Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ ನಿರಂತರವಾಗಿರುವುದು ದೊಡ್ಡ ಸಾಧನೆಯೇ ಸರಿ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟತಟ್ಟು ಬಾರಿಕೆರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಇವರ ಸಹಯೋಗದೊಂದಿಗೆ  306ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಶೀರ್ಷಿಕೆಯಡಿ ಪಂಚವರ್ಣ ಸಂಘದ ಸದಸ್ಯರಾದ ವಸಂತಿ, ಅಕ್ಷತಾ ಇವರ ಹುಟ್ಟುಹಬ್ಬದ ಪ್ರಯುಕ್ತ ಗಿಡ ಹಸ್ತಾಂತರಿಸಿ ಮಾತನಾಡಿದರು. ಯಾವುದೇ ಸಂಘಟನೆ ಇರಲಿ ಅದರ ನಿರಂತರ ಚಟುವಟಿಕೆ ಆ ಸಂಸ್ಥೆಯ ಕ್ರಿಯಾಶೀಲತೆಯನ್ನು ತೋರ್ಪಡಿಸುತ್ತದೆ,ಪಕೃತಿಗಾಗಿ ತುಡಿತ ಹೊಂದಿದ ಈ ಸಂಸ್ಥೆಯ ವಿನೂತ ಕಾರ್ಯಕ್ರಮಗಳು ಜನಮನ್ನಣೆಯನ್ನು ಗಳಿಸಿದೆ ಎಂದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ಥಳೀಯ ಹಲವಾರು ಮನೆಗಳಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟು ಅದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಂಚವರ್ಣದ ಸದಸ್ಯರಾದ ವಸಂತಿ ಹಾಗೂ ಅಕ್ಷತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ನಿವೃತ್ತ ಪೊಲೀಸ್ ಅಧಿಕಾರಿ ಆನಂದ ಶೆಟ್ಟಿ ಅವರು ಸ್ವಂತ ಖರ್ಚಿನಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ ಸಂಗೀತಾ ಮತ್ತು ಶ್ವೇತಾ ಹಾಗೂ ಆಂಗ್ಲ ಮಾಧ್ಯಮದ ಅನುದೀಪ ಮತ್ತು ಪ್ರತೀಕ್ಷಾ ಅವರನ್ನು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ಚಿಂತನೆಯನ್ನು ಮಾಡಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬಾಳಬೇಕು ಎಂದರು. ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ ಅವರು ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕರಾದ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಸುಧಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಆರೋಗ್ಯಕರ ವಯೋವೃದ್ಧಿಗಾಗಿ ಯೋಗ’ ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಬೆಳಿಗ್ಗೆ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು. ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದತಿಯಿಂದ ಆಯೋಜಿಸಲಾದ ಕಾರ್ಯಕ್ರಮವನ್ನು ಆಳ್ವಾಸ್ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಉದ್ಘಾಟಿಸಿದರು. ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಆಳ್ವಾಸ್ ಶಾಲೆ, ನರ್ಸಿಂಗ್ ಕಾಲೇಜು, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಆಯುರ್ವೇದ ವೈದ್ಯಕೀಯ ಕಾಲೇಜು, ಹೋಮಿಯೋಪತಿ ವೈದ್ಯಕೀಯ ಕಾಲೇಜು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್ ಕೋಡಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಇವರ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಪೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಸಂಯೋಜನೆಯೊಂದಿಗೆ 3ನೇ ವರ್ಷದ ಪರಿಸರ ಸ್ನೇಹಿ ಹಸಿರುಹೆಜ್ಜೆ ಅಭಿಯಾನ ಕೋಡಿ ಕನ್ಯಾನ ಸತೀಶ್ ತಿಂಗಳಾಯ ಅವರ ಮನೆಯಿಂದ ಚಾಲನೆ ನೀಡಲಾಯಿತು. ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ ಮೆಂಡನ್ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ. ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕುಮಾರಿ ಸರಸ್ವತಿ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರಗಿತು. ಕೋಡಿ ವ್ಯಾಪ್ತಿಯ ವಿವಿಧ ಮನೆಗಳಿಗೆ ತೆರಳಿ ಗಿಡದ ಮಹತ್ವ ತಿಳಿಸಿ ನೆಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್., ಸಹಾಯಕಿ ಸಂಗೀತಾ, ಸಂಜೀವಿನಿ ಎಲ್.ಸಿ.ಆರ್.ಪಿ. ಸುಮಿತ್ರ, ಕೃಷಿಸಖಿ ತನುಜಾ, ಎಸ್.ಎಲ್.ಆರ್.ಎಂ. ಘಟಕದ ಸಿಬ್ಬಂದಿ ಕಿರಣ್ ಪುತ್ರನ್ ಹಾಗೂ ಸ್ಥಳೀಯರಾದ ಗೀತಾ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: * ನಾಗದೇವ್ ಎಂ.ಜಿ. – ಐ.ಐ.ಟಿ ಗುವಾಹಟಿ * ನಮಿತ್ ಕೆ. ಹೆಗಡೆ – ಐ.ಐ.ಟಿ ಹೈದರಾಬಾದ್ * ಪ್ರಥಮ್ ತಮ್ಮನಗೌಡರ್ – ಐ.ಐ.ಟಿ ಗಾಂಧಿನಗರ * ರಶ್ಮಿ ಆರ್.ಎಚ್. – ಐ.ಐ.ಟಿ ಭುವನೇಶ್ವರ್ ಎನ್.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: * ತೇಜಸ್ ಆರ್.ಬಿ. – ಎನ್.ಐ.ಟಿ.ಕೆ ಸುರತ್ಕಲ್ * ತೇಜಸ್ ಹೆಗಡೆ – ಎನ್.ಐ.ಟಿ.ಕೆ ಸುರತ್ಕಲ್ * ದಿಶಾಂತ್ ಎಂ. – ಎನ್.ಐ.ಟಿ.ಕೆ ಸುರತ್ಕಲ್ * ಮನೋಜ್ ಎಸ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಯುವ ಮೋರ್ಚಾ ವತಿಯಿಂದ ತೆಕ್ಕಟ್ಟೆ ಸುಧೀಂದ್ರ ಸಭಾಭವನದಲ್ಲಿ ಬೃಹತ್ ಯೋಗ ಕಾರ್ಯಕ್ರಮ ಆಯೋಜಿಸಲಾಯಿತು. ಯೋಗ ಕಾರ್ಯಕ್ರಮವನ್ನ ಉದ್ಘಾಟನೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವದಾದ್ಯಂತ 180ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲ್ಪಡುತ್ತಿದೆ. ಕುಂದಾಪುರ ಯುವ ಮೋರ್ಚಾ ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ದೊಡ್ಡದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ  ಕುಂದಾಪುರ ಬಿಜೆಪಿ ಮಂಡಲ ನಿಕಟ ಪೂರ್ವಅಧ್ಯಕ್ಷ ಶಂಕರ ಅಂಕದಕಟ್ಟೆ , ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ  ಪ್ರಸಾದ ಬಿಲ್ಲವ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿನೋದ್ ದೇವಾಡಿಗ ಹಾಗೂ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರಧಾನ ಕಾರ್ಯದರ್ಶಿ ಚೇತನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಉಡುಪಿಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಹಂಚಿಕೆಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ಜಿ.ಟಿ.ಟಿ.ಸಿ.ಯಲ್ಲಿ ವಿವಿದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ ಗಳಿಗೆ ಸೀಟು ಲಭ್ಯವಿದೆ. ಹೊರ ಜಿಲ್ಲೆ ಹಾಗೂ ಜಿಲ್ಲೆಯ ತೀರ ಗ್ರಾಮೀಣ ಭಾಗದ (ನಿತ್ಯ ಬಂದು ಹೋಗಲು ಸಾಧ್ಯವಾಗದವರಿಗೆ) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ವ್ಯವಸ್ಥೆಯೂ ಇದೆ. ಎಲ್ಲ ಆತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಕಂಪ್ಯೂಟರೈಸ್ಡ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಕರ್ನಾಟಕ ವಿದ್ಯುತ್ ಮಂಡಳಿಯ ನೌಕರರು ಮತ್ತು ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎ.ಕಿ ರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಗೆ ಭೇಟಿ ನೀಡಿದ ನೌಕರರ ನಿಯೋಗವು ವಿದ್ಯುಚ್ಛಕ್ತಿ ಕಾಯ್ದೆ 108ನೇ ಪರಿಚ್ಛೇದದ ಪ್ರಾವಧಾನ ಬಳಸಿ ರಾಜ್ಯ ಸರಕಾರವು ಟಾಟಾ ಪವರ್ ಅರ್ಜಿಯನ್ನು ರದ್ದುಪಡಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದೆ. ರೈತರು, ಬಡವರು, ಮಧ್ಯಮ ವರ್ಗ, ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಗ್ರಾಮೀಣ ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮೆಸ್ಕಾಂ ನೌಕರರ ಪರವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಇದ್ದಕ್ಕೆ ಪೂರಕವಾಗಿ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆ / ಸಿ.ಬಿ.ಎಸ್.ಇ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಹರಿ ಎಮ್. ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಪ್ರೇಮಾ ಕ್ಲಿನಿಕ್ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ ಅವರು ವಿವಿಧ ಯೋಗಾಸನಗಳನ್ನು ಮಾಡಿ ಯೋಗ ಪ್ರಾತ್ಯಕ್ಷತೆಯನ್ನು ನೀಡಿದರು. ಆರೋಗ್ಯ ಪೂರ್ಣ ಜೀವನ ನಡೆಸಲು ಮನುಷ್ಯನ ಶರೀರಕ್ಕೆ ಯೋಗ ಬಹಳ ಮುಖ್ಯ ಎಂದು ತಿಳಿಸಿದರು. ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ವಿವಿಧ ಆಸನಗಳು ಹಾಗೂ ಅದರ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡಿ ಯೋ ದಿನದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ ಪುತ್ರನ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ. ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ. ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು…

Read More