Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ಲೇಸ್ಟೋರ್ ನಿಂದ ಯಾವುದೇ ಆ್ಯಪ್ ಡೌನ್ಲೋಡ್ ಮಾಡುವಾಗ  ವೈಯುಕ್ತಿಕ ಮಾಹಿತಿ ಮತ್ತು ಪಾಸ್ ವರ್ಡ್ ನೀಡುವಲ್ಲಿ ನಾವು ಜಾಗರೂಕರಾಗಿರಬೇಕು. ಸಾಮಾಜಿಕ ಜಾಲತಾಣಗಳ ಸ್ನೇಹ ಸಂಪರ್ಕಗಳ ಬಗ್ಗೆ ಎಚ್ಚರವಹಿಸಿ ಸೈಬರ್ ಮೋಸಜಾಲಕ್ಕೆ ಬಲಿಪಶುಗಳಾಗದಂತೆ  ನೋಡಿಕೊಳ್ಳಬೇಕು ಎಂದು ಕುಂದಾಪುರ ಟೌನ್ ಪೊಲೀಸ್ ಸ್ಟೇಶನ್ ಠಾಣಾಧಿಕಾರಿ ನಂಜಾ ನಾಯ್ಕ ಕರೆ ನೀಡಿದರು. ಅವರು ಇಲ್ಲಿನ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಸೈಬರ್ ಕ್ರೈಮ್ ತಡೆಗಟ್ಟುವಿಕೆ ವಿಷಯಾಧಾರಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರಾಗ ತರಂಗ ಮಂಗಳೂರು, ಭಾರತೀಯ ವಿದ್ಯಾ ಭವನ ಮಂಗಳೂರು ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ನಡೆಸಿದ ’ಬಾಲಪ್ರತಿಭಾ ಅನ್ವೇಷಣೆ -2025’ ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿಂದುಸ್ತಾನಿ ವಾದ್ಯ ಸಂಗೀತ (ಕೊಳಲು) ದಲ್ಲಿ ಗಂಗೊಳ್ಳಿಯ ಎಸ್. ವಿ. ಇಂಗ್ಲೀಷ್ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಹಾಗೂ ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಗಳಿಸಿ ಗುಲಾಬಿ ಶಿವರಾಮ ನೊಂಡ ಪರ್ಯಾಯ ಪಾರಿತೋಷಕವನ್ನು ಪಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತಾಯ, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಕಶ್ವಿ ಚೆಸ್ ಸ್ಕೂಲ್‌ನ ಆಡಳಿತ ನಿರ್ದೇಶಕ ನರೇಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಪ್ರತಿ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ. ಆದರೆ ಇಂದಿನ ಜೀವನ ಶೈಲಿಯಲ್ಲಿ ನಾವು ಇಂದ್ರಿಯ ಉಪಕಾರವನ್ನು ಮರೆತು, ಅವುಗಳಿಗೆ ಹಿತವಲ್ಲದ ವಿಷಯಗಳಲ್ಲಿ ತೊಡಗಿಕೊಂಡಿದ್ದೇವೆ. ಕಣ್ಣು ಸೌಂದರ್ಯವನ್ನು, ಕಿವಿ ಸುಶ್ರಾವ್ಯತೆಯನ್ನು, ನಾಸಿಕ ಸುವಾಸನೆಯನ್ನು, ನಾಲಿಗೆ ರುಚಿಯನ್ನು ಹಾಗೂ ತ್ವಚೆ ಕೋಮಲತೆಯನ್ನು ಬಯಸುತ್ತದೆ. ಈ ಪಂಚೇಂದ್ರಿಯಗಳ ಪ್ರಜ್ಞಾಪೂರ್ವಕ ಸಂತೃಪ್ತಿಯ ಮೂಲಕ ಸಮಗ್ರ ಆರೋಗ್ಯವನ್ನು ಪಡೆಯಬಹುದು ಎಂದು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಹೇಳಿದರು. ಅವರು ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ‘ಪ್ರಾಣ’ ಪ್ರಕೃತಿ ಚಿಕಿತ್ಸಾ ಸ್ಪಾ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಭೂತಗಳ ಸಮನ್ವಯ ಹಾಗೂ ಇಂದ್ರಿಯಗಳ ಸಾತ್ವಿಕ ಶಾಂತಿ ದೈಹಿಕ ವಿಶ್ರಾಂತಿಯ ಜೊತೆಗೆ ಮಾನಸಿಕ ಸ್ಥಿತಪ್ರಜ್ಞೆಗೂ ದಾರಿ ಮಾಡುತ್ತದೆ. ಈ ಕೇಂದ್ರದ ಮೂಲಕ ಸಮೃದ್ಧ ಸಮುದಾಯದ ಆರೋಗ್ಯದ ಬೆಳವಣಿಗೆ ಸಾಧ್ಯವಾಗಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ 2025ಕ್ಕೆ ಸಂಬಂಧಿಸಿದಂತೆ ಭಾವಚಿತ್ರವಿಲ್ಲದ 20 ವಾರ್ಡಿನ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಕಛೇರಿಯಲ್ಲಿ, ಬೈಂದೂರು ತಾಲೂಕು ಕಛೇರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಕಛೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧೀಕೃತ ವೆಬ್‌ಸೈಟ್ https://udupi.nic.in/en/ ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 6ರ ಒಳಗಾಗಿ ಬೈಂದೂರು ತಾಲೂಕು ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ  ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಎಚ್. ಎಂ. ಜಾವೆಲಿನ್ ಎಸೆತದಲ್ಲಿ  ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ತೀರ್ಥಹಳ್ಳಿಯ ಸಮಿತ್ ಎಚ್. ಎಂ. ಮಂಜುನಾಥ ಮತ್ತು ಸ್ಮಿತ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ – 2025 ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತಿಮ್ಮೇಶ್ ಬಿ. ಎನ್. ಅವರು ಭೇಟಿ ನೀಡಿ, ಸೈಬರ್ ಅಪರಾಧ, ಸೈಬರ್ ಅಪರಾಧದ ಸ್ವರೂಪ ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳು ಮತ್ತು  ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನವೀನ ಬೋರಕರ್ ಪಿಎಸ್‌ಐ (ತನಿಖೆ) ಅವರು ಪ್ರತಿಜ್ಞಾವಿಧಿ ಭೋದಿಸಿದರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು ಮತ್ತು ಎನ್‌ಡಿಪಿಎಸ್‌ ಕಾಯ್ದೆ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಘಟಕದಿಂದ ಹೊರತಂದಿರುವ ಕ್ಯೂಆರ್‌ (QR) ಕೋಡ್ ಕಾರ್ಯನಿರ್ವಹಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದ್ದರು. ಕಾರ್ಯಕ್ರಮದಲ್ಲಿ ಸದ್ರಿ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ  ಹೊಸ ಆ್ಯಪ್‌ಗಳನ್ನು ನಿರ್ವಹಿಸುವಾಗ ಸಾರ್ವಜನಿಕರು ಮುಖ್ಯವಾಗಿ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ಅವುಗಳ ಅಧಿಕೃತೆಯ ಬಗೆಗೆ ಜಾಗರೂಕರಾಗಿರಿ. ನಿಮ್ಮ ವಯಕ್ತಿಕ ವಿವರಗಳನ್ನು ದಾಖಲಿಸಿದಾಗ ಕೆಲವೊಮ್ಮೆ ಅವು ಸೈಬರ್ ವಂಚಕರ ವಶವಾಗಬಹುದು, ಅದರಿಂದ ನಿಮ್ಮ ಚಾರಿತ್ರ್ಯಕ್ಕೆ ಧಕ್ಕೆ ಬರಬಹುದು. ಓಟಿಪಿಯನ್ನು ಯಾವುದೆ ಕಾರಣಕ್ಕೆ ಕೊಟ್ಟು ಮೋಸಹೋಗದೆ ಮುನ್ನೆಚ್ಚರಿಕೆ ವಹಿಸಿ ಎಂದು ಗಂಗೊಳ್ಳಿ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುನಿಲ್ ಹೇಳಿದರು. ಅವರು ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುಜಯೀಂದ್ರ ಹಂದೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಉಪನ್ಯಾಸಕರಾದ ಎನ್.ಸಿ ವೆಂಕಟೇಶ್ ಮೂರ್ತಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸುದೇಶ್, ಶಶಾಂಕ್ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ನಾರಾಯಣ್ ಇ. ನಾಯ್ಕ್ ಪ್ರಸ್ಥಾವಿಸಿ ಸ್ವಾಗತಿಸಿದರು ವಿದ್ಯಾರ್ಥಿನಿ ದೀಪಾಲಿ ಕಾರ್ಯಕ್ರಮ ನಿರ್ವಹಿಸಿದರು. ದೀಕ್ಷಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ಗಂಗಾಕಲ್ಯಾಣ,ಅರಿವು ಸಾಲ ಯೋಜನೆ ಹಾಗೂ ಸಮುದಾಯ ಆಧಾರಿತ ಕೌಶಲ್ಯ ತರಬೇತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಜನಾಂಗದವರಿಂದ ವೆಬ್‌ಸೈಟ್ https://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರೆöÊಸ್ತ ಸಮುದಾಯ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 6360753075 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ತಾಲೂಕು ದೂ.ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಮಂಗಳೂರಿನ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು. ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಎನ್.ಎಂ. ಪದವಿಪೂರ್ವ ಕಾಲೇಜು ಅರಂತೋಡು ತಂಡವನ್ನು 35-11, 35-12 ಅಂಕಗಳಿಂದ ಸೋಲಿಸಿ 20ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಸಿದ್ದಾರೆ.

Read More