Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ–2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಗುರುವಾರ ವೈಭವದಿಂದ ನಡೆಯಿತು. ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಕೇರಳದ ಸಾಂಪ್ರದಾಯಿಕ ವೇಷಭೂಷಣ, ಜನಪದ ಕಲೆ, ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ ಹಾಗೂ ಆಚರಣೆಗಳ ಸೊಬಗನ್ನು ಮೆರವಣಿಗೆಯಲ್ಲಿ ಪ್ರಸ್ತುತಪಡಿಸಲಾಯಿತು. ಮೆರವಣಿಗೆಯಲ್ಲಿ ಕಥಕಳಿ, ಮೋಹಿನಿಯಾಟ್ಟಂ ಮತ್ತು ಮಾವೇಲಿ ಪಾತ್ರಗಳ ಸಂಯೋಜಿತ ಪ್ರದರ್ಶನ ಗಮನ ಸೆಳೆಯಿತು. ಕೇರಳದ ಸಾಂಪ್ರದಾಯಿಕ ವಾದ್ಯ ಪರಂಪರೆಯನ್ನು ಪ್ರತಿಬಿಂಬಿಸುವ ಪಂಚವಾದ್ಯ ಮೆರವಣಿಗೆಗೆ ವಿಶಿಷ್ಟ ಮೆರುಗು ನೀಡಿತು. ಅದರೊಂದಿಗೆ ತಾಲಪೊಲಿ, ಪುಲಿಕಳಿ, ಚೆಂಡೆ, ಬಾಲಕ–ಬಾಲಕಿಯರ ಸಾಂಸ್ಕೃತಿಕ ಸಂಯೋಜಿತ ಪ್ರದರ್ಶನ, ಕಾವಡಿ, ಒಪ್ಪನ, ಕೋಲ್ಕಳಿ, ಕಲರಿ ಮೊದಲಾದ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಮೂಡಿಬಂದವು. ಕೇರಳದ ಉತ್ತರ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ತೆಯ್ಯಂ ವಿವಿಧ ರೂಪಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಾವುದೇ ಭಾಷೆಯಲ್ಲಿ ಮಾತನಾಡಿದರು ಅದು ಹೃದಯ ಗೆಲ್ಲುವಂತಿರಬೇಕು. ಮನಸುಗಳನ್ನು ಕಟ್ಟುವಂತಿರಬೇಕು. ಆ ಮುಖೇನ ಮನೆ, ಸಮಾಜ, ದೇಶ ಸ್ವಸ್ಥವಾಗಲು ಭಾಷೆ ಕಾರಣವಾಗುತ್ತದೆ. ಅಂತಹ ಭಾಷೆಯ ಮೂಲಕ ಸಂಸ್ಕೃತಿಯನ್ನು ತಿಳಿಯುವಂತಾಗಬೇಕು ಎಂದು ಸಿದ್ದಾಪುರದ ಜ್ಞಾನಸರಸ್ವತಿ ಪದವಿ-ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಸುಜನ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಲಿಂಗ ಕಲ್ಪವೃಕ್ಷ ಇದರ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಆಲಿಸುವಿಕೆ, ಓದುಗಾರಿಕೆ, ಮಾತುಗಾರಿಕೆ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವ ಮೂಲಕ ಎಲ್ಲಾ ಭಾಷೆಗಳನ್ನು ಕಲಿತು ಬಳಸಿರಿ ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮ ಸಂಯೋಜಕರಾದ ಸ್ವಾತಿ ಜಿ. ರಾವ್, ಪ್ರವೀಣಾ ಎಮ್.‌ ಪೂಜಾರಿ, ಮೇಘಾ ಎಸ್. ಭಟ್, ಸರೋಜಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿಶಿಕಾ ಅತಿಥಿಗಳನ್ನು ಪರಿಚಯಿಸಿದರು. ಸೈಮಾ ಶೇಖ್ ಸ್ವಾಗತಿಸಿ‌, ಸಿರಿ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನವಪೀಳಿಗೆಗೆ ಪ್ರಾಚೀನ ಪಾರಂಪರಿಕ ಆಯುರ್ವೇದ ಪದ್ಧತಿ ಹಾಗೂ ನೈಸರ್ಗಿಕ ಗ್ರಾಮ ಜೀವನಶೈಲಿಯನ್ನು ಪರಿಚಯಿಸುವ ಮಹತ್ತರ ಉದ್ದೇಶದೊಂದಿಗೆ, ಕರಾವಳಿ ಕರ್ನಾಟಕದಲ್ಲೇ ಇದೇ ಮೊದಲ ಬಾರಿಗೆ ಚಿತ್ರಕೂಟ ಆಯುರ್ವೇದ ಹಬ್ಬ 2026ರ ಅಕ್ಟೋಬರ್ 4ರ ಭಾನುವಾರ ಆಯೋಜಿಸಲಾಗಿದೆ. ಕುಂದಾಪುರ ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಈ ಮಹತ್ವದ ಹಬ್ಬದ ಅಧಿಕೃತ ಲೋಗೋ ಅನಾವರಣ ಹಾಗೂ ದಿನಾಂಕ ಘೋಷಣೆ ನೆರವೇರಿತು. ಕಾರ್ಯಕ್ರಮದ ಲೋಗೋ ಅನಾವರಣಗೊಳಿಸಿ ಮಾತನಾಡಿದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥ ಡಾ. ರಾಜೇಶ್ ಬಾಯರಿ ಅವರು, “ಕಣ್ಣಿಗೆ ಮೊಬೈಲ್ ಪರದೆಯ ಕೃತಕ ಬೆಳಕು, ನಾಲಿಗೆಗೆ ಜಂಕ್ ಆಹಾರ, ಮನಸ್ಸಿಗೆ ಯಾಂತ್ರಿಕ ಬದುಕಿನ ಒತ್ತಡ- ಇಂದಿನ ಯುವಜನತೆಯನ್ನು ಆತಂಕ, ನಿದ್ರಾಹೀನತೆ ಮತ್ತು ಉದರ ಸಮಸ್ಯೆಗಳು ಸೇರಿದಂತೆ ಸಾಕಷ್ಟು ಜೀವನಶೈಲಿ ಸಮಸ್ಯೆಗಳಿಂದ ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಸಂಕಷ್ಟಗಳಿಗೆ ಕೇವಲ ಇಂಗ್ಲಿಷ್ ಹೆಸರುಗಳನ್ನು ಹುಡುಕಿ ಕಂಗಾಲಾಗುವ ಬದಲು, ನಮ್ಮ ನೆಲದ ಆಯುರ್ವೇದ ಜ್ಞಾನ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಹಣವಂತರಿಗಿಂತ ಶುದ್ಧ ನೀರನ್ನು ಸೇವಿಸುವವನೇ ನಿಜವಾದ ಯೋಗವಂತ. ಶುದ್ಧ ಗಾಳಿ ಹಾಗೂ ಶುದ್ಧ ನೀರು ಮನುಷ್ಯನ ಮೂಲಭೂತ ಅವಶ್ಯಕತೆ. ಹಾಗಾಗಿ ಅವು ಸಿಗುವಲ್ಲಿಯೇ ವಾಸ ಮಾಡಬೇಕು. ದುಡ್ಡಿಗಿಂತ ಶುದ್ಧ ನೀರು ಅಗತ್ಯ ಎಂಬುದನ್ನು ಸಮಾಜ ಆಲೋಚಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಕುಡಿಯಲು ಯೋಗ್ಯವಾಗಿರದ ನೀರು ಸಿಗದಿರುವುದು ನಗರ ಜೀವನದ ದೊಡ್ಡ ಅನರ್ಥವಾಗಿದ್ದು, ಯೋಜನಾ ರಹಿತವಾದ ನಗರ ನಿರ್ಮಾಣದಿಂದಾಗಿ ನಗರಗಳು ಕೇವಲ ಮನುಷ್ಯರು ಗುಂಪುಗುಂಪಾಗಿ ಇರುವಂತೆ ಮಾಡಿರುವ ವ್ಯವಸ್ಥೆಗಳಷ್ಟೇ ಆಗಿ ಮಾರ್ಪಟ್ಟಿದೆ. ಹಣದ ಆಸೆಗೆ ನದಿ, ಕೆರೆಗಳನ್ನು ಮುಚ್ಚಿ ನಗರದ ನಿರ್ಮಾಣವನ್ನು ಮಾಡಲಾಗಿದ್ದು, ನಗರಗಳಲ್ಲಿ ಮನುಷ್ಯನ ಮಾಲಿನ್ಯದ ಹರಿವು ಹಾಗೂ ಕಾರ್ಖಾನೆಗಳ ತ್ಯಾಜ್ಯಗಳ ನದಿ ನಿರ್ಮಾಣವಾಗಿದೆ. ಈ ತ್ಯಾಜ್ಯಗಳೆಲ್ಲವೂ ನದಿಯನ್ನು ಸೇರುತ್ತಿದ್ದು, ನೀರಿನ ಪಾತ್ರಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ವತಿಯಿಂದ ನಬಾರ್ಡ್‌ನ ಸಹಯೋಗದಲ್ಲಿ ಗ್ರಾಹಕರಿಗಾಗಿ ಆರ್ಥಿಕ ಅರಿವು ಕಾರ್ಯಕ್ರಮವು ಉಪ್ಪುಂದ ನಾಡದೋಣಿ ಸಭಾಭವನದಲ್ಲಿ ಗುರವಾರ ನಡೆಯಿತು. ಹಿರಿಯ ಕೃಷಿಕರು ಹಾಗೂ ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯು ಈ ಭಾಗದ ರೈತಾಪಿ ಜನರಿಗೆ ನೀಡುತ್ತಿರುವ ಸೇವೆಗಳನ್ನು ಶ್ಲಾಘಿಸಿದರು. ಬ್ಯಾಂಕಿನ ಹಿರಿಯ ಗ್ರಾಹಕರಾದ ಡಾ. ಯು. ವಿಶ್ವೇಶ್ವರ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಇತ್ತೀಚಿಗಷ್ಟೇ ಅಪಘಾತದಲ್ಲಿ ಮೃತರಾದ ಶ್ರೀನಿಧಿ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಹರಿಶ್ಚಂದ್ರ ಖಾರ್ವಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ರೂ. ಒಂದು ಲಕ್ಷ ಚೈತನ್ಯ ವಿಮಾ ಪರಿಹಾರ ಮೊತ್ತವನ್ನು ನೀಡಲಾಯಿತು. ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಕೇಂದ್ರ ಸಿಬ್ಬಂದಿ ಆಶಾಲತಾ ಮಾತನಾಡಿ, ಅನ್‌ಲೈನ್ ಬ್ಯಾಂಕಿಂಗ್‌ನಲ್ಲಿ ನಡೆಯುವ ವಂಚನೆಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಆರುಣ್ಯ 2026ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಬಂಟರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಆವರ್ಸೆ ಸುಧಾಕರ ಶೆಟ್ಟಿ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ ನಾಯಕತ್ವ, ಸೃಜನಶೀಲತೆ, ಸಾಮಾಜಿಕ ಜವಾಬ್ದಾರಿ ಮತ್ತು ಆತ್ಮವಿಶ್ವಾಸ ಬೆಳೆಸುವಂತಾಗಲಿ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕರಾದ ಹೆಚ್ ಜಗದೀಶ್ ಕಾರ್ಯಕ್ರಮ ಕುರಿತು ಕಾಲೇಜಿನಲ್ಲಿ ನಡೆಯುತ್ತಿರುವ ಮ್ಯಾನೇಜ್‌ಮೆಂಟ್ ಫೆಸ್ಟ್‌ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಕೇವಲ ಮನರಂಜನಾ ಕಾರ್ಯಕ್ರಮ ಅಂತ ತಿಳಿಯುದೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ, ನಿರ್ಧಾರ ಕೈಗೊಳ್ಳುವಿಕೆ, ತಂಡದ ಕೆಲಸ ಮತ್ತು ಉದ್ಯಮಶೀಲತೆ ಬೆಳೆಸುವ ಪ್ರಮುಖ ಶೈಕ್ಷಣಿಕ ವೇದಿಕೆಯಾಗಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಹಾಗೂ ಶಿಕ್ಷಣತಜ್ಞರ ಪಾತ್ರವನ್ನು ಸ್ಮರಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕತಾರ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ‌ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಹಾಗೂ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಸಂಯೋಜಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ ಈ ಕಾರ್ಯಕ್ರಮವನ್ನು ಅಶೋಕ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಕರ್ನಾಟಕ ಸಂಘ ಕತಾರ್‌ನ ಮಕ್ಕಳಿಂದ ಸಾಂಪ್ರದಾಯಿಕ ಸ್ವಾಗತ ನೃತ್ಯ ಪ್ರದರ್ಶನಗೊಂಡಿತು. ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪರಿಚಯಿಸಿದ ಈ ನೃತ್ಯ ಕಾರ್ಯಕ್ರಮ ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಕರ್ನಾಟಕ ಸಂಘ ಕತಾರ್‌ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಹೊಸದುರ್ಗ ಅವರು ಗಣ್ಯರು, ಮುಖ್ಯ ಅತಿಥಿಗಳು, ಶಿಕ್ಷಕರು ಹಾಗೂ ಸಮುದಾಯದ ಸದಸ್ಯರನ್ನು ಸ್ವಾಗತಿಸಿದರು. ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಅಧ್ಯಕ್ಷೀಯ ಭಾಷಣ ಮಾಡಿ, ಸಂಸ್ಥೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ”ವಂದೇ ಮಾತರಂ” ಗೀತೆಯನ್ನು ಪೂರ್ಣ ಹಾಡಬೇಕೇಂಬ ಕೇಂದ್ರದ ಆದೇಶಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೊಡ್ಡಿ ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವುದು ತುಷ್ಟೀಕರಣ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಬಿಜೆಪಿ ಕರ್ನಾಟಕದ ಮಾಧ್ಯಮ ಸಮಿತಿ ಸದಸ್ಯ ಹಾಗೂ ಮಾಧ್ಯಮ ವಕ್ತಾರ ರಮೇಶ್ ಪೂಜಾರಿ ಆರೋಪಿಸಿದ್ದಾರೆ. ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ಎಲ್ಲಾ 6 ಚರಣಗಳನ್ನು ಹಾಡಬೇಕೆಂಬ ಕೇಂದ್ರ ಗೃಹ ಸಚಿವಾಲಯದ ಸ್ಪಷ್ಟ ಮಾರ್ಗದರ್ಶನವನ್ನು ಧಿಕ್ಕರಿಸಿ, ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ನಿರ್ಧಾರವು ಕಾಂಗ್ರೆಸ್ ಪಕ್ಷದ ಹಳೆಯ ತುಷ್ಟೀಕರಣ ರಾಜಕಾರಣದ ಮುಂದುವರಿದ ಭಾಗವಾಗಿದೆ. 1937ರ ಕೊಲ್ಕತ್ತಾ ಸಿಡಬ್ಲ್ಯೂಸಿ (CWC) ನಿರ್ಣಯದ ನೆಪವೊಡ್ಡಿ, ಬಂಕಿಮಚಂದ್ರ ಚಟ್ಟೋಪಾಧ್ಯಾಯರ ಅಮರ ರಾಷ್ಟ್ರಗೀತೆಯ ಭಾಗಗಳನ್ನು ಕತ್ತರಿಸುವ ಮೂಲಕ ಕಾಂಗ್ರೆಸ್ ಸರ್ಕಾರವು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚಾರಿತ್ರಿಕ ತತ್ವಗಳಿಗೆ ಬಹಿರಂಗ ಅಪಮಾನವೆಸಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ವೇಳೆ ಪೂರ್ತಿ 6 ಚರಣಗಳ ಹಾಡು ಸಾಗುತ್ತಿದ್ದಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಗುರುವಾರ ಕಾರ್ಕಳದ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಚೇತನ್ ಹಾಗೂ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರು ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್‌ನ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್‌ ಎಸ್.‌ಎಲ್‌, ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು. ರಾಜ್ಯ ಕಬಡ್ಡಿ ಅಸೋಸಿಯೇಶನ್‌ನ ತೀರ್ಪುಗಾರರಾದ ಸಂತೋಷ್, ಪ್ರಶಾಂತ್ ಶೆಟ್ಟಿ, ಅಣ್ಣಪ್ಪ ಭಾಗವಹಿಸಿದ್ದರು. ತಾಲೂಕಿನ  ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 8 ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಸಮರ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾದ ಶಶಿಧರ್ ಶೆಟ್ಟಿ ಅವರು ಮಾತನಾಡಿ, ಕ್ರಿಯೇಟಿವ್‌ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಕ್ರಿಯೇಟಿವ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಕಾಯಿದೆ ಹಾಗೂ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿದ್ದಾಗ ಮಾತ್ರ ಹಿರಿಯರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ. ಈ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಹಿರಿಯ ಜೀವಗಳು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ಜೀವಿಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ತಂದೆ ತಾಯಿಯರ ಮತ್ತು…

Read More