Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಗೆ ಲಯನ್ಸ್ ಜಿಲ್ಲೆ 317 ಸಿ ಯ ರಾಜ್ಯಪಾಲರಾದ ಡಾ. ನೇರಿ ಕರ್ನೆಲಿಯೋ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಫಿಲೋಮಿನಾ ಕಮರ್ಷಿಯಲ್ ಹಾಲ್ ವಡೇರಹೋಬಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾವೈಕ್ಯ ಕಾರ್ಯಕ್ರಮದ ರೂವಾರಿ ಸಂಘಟನಾ ಚತುರ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಜಿಲ್ಲಾ ಗವರ್ನರ್ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಮಾತನಾಡಿ ಭಾವೈಕ್ಯ ಬಂಟರ ಮಹಾಸಮಾಗಮ ಕಾರ್ಯಕ್ರಮ ಒಂದು ಮಾದರಿ ಕಾರ್ಯಕ್ರಮವಾಗಿ ಮಾಡಿ ತೋರಿಸುವಲ್ಲಿ ನಿತ್ಯಾನಂದ ಶೆಟ್ಟಿಯವರ ಪರಿಶ್ರಮ ಅಪಾರ. ಅವರು ಕಳೆದ ಒಂದುವರೆ ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಸಮಾಜ ಸೇವೆ ಎಲ್ಲಾ ಸಂಘ-ಸಂಸ್ಥೆಗಳಿಗೂ ಮಾದರಿಯಾದದು. ಅವರ ನಿಸ್ವಾರ್ಥ ಸೇವಾ ಮನೋಭಾವ ಇನ್ನೂ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನ ವಿಸ್ತರಣಾಧಿಕಾರಿ ಅರುಣ್ ಕುಮಾರ್ ಹೆಗ್ಡೆ, ಮಾಜಿ ಜಿಲ್ಲಾ ಗವರ್ನರ್ ಜಯಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೃಜಶೀಲತೆಯನ್ನು ಸೃಷ್ಟಿಸುವ ಕಥೆ ಬರೆಯುವುದು ಭಾವನೆಗಳನ್ನು ಅಭಿವ್ಯಕ್ತಿಸುವ ಉತ್ತಮ ವೇದಿಕೆ. ಕಥೆ ಓದುವುದು ಕಲ್ಪನಾ ಲೋಕದಲ್ಲಿ ವಿಹರಿಸುವ ಅನುಭವ ನೀಡುತ್ತದೆ. ಕಥೆ ರಚನೆಗೆ ವಸ್ತುಗಳ ಕೊರತೆ ಇಲ್ಲ, ಓದುವ ಹವ್ಯಾಸ, ಬರೆಯುವ ಆಸಕ್ತಿ, ಸೃಜನಶೀಲ ಮನಸು ಉತ್ತಮ ಕಥೆಗಾರರನ್ನಾಗಿ ರೂಪಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು, ಲೇಖಕರು ಆಗಿರುವ ಡಾ. ಉಮೇಶ ಪುತ್ರನ್ ಹೇಳಿದರು. ಜನಪ್ರತಿನಿಧಿ ಪ್ರಕಾಶನ ಕುಂದಾಪುರ ಮತ್ತು ವೀರಲೋಕ ಪ್ರಕಾಶನ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ಕಾಲೇಜು ರಸ್ತೆಯ ರೋಟರಿ ಕುಂದಾಪುರ ಮಿಡ್‌ಟೌನ್ ಸಭಾಂಗಣದಲ್ಲಿ ನಡೆಯಲಿರುವ ಎರಡು ದಿನಗಳ ’ದೇಸಿ ಜಗಲಿ ಕಥಾ ಕಮ್ಮಟ’ವನ್ನು ಮಾಸ್ತಿಯವರ ಕಥೆ ಓದುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ನಮ್ಮ ಮೆದುಳಿನ ಎಡಭಾಗ ವಿಶ್ಲೇಷಣೆಗೆ ಒತ್ತು ನೀಡುತ್ತದೆ. ಮೆದುಳಿನ ಬಲಭಾಗ ಸೃಜನಶೀಲತೆ, ಭಾವನೆ, ಕಲ್ಪನೆಗಳ ಹುಟ್ಟು ಹಾಕುತ್ತದೆ. ಭಾವನೆಗಳಿಗೆ ಅರ್ಥ ಕಲ್ಪಿಸಲು ಸಹಕರಿಸುತ್ತದೆ. ಹೊಸ ಹೊಸ ಚಿಂತನೆ, ಆಲೋಚನೆಗಳು ಕಥೆಗಳ ಹುಟ್ಟಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರಳು ಹಾಕಲು ಬಂದ ಟಿಪ್ಪರ್ ಮನೆಯ ಅಂಗಳದಲ್ಲಿ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಅಲ್ಲಿಯೇ ನಿಂತಿದ್ದ ರಾಘವೇಂದ್ರ ಆಚಾರ್ಯ(42) ಅವರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ತಂದೆಯ ತಿಥಿಯ ದಿನವೇ ದಿ. ರಾಮಕೃಷ್ಣ ಆಚಾರ್ಯ ಏಕೈಕ ಪುತ್ರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಾವರದಲ್ಲಿ ನಡೆದಿದೆ. ಕೋಟದಲ್ಲಿ ಗ್ಲಾಸ್ ಅಂಡ್ ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮರದ ಕೆಲಸ, ಕಬ್ಬಿಣ ಕೆಲಸ ಹಾಗೂ ಇಂಜಿನ್ ರಿಪೇರಿ ಮೋಟಾರ್ ರಿಪೇರಿ ಮಾಡುತ್ತಿದ್ದರು. ತನ್ನ ತಂದೆಯ ತಿಥಿ ಕಾರ್ಯ ಮುಗಿಸಿದ ಬಳಿಕ ಮನೆಯ ಕೆಲಸಕ್ಕೆಂದು ಒಂದು ಲೋಡ್ ಮರಳು ತರಿಸಿದ್ದರು. ಈ ಸಂದರ್ಭ ಮರಳು ತುಂಬಿದ ಟಿಪ್ಪರ್ ರಿವರ್ಸ್ ಬರುತ್ತಿದ್ದ ವೇಳೆ ಮನೆಯ ಗೇಟಿನ ಪಕ್ಕದಲ್ಲಿ ನಿಂತಿದ್ದ ರಾಘವೇಂದ್ರ ಆಚಾರ್ಯ ಅವರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು ಗೇಟಿನ ಪಿಲ್ಲರ್ ಮತ್ತು ಟಿಪ್ಪರ್ ನ ಹಿಂದುಗಡೆಯ ಕಾಂಪೌಂಡ್ ನಡುವೆ ಸಿಕ್ಕಿ ತಲೆ ಒಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಅವರ ಸಾವಿನಿಂದಾಗಿ ಮನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ, ಸಾಧು ಕೋಕಿಲ, ಆರಾಧನಾ ಸೇರಿದಂತೆ ಅನೇಕ ಸಿನಿ ಗಣ್ಯರು ಉಪಸ್ಥಿತರಿದ್ದರು. ಈ ಬಾರಿ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಡಾಲಿ ಧನಂಜಯ ಮಾತನಾಡಿ ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು. ‘ಕೊರೊನಾ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ, ಇದರ ಜೊತೆಗೆ ಪ್ರಶಸ್ತಿ ಕೂಡ ನಿಂತಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತರ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಸಿನಿಮಾ ಸೆಟ್ಟೇರಿದೆ. ಮಹೂರ್ತದಲ್ಲಿ ಕರಾವಳಿ ಸಿನಿಮಾ ತಂಡ ಭಾಗಿಯಾಗಿತ್ತು. ನಿರ್ಮಾಪಕ ಜಾಕ್ ಮಂಜು ಹಾಗೂ ನಟ ದೇವರಾಜ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.28: ತಾಲೂಕಿನ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿರಿಸಿದೆ. ಶಿರೂರಿನ ದಲಿತ ಮುಖಂಡರಾದ ರಾಘವೇಂದ್ರ ಹಾಗೂ ರಮೇಶ್ ಶಿರೂರು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು ಸ್ಥಳೀಯ ದಲಿತ ಸಂಘಟನೆ ಮುಖಂಡರು ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಸಂದರ್ಭ ರಾಘವೇಂದ್ರ ಶಿರೂರು ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳೇ ಕಳೆದರೂ ಬೈಂದೂರಿನ ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ ಹಂಚದ ಉಡುಪಿ ಜಿಲ್ಲಾಡಳಿತವು ದಲಿತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿಯುವಂತೆ ಮಾಡಿ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೋಲೆ ಮಾಡಿ ದಲಿತ ವಿರೋಧಿ ನಡವಳಿಕೆ ತೋರಿದ್ದಾರೆ. ಇಂತಹ ವ್ಯವಸ್ಥೆಗೆ ಕಡಿವಾಣ ಬೀಳಬೇಕಿದೆ ಎಂದರು. ರಮೇಶ್ ಶಿರೂರು ಅವರು ಮಾತನಾಡಿ, ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚುವಂತೆ…

Read More

ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ. ನೆಂಪು ರಜತ ಮಹೋತ್ಸವದ ಪ್ರಯುಕ್ತ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನೆಂಪು ಉತ್ಸವ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ವೈ ರಾಘವೇಂದ್ರ ಮಾತನಾಡಿ, ದೇವಭಕ್ತಿ ಮತ್ತು ದೇಶಭಕ್ತಿ ಇಂದಿನ ಯುವಕರ ಆದ್ಯತೆ ಆಗಬೇಕು. ಪರರ ನೋವಿಗೆ ಸ್ಪಂದಿಸುವ ಮತ್ತು ಸಾಧನೆಯನ್ನು ಪ್ರೋತ್ಸಾಹಿಸುವ ಗೌರವಿಸುವ ಯುವಕರು ದೇಶದ ಆಸ್ತಿ. ಯುವಕರು ದೇಶಭಕ್ತಿಯನ್ನು ರೂಢಿಸಿ ಕೊಂಡಾಗ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಂಪು ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷ ಅರುಣ್ ಮೊಗವೀರ ನೆಂಪು ವಹಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ರಜತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಸೀತಾರಾಮ್ ಶೆಟ್ಟಿ ನೆಂಪು, ಶ್ರೀನಿವಾಸ್‌ ಮೆಂಡನ್ ಬಳ್ಳಿಹಿತ್ತಲು, ಶಿವರಾಮ್ ಮಂಗಲಸನಕಟ್ಟೆ ಇವರಿಗೆ ಹುಟ್ಟೂರ ಸನ್ಮಾನ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿಗೆ ಹೋಗದೆ ಕಾಣೆಯಾಗಿದ್ದ ಮೂಡುಬಿದಿರೆ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ, ಕೊಲ್ಲೂರಿನ ಆದಿರಾ (19) ತನ್ನ ಪ್ರಿಯಕರನ ಜೊತೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆ ಎನ್ನಲಾಗಿದ್ದು ಮೂಡುಬಿದಿರೆ ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮರ್ಥ ಭಾರತ ಸಮೃದ್ಧ ಬೈಂದೂರು ಘೋಷವಾಕ್ಯದಡಿ ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ.) ಹಾಗೂ ಶ್ರಮ್ ಚಾರಿಟೇಬಲ್ ಟ್ರಸ್ಟ್(ರಿ.) ಇವರ ಜಂಟಿ ಆಶ್ರಯದಲ್ಲಿ ಬೈಂದೂರಿನ ಜೆ.ಎನ್.ಆರ್ ಕಲಾ ಮಂದಿರದಲ್ಲಿ “ಕಾರ್ಮಿಕರ ಸಮಾವೇಶ” ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ. ವೈ. ರಾಘವೇಂದ್ರ ಅವರು, ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ರಮಿಕ ವರ್ಗದ ಬಾಂಧವರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಜಾರಿಗೆ ತಂದಿರುವ ಬಹುಮಹತ್ವಾಕಾಂಕ್ಷೆ ಯೋಜನೆಯಾದ ಪಿ.ಎಂ. ವಿಶ್ವಕರ್ಮ ಯೋಜನೆಯ ಕುರಿತು ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಶ್ರಮ್ ಚಾರಿಟೇಬಲ್ ಟ್ರಸ್ಟ್ ಸಂಚಾಲರಾದ ಮೋಹನ್ ಚಂದ್ರ ಅವರು, ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಅವರು, ಪಿ. ಎಂ. ವಿಶ್ವಕರ್ಮ ಸಮಿತಿಯ ಅಧ್ಯಕ್ಷರಾದ ವಾರಿಜ, ಸಮೃದ್ಧ ಬೈಂದೂರು ಸಂಚಾಲಕ ಬಿ. ಎಸ್. ಸುರೇಶ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More