ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲೇಜು ಪದವಿ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳು ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ಗುಣಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ ಹಾಗೂ ಬೌದ್ಧಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳು ಮತ್ತು ಸುರಭಿ ರಿ. ಸಹಯೋಗದೊಂದಿಗೆ ನಡೆಯುವ ರಂಗ ತರಬೇತಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಬೈಂದೂರು ಸರಕಾರಿ ಪದವಿ ಕಾಲೇಜು ಗುಣಮಟ್ಟದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳ ಪಾಲ್ಗೊಳ್ಳುವಿಕೆಯಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ. ಪ್ರಾಂಶುಪಾಲರು ಮತ್ತು ಉಪನ್ಯಾಸಕರ ತಂಡವೂ ಅದಕ್ಕೆ ಪೂರಕವಾಗಿ ತೊಡಗಿಸಿಕೊಂಡಿದೆ. ಸಂಸ್ಥೆಯ ಮೂಲಭೂತ ಸೌಕರ್ಯವನ್ನು ಸರಕಾರ ಅಥವಾ ಸರಕಾರೇತರ ಸಂಸ್ಥೆಗಳ ಮೂಲಕ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ರೋವರ್ಸ್ & ರೇಂಜರ್ಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಕಾಲೇಜಿನ ಎ.ವಿ. ಹಾಲ್ ನಲ್ಲಿ ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ರೇಂಜರ್ ರಾಜ್ಯ ಪುರಸ್ಕಾರ ಪದವಿ ಪುರಸ್ಕೃತ ಸಮೃದ್ಧಿ ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ಕೌಟ್ & ಗೈಡ್ಸ್ ನ ಹಿನ್ನೆಲೆ ಹಾಗೂ ಯುವ ಸಮುದಾಯ ಸ್ಕೌಟ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೇಂಜರ್ ಲೀಡರ್ ಜೋಸ್ಲಿನ್ ಡಿ. ಅಲ್ಮೇಡಾ, ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ನೂತನ ಕಾರ್ಯದರ್ಶಿಯಾದ ದೀಪಾ ಪೂಜಾರಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್-2025 ರ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 5, 2026 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://kstcademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕೈಂಡ್ ಹಾರ್ಟ್ಸ್ ಬಾಳ್ಕುದ್ರು, ಶ್ರೀ ವೇಣುಗೋಪಾಲ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಉಸಿರು ಕೋಟ ಇವರ ಆಸರೆಯಲ್ಲಿ ಕೊಡಮಾಡುವ 2025ನೇ ಸಾಲಿನ ಕಾರಂತ ಬಾಲ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಪಡೆಯುವುದು ಅಥವಾ ಗ್ರಂಥಾಲಯ ಮೇಲ್ವಿಚಾರಕಿ ಶೈಲಜ ಕೆ. ಎನ್. (9663750499) ಅವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 12ರ ಸಂಜೆ 5 ಗಂಟೆ ಒಳಗೆ ಕೋಟದ ಕಾರಂತ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ – 576221 ಅವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಅಧ್ಯಕ್ಷರಾದ ಸತೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪರಿಸರ ಸ್ನೇಹಿ ಕಾರ್ಯಕ್ರಮಗಳೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2025-26ನೇ ಶೈಕ್ಷಣಿಕ ವರ್ಷದ ‘ಡೈನಾಮಿಕ್ ಸ್ಕೂಲ್ ಅವಾರ್ಡ್ಸ್ – 2025’ ಪ್ರಶಸ್ತಿಗೆ ಪಾತ್ರವಾಗಿದೆ. ಅ.14 ರಂದು, ಎಜುಕೇಶನ್ ಟುಡೇ ಸಂಸ್ಥೆಯು ಇಂಟರ್ನ್ಯಾಷನಲ್ ಬ್ಯಾಕಲೋರಿಯೇಟ್ ಸಹಯೋಗದಲ್ಲಿ ಹಾಗೂ ಎಜುಕೇಶನ್ ನ್ಯೂಸ್ ನೆಟ್ವರ್ಕ್ ಸಹಭಾಗಿತ್ವದಲ್ಲಿ ಡೈನಾಮಿಕ್ ಸ್ಕೂಲ್ ಅವಾರ್ಡ್ಸ್ 2025 ಕಾರ್ಯಕ್ರಮವನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಸಂಸ್ಥೆಯ ಪರವಾಗಿ ಪ್ರಶಸ್ತಿಯನ್ನು ಪ್ರಾಥಮಿಕ ಶಾಲೆಯ ಸಂಯೋಜಕಿಯಾದ ದೀಪಿಕಾ ದೇವಾಡಿಗ ಮತ್ತು ರೇಖಾ ಆರ್. ಅವರು ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಮಿಸ್ ಬ್ರಿಂದಾ ಶ್ರೀನಿವಾಸ್ ಮತ್ತು ಶ್ರೀ ತನ್ವೀರ್ ಅಹ್ಮದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ತನ್ನ ವಿಶಿಷ್ಟ ಶೈಕ್ಷಣಿಕ ಸಾಧನೆಗಳು, ಹಸಿರು ಆವರಣ ಯೋಜನೆಗಳು ಮತ್ತು ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡು ವಿಶೇಷ ಗೌರವವನ್ನು ಗಳಿಸಿತು. ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ – ಸದ್ಭಾವನಾ 2025 ಈ ಬಾರಿ ನವೆಂಬರ್ 16 ರಂದು ಉಡುಪಿ ಜಿಲ್ಲೆಯ ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಪತ್ರಕರ್ತೆ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗಣ್ಯರ ಸಮ್ಮುಖದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ 25 ಸಾವಿರ ಮೌಲ್ಯದ ಬೆಳ್ಳಿ ಫಲಕ ಒಳಗೊಂಡಿದೆ. ಇದೇ ವೇಳೆ ವಿಶೇಷ ಪುರಸ್ಕಾರವನ್ನು ವಿಶ್ವವಿಖ್ಯಾತ ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ನೀಡಲಾಗುತ್ತಿದೆ. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಂಗಡಿ ಹಾಗೂ ಮಚ್ಚಟ್ಟು ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ನಿಗಮವು ಕೇಂದ್ರ ಸರ್ಕಾರದ ರಾಷ್ಟ್ರಿಯ ಉಷ್ಣ ವಿದ್ಯುತ್ ನಿಗಮದ ಅಂಗ ಸಂಸ್ಥೆಯಾದ ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೋರೇಶನ್ ಸಂಸ್ಥೆಯೊಂದಿಗಿನ ಸುಮಾರು 1,500 ಕೋಟಿ ವೆಚ್ಚದ ಒಪ್ಪಂದದಲ್ಲಿ ಸುಮಾರು 1,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಾನ ಸಾಮರ್ಥ್ಯದ ವರಾಹಿ ಪಂಪ್ಡ್ ಸ್ಟೋರೇಜ್ ಕೂಡ ಸೇರಿರುವುದು ವರಾಹಿ ನದಿ ಪಾತ್ರದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅತ್ಯಂತ ಅಪಾಯಕಾರಿ ಯೋಜನೆಯಾಗಿದೆ ಎಂದು ತಾಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಮಾಣಿ ಆಣೆಕಟ್ಟುವಿನಿಂದ ಹರಿದು ಬಂದ ನೀರು ಹೊಸಂಗಡಿಯ ಕರ್ನಾಟಕ ವಿದ್ಯುತ್ ನಿಗಮದ ಜಲ ವಿದ್ಯುತ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಮಾಡಿ ವರಾಹಿ ನದಿಯ ಮೂಲಕ ಹರಿದುಬಂದು ಹೋರಿಯಬ್ಬೆಯ ಅಣೆಕಟ್ಟುವಿನಲ್ಲಿ ಶೇಖರಣೆಯಾಗಿ ಅಲ್ಲಿಂದ ವರಾಹಿ ನದಿ ಮತ್ತು ವರಾಹಿ ಕಾಲುವೆ ಮೂಲಕ ರೈತರ ಕೃಷಿ ಭೂಮಿಗೆ ಹರಿಯುತ್ತದೆ. ಇವತ್ತು ವರಾಹಿ ಎಡ ದಂಡೆ ಕಾಲುವೆಯ ಕಾಮಗಾರಿ ಮುಗಿದಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯು ಐಎಂಜೆ ಹೆಲ್ತ್ ಮತ್ತು ಸೈನ್ಸ್ ಬ್ಲಾಕ್ ಉದ್ಘಾಟನೆ ಹಾಗೂ ಪಠ್ಯಾರಂಭ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಸಂಸ್ಥೆಯ ಪಯಣದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿ, ಬಿ.ಎಸ್.ಸಿ ನರ್ಸಿಂಗ್ 6ನೇ ಬ್ಯಾಚ್, ಅಲೈಡ್ ಹೆಲ್ತ್ ಸೈನ್ಸ್ 2ನೇ ಬ್ಯಾಚ್ ಮತ್ತು ಫಿಸಿಯೋಥೆರಪಿ 1ನೇ ಬ್ಯಾಚ್‌ಗಳ ಉದ್ಘಾಟನೆಯಿಂದ ಗುರುತಿಸಲ್ಪಟ್ಟಿತು.ಕಾರ್ಯಕ್ರಮವು ಐಎಂಜೆ ಹೆಲ್ತ್ ಸೈನ್ಸ್ ಬ್ಲಾಕ್ ಉದ್ಘಾಟನಾ ಸಮಾರಂಭದಿಂದ ಪ್ರಾರಂಭವಾಗಿ, ನಂತರ ಪಠ್ಯಾರಂಭ ಕಾರ್ಯಕ್ರಮ ನಡೆಯಿತು. ಸಭೆಯನ್ನು ಮೂಡ್ಲಕಟ್ಟೆ ಕಾಲೇಜು ಆಫ್ ನರ್ಸಿಂಗ್ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಿಸ್ ಅವರು ಆತ್ಮೀಯ ಸ್ವಾಗತ ಭಾಷಣದ ಮೂಲಕ ಆರಂಭಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಅಲೈಡ್ & ಹೆಲ್ತ್ ಕೇರ್ ಕೌನ್ಸಿಲ್ನ ಅಧ್ಯಕ್ಷರಾಗಿರುವ ಡಾ. ಯು.ಟಿ. ಇಫ್ತಿಕಾರ್ ಫರೀದ್ ಅವರು ಮಾತನಾಡಿ, ಆರೋಗ್ಯ ವೃತ್ತಿಯಲ್ಲಿನ ವೃತ್ತಿಪರತೆ, ಮಾನವೀಯತೆ ಮತ್ತು ಬದ್ಧತೆಯ ಮಹತ್ವವನ್ನು ಒತ್ತಿ ಹೇಳಿದರು ಹಾಗೂ ಐಎಂಜೆ ಸಂಸ್ಥೆಗಳ ಶಿಕ್ಷಣದ ಗುಣಮಟ್ಟ ಹಾಗೂ ಆರೋಗ್ಯ ವೃತ್ತಿಪರರನ್ನು ರೂಪಿಸುವತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.16: ತಾಲೂಕಿನ ತೆಕ್ಕಟ್ಟೆ ಸೇರಿದಂತೆ ಜಿಲ್ಲೆಯ ಮೂರು ಕಡೆಗಳಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಟಾಕಿಗಳನ್ನು ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ನಡೆದಿದೆ. ದೀಪಾವಳಿಯ ಸಲುವಾಗಿ ಮಾರಾಟ ಮಾಡಲು ತೆಕ್ಕಟ್ಟೆ, ಬ್ರಹ್ಮಾವರ ತಾಲೂಕಿನ ಕುಂಜಾಲು, ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಗಿ ಪಡೆದ ಮ್ಯಾಗಜೀನ್ (ಸ್ಫೋಟಕಗಳು) ಸಂಗ್ರಹಣಾ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು ನಂತರ ನಾಶಪಡಿಸಲಾಗುತ್ತದೆ. ಅಕ್ರಮ ದಾಸ್ತಾನು ಇರಿಸಿದವರ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
