ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ದೇವಸ್ಥಾನ ಹಾಗೂ ಪೂಜಾ ಮಂದಿರದ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಡಿ.ಜಿ.ಎಂ ವಾದಿರಾಜ್ ಕೆ ಡಿ.ಡಿಯನ್ನು ಶ್ರೀ ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ ಶ್ರೀಗಳು ಕೃತಜ್ಞತೆ ಸಲ್ಲಿಸಿ ಆಶ್ರೀವಚನಗೈದು ಮಂತ್ರಾಕ್ಷತೆ ನೀಡಿದರು. ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ, ಕರ್ಣಾಟಕ ಬ್ಯಾಂಕ್ ಐರೋಡಿ ಶಾಖಾ ಪ್ರಭಂದಕ ಮಂಜುನಾಥ್ ಶೇಟ್.ಬಿ, ಸಿಬ್ಬಂದಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೆಸಾ ವಿದ್ಯಾಸಂಸ್ಥೆಯ 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಕಿಶನ್ ಶೆಟ್ಟಿ ಇವರು ಅತ್ಯುತ್ತಮ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ . 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಮೂರು ಚಿನ್ನದ ಪದಕಗಳನ್ನು ಪಡೆದು ,ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಶಿಪ್ ಪಡೆದು ಅದ್ಭುತ ಸಾಧನೆ ಮಾಡಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ಈ ಪ್ರತಿಭಾವಂತ ಹುಡುಗನಿಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ ಬದಲಾಗಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಉಳಿಸಿ ಬೆಳೆಸಲು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಕರೆ ನೀಡಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ 28ನೇ ವರ್ಷ ಸದ್ಭಾವನಾ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇರೆ ಭಾಷೆಗಳನ್ನು ಗೌರವಿಸುವುದರ ಜತೆಗೆ ಮಾತೃ ಭಾಷೆಗೆ ವಿಶೇಷ ಆಸಕ್ತಿ ತೋರಬೇಕು,ನಮ್ಮ ಭಾಷೆ ಮನೆ ಮನಗಳಲ್ಲಿ ನಿತ್ಯ ನಿರಂತರವಾಗಿಸಿಸಲು ಸಲಹೆ ನೀಡಿದರು. ಪ್ರಸ್ತುತ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯದಲ್ಲಿ ಕನ್ನಡ ಸಂಘಟನೆಗಳು ಕೈಜೋಡಿಸಬೇಕಿದೆ. ಪಂಚವರ್ಣ ಸಂಘಟನೆ ಕ್ರೀಯಾಶೀಲ ಸಂಘಟನೆಯಾಗಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಸುತ್ತಿದೆ ಎಂದರು. ಕಾರ್ಯಕ್ರಮವನ್ನು ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್. ಕುಂದರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕನ್ನಡ ಧ್ವಜವನ್ನು ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು 70ನೇಯ ಕನ್ನಡ ರಾಜ್ಯೋತ್ಸವದ ದಿನಾಚರಣೆಯ ಕುಂದಾಪುದರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕನ್ನಡದ ಜ್ಯೋತಿ ಬೆಳಗುವುದರ ಮೂಲಕ ಕನ್ನಡ ಮನಸುಗಳೆಲ್ಲ ಒಂದಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ ಗಣೇಶ ಮೊಗವೀರ ಅವರು ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಯೋಜಕರಾದಂತ ಸುಬ್ರಹ್ಮಣ್ಯ ಮರಾಠಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಜನತಾ ಚಿತ್ರ ಸಿರಿ’ ಎನ್ನುವಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಬಿಡಿಸಿದಂತಹ ಚಿತ್ರಗಳನ್ನು ಪ್ರದರ್ಶಿಸಿ, ಅತ್ಯುತ್ತಮ ಚಿತ್ರಗಳಿಗೆ ಮುಂದೆ ನಡೆಯುವಂತಹ ಜನತಾ ವ್ಯವಹಾರ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಕನ್ನಡ ನಾಡು ನುಡಿಗಳನ್ನು ಬಿಂಬಿಸುವಂತಹ ಗೀತೆಗಳಿಗೆ ದನಿಯಾದರು. ಶಿಕ್ಷಕಿ ಶ್ವೇತಾ ಅವರು ಕನ್ನಡ ನಾಡು ನುಡಿಯ ಕುರಿತಾದ ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಶಿಕ್ಷಕಿಯರಾದ ಸುಜಾತ ಅವರು ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಅವರು ಆಯೋಜಿಸಿದ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2025ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ಹಾಗೂ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳಾಗಿರುವ ಸ್ವರೂಪಾ ಟಿ.ಕೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್ಪಾಲ್ ಸುವರ್ಣ ವಹಿಸಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷರಾದ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಇಂತಹ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆ ‘ಉಗಮ-2025′ ರ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನೇರಳಕಟ್ಟೆ ನಾರಾಯಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆ ವಿದ್ಯಾರ್ಥಿಗಳಿಗೆ ತೆರೆದಿಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಯಕ್ಷಗಾನವು ಆಧಾರವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ 50ನೇ ವರ್ಷದ ಕಾರ್ಯಕ್ರಮ “ಸುವರ್ಣಾಕ್ಷ” ನನ್ನು ಉದ್ಘಾಟಿಸಿ ಮಾತನಾಡಿದರು . ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸುವಲ್ಲಿ ಕರ್ನಾಟಕದ ಸಾಂಸ್ಕೃತಿಕ ಕಲೆ ಯಕ್ಷಗಾನವು ಬಹುದೊಡ್ಡ ಪಾತ್ರ ವಹಿಸಿದೆ. ಕಳೆದ 3 ವರ್ಷಗಳಿಂದ ಕುಂದಾಪುರದ 22 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡಿ ವಿದ್ಯಾರ್ಥಿಗಳಿಂದ ಪ್ರದರ್ಶನ ಏರ್ಪಡಿಸಲಾಗುತ್ತದೆ. ಇದರಿಂದ ಭಾಷಾ ಶುದ್ಧಿ ಮತ್ತು ನಿರರ್ಗಳತೆ, ಅಧ್ಯಯನಕ್ಕೂ ಸಹ ಸಹಕಾರಿಯಾಗುತ್ತದೆ. ಅಲ್ಲದೆ ಕಲಿಕೆಗೆ ಒಳ್ಳೆಯ ವ್ಯವಸ್ಥೆಯಾಗುತ್ತದೆ. ಈ ಕಲೆಯ ಪ್ರಾಮುಖ್ಯತೆ ಅರಿತು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ.ಹೆಚ್. ಶಾಂತಾರಾಮ್ ಅವರು ಆಶಯದಂತೆ ಆರಂಭವಾದ ಈ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಇಂದು ಸುವರ್ಣ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ “ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ವನ್ನು ಉದ್ಘಾಟಿಸಿ ಮಾತನಾಡಿದದರು, ಪ್ರತಿಯೊಬ್ಬರು ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜ ಸೇವಕರು ಸಮಾಜಕ್ಕೆ ರಾಜ್ಯಕ್ಕೆ ದೇಶಕ್ಕೆ ಆದರ್ಶ ಆಗುತ್ತಾರೆ. ಆರೈಕೆ ಕೇಂದ್ರದ ಮೂಲಕ ವಂಡ್ಸೆ ಗ್ರಾಮ ಪಂಚಾಯತಿ ಸಮಾಜ ಸೇವೆ ಮಾಡುತ್ತಿದೆ. ಜೊತೆಗೆ ಘನತಾಜ್ಯ ಘಟಕ ಲಾಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರ ವತಿಯಿಂದ ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ 2025 ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ಯು. ಪ್ರಥಮ ಸ್ಥಾನ ಹಾಗೂ ಅದ್ವಿತ್ ಐದನೇ ಸ್ಥಾನ ಗಳಿಸಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
