ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಗ್ರ ಶಿಕ್ಷಣ ಯೋಜನೆ ಕರ್ನಾಟಕ, ಸಾಮಾಜಿಕ ಪರಿಶೋಧನ ತಂಡವು ಶಾಲೆಗೆ ಭೇಟಿ ನೀಡಿ ಸಮಗ್ರ ಮೌಲ್ಯಮಾಪನ ನಡೆಸಿ ಪಾಲಕರೊಂದಿಗೆ ಹಾಗೂ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು . ತಾಲೂಕು ಪಂಚಾಯತ್ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾಗಿರುವ ಸುರೇಶ್ ಅಧ್ಯಕ್ಷತೆ ವಹಿಸಿದರು, ಯೋಜನೆಯ ತಾಲೂಕು ವ್ಯವಸ್ಥಾಪಕರಾಗಿರುವ ಸುಕುಮಾರ್. ಬಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು . ಮುಖ್ಯ ಶಿಕ್ಷಕರಾದ ಮುಕ್ತ ಪಿ. ವರದಿ ಮಂಡಿಸಿದರು. ಶಾಲಾಭಿವೃದ್ಧಿ ಕುರಿತಾಗಿ ಎಸ್ಡಿಎಮ್ಸಿ, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳಿಂದ ಅಹವಾಲು, ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳ ತಂಡ, ಎಸ್. ಡಿ. ಎಂ. ಸಿ. ಅಧ್ಯಕ್ಷರಾಗಿರುವ ಸುಬ್ರಹ್ಮಣ್ಯ ಪೂಜಾರಿ, ಎಸ್. ಡಿ. ಎಂ. ಸಿ. ಉಪಾಧ್ಯಕ್ಷೆ ನಾಗವೇಣಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಮಂಜುನಾಥ ಪೂಜಾರಿ, ಕೋಶಾಧಿಕಾರಿ ಮಹಾದೇವ ಬಿಲ್ಲವ, ಕಾರ್ಯದರ್ಶಿ ಸುಧಾಕರ್ ಮೊಗವೀರ, ಮತ್ತು ಎಸ್. ಡಿ. ಎಂ. ಸಿ. ಸದಸ್ಯರು, ಪಾಲಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು, ಸೋತವರು ಕುಗ್ಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆಲ್ಲಲು ಪ್ರಯತ್ನ ನಡೆಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನುಉದ್ಘಾಟಿಸಿ ಮಾತನಾಡಿದರು. ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಾಲೆಯ ಶಿಕ್ಷಕ – ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ ಮತ್ತು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಂತರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆ ಧನ್ವಿ ಪೂಜಾರಿ ಮರವಂತೆ ಗ್ರ್ಯಾಂಡ್ ಮಾಸ್ಟರ್ ಏಶಿಯಾ ಬುಕ್ ಆಫ್ ರೆಕಾರ್ಡ್ಸ್ ಪಡೆದಿರುತ್ತಾರೆ. ಧನ್ವಿ ಕೇವಲ 3 ವರ್ಷಗಳ ಅವಧಿಯಲ್ಲಿ ಎಲ್ಲಾ 23 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಗ್ರ್ಯಾಂಡ್ ಮಾಸ್ಟರ್ ಎಂದು ಬಿರುದು ಪಡೆದಿದ್ದಾರೆ. ಅವರು ಅದ್ಭುತವಾದ ಯೋಗ ಪ್ರದರ್ಶನದಿಂದಾಗಿ 2024ರ ಮಾರ್ಚ್ 27 ರಂದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನ್ನು ಸ್ವೀಕರಿಸಿದ್ದಾಳೆ. ಕುಂದಾಪುರ ಮೊಗವೀರ ಭವನದಲ್ಲಿ ನಡೆದ ಜನತಾ ನವನೀತ 2K24 ವೈಭವದ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀ ಅವರು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನ್ನು ನೀಡಿ ಗೌರವಿಸಿದ್ದಾರೆ. ಅವರು ಜ್ಯೋತಿ ಹಾಗೂ ಚಂದ್ರಶೇಖರ್ ಮರವಂತೆ ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಣೆ ಮಾಡಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾಮ ಪಂಚಾಯತ್ನಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯವಿರುವ ಜಮೀನನ್ನು ಗುರುತಿಸುವ ಕಾರ್ಯವನ್ನು ತಹಶೀಲ್ದಾರರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯದೊಂದಿಗೆ ಮಾಡಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾಯ್ದಿರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು, ಅರಣ್ಯ ಇಲಾಖೆ ಕುಂದಾಪುರ ವಲಯ, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಮೆಕ್ಕೆ ದುಡ್ಡಿನಗುಳಿ ಅವರ ಸಹಯೋಗದಲ್ಲಿ ಮೆಕ್ಕೆ ಗ್ರಾಮದ ಬಸ್ರಿಬೇರು ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ತಾಲೂಕು ಯೋಜನಾಧಿಕಾರಿಗಳದ ಕೆ. ವಿನಾಯಕ ಪೈ. ಗೀಡ ನಾಟಿ ಮಾಡಿ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ಹಾಗೂ ಮಣ್ಣಿನ ಸವಕಳಿ ತಪ್ಪಿಸಲು, ಉತ್ತಮ ಗಾಳಿ, ಮಳೆ, ಬೆಳೆಗಾಗಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ರಾಜ್ಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮದಡಿಯಲ್ಲಿ ದಶ ಲಕ್ಷ ಗಿಡಗಳನ್ನು ನಾಟಿ ಮಾಡುವ ಉದ್ದೇಶ ಹೊಂದಿದ್ದು, ಬೈಂದೂರು ತಾಲೂಕಿನಲ್ಲಿ ಐದು ಸಾವಿರ ಗಿಡಗಳನ್ನು ಈ ಬಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ 2024 – 26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುತ್ತಿಗೆದಾರರು, ಯುವ ಸಂಘಟಕ, ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು ವಿವಿಧ ಸಂಘ – ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಸ್ರೂರು ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಷ್ ಚಂದ್ರ ಶೆಟ್ಟಿ ಹಾಗೂ ರಸಿಕ ಎಸ್. ಶೆಟ್ಟಿ ದಂಪತಿಯ ಸುಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಧಾ ಫರ್ವಿನ್ ಪ್ರಥಮ ಸ್ಥಾನ (ಪ್ರೌಢಶಾಲೆ ವಿಭಾಗ), ಕಿಶನ್ ಶೆಟ್ಟಿ ಮತ್ತು ತನ್ಮಯ್ ತೃತೀಯ ಸ್ಥಾನ ಪಡೆದಿರುತ್ತಾರೆ ರಿಧಾ ಫರ್ವಿನ್ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಕರಾಟೆ ಶಿಕ್ಷಕಿ ಮೇಘನಾ ತರಬೇತಿ ನೀಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು, ಮುಖ್ಯ ಶಿಕ್ಷಕರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ,.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಯ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಆಗಸ್ಟ್ 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್ ಅನ್ನು ಕಡ್ಡಾಯವಾಗಿ ಖರೀದಿಸಬೇಕು. ಇವುಗಳೊಂದಿಗೆ ಹಾರ್ವೆಸ್ಟರ್ ಹಬ್ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಪ್ರತಿ ಹಾರ್ವೆಸ್ಟರ್ ಹಬ್ಗೆ ಉಪಕರಣವಾರು ಗರಿಷ್ಠ ಮಿತಿಗೊಳಪಟ್ಟು ಶೇ. 50 ರ ಸಹಾಯಧನ ಅಥವಾ 40 ಲಕ್ಷ ರೂ. ಮೀರದಂತೆ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಒದಗಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆಗಸ್ಟ್ 18 ರ ಭಾನುವಾರ ಯುವ ಮೆರಿಡಿನ್ನಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರೂ, ಸಾಹಿತ್ತಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಪ್ರಕರ ವಾಗ್ಮಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
