Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಸ್ಪಂದನಾ ಫೌಂಡೇಶನ್, ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತದಾನಿಗಳ ಬಳಗ ಕುಂದಾಪುರ, ಜಬ್ ಜಬ್ ಫ್ರೆಂಡ್ಸ್ ಕುಂದಾಪುರ, ಖಾರ್ವಿ ಆನ್ಲೈನ್. ಕಾಂ , ಫ್ರೆಂಡ್ಸ್ ಸರ್ಕಲ್ ಫ್ರೇಂಡ್ಸ್ ಕುಂದಾಪುರ ಹಾಗೂ ರಕ್ತನಿಧಿ ವಿಭಾಗ ಕೆ.ಎಂ.ಸಿ, ಮಣಿಪಾಲ ಇವರ ಸಹಕಾರದಲ್ಲಿ ಕುಂದಾಪುರ ಕಲಾಮಂದಿರದಲ್ಲಿ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಶ್ರೀ ಸಾಯಿ ಸ್ಪಂದನಾ ಫೌಂಡೇಶನ್ ಕುಂದಾಪುರ ಸಂಸ್ಥೆಯ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ ಕಾರ್ಯಕ್ರಮ ಜರುಗಿತು. ವೈದ್ಯ ಡಾ. ಆದರ್ಶ ಹೆಬ್ಬಾರ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕುಂದಾಪುರದಲ್ಲಿ ದಿನನಿತ್ಯ 15 ರಿಂದ 20 ಯೂನಿಟ್ ರಕ್ತದ ಅವಶ್ಯಕತೆ ಇದ್ದು, ಹೆರಿಗೆ ಹಾಗೂ ಅಪಘಾತದ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ರಕ್ತದ ಪೂರೈಕೆ ಆಗದಿದ್ದ ರೋಗಿಯ ಜೀವಕ್ಕೆ ಅಪಾಯ. ಇಂತಹ ಸಂದರ್ಭದಲ್ಲಿ ತುರ್ತು ರಕ್ತದಾನಿಗಳ ಅವಶ್ಯಕತೆ ಇದ್ದು ಇದರ ಪೂರೈಕೆಗಾಗಿ ಶ್ರೀಸಾಯಿ ಸ್ಪಂದನಾ ಸಂಸ್ಥೆ ಮುಂದಿನ ದಿನಗಳಲ್ಲಿ ಶ್ರಮಿಸಲಿದ್ದು ರೋಗಿಗಳ ಪಾಲಿಗೆ ಆಶದಾಯಕವಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023ರ ಶೈಕ್ಷಣಿಕ ವರ್ಷದ ‘ಯುವಿಕಾ’ ಕಾರ್ಯಕ್ರಮಕ್ಕೆ ಉಡುಪಿ ಕೇಂದ್ರೀಯ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಶೌರ್ಯ ಎಸ್. ಕಾಡಿಂತಾರ್ ಅವರನ್ನು ಇಸ್ರೋ ಸಂಸ್ಥೆ ಯುವ ವಿಜ್ಞಾನಿಯಾಗಿ ಆಯ್ಕೆ ಮಾಡಿದೆ. ದೇಶದಾದ್ಯಂತ ಇಸ್ರೋ ಪ್ರಸಕ್ತ ವರ್ಷ ಆಯ್ಕೆ ಮಾಡಿದ 350 ವಿದ್ಯಾರ್ಥಿಗಳಲ್ಲಿ ಶೌರ್ಯ. ಎಸ್. ಕಾಡಿಂತಾರ್ ಓರ್ವರಾಗಿದ್ದಾರೆ. ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯು ಶಾಲಾ ವಿದ್ಯಾರ್ಥಿಗಳಿಗಾಗಿ ಯುವಿಕಾ (ಯುವ ವಿಜ್ಞಾನಿ ಕಾಠ್ಯಕ್ರಮ ) ಎಂಬ ವಿಶೇಷ ಕಾಠ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ. ಇದು ಯುವ ವಿದ್ಯಾರ್ಥಿಗಳಿಗೆ ಬಾಹ್ಯಕಾಶ ವಿಜ್ಞಾನ, ತಂತ್ರಜ್ಞಾನ ಹಾಗೂ ಬಾಹ್ಯಕಾಶ ಅಪ್ಲಿಕೇಶನ್ಗಳ ಕುರಿತು ಮೂಲಭೂತ ಜ್ಞಾನವನ್ನು ನೀಡುತ್ತದೆ. ಈ ಕಾಠ್ಯಕ್ರಮವನ್ನು ಕ್ಯಾಚ್ ದೆಮ್ ಯಂಗ್ ಎಂಬ ಶೀರ್ಷಿಕೆ ಅಡಿಯಲ್ಲಿ ಇಸ್ರೋ ರೂಪಿಸಿದ್ದು 2023 ರ ಮೇ 15ರಿಂದ ಮೇ 26 ರವರೆಗೆ ನಡೆಯಲಿದೆ. ಶೌರ್ಯ ಪ್ರಸ್ತುತ ಬ್ರಹ್ಮಾವರ ತಾಲೂಕಿನ ಯಡ್ತಾಡಿ ನಿವಾಸಿ, ಉಡುಪಿ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ್ ಪೂಜಾರಿ ಹಾಗೂ ಬ್ರಹ್ಮಾವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ ಹಾಗೂ ಸಮಾಜಸೇವಕ ಗೋವಿಂದ ಬಾಬು ಪೂಜಾರಿ ಅವರನ್ನು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಹಿಂದುಳಿದ ವರ್ಗ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬು ನೇಮಕ ಮಾಡಿದ್ದಾರೆ. ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದವರಾಗಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಕೈತಪ್ಪಿದ ಬಳಿಕ ಈ ಪದವಿಯನ್ನು ನೀಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪರವಾಗಿ ಗಂಗೊಳ್ಳಿ ಭಾಗದಲ್ಲಿ ಮತಯಾಚನೆ ಮಾಡಿದರು. ಗಂಗೊಳ್ಳಿಯ ಲೈಟ್ ಹೌಸ್, ಕಂಚುಗೋಡು, ಸಂನ್ಯಾಸಿ ಬಲೆ ಮೊದಲಾದ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಗಂಗೊಳ್ಳಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಕಂಚುಗೋಡು, ಶಕ್ತಿಕೇಂದ್ರ ಅಧ್ಯಕ್ಷ ಚಂದ್ರ ಖಾರ್ವಿ, ಸೂರಜ್ ಖಾರ್ವಿ, ಗೋಪಾಲ ಖಾರ್ವಿ, ಶಾಂತಿ ಖಾರ್ವಿ, ವಿರೇಂದ್ರ ಶೆಟ್ಟಿ, ಧನಂಜಯ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.24: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದು, ಅಂತಿಮವಾಗಿ ಯಾರೆಲ್ಲಾ ಉಳಿದಿದ್ದಾರೆ ನೋಡಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ, ಬಿ.ಜೆ.ಪಿ ಪಕ್ಷದ ಗುರುರಾಜ ಶೆಟ್ಟಿ ಗಂಟಿಹೊಳೆ , ಕಾಂಗ್ರೆಸ್ ಪಕ್ಷದ ಕೆ. ಗೋಪಾಲ ಪೂಜಾರಿ, ಜನತಾದಳ (ಜಾತ್ಯಾತೀತ)ದ ಮನ್ಸೂರ್ ಇಬ್ರಾಹಿಂ, ಆಮ್ ಆದ್ಮಿ ಪಾರ್ಟಿಯ ಸಿ.ಎ. ರಮಾನಂದ ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಪ್ರಸಾದ್, ರಾಷ್ಟಿಯ ಸಮಾಜದಳ (ಆರ್) ನ ಕೊಲ್ಲೂರು ಮಂಜುನಾಥ ನಾಯ್ಕ, ಪಕ್ಷೇತರ ಅಭ್ಯರ್ಥಿಗಳಾದ ಚಂದ್ರಶೇಖರ ಜಿ, ಶ್ಯಾಮ ಬಿ, ಎಚ್.ಸುರೇಶ್ ಪೂಜಾರಿ ಚುನಾವಣಾ ಕಣದಲ್ಲಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ, ಬಿ.ಜೆ.ಪಿ ಪಕ್ಷದ ಎ.ಕಿರಣ್ ಕುಮಾರ್ ಕೊಡ್ಗಿ, ಕಾಂಗ್ರೆಸ್ ಪಕ್ಷದ ದಿನೇಶ್ ಹೆಗ್ಡೆ ಮೊಳಹಳ್ಳಿ, ಜನತಾದಳ (ಜಾತ್ಯಾತೀತ)ದ ರಮೇಶ, ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಹಕರ ಸೇವೆ ಬ್ಯಾಂಕಿನ ಪ್ರಥಮ ಆದ್ಯತೆಯಾಗಿರಬೇಕು. ಡಿಜಿಟಲ್ ಪ್ರಾಡಕ್ಟ್ಸ್ ಸುಲಭವಾಗಿ ಗ್ರಾಹಕರು ಅರಿಯುವಂತಾಗಬೇಕು. ಬ್ಯಾಂಕಿನ ಎಲ್ಲಾ ಹುದ್ದೆಯವರು ಗ್ರಾಹಕರಿಗೆ ಸಿಗುವಂತಾಗಬೇಕು. ಬ್ಯಾಂಕಿನ ಆರ್ಥಿಕ ಸ್ಥಿತಿಗಳು ಸುದೃಢವಾಗಿರಬೇಕು. ಗ್ರಾಹಕರಿಗೆ ಅಪೇಕ್ಷೆಯಂತೆ ಹೆಚ್ಚಿನ ಸೌಲಭ್ಯ ನೀಡುವಂತಾಗಬೇಕು. ಆಗ ಗ್ರಾಹಕರಿಗೆ ನಮ್ಮ ಬ್ಯಾಂಕ್ ಎಂದು ವಿಶ್ವಾಸ ಬರುತ್ತದೆ. ದೃಢತೆ, ಸುದೃಢತೆಯಲ್ಲಿ ಕರ್ಣಾಟಕ ಬ್ಯಾಂಕ್ ಅಗ್ರ ಸ್ಥಾನಕ್ಕೆ ಮುಂದುವರೆಯುತ್ತಿದೆ. ಗ್ರಾಹಕ ಕೇಂದ್ರಿತ ಈ ಬ್ಯಾಂಕ್ ಇಂದು ಇತರ ಬ್ಯಾಂಕ್‌ಗಳೂ ಗಮನಹರಿಸುವಂತಾಗುತ್ತದೆ. ನೂರು ವರ್ಷ ದಾಟಿದ ಬ್ಯಾಂಕ್‌ಗಳಲ್ಲಿ ಕರ್ಣಾಟಕ ಬ್ಯಾಂಕ್ ಮಾತ್ರ ಎಲ್ಲ ವರ್ಷಗಳಲ್ಲಿ ಲಾಭದಾಯಕವಾಗಿ ಬೆಳೆದು ದಾಖಲಿಸಲ್ಪಟ್ಟಿದೆ ಎಂದು ಕರ್ಣಾಟಕ ಬ್ಯಾಂಕಿನ ನಿಕಟಪೂರ್ವ ಎಂ. ಡಿ. ಹಾಗೂ ಸಿ.ಇ.ಒ. ಮಹಾಬಲೇಶ್ವರ ಎಂ. ಎಸ್. ಕುಂದಾಪುರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿದರು. ಕುಂದಾಪುರದ ಕರ್ಣಾಟಕ ಬ್ಯಾಂಕ್ ಗ್ರಾಹಕರು, ಅಭಿನಂದನಾ ಸಮಿತಿ ಹೆಸರಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ನುಡಿದರು. ಕರ್ಣಾಟಕ ಬ್ಯಾಂಕ್‌ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಹಟ್ಟಿಯಂಗಡಿ ಶ್ರೀ ವಿನಾಯಕ ದೇವಾಸ್ಥಾನಗಳಿಗೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಿ.ಕೆ. ಶಿವಕುಮಾರ್ ಅವರ ಆಪ್ತ ಯು.ಬಿ ಶೆಟ್ಟಿ ಸೇರಿದಂತೆ ಬೈಂದೂರು ಕಾಂಗ್ರೆಸ್ ಪಕ್ಷದ ಹಲವು ನಾಯಕರು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ, ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ ನಾಗರಾಜ್ ದೇವಾಡಿಗ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಅಜಾಗೃತೆಯಿಂದ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ. ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ಬೈಕ್ ಸವಾರ ಮತ್ತು ಸೈಕಲ್ ಸವಾರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂತ್ವ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ನಾನೂ ಹಿಂದೂನೇ. ಬಿಜೆಪಿ ಬದುಕಿನ ಬಗ್ಗೆ ಚಿಂತನೆ ಮಾಡದೇ, ಭಾವನೆ ಜೊತೆಗೆ ಆಟವಾಡುತ್ತಿದೆ. ಬೆಲೆ ಏರಿಕೆ, ಉದ್ಯೋಗ, ಭವಿಷ್ಯದ ಬಗ್ಗೆ ಅವರಿಗೆ ಚಿಂತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಇಲ್ಲಿನ ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತಾರು ಸರಕಾರಿ ಉದ್ದಿಮೆ ಸ್ಥಾಪನೆ, ಜನರ ಸಶಕ್ತಿಕರಣಕ್ಕೆ ನೂರಾರು ಯೋಜನೆಗಳನ್ನು ತಂದಿತ್ತು. ಹಾಗಾಗಿಯೇ ಇಂದು ದೇಶ ಪ್ರಗತಿಯ ಹಾದಿಯಲ್ಲಿದೆ. ಆದರೆ ಬಿಜೆಪಿ ಸರಕಾರ ಜನರಿಗೆ ಉಪಯೋಗ ಆಗುವ ಯಾವ ಯೋಜನೆಯನ್ನೂ ಜಾರಿ ಮಾಡಿಲ್ಲ. ಬದಲಿಗೆ ಭಾವನೆ ಜೊತೆಗೆ ಆಟವಾಡುತ್ತಿದೆ. ಅವರು ಹಿಂದೂಗಳು ಮುಂದು ಎಂದರೆ, ನಾವೆಲ್ಲರೂ ಸೇರಿ ಒಂದು ಎಂದು ಕಾಂಗ್ರೆಸ್ ಹೇಳುತ್ತದೆ. ಎಲ್ಲಾ ಧರ್ಮ, ಜನಾಂಗ, ಜಾತಿ ಸೇರಿಯೇ ಒಂದು ದೇಶವಾಗಿದೆ ಎಂದರು. ಕಷ್ಟಕಾಲದಲ್ಲಿ ಜೊತೆಗಿರುವವರೆಲ್ಲ ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ23: ಬೈಂದೂರು ಬಿಜೆಪಿಯ ಹಿರಿಯ ನಾಯಕ, ಜಿ.ಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ, ಜಿಪಂ ಮಾಜಿ ಸದಸ್ಯ ಶಂಕರ ಪೂಜಾರಿ ಸೇರಿದಂತೆ ಬೈಂದೂರು ಮಂಡಲ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೈಂದೂರು ಜೆ.ಎಸ್.ಆರ್ ಕಲಾಮಂದಿರದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ಕೆ. ಬಾಬು ಶೆಟ್ಟಿ ಅವರು ಕಳೆದ ಮುರು ದಶಕಗಳಿಂದ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, 4 ಭಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದರು. ಶಂಕರ ಪೂಜಾರಿ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಬಿಜೆಪಿಗೆ ಕರೆತಂದಿದ್ದರು. ಆ ಬಳಿಕ ಜಿ.ಪಂ ಸದಸ್ಯರಾಗಿದ್ದಲ್ಲದೇ ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದರು. ಸದಾಶಿವ ಪಡುವರಿ ಅವರು ಪಡುವರಿ ಪಂಚಾಯತ್ ಉಪಾಧ್ಯರಾಗಿ ಸೇವೆ ಸಲ್ಲಿಸಿದವರು. ವೆಂಕಟ ಪೂಜಾರಿ ತಾಪಂ ಸದಸ್ಯರೂ ಆಗಿದ್ದರು. ವಂಡ್ಸೆ ದೀಪಕ್ ಶೆಟ್ಟಿ ಬಿಜೆಪಿ ನಾಯಕರಾಗಿದ್ದರು. ಬದಲಾದ…

Read More