ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮರವಂತೆಯ ಪ್ರದೀಪ್ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್, ಬೆಂಗಳೂರಿನ ಎಮ್ಎಸ್ ಶ್ರೀನಾಥ್ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್ಶಿಫ್ ಪೂರೈಸಿದ್ದರು. ಅವರು ಮರವಂತೆಯ ಕೃಷ್ಣ ಪೂಜಾರಿ ಹಾಗೂ ಗಿರಿಜಾ ದಂಪತಿಯ ಅವರ ಪುತ್ರ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2024-25ನೇಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು. ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು. ನೂತನ ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-1ರ ಸಹಾಯಕ ಗವರ್ನರ್ ಡಾ. ರಾಜೇಂದ್ರ ಶೆಟ್ಟಿ, ಕ್ಲಬ್ನ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯಿತಿಗೆ ಉಡುಪಿ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬುಧವಾರ ಭೇಟಿ ನೀಡಿದರು. ಕುಡಿಯುವ ನೀರಿನ ತಪಾಸಣೆ ಮಾಡಿದ ಅವರು ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿಯ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನಚಂದ್ರ ಮತ್ತು ಸದಸ್ಯರಲ್ಲಿ ಚರ್ಚಿಸಿದರು ಹಾಗೂ ಗ್ರಾಮ ಪಂಚಾಯತ್ ಬಳಿ ಇರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕುಡಿಯುವ ನೀರು ಮತ್ತು ಪೌಷ್ಟಿಕ ಆಹಾರದ ಬಗ್ಗೆ ವಿಚಾರಿಸಿದರು. ವಿಶೇಷವಾಗಿ ಪರಿಶಿಷ್ಟ ಪಂಗಡದ ಮಂಜಮ್ಮ ಅವರ ಮನೆಗೆ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ಶಿಕ್ಷಣ ಇಲಾಖೆ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಎಲ್ಲರನ್ನು ಒಳಗೊಂಡ ಸಮಿತಿ ರಚನೆ ಮಾಡಿ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳ ವೀಕ್ಷಣೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸ್ಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ ಎಂದು ಡಾ. ರೂಪಶ್ರೀ ಮರವಂತೆ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ರಕ್ಷಣೆ ಹಾಗೂ ಆರೋಗ್ಯದ ಬಗ್ಗೆ ಅಲ್ಲಲ್ಲಿ ಜಾಗೃತಿ ಸಮಾವೇಶ, ಕಷ್ಟದಲ್ಲಿರುವವರಿಗೆ, ನೊಂದವರಿಗೆ ತಕ್ಷಣ ಸ್ಪಂದಿಸುವ ಹಾಗೂ ಮಕ್ಕಳಿಗೆ ಪ್ರಕೃತಿ ರಕ್ಷಣೆ, ನೀರಿನ ಮಿತ ಬಳಕೆ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುವ ಶೈಕ್ಷಣಿಕ ಕಾರ್ಯಕ್ರಮ ನಡೆಸುವ ಮೂಲಕ ಮಾನವೀಯತೆಯ ಸೇವೆ ನಿಮ್ಮಿಂದಾಗಲಿ ಎಂದು ಶುಭಹಾರೈಸಿದರು. ಈ ಸಾಲಿನ ನೂತನ ಅಧ್ಯಕ್ಷೆ ಗುಲಾಬಿ ಮರವಂತೆ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಹೋಬಳಿದಾರ್ ಮತ್ತು ಆಯುಕ್ತಾ ಯಡ್ತರೆ ನೂತನ ಸದಸ್ಯರಾಗಿ ಕ್ಲಬ್ಬಿಗೆ ಸೇರ್ಪಡೆಗೊಂಡರು. ಅರ್ಹರಿಗೆ ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಆರ್ಥಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ.ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎನ್ಡಿಎ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿದ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೈಂದೂರು ಕ್ಷೇತ್ರ ಸಮಿತಿ ವತಿಯಿಂದ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಸ್ಡಿಪಿಐ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ತೌಫೀಕ್ ಬ್ಯಾರಿ ಅವರು ಮಾತನಾಡಿ, ಬಿಜೆಪಿ ಸರಕಾರ ಬಂದ ನಂತರ ಗುಂಪು ಹತ್ಯೆಯಂತಹ ಘೋರವಾದ ಕೃತ್ಯಕ್ಕೆ ಚಾಲನೆ ನೀಡಿದಂತಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಇಂತಹ ಕೃತ್ಯ ಮರುಕಳಿಸಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಗಂಗೊಳ್ಳಿ, ಜೊತೆ ಕಾರ್ಯದರ್ಶಿ ಸಮೀರ್ ಗಂಗೊಳ್ಳಿ, ಗಂಗೊಳ್ಳಿ ಗ್ರಾಮ ಸಮಿತಿ ಅಧ್ಯಕ್ಷರಾದ ರಜಬ್ ಗಂಗೊಳ್ಳಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ದುರ್ಗಾಂಬಾ ಬಸ್ ಡಿಪೋ ಎದುರು ಬಸ್ ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಪುರಸಭೆಯ ಪೌರ ಕಾರ್ಮಿಕ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಾರ್ಕೂರಿನ ಬಂಡಿಮಠ ನಿವಾಸಿ ಶಂಕರ ಹಾಗೂ ಬೀಚು ಎಂಬುವರ ಪುತ್ರ ಸುಂದರ್ (39) ಮೃತ ದುರ್ದೈವಿ. ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸುಂದರ್, ಮೂರು ತಿಂಗಳ ಹಿಂದಷ್ಟೇ ಖಾಯಂ ಪೌರಕಾರ್ಮಿಕರಾಗಿ ನೇಮಕಗೊಂಡಿದ್ದರು. ಗುರುವಾರ ಸಂಜೆ ತನ್ನ ಮನೆಯಾದ ಬಂಡಿಮಠದಿಂದ ಬೈಕಿನಲ್ಲಿ ಕುಂದಾಪುರಕ್ಕೆ ವಾಪಸ್ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರಿನ ದುರ್ಗಾಂಬ ಬಸ್ ಡಿಪೋ ಎದುರುಗಡೆ ಹೆದ್ದಾರಿಯಿಂದ ಸರ್ವಿಸ್ ರಸ್ತೆ ಕಡೆಗೆ ಬೈಕನ್ನು ತಿರುಗಿಸುತ್ತಿದ್ದ ವೇಳೆ ಕುಂದಾಪುರದಿಂದ ಡಿಪೋಗೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹೆದ್ದಾರಿಯಿಂದ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸುಂದರ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಕುಂದಾಪುರ ಸಂಚಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಾರಿಜಾತ ಸರ್ಕಲ್ ಬಳಿ ಸ್ಥಳೀಯ ನಿವಾಸಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರದ ಸುಬ್ರಹ್ಮಣ್ಯ (47) ಮೃತ ವ್ಯಕ್ತಿ. ಕುಸಿದುಬಿದ್ದ ಅವರನ್ನು ಕೂಡಲೇ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಜು. 9ರಂದು ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುದಾಗಿ ತಿಳಿಸಿದ್ದಾರೆ. ಮೃತರ ಪತ್ನಿ ದೀಪಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನ ಸಾಮಾನ್ಯರು ತಮ್ಮ ಸಮಸೈಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಅಂದು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನ ನಾಮಾನ್ಯರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಲವು ವರ್ಷಗಳಿಂದ ಕಚೇರಿ ಅಲೆದಾಡಿದರು ಬಗೆಹರಿದಿಲ್ಲ, ಇಂತಹ ಸಮಸ್ಯೆಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಪರಿಹರಿಸಿಕೊಳ್ಳಲು ಉತ್ತಮ ಅವಕಾಶವಿದೆ, ಕಾರಣ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ವಿವಿಧ ಇಲಾಖೆಯ ಸಮನ್ವಯದೊಂದಿಗೆ ಬಗೆಹರಿಸುವಂತಹ ಸಮಸ್ಯೆಗಳನ್ನು ಪರಿಹಾರ ಪಡೆದುಕೊಳ್ಳಲು ಒಂದು ಅವಕಾಶವಾಗಿದೆ. ಕಳೆದ ಬೈಂದೂರು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 160 ಕ್ಕೂ ಹೆಚ್ಚು ಅಹವಾಲುಗಳು ಜನರು ಸಲ್ಲಿಸಿದ್ದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಇ.ಎನ್.ಟಿ ತಜ್ಞ ಡಾ. ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಎಂಬಿಬಿಎಸ್, ಡಿಎಲ್ಓ ಪದವೀಧರರಾದ ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಡಾ ಸತೀಶ್ ಅತ್ಯುತ್ತಮ ಗಾಯಕರಾಗಿದ್ದು, ಅನೇಕ ಸಂಗೀತ ವೀಡಿಯೊಗಳನ್ನು ಹೊರತಂದಿದ್ದರು. ಡಾ. ಎಸ್. ಜಾನಕಿ ಅವರ ಅಭಿಮಾನಿಯಾಗಿದ್ದ ಅವರು ಡಾ. ಎಸ್. ಜಾನಕಿ ಜಾನಕಿ ರಾಷ್ಟ್ರೀಯ ಪುರಸ್ಕಾರವನ್ನು ಪ್ರತಿವರ್ಷ ನಾಡಿನ ಖ್ಯಾತ ಗಾಯಕರು, ಸಂಗೀತಗಾರರಿಗೆ ನೀಡುತ್ತಿದ್ದರು. ಕೋಟ ಮನಸ್ಮಿತ ಫೌಂಡೇಶನ್ ಪಾಲುದಾರರಾಗಿದ್ದ ಇವರು ಯಶಸ್ವಿ ಸಂಘಟಕರಾಗಿದ್ದರು. ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಸಿನಿಮಾಗಳಿಂದ ಪ್ರಭಾವಿತರಾಗಿದ್ದ ಡಾ. ಸತೀಶ್ ಅವರು, ವೈದ್ಯ ವೃತ್ತಿಯನ್ನೇ ಆಯ್ದುಕೊಂಡು ಸರ್ಜನ್ ಆಗುವ ಕನಸು ಕಂಡಿದ್ದರು. ಅದರೊಂತೆಯೇ ಎಂಬಿಬಿಎಸ್, ಡಿಎಲ್ಓ ಪದವಿ ಪಡೆದು ಸ್ವಂತ ಆಸ್ಪತ್ರೆ ಆರಂಭಿಸಿದ್ದರು. ಫಿಟ್ನೆಸ್ ಬಗ್ಗೆ ಅತೀವ ಕಾಳಜಿ ಹೊಂದಿದ್ದು ಸ್ವತಃ ವೈದ್ಯರಾಗಿದ್ದ…
