Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ದ.ಕ.ಹಾಲು ಒಕ್ಕೂಟ ಮಂಗಳೂರು ಕೊಡಮಾಡುವ ಪ್ರಶಸ್ತಿಗಳಲ್ಲಿ ಮೇಕೋಡು ಹಾಲು ಉತ್ಪಾದಕರ ಸಂಘಕ್ಕೆ 4 ಪ್ರಶಸ್ತಿಗಳು ಲಭಿಸಿವೆ. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಜಿಲ್ಲೆಯ ಉತ್ತಮ ಹೈನುಗಾರ ಪ್ರಶಸ್ತಿ ಮತ್ತು ಹಸಿರು ಮೇವು ಘಟಕದ ಪ್ರಶಸ್ತಿ ಹಾಗೂ ಸಂಘಕ್ಕೆ ತಾಲೂಕು ಮಟ್ಟದ ಪ್ರಥಮ ಉತ್ತಮ ಗುಣಮಟ್ಟದ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಪ್ರಥಮ ಉತ್ತಮ ಬಿ.ಎಂ.ಸಿ ಪ್ರಶಸ್ತಿ ಲಭಿಸಿರುತ್ತದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿಗಳಿಗಾಗಿ ಹಿರಿಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ & ರೇಷ್ಮಾ ಶೆಟ್ಟಿ, ಕಾರ್ಯದರ್ಶಿ ವಿನಾಯಕ್ ಎನ್. ಅಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪೂಜಾ & ಶ್ರೇಯಾ ಖಾರ್ವಿ ಪ್ರಾರ್ಥಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ದುರ್ಬಲರಾದ ಮಕ್ಕಳ ರಕ್ಷಣೆಗೆ ಸರ್ಕಾರ ಅನೇಕ ಕಾಯಿದೆಗಳು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವುಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳ ಸರ್ವಂಗೀಣಾ ಅಭಿವೃದ್ಧಿಗೆ ಮುಂದಾಗಬೇಕು ಎಂದರು. ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳ ಆವರಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಟ್ರಾನ್ಸ್ಫಾರ್ಮ್, ವಿದ್ಯುತ್ ತಂತಿಗಳು ಹಾದು ಹೋಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಬೇಕು ಎಂದರು. ಮಕ್ಕಳ ಸುರಕ್ಷತೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದರೆ, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ವಾಂತಿ ಬೇಧ ಪ್ರಕರಣಗಳು ಕಂಡುಬಂದು ಕಾಲರಾ ರೋಗ ಎಂದು ವರದಿ ಬಂದಿರುತ್ತದೆ. ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಮುಂಜಾಗೃತೆ ವಹಿಸಬೇಕು ಎಂದರು. ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಲ್ಲಾ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಊಟ ತಯಾರಿ ಹಾಗೂ ಊಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ್ ಪ್ರಸಾದ್, ಆದಿತ್ಯ, ನಿತಿನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.18: ನೂತನವಾಗಿ ಆರಂಭಗೊಂಡ ಲೈವ್ ಸ್ಟ್ರೀಮಿಂಗ್ ಚಾನೆಲ್ಸ್ ಅಸೋಸಿಯೇಷನ್‌ ಉಡುಪಿ – ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್‌ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಮಂಗಳವಾರ ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವ ಮೂಡುಬಿದಿರೆ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ವಾಲ್ಟರ್‌ ನಂದಳಿಕೆ ಮತ್ತು ಗೌರವ ಸಲಹೆಗಾರರಾಗಿ ಪದ್ಮಪ್ರಸಾದ್ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಗ್ರಾಮದ ನಿವಾಸಿ ಮಣಿಕಂಠ (28) ಮಂಗಳವಾರದಂದು ಮಧ್ಯಾಹ್ನ ಗೇರು ಮರದ ಕೊಂಬೆಗೆ ನೈಲಾನ್‍ ಹಗ್ಗಕಟ್ಟಿ ಕುತ್ತಿಗೆಗೆ  ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ವೀಪರಿತ ಕುಡಿತ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಕೊಡಮಾಡುವ 2024ನೇ ಸಾಲಿನ ಶ್ರೀವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಕರಾವಳಿ ಪರಿಸರದಲ್ಲಿ ಕಳೆದ ಮೂವತೈದು ವರುಷಗಳಿಂದ ಸಮಾಜ ಸೇವೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡು. ಸಾವಿರಾರು ಅಶಕ್ತ ಕುಟುಂಬಗಳಿಗೆ ಆಸರೆಯಾಗಿ ಹೊಸ ಬದುಕನ್ನು ನೀಡಿ ಆಪತ್ಬಾಂಧವ ಎಂದು ಖ್ಯಾತಿ ಪಡೆದಿರುವ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು 2024ನೇ ಸಾಲಿನಲ್ಲಿ ಆಯ್ಕೆ ಮಾಡಲಾಗಿದೆ. ಪುರಸ್ಕಾರ ಪ್ರದಾನ ಕಾರ್ಯಕ್ರಮ ಆಕ್ಟೋಬರ್ 9ರ ಸಂಜೆ 7.30ಕ್ಕೆ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ಸಾಬ್ರಕಟ್ಟೆಯಲ್ಲಿ ನಡೆಯುವ ಶ್ರೀ ಸಾರ್ವಜನಿಕ ಶಾರದೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯತಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ಅಮೃತ್ ಪೂಜಾರಿ, ಕಾರ್ಯದರ್ಶಿ ಗಿರೀಶ್ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಮೂಲತಃ ಕರ್ನಾಟಕದ ಬೈಂದೂರಿನವರು. ಅವರು ಕತಾರಿನ ಗಲ್ಫಾರ್ ಅಲ್ ಮಿಸ್ ನಾದ್ ಇಂಜಿನಿಯರಿಂಗ್ ಹಾಗೂ ಕಾಂಟ್ರಾಕ್ಟ್ ಸಂಸ್ಥೆಯನ್ನು 2007ನೇ ಇಸವಿಯಲ್ಲಿ ಕೆಲಸಕ್ಕೆ ಸೇರಿದರು. ಈಗ ಪ್ರಸ್ತುತ ಗುಣಮಟ್ಟ ಕಾಯ್ದಿರಿಸುವ ವಿಭಾಗದಲ್ಲಿ ಅಭಿಯಂತರರಾಗಿ ಹಾಗೂ ಕಾಮಗಾರಿಗಳ ಸಹಯೋಗದ ಕಾರ್ಯನಿರ್ವಹಿಸುತ್ತಿದ್ದಾರೆ. ಕತಾರಿನಲ್ಲಿ ಯಶಸ್ವಿಯಾಗಿ ಸಂಪೂರ್ಣಗೊಂಡಿರುವ ಹಲವು ಉನ್ನತಮಟ್ಟದ ಕಾಮಗಾರಿಗಳಲ್ಲಿ ಇವರ ಪಾಲು ಉಂಟು. ಪ್ರತ್ಯೇಕವಾಗಿ ಕತಾರಿನಲ್ಲಿನ ಪರಿಸರಸ್ನೇಹಿ, ಬೆಳವಣಿಗೆ ಹಾಗೂ ಸಮರ್ಥನೀಯತೆಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಶ್ರೀಯುತರು ಕಾರ್ಯನಿರ್ವಹಿಸಿದ್ದಾರೆ. ಅವರು ಸಕ್ರಿಯವಾಗಿ ಸಮುದಾಯ ಹಾಗೂ ಸಮಾಜಸೇವಾ ಕೈಂಕರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ, ಹಾಗೂ ಭಾರತೀಯ ಸಮುದಾಯ ಹಿತೈಷಿ ವೇದಿಕೆಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವರು. ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಲ್ಲದೆ ಬಹಳಷ್ಟು ಪ್ರಶಸ್ತಿಗಳನ್ನು ಇವರ ಅವಿರತ ಸೇವೆಯನ್ನು ಗುರುತಿಸಿ ಇವರಿಗೆ ನೀಡಲಾಗಿದೆ. ಪ್ರಸ್ತುತ ಇವರು ಎರಡನೇ ಬಾರಿಗೆ ಭಾರತೀಯ ದೂತಾವಾಸದ ಆಶ್ರಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮ ಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಅಂದು ನಗರದ ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಂಚಮುಖಿ ವಿಶ್ವಕರ್ಮರನ್ನು ನಾನಾ ರೀತಿಯಲ್ಲಿ ಸಮಾಜ ನೆನೆಪಿನಲ್ಲಿಟ್ಟುಕೊಳ್ಳುತ್ತದೆ. ಮರಗೆಲಸ, ಕಬ್ಬಿಣದ ಕೆಲಸ, ಚಿನ್ನ-ಬೆಳ್ಳಿ ತಯಾರಕರು, ಶಿಲ್ಪಕಲಾ, ಕಂಚು ಹಿತ್ತಾಳೆ ನಿರ್ವಹಿಸುವವರಿಗೆ ಮೂಲ ಪುರುಷ ವಿಶ್ವಕರ್ಮರು. ದ್ವಾಪರ ಯುಗದಲ್ಲಿ ದ್ವಾರಕೆಯನ್ನು, ತ್ರೇತಾಯುಗದಲ್ಲಿ ಸುವರ್ಣ ಲಂಕೆಯನ್ನು, ಸತ್ಯಾ ಯುಗದಲ್ಲಿ ಸ್ವರ್ಗ ನಗರವನ್ನು ಹಾಗೂ ಕಲಿಯುಗದಲ್ಲಿ ಹಸ್ತಿನಾಪುರ ಮತ್ತು ಇಂದ್ರಪ್ರಸ್ಥವನ್ನು ವಿಶ್ವಕರ್ಮರು ಸ್ಥಾಪಿಸಿದ್ದರು ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ ಎಂದರು. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ಕೋಟ್ಯಾಂತರ ಜನರ ಜೀವನಕ್ಕೆ…

Read More