ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು,ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಮಾತನಾಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಸಂಪನ್ಮೂಲ ವ್ಯಕ್ತಿಗಳಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇರಬೇಕು, ಜ್ಞಾನದ ಹಸಿವು ಇದ್ದಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ ಹಾಗೂ ಶಿಕ್ಷಣದ ಜೊತೆಗೆ ಆತ್ಮಗೌರವವನ್ನು ಬೆಳೆಸಿಕೊಳ್ಳವುದು ಮುಖ್ಯ ಎನ್ನುತ್ತಾ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಸಮಗ್ರವಾಗಿ ಮಾಹಿತಿ ನೀಡಿದರು. ಸಮಾರಂಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರುಉಪಸ್ಥಿತರಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ ಆಹಾರೋತ್ಸವ ಮಹಾಮೇಳ ಸಮಿತಿ, ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕೃಷಿ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಮೇಳ ಹಮ್ಮಿಕೊಳ್ಳಲಾಗಿದ್ದು, ಜೂನ್ 14ರಿಂದ 16ರ ವರೆಗೆ ನಡೆಯಿತು. ನಮ್ಮದು ಕೃಷಿ ಮತ್ತು ಋಷಿ ಸಂಸ್ಕೃತಿಯ ದೇಶ. ಇವೆರಡೂ ತ್ಯಾಗ ಮತ್ತು ಆರಾಧನಾ ಸಂಸ್ಕೃತಿ. ತುಳುನಾಡಿನ ಸಂಸ್ಕೃತಿ ಕೃಷಿ ಮೂಲದ್ದು. ಕೃಷಿಯಿಂದ ಇಲ್ಲದೇ ಸಂಸ್ಕೃತಿ ಇಲ್ಲ ಎಂದರು. ಮಿಜಾರುಗುತ್ತು ಆನಂದ ಆಳ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಐ ಟಿ ಐ ಬಿದ್ಕಲ್ಕಟ್ಟೆ ಇಲ್ಲಿಯ ಪ್ಲೇಸ್ಮೆಂಟ್ ವಿಭಾಗದ ವತಿಯಿಂದ ಉದ್ಯೋಗ ಮತ್ತು ಶಿಕ್ಷಣ ಮೇಳ ಕಾರ್ಯಕ್ರಮ ಜರುಗಿತು. ಎಲೆಕ್ರ್ಟೋನಿಕ್, ಈಎಮ್, ಎಮ್ಆರ್ಎಸಿ, ಎಮ್ಎಮ್ವಿ, ಫೈಟರ್ ವೃತ್ತಿಯ ಹಿರಿಯ ತರಬೇತಿದಾರರು ಹಾಗೂ ಪೂರ್ವ ತರಬೇತಿದಾರರು ಭಾಗವಹಿದ್ದರು. ಪ್ರಾಚಾರ್ಯ ಗಂಗಾಧರಪ್ಪ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಮನೋಹರ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು . ಅಜಿತ್ ಆಚಾರ್ ನಿರೂಪಿಸಿದರು. ಸಿಬ್ಬಂದಿ ನೇತೃತ್ವದಲ್ಲಿ ಸಂದರ್ಶನ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ- ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು ವತಿಯಿಂದ ಇತ್ತಿಚಿಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿ ಉದ್ಯೋಗ ಪಡೆಯುವಂತೆ ಮಾಡಿದಾಗ ವಿದ್ಯಾವಂತ ಯುವಕರಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನಿತಾ ವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಆಕಾಂಕ್ಷಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಕರೆ ನೀಡಿದರು. ಜ್ಞಾನಭಾರತಿ ಅಕಾಡೆಮಿ ಕುಂದಾಪುರ ಇದರ ನಿರ್ದೇಶಕ ಸತ್ಯನಾರಾಯಣ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಬೈಂದೂರು ತರಬೇತಿ ಕೇಂದ್ರದ ಸಂಚಾಲಕರಾದ ಸಿ.ಭಾಸ್ಕರ್ ಬಿಲ್ಲವ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶಂಕರ್ ನಾಯಕ್.ಬಿ ಮತ್ತು ಉದ್ಯೋಗ ಮಾಹಿತಿ ಕೋಶಾಧಿಕಾರಿ ಡಾ. ಸುಬ್ರಹ್ಮಣ್ಯ .ಎ ಉಪಸ್ಥಿತರಿದ್ದರು. ಈ ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದು ಕಂಡುಬAದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬAದಲ್ಲಿ ಈ ಬಗ್ಗೆ ಸಂಬಂಧಿಸಿದ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಂದ ಅವರು, ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ,…
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ರಿ. ನಾವುಂದ ಇದರ ನವೀಕೃತ ಪ್ರಧಾನ ಕಛೇರಿ ಹಾಗೂ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ, ದಿನಾಂಕ : 15.06.2024ನೇ ಶನಿವಾರ ಸಮಯ : ಬೆಳಗ್ಗೆ ಗಂಟೆ 10.30ಕ್ಕೆ ಸ್ಥಳ : ಸಂಘದ ಪ್ರಧಾನ ಕಛೇರಿ ಮುಂಭಾಗದಿಂದ ಕುಂದಾಪ್ರ ಡಾಟ್ ಕಾಂ ನೇರಪ್ರಸಾರ ಯಕ್ಷರಾಘವ ಪ್ರತಿಷ್ಠಾನ & ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ. ದಿ. ಕಾಳಿಂಗ ನಾವಡರ ವಿರಚಿತ ಪ್ರಸಂಗ – ನಾಗಶ್ರೀ ಹಿಮ್ಮೇಳ: ಜನ್ಸಾಲೆ ರಾಘವೇಂದ್ರ ಆಚಾರ್ಯ, ಸುನೀಲ್ ಭಂಡಾರಿ ಕಡತೋಕ, ಸುಜನ್ ಕುಮಾರ್ ಹಾಲಾಡಿ.ಮುಮ್ಮೇಳ: ಶಿಥಿಲ – ಕಡಬಾಳು ಉದಯ ಹೆಗಡೆ, ಶುಭ್ರಾಂಗ – ವಿಜಯ ಬೇರೊಳ್ಳಿ, ಶ್ವೇತದತ್ತ – ದರ್ಶನ್ ಭಟ್ಟ, ಶೈಥಿಲ್ಯ – ಪವನ ಸಾಣ್ಮನೆ, ಕೈರವ – ರವೀಂದ್ರ ದೇವಾಡಿಗ, ದಾರಿಕೆ – ಸುಬ್ರಹ್ಮಣ್ಯ ಹೆಗ್ಡೆ ಯಲಗುಪ್ಪ, ನಾಗಶ್ರೀ – ಸುಧೀರ್ ಉಪ್ಪೂರು, ಸಖಿ – ಸಂತೋಷ ಹೆಂಗವಳ್ಳಿ, ಸಖಿ+ರಾಜ ಭಟ – ಶ್ರೀಧರ ಕುಡ್ಲ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಉಡುಪಿಯ ಉಪ ಡ್ರಗ್ಸ್ ನಿಯಂತ್ರಣಾಧಿಕಾರಿ ಶಂಕರ್ ನಾಯ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಜಯಕರ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ| ಸತ್ಯನಾರಾಯಣ ಮತ್ತು ರೆಡ್ ಕ್ರಾಸ್ ಸಂಸ್ಥೆ ಕಾಲೇಜಿನ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿಕ ಬಾರಿ ರಕ್ತದಾನ ಮಾಡಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂವಹನ ಕಲೆಯೆಂಬುದು ಔಪಚಾರಿಕವಾಗಿ ಮಾತನಾಡುವಾಗ ಮಾತ್ರವಲ್ಲ, ಅನೌಪಚಾರಿಕವಾಗಿ ದಿನನಿತ್ಯ ವ್ಯವಹರಿಸುವಾಗ ಸಭ್ಯತೆಯಿಂದ ಸಂಭೋದಿಸಿ ಮೃದು ಧಾಟಿಯಲ್ಲಿ ಮಾತನಾಡುವಾಗಲೂ ಮನಗಾಣಬೇಕಾದ ವಿಚಾರ” ಎಂದು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಸ್ ನ ಉದಯೋನ್ಮುಖ ಕೃಷಿ ಉದ್ಯಮಿ ದಿವ್ಯಾ ನಾಯಕ್ ಹೇಳಿದರು. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ಸಂವಹನ ಕಲೆ’ ಉಪನ್ಯಾಸದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆಯಾದ ಜಯಶೀಲಾ ಪೈ ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿನ ವಿಶಿಷ್ಟ ಪ್ರಯೋಗಗಳಿಗಾಗಿ ದಿವ್ಯಾ ನಾಯಕ್ ಇವರನ್ನು ಗೌರವಿಸಲಾಯಿತು. ಕಾಲೇಜಿನ ಕನ್ನಡ ವಿಭಾಗದ ದೀಪ್ತಿ ಕೆ. ಇವರು ಧನ್ಯವಾದ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜೂನ್ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ದೂ.ಸಂ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾತನದ ‘ಆಳ್ವಾಸ್ ಸಂಪ್ರದಾಯ ದಿನ- 2024ʼ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಕಂಚಿನ ಕಂಠದಲ್ಲಿ ‘ವಿದ್ಯಾ ಬುದ್ಧಿ ಕಲಿಸಿದ ಗುರುವೇ ಕೊಡು ನಮಗೆ ಮತಿಯ…’ ಸಾಲುಗಳನ್ನು ಹಾಡುತ್ತಲೇ ತಮ್ಮ ಮಾತಿಗೆ ಚಾಲನೆ ನೀಡಿದ ಅವರು, ‘ಆಳ್ವಾಸ್ನಲ್ಲೇ ಒಂದು ನಾಡು, ಒಂದು ದೇಶ ಇದೆ. ದೇಶದ ಬೇರೆಡೆ ಇಲ್ಲದ ಗುರುಕುಲ ಆಳ್ವಾಸ್ ಎಂದು ಬಣ್ಣಿಸಿದರು. ಆಳ್ವಾಸ್ ವಿದ್ಯಾರ್ಥಿ ಶಿಲ್ಪಗಳನ್ನು ಕೆತ್ತುವ ತಾಣವಾಗಿದೆ. ಇಲ್ಲಿ ಆಳ್ವರು ಮನುಷತ್ವ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇದು ಊರು ಚಿಕ್ಕದಾದರು ದೊಡ್ಡ ಮನಸ್ಸಿನ ಪ್ರಪಂಚ. ಸಾಹಿತ್ಯ, ಕಲೆ, ಕ್ರೀಡೆ, ಶಿಕ್ಷಣಗಳಿಗೆ ಪ್ರೋತ್ಸಾಹಿಸುವ ಆಳ್ವರು ಹಿರೋಗಿಂತ ದೊಡ್ಡ ಹೀರೋ ಎಂದರು.…
