ಲಿ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡು 5 ಪುಟಗಳ ಸಾರಲೇಖವನ್ನು ಬರೆದು ಜನವರಿ 23 ರ ಒಳಗಾಗಿ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಕಳುಹಿಸಬಹುದಾಗಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ https://janapada.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ 43 ಪಂಚಾಯತ್ಗಳಲ್ಲಿ ಗ್ರಾಮೋತ್ಸವ ನಡೆಯುತ್ತಿದ್ದು, ಈ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಪ್ರಯತ್ನ ಮಾದರಿಯಾಗಿದೆ. ಗ್ರಾಮೋತ್ಸವ ಕಲ್ಪನೆ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಗ್ರಾಮದ ಜನರಿಗೆ ಸೇವೆ ನೀಡುವ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಗ್ರಾಮ ಪಂಚಾಯತ್ ಗುಜ್ಜಾಡಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಮೃದ್ಧಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗುಜ್ಜಾಡಿ ಸಹಭಾಗಿತ್ವದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಬೈಂದೂರು ಉತ್ಸವ-2026ರ ಅಂಗವಾಗಿ ಗುಜ್ಜಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಮಂಗಳವಾರ ನಡೆದ ಗುಜ್ಜಾಡಿ ಗ್ರಾಮೋತ್ಸವ-2026 ಉದ್ಘಾಟಿಸಿ ಮಾತನಾಡಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ…
