ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಸಿನಿಮಾ ಸೆಟ್ಟೇರಿದೆ. ಮಹೂರ್ತದಲ್ಲಿ ಕರಾವಳಿ ಸಿನಿಮಾ ತಂಡ ಭಾಗಿಯಾಗಿತ್ತು. ನಿರ್ಮಾಪಕ ಜಾಕ್ ಮಂಜು ಹಾಗೂ ನಟ ದೇವರಾಜ್ ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.28: ತಾಲೂಕಿನ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿರಿಸಿದೆ. ಶಿರೂರಿನ ದಲಿತ ಮುಖಂಡರಾದ ರಾಘವೇಂದ್ರ ಹಾಗೂ ರಮೇಶ್ ಶಿರೂರು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು ಸ್ಥಳೀಯ ದಲಿತ ಸಂಘಟನೆ ಮುಖಂಡರು ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಸಂದರ್ಭ ರಾಘವೇಂದ್ರ ಶಿರೂರು ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳೇ ಕಳೆದರೂ ಬೈಂದೂರಿನ ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ ಹಂಚದ ಉಡುಪಿ ಜಿಲ್ಲಾಡಳಿತವು ದಲಿತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿಯುವಂತೆ ಮಾಡಿ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೋಲೆ ಮಾಡಿ ದಲಿತ ವಿರೋಧಿ ನಡವಳಿಕೆ ತೋರಿದ್ದಾರೆ. ಇಂತಹ ವ್ಯವಸ್ಥೆಗೆ ಕಡಿವಾಣ ಬೀಳಬೇಕಿದೆ ಎಂದರು. ರಮೇಶ್ ಶಿರೂರು ಅವರು ಮಾತನಾಡಿ, ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚುವಂತೆ…
ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ. ನೆಂಪು ರಜತ ಮಹೋತ್ಸವದ ಪ್ರಯುಕ್ತ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನೆಂಪು ಉತ್ಸವ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ವೈ ರಾಘವೇಂದ್ರ ಮಾತನಾಡಿ, ದೇವಭಕ್ತಿ ಮತ್ತು ದೇಶಭಕ್ತಿ ಇಂದಿನ ಯುವಕರ ಆದ್ಯತೆ ಆಗಬೇಕು. ಪರರ ನೋವಿಗೆ ಸ್ಪಂದಿಸುವ ಮತ್ತು ಸಾಧನೆಯನ್ನು ಪ್ರೋತ್ಸಾಹಿಸುವ ಗೌರವಿಸುವ ಯುವಕರು ದೇಶದ ಆಸ್ತಿ. ಯುವಕರು ದೇಶಭಕ್ತಿಯನ್ನು ರೂಢಿಸಿ ಕೊಂಡಾಗ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಂಪು ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷ ಅರುಣ್ ಮೊಗವೀರ ನೆಂಪು ವಹಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ರಜತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಸೀತಾರಾಮ್ ಶೆಟ್ಟಿ ನೆಂಪು, ಶ್ರೀನಿವಾಸ್ ಮೆಂಡನ್ ಬಳ್ಳಿಹಿತ್ತಲು, ಶಿವರಾಮ್ ಮಂಗಲಸನಕಟ್ಟೆ ಇವರಿಗೆ ಹುಟ್ಟೂರ ಸನ್ಮಾನ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿಗೆ ಹೋಗದೆ ಕಾಣೆಯಾಗಿದ್ದ ಮೂಡುಬಿದಿರೆ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ, ಕೊಲ್ಲೂರಿನ ಆದಿರಾ (19) ತನ್ನ ಪ್ರಿಯಕರನ ಜೊತೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆ ಎನ್ನಲಾಗಿದ್ದು ಮೂಡುಬಿದಿರೆ ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮರ್ಥ ಭಾರತ ಸಮೃದ್ಧ ಬೈಂದೂರು ಘೋಷವಾಕ್ಯದಡಿ ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ.) ಹಾಗೂ ಶ್ರಮ್ ಚಾರಿಟೇಬಲ್ ಟ್ರಸ್ಟ್(ರಿ.) ಇವರ ಜಂಟಿ ಆಶ್ರಯದಲ್ಲಿ ಬೈಂದೂರಿನ ಜೆ.ಎನ್.ಆರ್ ಕಲಾ ಮಂದಿರದಲ್ಲಿ “ಕಾರ್ಮಿಕರ ಸಮಾವೇಶ” ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ. ವೈ. ರಾಘವೇಂದ್ರ ಅವರು, ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ರಮಿಕ ವರ್ಗದ ಬಾಂಧವರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಜಾರಿಗೆ ತಂದಿರುವ ಬಹುಮಹತ್ವಾಕಾಂಕ್ಷೆ ಯೋಜನೆಯಾದ ಪಿ.ಎಂ. ವಿಶ್ವಕರ್ಮ ಯೋಜನೆಯ ಕುರಿತು ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಶ್ರಮ್ ಚಾರಿಟೇಬಲ್ ಟ್ರಸ್ಟ್ ಸಂಚಾಲರಾದ ಮೋಹನ್ ಚಂದ್ರ ಅವರು, ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಅವರು, ಪಿ. ಎಂ. ವಿಶ್ವಕರ್ಮ ಸಮಿತಿಯ ಅಧ್ಯಕ್ಷರಾದ ವಾರಿಜ, ಸಮೃದ್ಧ ಬೈಂದೂರು ಸಂಚಾಲಕ ಬಿ. ಎಸ್. ಸುರೇಶ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಋಷಿ ಮುನಿಗಳ ಕಾಲದಿಂದಲೂ ಬಂದಿರುವ ಆಯುರ್ವೇದ ಚಿಕಿತ್ಸಾ ಪದ್ದತಿಯ ಮೂಲ ವ್ಯವಸ್ಥೆಯನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ೨೦೧೪ರಲ್ಲಿ ಕೇಂದ್ರ ಆಯುಷ್ ಇಲಾಖೆ ಮೂಲಕ ದೇಶಾದ್ಯಂತ ದೊಡ್ಡಮಟ್ಟದಲ್ಲಿ ಚಾಲನೆ ನೀಡಿದರು. ಆಯುರ್ವೇದವೂ ಕೂಡ ವಿಜ್ಞಾನವೇ ಆಗಿದ್ದು, ನಾಟಿಮದ್ದು ಎಂಬ ಜನರ ಭಾವನೆಗಳನ್ನು ದೂರೀಕರಿಸಲು ಇಂತಹ ಮಾಹಿತಿ ಕಾರ್ಯಕ್ರಮಗಳು ಇಂದಿನ ಅನಿವಾರ್ಯ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕಾಲ್ತೋಡು ಸರ್ಕಾರಿ ಆಯುಷ್ ಚಿಕಿತ್ಸಾಲಯದ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ ಬೆಂಗಳೂರು ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಗ್ರಾಪಂ ಕಾಲ್ತೊಡು, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೩-೨೦೨೪ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಆಯುಷ್ ಸೇವಾ ಗ್ರಾಮ ಉದ್ಘಾಟಿಸಿ ಮಾತನಾಡಿದರು. ಸಮಯಕ್ಕೆ ಸರಿಯಾಗಿ ಉತ್ತಮ ಹಾಗೂ ಹಿತಮಿತವಾದ ಆಹಾರ ಸೇವನೆ, ಸರಿಯಾದ ಪ್ರಮಾಣದ ನಿದ್ರೆ, ಜ್ಞಾನವನ್ನು ವೃದ್ಧಿಸುವ ಬ್ರಹ್ಮಚರ್ಯೆ ಇವುಗಳು ಆರೋಗ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ. ದೂರದೃಷ್ಟಿತ್ವದ ಕನಸಿನೊಂದಿಗೆ ಸಾವಿರಾರು ಕುಟುಂಬಗಳಿಗೆ ಧ.ಗ್ರಾ.ಯೋಜನೆ ಸ್ವಾವಲಂಬನೆಯ ಬದುಕು ನೀಡಿದೆ. ಸಾಮೂಹಿಕ ಸತ್ಯನಾರಾಯಣ ಪೂಜೆ ಮೂಲಕ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಕುಟುಂಬಗಳ ಜೊತೆಗೆ ಸಮಾಜಕ್ಕೂ ಕೂಡ ಒಳಿತು ನೀಡಲಿ ಎನ್ನುವುದು ಕಾವಂದರ ಆಶಯ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ಲೇಖಕ ಬಿ. ಚಂದ್ರಶೇಖರ ನಾವಡ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂದೂರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಂದೂರು ವಲಯ ಇದರ ವತಿಯಿಂದ ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧ.ಗ್ರಾ.ಯೋಜನೆಯ ಕೇಂದ್ರ ಸಮಿತಿ ಅಧ್ಯಕ್ಷ ಶಿರೂರು ವಾಸು ಮೇಸ್ತ ಅಧ್ಯಕ್ಷತೆವಹಿಸಿದ್ದರು. ಹಿರಿಯ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ ಪಿ. ಆಚಾರ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು, ದತ್ತು ಸ್ವೀಕಾರ ಸಮಾರಂಭ ಮಾ.5ರ ಸಂಜೆ ಗಂಟೆ 6ಕ್ಕೆ ಶಾಲಾ ಆವರಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಬೈಂದೂರು ಪ್ರೆಸ್ಕ್ಲ್ಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾನು ಕಲಿತ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳಲು ಊರಿನವರ ಜೊತೆಗೂಡಿ ಮಾದರಿ ಶಾಲೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಶಾಲಾ ಎಸ್ಡಿಎಂಸಿ ಹಾಗೂ ಶಿಕ್ಷಕರೂ ಸಹಕಾರ ನೀಡುತ್ತಿದ್ದಾರೆ ಎಂದರು. ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ, ಮೂಲ ಸೌಕರ್ಯ ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ. ಪ್ರಾರಂಭದಲ್ಲಿ ಹೊಸ ವಾಹನ ಖರೀದಿ, ಹೊಸ ಅತಿಥಿ ಶಿಕ್ಷಕರ ನೇಮಕಾತಿ ಮಾಡುವುದು, ಎಲ್ ಕೆಜಿ, ಯುಕೆಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂವಿಧಾನ ಜಾಗೃತಿಯ ಅಂಗವಾಗಿ ಸಾಲಿಗ್ರಾಮ ಕಾಯಾಕಿಂಗ್ ಪಾಯಿಂಟ್ ನಲ್ಲಿ ವಿನೂತನವಾಗಿ ಪ್ರವಾಸಿ ಬೋಟನ್ನು ಸಂವಿಧಾನ ಜಾಗೃತಿ ಪಥವನ್ನಾಗಿ ವಿನ್ಯಾಸಗೊಳಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂವಿಧಾನ ಜಾಗೃತಿ ಪಥಕ್ಕೆ ಈ ಮೂಲಕ ಚಾಲನೆ ನೀಡಲಾಯಿತು. ಸೀತಾ ನದಿಯಲ್ಲಿ ಕಾಯಾಕಿಂಗ್ ಮೂಲಕ ತೆರಳಿ ಮ್ಯಾಂಗ್ರೋ ಕಾಡುಗಳ ಮಧ್ಯೆ ನೀರಿನಲ್ಲಿ 75ಎಂದು ಕಾಯ ಕಿಂಗ್ ದೋಣಿಗಳನ್ನು ಬಳಸಿ ವಿನ್ಯಾಸಗೊಳಿಸಲಾಯಿತು. ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್ನಲ್ಲಿ ಇದಕ್ಕೂ ಮೊದಲು ಮತದಾನ ಜಾಗೃತಿ, ಪ್ಲಾಸ್ಟಿಕ್ ಜಾಗ್ರತಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳನ್ನು ನವ ನವೀನ ಮಾದರಿಯ ಪ್ರಯೋಗಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಲೇ ಬಂದಿದೆ. ಇದೀಗ ಸಂವಿಧಾನ ಜಾಗ್ರತಿ ಕಾರ್ಯಕ್ರಮವನ್ನು ಪ್ರಕೃತಿ ಮಡಿಲಲ್ಲಿ ಮಾಡಿ ಅಧಿಕಾರಿಗಳಿಂದ ಸೈ ಎನಿಸಿಕೊಂಡಿದೇ. ಈ ಸಂದರ್ಭದಲ್ಲಿ ಸಿಇಓ ಪ್ರತೀಕ್ ಬಾಯಲ್ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್ ಆರ್, ಉಡುಪಿ ಎಡಿಸಿ ಮಮತಾ ದೇವಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕಿ ಅನಿತಾ ಮಡ್ಲೂರು, ಪ್ರೊಬೇಷನರಿ…
