Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿ, ನಮ್ಮ ಮಾತೃಭಾಷೆಯ ಮೇಲೆ ನಮಗೆ ಸಂಪೂರ್ಣ ಹಿಡಿತ ಮತ್ತು ಹೆಮ್ಮೆ ಜೊತೆಗೆ ಇತರ ಭಾಷೆಗಳ ಮೇಲೆ ಗೌರವ ಇರಬೇಕು ,ನಮ್ಮ ನಾಡು ನುಡಿಯನ್ನು ಗೌರವಿಸುವುದು ಕೇವಲ ಈ ತಿಂಗಳಿಗೆ ಸೀಮಿತವಾಗದೆ ಪ್ರತಿ ದಿನವೂ ಅದರ ಸವಿಯನ್ನು ಸವಿಯಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್, ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಉಪಾನ್ಯಾಸಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಪ್ರಶಾಂತ್ ನಿರೂಪಿಸಿ, ಉಪನ್ಯಾಸಕಿ ದೀಪಾ ಕಾಮತ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರು ಹಿಂದಿನಿಂದ ಡಿಕ್ಕಿಯಾಗಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಬೀಚ್ ಬಳಿ ನಡೆದಿದೆ. ತ್ರಾಸಿ ಕುಪ್ಪ ಮೊಗವೀರ (80) ಸಾವನ್ನಪ್ಪಿದವರು. ಅವರು ಮನೆಯಿಂದ ತ್ರಾಸಿಯ ಪೇಟೆಗೆ ಹೋಗಿ ವಾಪಾಸು ನಡೆದುಕೊಂಡು ಬರುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕುಪ್ಪ ಮೊಗವೀರ ಅವರನ್ನು ಆಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಅಪಘಾತದ ಕುರಿತಂತೆ ಕಾರು ಚಾಲಕನ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ವಜಾರೋಹಣಗೈದು, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದರು. ವಿದ್ಯಾರ್ಥಿಗಳಾದ ಅಂಕಿತಾ, ರಜತ್. ಆರ್ ಪೂಜಾರಿ ರಾಜ್ಯೋತ್ಸವದ ಕುರಿತು  ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ಕನ್ನಡ ಹಾಡುಗಳನ್ನು ಹಾಡಿದರು. ಸಮಾರಂಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಕಾಸ್ ಮೇಟಿ ಅವರು ಸರ್ವರನ್ನು ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಶಾಲೆ ತೆಕ್ಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು. ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್, ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ, ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೈಂದೂರಿನಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೈಂದೂರು ಉತ್ಸವ 2024 ಕಳೆಗಟ್ಟುತ್ತಿದ್ದು ಉತ್ಸವದ ಮುನ್ನಾದಿನ ಅರಣ್ಯ ಇಲಾಖೆಯಿಂದ ನಿರ್ಮಿಸಲಾದ ಕುಮ್ರಿಕಾನ್‌ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿದೆ. ಈ ಮೂಲಕ ಹೊಸತೊಂದು ಅರಣ್ಯಲೋಕವನ್ನೇ ಕುಮ್ರಿಕಾನ್‌ ಮೂಲಕ ಅನಾವರಣಗೊಳಿಸಲಾಗಿದೆ. ಅರಣ್ಯ ಲೋಕದ ಅನಾವರಣ:ದಿನೇ ದಿನೇ ನಾಶವಾಗುತ್ತಿರುವ ಅರಣ್ಯ ಸಂಪತ್ತು. ಮನುಷ್ಯ ಆಧುನಿಕ ಜೀವನಶೈಲಿಯತ್ತ ಮುಖಮಾಡಿದಂತೆ ಮರೆಯಾಗುತ್ತಿರುವ ಅರಣ್ಯದೊಂದಿಗಿನ ನಂಟು. ಈ ಎಲ್ಲವನ್ನು ಗಮನದಲ್ಲಿರಿಸಿಕೊಂಡು ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಬೈಂದೂರು ವಲಯದಿಂದ ಅರಣ್ಯಲೋಕವನ್ನು ಅನಾವರಣಗೊಳಿಸಲಾಗಿದೆ. ಇದಕ್ಕೆ ಕುಮ್ರಿಕಾನ್‌ ಎಂದು ಹೆಸರು ಇಡಲಾಗಿದೆ. ಕುಮ್ರಿ ಎಂದರೆ ಎರಡು ಬೆಟ್ಟಗಳು ಸೇರುವ ಪ್ರದೇಶ, ಕಾನ್‌ ಎಂದರೆ ಅರಣ್ಯ. ಕಾಡಿನಲ್ಲಿ ಏನೇನು ಇರಲಿದೆ. ಅಲ್ಲಿ ಸಹಜವಾಗಿ ನಡೆಯುವ ಪ್ರಕ್ರಿಯೆಗಳು ಪ್ರಕೃತಿಗೆ ಮನುಷ್ಯನಿಗೆ ಹೇಗೆ ಉಪಯೋಗ ಆಗಲಿದೆ ಕೃಷಿ ಚುಟುವಟಿಕೆಗೆ ಹೇಗೆ ಪೂರಕವಾಗಲಿದೆ ಎಂಬುದನ್ನು ತೋರಿಸಲಾಗಿದೆ. ಕುಂದಾಪ್ರ ಡಾಟ್‌ ಕಾಂ ಸುದ್ದಿ. ದೇಗುಲಗಳ ಪ್ರತಿಕೃತಿ:ಬೈಂದೂರು ಕ್ಷೇತ್ರದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಅದ್ಭುತವಾದ ಭಾಷೆ. ಈ ಭಾಷೆಗೆ ಶಕ್ತಿ ಸಂಭ್ರಮ, ಸೊಗಡು ಇದೆ. ಕುಂದಾಪ್ರದ ಕನ್ನಡ ಪ್ರಪಂಚದಾದ್ಯಂತ ಅದರದ್ದೇ ಆದ ಕೀರ್ತಿ ಗೌರವ ಸಂಭ್ರಮವಿದೆ. ದೇಶದಲ್ಲಿ ಕರ್ನಾಟಕ ರಾಜ್ಯದ ೮ ಜನ ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಇಡೀ ಕರ್ನಾಟಕಕ್ಕೆ ಗರಿ. ಕುಂದಾಪುರದ ರಾಜಬೀದಿಯಲ್ಲಿ ಕನ್ನಡದ ಕಂಪನ್ನು, ಕಲರವನ್ನು ಪಸರಿಸಿದ ಕಲಾಕ್ಷೇತ್ರದ ಕಾರ್ಯ ಶ್ಲಾಘನೀಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇವರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕುಂದಾಪುರದಲ್ಲಿ ಕನ್ನಡ ಹಬ್ಬ ರಾಜ್ಯೋತ್ಸವ ಸಪ್ತಾಹದ ಅಂಗವಾಗಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ಜರಗಿದ ಕನ್ನಡ ರಥೋತ್ಸವ ಪುರ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶುಭಾಶಂಸನೆ ಮಾಡಿದ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕುಂದಾಪುರದ ಚರಿತ್ರೆಯಲ್ಲಿ ಗುರುತಿಸಲ್ಪಟ್ಟ ಕಾರ್ಯಕ್ರಮ. ಕನ್ನಡ ನಮ್ಮ ಭಾಷೆ, ನಮ್ಮ ಹುಟ್ಟಿಗೆ ಕಾರಣವಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು, ಮೇಲ್ಸೇತುವೆ ಕಾಮಗಾರಿ, ಅಂಡರ್‌ಪಾಸ್ ಹಾಗೂ ಹೆದ್ದಾರಿ ನಿರ್ವಹಣೆ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಕೈಗೊಳ್ಳುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅವಶ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಭೂ ಮಾಲೀಕರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಹಣವನ್ನು ವಿಳಂಬವಿಲ್ಲದೇ ಒದಗಿಸಿ, ಹೆದ್ದಾರಿ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕು. ನ್ಯಾಯಾಲಯದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥವಾಗುವ ರೀತಿಯಲ್ಲಿ ಕ್ರಮವಹಿಸಬೇಕು ಎಂದರು. ರಾ.ಹೆ 66 ರ ಸಂತೆಕಟ್ಟೆ ರಸ್ತೆ ಕಾಮಗಾರಿಯ ಉಡುಪಿ ಯಿಂದ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೇರೂರು ಗ್ರಾಮದ ನಿವಾಸಿ ಸಾಧು (59) ಬುಧವಾರದಂದು ಮಧ್ಯಾಹ್ನ ಗೇರು ಮರದ ಕೊಂಬೆಗೆ ನೈಲಾನ್ ಹಗ್ಗಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ವಿಪರೀತ ಕಾಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಮಾಡಿದರೂ ಕೂಡ ಗುಣಮುಖವಾಗದೇ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ದೋಣಿ ಮುಗುಚಿ ಮೀನುಗಾರ ಮೃತಪಟ್ಟ ಘಟನೆ ಬೀಜಾಡಿ ಚಾತ್ರಬೆಟ್ಟು ಎಂಬಲ್ಲಿ ನಡೆದಿದೆ. ಬೀಜಾಡಿ ಗ್ರಾಮದ ಸಂಜೀವ (58) ಎಂದು ಗುರುತಿಸಲಾಗಿದೆ. ಬೀಜಾಡಿ ಗ್ರಾಮದ ಚಾತ್ರಬೆಟ್ಟು ಎಂಬಲ್ಲಿ ಸಮುದ್ರದಲ್ಲಿ ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಸಮುದ್ರದ ನೀರಿನ ರಭಸಕ್ಕೆ ದೊಣಿ ಮಗುಚಿ ಮೀನುಗಾರಿಕೆ ಮಾಡುತ್ತಿದ್ದ ಸಂಜೀವ ಅವರು ಸಮುದ್ರದ ನೀರಿಗೆ ಬಿದ್ದು ಮುಳುಗಿದ್ದು ಅವರನ್ನು ಜೊತೆಯಲ್ಲಿರುವವರು ಮೇಲಕ್ಕೆ ಎತ್ತಿ ಕೋಟೇಶ್ವರ ಎನ್‌ಆರ್ ಆಚಾರ್ಯ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪರೀಕ್ಷಿಸಿದಾಗ ಸಂಜೀವ ಅವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More