ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ, ಹಾಗೂ ಕಿಂಡಿ ಆಣೆಕಟ್ಟಿನ ಹಿನ್ನೀರು ಮುಂತಾದ ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸೂರು ಜನತಾ ಕಾಲೊನಿಗೆ ಹೋಗುವ ಅಡ್ಡ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಭಾನುವಾರ ಮೃತಪಟ್ಟ ಘಟನೆ ನಡೆದಿದೆ. ಕಂಡ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಬೈಕ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸೈಕಲ್ಗೆ ಡಿಕ್ಕಿ ಹೊಡೆದಿದ್ದು, ಸವಾರ ಮಂಜುನಾಥ್ (54) ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ‘ಸಿದ್ಧಿ ಸೌರಭ-2024’ ಬಹಳ ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನದ ಅವಧಿಯಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ರೂಪಕ ಮತ್ತು ಪ್ರಹಸನದಂತಹ ಮನೋರಂಜನಾ ಕಾರ್ಯಕ್ರಮಗಳು ನಡೆದವು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ವಿನಯಾ ಸ್ವಾಗತಿಸಿದರು. 5ನೇ ತರಗತಿಯ ವಿದ್ಯಾರ್ಥಿಗಳಾದ ಸುಶಾನ್, ನಿಯತಿ, ದಿಲ್ಶಾನ್, ಅಹನಾ, ವಿನೀಶ್, ಪ್ರಾರ್ಥನಾ, ಸೃಷ್ಠಿ, ಅಪೂರ್ವ, ಆರಾಧ್ಯ, ಶ್ರೇಯಾಂಕ್ ಮತ್ತು ಸಂಹಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ಗೀತಾ ಶೆಟ್ಟಿ ವಂದಿಸಿದರು. ಸಂಜೆಯ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಸದಾರಾಮ್ ಸಂಸ್ಥೆ ನಡೆದು ಬಂದ ಹಾದಿ ಮತ್ತು ಇಲ್ಲಿನ ಶೈಕ್ಷಣಿಕ ಚಟುವಟಿಕೆಗಳು, ಪ್ರಸ್ತುತ ವರ್ಷದಲ್ಲಿ ಸಂಸ್ಥೆಗೆ ಸಂದ ಗೌರವ ಪುರಸ್ಕಾರಗಳು ಇತ್ಯಾದಿಗಳ ಕುರಿತಾದ ವಾರ್ಷಿಕ ವರದಿಯನ್ನು ವಾಚಿಸಿದರು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ರೋಹಿಣಿ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಮಾದೇವಿ ಭಟ್, ಶ್ರೀ ಸಿದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರು ಹೆಚ್.ಐ.ವಿ ರೋಗದ ಹರಡುವಿಕೆ, ಅದರಿಂದಾಗುವ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಅಗತ್ಯ ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಿದ್ದಲ್ಲಿ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಂಬಲಪಾಡಿ ಪ್ರಗತಿಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿದ್ಯಾರತ್ನ ಸ್ಕೂಲ್ & ಕಾಲೇಜು ಆಫ್ ನರ್ಸಿಂಗ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.02: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಯಲ್ಲಿಯೂ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 03ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಚಂಡಮಾರುತದ ಪರಿಣಾಮ: ರಾಜ್ಯದ ಕರಾವಳಿಯಲ್ಲಿ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಸಾಧ್ಯತೆ – https://kundapraa.com/?p=79713 . ಡಿ.03ರಂದು ಭಾರಿ ಮಳೆ ಡಿ.04ರಂದು ಸಾಧಾರಣಾ ಮಳೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.02: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಯಲ್ಲಿಯೂ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.03ರಂದು ಭಾರಿ ಮಳೆ ಡಿ.04ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಸ್ಯರು ಕೇಂದ್ರಸ್ಥಾನದಲ್ಲಿದ್ದು ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು ಹಾಗೂ ಮೀನುಗಾರರ ನದಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ವಿದ್ಯುತ್ ಕಂಬ, ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗಲೂ ಸೂಚಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ-ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಯೋಜನೆಗೆ ಡಿ.1ರಂದು ಚಾಲನೆ ದೊರೆಯಿತು. ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿ, ಹಿಂದುಗಳು ಒಂದಾಗುವ ಜತೆಗೆ ಅಶಕ್ತ ಎಲ್ಲ ರೀತಿಯಲ್ಲೂ ನೆರವಾಗಲು ಇಡೀ ಸಮಾಜವೇ ಮುಂದೆ ಬರಬೇಕು. ರಾಷ್ಟ್ರೀಯ ಸ್ವಯಂಸೇವಕ ಸಂಘ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಕಾರ್ಯಕರ್ತರು, ದಾನಿಗಳು, ಹಿತೈಷಿಗಳು ಅರ್ಥಪೂರ್ಣ ಸಂಕಲ್ಪ ಮಾಡಿದ್ದಾರೆ. ರಾಮ ರಾಜ್ಯದ ಪರಿಕಲ್ಪನೆಯ ಭಾಗವಾಗಿ ಪ್ರತಿಯೊಬ್ಬರು ಸ್ವಂತ ಮನೆ ಹೊಂದಬೇಕು. ಈ ನಿಟ್ಟಿನಲ್ಲಿ ದೇವಿ ನೆಲೆ-ನಮ್ಮ ಮನೆ ಸಂಕಲ್ಪ ಶೀಘ್ರ ಸಾಕಾರಿಯಾಗಲಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಇದರ 37 ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಡಿ.1ರಂದು ಯಶಸ್ವಿಯಾಗಿ ನಡೆಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯದ್ ಮೊಹಮ್ಮದ್ ಬ್ಯಾರಿ ಇವರು ಅಭಿಯಾನವನ್ನು ಉದ್ದೇಶಿಸಿ “ಭಗವಂತನಿಗೆ ಪ್ರೀತಿಪೂರ್ವಕವಾದ ಈ ಕಾಯಕವು ನಿರಂತರವಾಗಿ ಸಾಗಬೇಕಾದದ್ದು ಮಾತ್ರವಲ್ಲದೆ, ಮಾಡುವ ಕೆಲಸದಲ್ಲೂ ಪರಿವರ್ತನೆಯಾಗಬೇಕು. ಪ್ರಸಾದ ನೀಡುವ ಅರ್ಚಕನಿಗಿಂತ, ಪ್ರಸಾದ ಸ್ವೀಕರಿಸುವ ಭಕ್ತನಿಗೆ ಹೇಗೆ ಪ್ರಸಾಧದ ಕುರಿತು ಹೆಚ್ಚು ಭಕ್ತಿಗೌರವವಿರುತ್ತದೋ ಹಾಗೆಯೇ ನಮ್ಮಲ್ಲೂ ಈ ಪರಿಸರದ ಕುರಿತು ಮಾಡುವ ಸೇವೆಯಲ್ಲಿ ಭಕ್ತಿಗೌರವ ಇರಬೇಕು. ಪ್ರತಿ ತಿಂಗಳು ಈ ಕಾಯಕವನ್ನು ಹಮ್ಮಿಕೊಳ್ಳುವುದರೊಂದಿಗೆ ಪರಿಸರ ಸ್ವಚ್ಛತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಧ್ಯ ಹಾಗಾಗಿ ನಾವು ಮಾಡುವ ಈ ಅಭಿಯಾನ ಮುಂದಿನ ದಿನಗಳಲ್ಲಿ ವಿಭಿನ್ನವಾಗಿ ನಡೆಯಬೇಕು” ಎಂದು ನುಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಯುತ್ತಿದ್ದ ಈ ಅಭಿಯಾನವನ್ನು ಈ ತಿಂಗಳಿಂದ ಮೊದಲ ಭಾನುವಾರದಂದು ಮಾಡಲು ಸಂಚಾಲಕರು ತಿಳಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ ಅನಿವಾರ್ಯತೆಯಿದೆ. ನಮ್ಮ ಸಂಸ್ಕೃತಿ, ದೇಶದ ಪರಂಪರೆಯನ್ನು ಕಲಿಸುವ ಶಿಕ್ಷಣ ಅತ್ಯವಶ್ಯವಾಗಿದೆ. ನಾವು ಜಗತ್ತಿನ ಅಲೌಕಿಕ ಸುಖದ ಭ್ರಮೆಗೆ ಒಳಗಾಗುತ್ತಿದ್ದೇವೆ. ಇದರಿಂದ ಹೊರಬಂದು ನಮ್ಮೊಳಗಿನ ಆನಂದ ಕಾಣುವಂತಾಗಬೇಕು ಎಂದು ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಉಪ್ರಳ್ಳಿ ನಾರಾಯಣ ಶ್ಯಾನುಭಾಗ್ ಹೇಳಿದರು. ನಾಯ್ಕನಕಟ್ಟೆ ಶ್ರೀ ವೆಂಕಟರಮಣ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ನ ಸುವರ್ಣ ಸಂಭ್ರಮಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಗ್ನಿ ದಿವ್ಯದಲ್ಲಿ ಸ್ಪುಟಗೊಂಡು ಬಂಗಾರ ಮೆರುಗು ಪಡೆಯುವಂತೆ ಸಂಘರ್ಷದ ಕುಲುಮೆಯಲ್ಲಿ ಹದಗೊಂಡು ಲೋಕಕ್ಕೆ ಮಾದರಿಯಾಗ ಹೊರಟ ಸಮಾಜವಿದ್ದರೆ ಅದು ಗೌಡಸಾರಸ್ವತ ಸಮಾಜ. ಕಳೆದ 800ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ಈ ದೇವಸ್ಥಾನದ ಇತಿಹಾಸದ, ಹಿರಿಯರು ಆಚರಿಸಿಕೊಂಡು ಬಂದಂತಹ ಆಚರಣೆ, ಸಂಪ್ರದಾಯಗಳ ಬಗ್ಗೆ ದಾಖಲೀಕರಣ ಮಾಡುವ ಅವಶ್ಯಕತೆಯಿದ್ದು, ಈ ಕುರಿತು ಮುಂದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.02: ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪದ ಗುಮ್ಮೋಲ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ ಆಚಾರ್ (14) ಹಾಗೂ ಜಯಂತ್ (20) ಎಂದು ಗುರುತಿಸಲಾಗಿದೆ. ಬೆಳ್ವೆ ಸಮೀಪದ ಗೂಮ್ಮೋಲ ಚರ್ಚ್ ಹಿಂಭಾಗದಿಂದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಸೇರಿದಂತೆ ನಾಲ್ಕು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ. ಶ್ರೀಶ ಹೆಬ್ರಿಯ ಎಸ್ಆರ್ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದನ್ನು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ತಕ್ಷಣ ಶಂಕರನಾರಾಯಣ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಯಿತು. ನೀರಿನಲ್ಲಿ ಮುಳುಗಿದ್ದ ಮಕ್ಕಳನ್ನು ಹುಡುಕಲು ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದು,…
