ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ, ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಬಂಧವು ಫುಲ್ ಸ್ಕೇಪ್ ಹಾಳೆಯ ಎರಡು ಸಾವಿರ ಶಬ್ದಗಳನ್ನು ಮೀರಬಾರದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು. ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಟ್ರಸ್ಟ್, ಸಹಾಯಕ ನಿರ್ದೇಶಕರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐಟಿ ಮತ್ತು ಕೋಡಿಂಗ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಮಾದರಿ ಪ್ರದರ್ಶನ ಆಚರಿಸಲಾಯಿತು. ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂದಿಸಿದ ನವೀನ ಮಾದರಿಗಳ ಪ್ರದರ್ಶನ ಜರುಗಿತು. ಈ ಮೂಲಕ ವಿದ್ಯಾರ್ಥಿಗಳು ಬಾಹ್ಯಾಕಾಶ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯವನ್ನು ಅನ್ವೇಷಿಸಲು ಪ್ರದರ್ಶನವು ಸೃಜನಶೀಲ ವೇದಿಕೆಯಾಗಿ ಕಾರ್ಯ ನಿರ್ವಹಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡ್ಲಕಟ್ಟೆ ಎಂಐಟಿಯ ಡೇಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಕಾರ್ತಿಕೇಯನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಕಾರ್ಯಕ್ರಮದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು. ಬಿಸಿಎ ವಿಭಾಗದ ಮುಖ್ಯಸ್ಥರು ಮತ್ತು ಐಟಿ ಮತ್ತು ಕೋಡಿಂಗ್ ಕ್ಲಬ್ ನ ಸಂಯೋಜಕರಾದ ಸ್ವರ್ಣ ರಾಣಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಅಶ್ವಿನ್ ಎ .ಜೆ ಮತ್ತು ತೀರ್ಥ ಕುಲಾಲ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವ್ಯಕ್ತಿತ್ವ ವಿಕಸನ ಪುಸ್ತಕಗಳಾದ ‘ಸೋಲು ಅಂತಿಮವಲ್ಲ’ಪದಗಳೇ ಬಂಗಾರ’ ರೇಡಿಯೋ ಮಣಿಪಾಲದಲ್ಲಿ ನೂರಕ್ಕೂ ಮಿಕ್ಕಿದ ವ್ಯಕ್ತಿತ್ವ ಸರಣಿ ಬಾನುಲಿ ಕಾರ್ಯಕ್ರಮ, ಜಿಲ್ಲಾಧ್ಯಂತ ತರಬೇತಿ ಕಾರ್ಯಕ್ರಮಗಳು, ಸ್ಥಳೀಯ ಮಾಧ್ಯಮದ ಮೂಲಕ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮಗಳು, ಪರೀಕ್ಷಾ ಹಬ್ಬ ತರಬೇತಿ,ಕಾರ್ಯಗಾರ ತರಬೇತಿ ಕಮ್ಮಟ, ಶಿಕ್ಷಕರಿಗೆ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ಮೊದಲಾದ ಅಂಶಗಳನ್ನು ಗಮನಿಸಿ ಕೋಟ ವಿವೇಕ ಬಾಲಕಿಯರ ಶಿಕ್ಷಕರಾದ ಹಾಗೂ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರಿಗೆ ತರಬೇತಿ ಸಾಧನೆಗಾಗಿ ಪ್ರೇರಣಾ ಪುರಸ್ಕಾರ ನೀಡಲಾಗಿದೆ. ಇತ್ತೀಚೆಗೆ ಕಾರ್ಕಳದಲ್ಲಿ ನಡೆದ ಜೆಸಿ ತರಬೇತಿದಾರರ ಸಮ್ಮೇಳನದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತಿಚಿಗೆ ” ಹಿರಿಯ ನಾಗರಿಕರ” ದಿನವನ್ನು ಹಿರಿಯರ ಸೇವೆ ಮತ್ತು ಅನುಭವಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಚರಿಸಲಾಯಿತು. ಸಂಸ್ಥೆಯಲ್ಲಿ ಅಧ್ಯಾಪನದಲ್ಲಿ ನಿರತರಾಗಿರುವ ಹಿರಿಯ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ, ಉದಯ್ ಕುಮಾರ್ ಹೆಗ್ಡೆ, ಬೇಳೂರು ಮತ್ತು ಹಿರಿಯ ಉಪನ್ಯಾಸಕರಾದ. ಜಿ. ಕೆ. ರಮೇಶ್ ರಾವ್ ಇವರಿಗೆ ಹಾಗೂ ವಾಹನ ಚಾಲಕರಾಗಿ ದುಡಿಯುತ್ತಿರುವ ಶೇಖರ್ ಪೂಜಾರಿ, ರಘುರಾಮ್ ಶೆಟ್ಟಿ, ಶಹಜಾನ್, ಪ್ರಭಾಕರ್ ಶೆಟ್ಟಿ ಮತ್ತು ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಂಜ ಅವರಿಗೆ ಗೌರವ ಸಲ್ಲಿಸಲಾಯಿತು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಡಳಿತ ನಿರ್ದೇಶಕರಾದ ರೆನಿಟಾ ಲೋಬೊ ಮಾತನಾಡಿ “ಹಿರಿಯರ ಅನುಭವ,ಶ್ರಮ ಹಾಗೂ ಅವರ ನಿಷ್ಠೆ ನಮಗೆಲ್ಲಾ ಪ್ರೇರಣೆ ಎನ್ನುತ್ತಾ ಅವರು ಸಂಸ್ಥೆಯ ಬೆಳವಣಿಗೆಗೆ ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಇವರು ಮಾತನಾಡಿ ಹಿರಿಯರು ಕಾರ್ಯ ವೈಖರಿಯನ್ನು ಸ್ಮರಿಸುತ್ತಾ ಕಾರ್ಯಕ್ರಮದಲ್ಲಿ ಹಿರಿಯರಿಗೆ ನೀಡಲಾದ ಸ್ಮರಣಿಕೆಯಲ್ಲಿ ಬರೆದ ಸಂದೇಶವನ್ನು ಭಾವನಾತ್ಮಕವಾಗಿ ಓದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ವಾರ್ಡ್ ಹಾಗೂ ಗುಂಡ್ಮಿ ಗ್ರಾಮದ ಚೆಲ್ಲಮಕ್ಕಿ ವಾರ್ಡ್ನಲ್ಲಿ ಯುವತಿಯರಿಗೆ ಮತ್ತು ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಂಯುಕ್ತ ಆಶ್ರಯದಲ್ಲಿ ನಡೆದ ನಾರೀ ನ್ಯಾಯ್ ಕಾರ್ಯಕ್ರಮದ ಮಹತ್ವದ ಯೋಜನೆಯಾದ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ.ಪಿ.ಸುವರ್ಣ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರು ಯುವತಿಯರಿಗೆ ಪ್ಯಾಡ್ಗಳನ್ನು ವಿತರಿಸಿ ಮಾತನಾಡಿ, ತಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸದಾ ಚಿಂತಿಸುವ, ಕಾಳಜಿ ವಹಿಸುವ ನಮ್ಮ ಮಹಿಳೆಯರು ತಮ್ಮ ಆರೋಗ್ಯದ ಗಮನ ಹರಿಸುವುದನ್ನು ಮರೆತು ಬಿಡುತ್ತಾರೆ. ಹಾಗಾಗಿ ಅವರಲ್ಲಿ ಗರ್ಭಕೋಶ ಹಾಗೂ ಸ್ತನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ತತ್ವಪದ ಸಾಹಿತ್ಯ ಕುರಿತ ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊಂದಕ್ಕೆ ಬಹುಮಾನ ನೀಡುವ ಯೋಜನೆ ರೂಪಿಸಿದ್ದು, 2024 ನೇ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತಿದ್ದು, ವೆಬ್ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಗ್ರಂಥ ಲೇಖಕರು, ಪ್ರಕಾಶಕರು ಸೆಪ್ಟಂಬರ್ 10 ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿಯಲ್ಲಿ, ಕೋಟೇಶ್ವರ ಶ್ರೀದೇವಿ ಡೆಂಟಲ್ ಕ್ಲಿನಿಕ್ನ ಡಾ. ಜಗದೀಶ್ ಹಾಗೂ ಅವರ ತಂಡವು ದಂತ ಆರೈಕೆ ಮತ್ತು ಹಲ್ಲುಗಳ ಸ್ವಚ್ಛತೆಯ ಕುರಿತ ವಿಶೇಷ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೋಟೇಶ್ವರದ ಶ್ರೀದೇವಿ ದಂತ ಚಿಕಿತ್ಸಾಲಯದ ಡಾ. ಜಗದೀಶ್ ಅವರು ಪುಟ್ಟ ಮಕ್ಕಳಿಗೆ , ಹಲ್ಲುಗಳನ್ನು ಸರಿಯಾಗಿ ಬ್ರಷ್ ಮಾಡುವ ವಿಧಾನ ಹಾಗೂ ದಂತ ಆರೋಗ್ಯದ ಮಹತ್ವವನ್ನು ದಂತಪಂಗ್ತಿಯ ವಿಶೇಷ ಆಕರ್ಷಕ ಮಾಡೆಲ್ ಗಳೊಂದಿಗೆ ವಿವರಿಸಿ ಅರ್ಥೈಸಿದರು.ವಿದ್ಯಾ ಅಕಾಡೆಮಿಯ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿ ವೈದ್ಯರು ಹೇಳಿದ್ದನ್ನು ಪಾಲಿಸಿ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುತ್ತೇವೆಂದು ವೈದ್ಯರಿಗೆ ಭರವಸೆಯಿತ್ತರು.ಈ ಸಂದರ್ಭದಲ್ಲಿ ಐಎಂಜೆ ಸಂಸ್ಥೆಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ ಮಾತನಾಡಿ, ವಿದ್ಯಾ ಅಕಾಡೆಮಿಯ ಪ್ರಯತ್ನವನ್ನು ಶ್ಲಾಘಿಸಿ, ಮಕ್ಕಳಲ್ಲಿ ದಂತ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಿದ ಡಾ. ಜಗದೀಶ್ ಮತ್ತು ಅವರ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಅವರು, ಐಎಂಜೆ ಗುಂಪಿನ ಎಲ್ಲಾ ಸಂಸ್ಥೆಗಳು ಸದಾ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ, ಗ್ರಾಫಿಕ್ಸ್ ಮತ್ತು ಶಿಲ್ಪಕಲೆ ವಿಭಾಗಕೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿರು. ಈ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು. ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
